ವರದಿ ನೀಡುವಂತೆ ಶಾಲಾ ಮುಖ್ಯ ಶಿಕ್ಷಕರಿಗೆ ಶಿಕ್ಷಣಾಧಿಕಾರಿ ಸೂಚನೆ

Team Udayavani, Jul 5, 2018, 7:55 AM IST

0407ajke01.jpg

ಅಜೆಕಾರು: ಸರಕಾರಿ ಹಿ.ಪ್ರಾ.  ಶಾಲೆಯ ಕಟ್ಟಡವು ಕುಸಿಯುತ್ತಿರುವ ಬಗ್ಗೆ  ಉದಯವಾಣಿ ಪತ್ರಿಕೆಯಲ್ಲಿ ಜು. 2ರಂದು ಸಚಿತ್ರ ವರದಿ ಪ್ರಕಟವಾಗಿದ್ದನ್ನು  ಗಮನಿಸಿದ ಕಾರ್ಕಳ ಶಿಕ್ಷಣಾಧಿಕಾರಿಯವರು ಒಂದು ವಾರದ ಒಳಗೆ ಸಮಗ್ರ ವರದಿ ನೀಡುವಂತೆ ಶಾಲೆಯ ಮುಖ್ಯ ಶಿಕ್ಷಕರಿಗೆ ಸೂಚಿಸಿದ್ದಾರೆ. 17 ವರ್ಷಗಳ ಹಿಂದೆ ಅಂಡಾರು ಪೇಟೆಯ  ಸಮೀಪದ ಶಾಲೆಗೆ ಕಾದಿರಿಸಲಾದ 4 ಎಕ್ರೆ ಜಾಗದಲ್ಲಿ ಸುಮಾರು 2.50 ಲಕ್ಷ ರೂ. ವೆಚ್ಚಮಾಡಿ  ಕಟ್ಟಡ ನಿರ್ಮಿಸಲಾಗಿತ್ತು. ಆದರೆ ಶಾಲೆ ನಿರ್ಮಾಣದ ಅನಂತರ ಒಂದು ದಿನವೂ ಇದರಲ್ಲಿ ಶೈಕ್ಷಣಿಕ ಚಟುವಟಿಕೆ ನಡೆಯದೆ ಪಾಳು ಬಿದ್ದಿತ್ತು.

ಪತ್ರಿಕಾ ವರದಿ ಗಮನಕ್ಕೆ ಬರುತ್ತಿದ್ದಂತೆ ಶಿಕ್ಷಣಾಧಿಕಾರಿ ಮಂಗಳಲಕ್ಷ್ಮೀ  ಪಾಟೀಲ್‌ ಅವರು  ಶಾಲೆಯ ಮುಖ್ಯ ಶಿಕ್ಷಕರಿಗೆ ಒಂದು ವಾರದ ಒಳಗೆ ಶಾಲಾಭಿವೃದ್ಧಿ  ಸಮಿತಿಯ  ತುರ್ತು ಸಭೆ ಕರೆದು ಕಟ್ಟಡದ ಬಗ್ಗೆ ವರದಿ ನೀಡುವಂತೆ ಸೂಚಿಸಿದ್ದಾರೆ. 

ಶಿಕ್ಷಣಾಧಿಕಾರಿಯವರ ಆದೇಶ ಬರುತ್ತಿದ್ದಂತೆ ಎಚ್ಚೆತ್ತ ಶಾಲೆಯ ಮುಖ್ಯ ಶಿಕ್ಷಕರು ಜು.5 ಕ್ಕೆ ಶಾಲಾಭಿವೃದ್ಧಿ  ಸಮಿತಿಯ ತುರ್ತು ಸಭೆ ಕರೆದಿದ್ದು ಈ ಸಭೆಯಲ್ಲಿ ಶಾಲೆಯ ಕಟ್ಟಡದ ಅಭಿವೃದ್ಧಿ , ಸದ್ಬಳಕೆಯ ಕುರಿತು  ಸೂಕ್ತ ಕ್ರಮ ಕೈಗೊಳ್ಳುವ ಬಗ್ಗೆ ಚರ್ಚೆ ನಡೆಸಿ ಶಿಕ್ಷಣಾಧಿಕಾರಿಯವರಿಗೆ ವರದಿ ನೀಡಲಾಗುವುದು ಎಂದು ಸಮಿತಿ  ತಿಳಿಸಿದೆ.

ವರದಿ ನೀಡಲು ಸೂಚನೆ
ಕುಸಿಯುತ್ತಿರುವ ಶಾಲಾ ಕಟ್ಟಡದ ಅಭಿವೃದ್ಧಿಯ ಬಗ್ಗೆ  ಸೂಕ್ತ ಕ್ರಮ ತೆಗೆದುಕೊಳ್ಳುವ ಸಲುವಾಗಿ ಶಾಲಾಭಿವೃದ್ಧಿ   ಸಮಿತಿಯ ಸಭೆ ಕರೆದು ಕಟ್ಟಡ ದುರಸ್ತಿಗೆ ತಗಲುವ ವೆಚ್ಚದ ಬಗ್ಗೆ ಎಂಜಿನಿಯರ್‌ ಅವರ ಅಂದಾಜು ಪಟ್ಟಿ ಜತೆಸಮಗ್ರ ವರದಿಯನ್ನು ಒಂದು ವಾರದೊಳಗೆ ನೀಡಲು ಸೂಚಿಸಲಾಗಿದೆ.
– ಮಂಗಳಲಕ್ಷ್ಮೀ ಪಾಟೀಲ್‌, ಕ್ಷೇತ್ರ ಶಿಕ್ಷಣಾಧಿಕಾರಿಗಳು, ಕಾರ್ಕಳ

ತುರ್ತು ಸಭೆ
ಶಿಕ್ಷಣಾಧಿಕಾರಿಯವರ ಸೂಚನೆಯಂತೆ ಜು.5 ರಂದು ಶಾಲಾಭಿವೃದ್ಧಿ  ಸಮಿತಿಯ ತುರ್ತು ಸಭೆ ಕರೆಯಲಾಗಿದ್ದು ಕಟ್ಟಡ ದುರಸ್ತಿ ಬಗ್ಗೆ ಸದಸ್ಯರ ಸಲಹೆ ಸೂಚನೆ ಪಡೆದು ಸೂಕ್ತ ನಿರ್ಣಯ ಕೈಗೊಂಡು ವರದಿ ನೀಡಲಾಗುವುದು.
– ಲಕ್ಷ್ಮೀ ಕಿಣಿ, ಅಧ್ಯಕ್ಷರು, ಶಾಲಾಭಿವೃದ್ಧಿ  ಸಮಿತಿ

ಟಾಪ್ ನ್ಯೂಸ್

Farmer

Reveled; ಮೃತಪಟ್ಟಿರುವ ರೈತರ ಹೆಸರಿನಲ್ಲೇ ಪಹಣಿ !

Exam

NEET ಮಹಾರಾಷ್ಟ್ರದಲ್ಲೂ ಅಕ್ರಮ ಬಹಿರಂಗ

HDK (3)

Mining; ನನ್ನ ಮೇಲೆ ಸಿಟ್ಟು ; ದೇವದಾರಿಗೆ ತಡೆ : ಕೇಂದ್ರ ಸಚಿವ ಕುಮಾರಸ್ವಾಮಿ

Highway ಕಾಮಗಾರಿ ಅವ್ಯವಸ್ಥೆ: ಕಲ್ಲಡ್ಕದಲ್ಲಿ ಕೃತಕ ನೆರೆ ಸೃಷ್ಟಿ!

Highway ಕಾಮಗಾರಿ ಅವ್ಯವಸ್ಥೆ: ಕಲ್ಲಡ್ಕದಲ್ಲಿ ಕೃತಕ ನೆರೆ ಸೃಷ್ಟಿ!

Surathkal ಕುಳಾಯಿ ಕಿರು ಜೆಟ್ಟಿಯ ಬ್ರೇಕ್‌ವಾಟರ್‌ ಕಲ್ಲು ಸಮುದ್ರಪಾಲು

Surathkal ಕುಳಾಯಿ ಕಿರು ಜೆಟ್ಟಿಯ ಬ್ರೇಕ್‌ವಾಟರ್‌ ಕಲ್ಲು ಸಮುದ್ರಪಾಲು

Rain ಕರಾವಳಿ: ಜೂ.26ರ ವರೆಗೆ ಬಿರುಸಿನ ಮಳೆ ಸಾಧ್ಯತೆ

Rain ಕರಾವಳಿ: ಜೂ.26ರ ವರೆಗೆ ಬಿರುಸಿನ ಮಳೆ ಸಾಧ್ಯತೆ

ಕರಾವಳಿಯ ಪ್ರಮುಖ ದೇಗುಲಗಳಲ್ಲಿ ಭಕ್ತಸಂದಣಿ

ಕರಾವಳಿಯ ಪ್ರಮುಖ ದೇಗುಲಗಳಲ್ಲಿ ಭಕ್ತಸಂದಣಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mumbai ಪೊಲೀಸ್‌ ಹೆಸರಿನಲ್ಲಿ ಮಹಿಳೆಗೆ ಲಕ್ಷಾಂತರ ರೂ. ವಂಚನೆ

Mumbai ಪೊಲೀಸ್‌ ಹೆಸರಿನಲ್ಲಿ ಮಹಿಳೆಗೆ ಲಕ್ಷಾಂತರ ರೂ. ವಂಚನೆ

Manipal ಖಿನ್ನತೆಯಿಂದ ಬಳಲುತ್ತಿದ್ದ ವಿದ್ಯಾರ್ಥಿನಿ ಆತ್ಮಹತ್ಯೆ

Manipal ಖಿನ್ನತೆಯಿಂದ ಬಳಲುತ್ತಿದ್ದ ವಿದ್ಯಾರ್ಥಿನಿ ಆತ್ಮಹತ್ಯೆ

ಚಾಲಕನ ನಿಯಂತ್ರಣ ತಪ್ಪಿ ಕಲ್ಸಂಕ ತೋಡಿಗೆ ಬಿದ್ದ ಆಟೋ ರಿಕ್ಷಾ

Udupi; ಚಾಲಕನ ನಿಯಂತ್ರಣ ತಪ್ಪಿ ಕಲ್ಸಂಕ ತೋಡಿಗೆ ಬಿದ್ದ ಆಟೋ ರಿಕ್ಷಾ

10

Udupi: ಶ್ರೀ ಜನಾರ್ಧನ ಶಾಲೆಯಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆ

8-muniyal-clg

Muniyal ಯೋಗ ಮತ್ತು ಪ್ರಕೃತಿ ಚಿಕಿತ್ಸಾ ಕಾಲೇಜಿನಲ್ಲಿ ಯೋಗ ದಿನಾಚರಣೆ

MUST WATCH

udayavani youtube

ಹುಣಸೂರು ತಾಲೂಕಿನ ಸಮಗ್ರ ಅಭಿವೃದ್ದಿಗೆ ಬದ್ದ: ಸಂಸದ ಯದುವೀರ್‌ ಒಡೆಯರ್

udayavani youtube

ಈಕೆ ಭಾರತದ ಮೊದಲ ಸರಣಿ ಕೊಲೆಗಾರ್ತಿ | ಸೈನೈಡ್ ಮಲ್ಲಿಕಾ

udayavani youtube

ಮುಳ್ಳಯ್ಯನಗಿರಿ,ದತ್ತಪೀಠ, ಸೀತಾಳಯ್ಯನಗಿರಿಯಲ್ಲಿ ಜನಜಾತ್ರೆ; ಖಾಕಿ ಹೈ ಅಲರ್ಟ್

udayavani youtube

ಕಡುಬು ಸೇವೆಗೆ ಒಲಿಯುವ ಮುಂಡ್ರಪಾಡಿ ಈಶ

udayavani youtube

ಅಣ್ಣಾವ್ರ ಅಪರೂಪದ ವಿಡಿಯೋ | ಯೋಗ ದಿನ | ಡಾ. ರಾಜ್ ಕುಮಾರ್

ಹೊಸ ಸೇರ್ಪಡೆ

Farmer

Reveled; ಮೃತಪಟ್ಟಿರುವ ರೈತರ ಹೆಸರಿನಲ್ಲೇ ಪಹಣಿ !

Exam

NEET ಮಹಾರಾಷ್ಟ್ರದಲ್ಲೂ ಅಕ್ರಮ ಬಹಿರಂಗ

HDK (3)

Mining; ನನ್ನ ಮೇಲೆ ಸಿಟ್ಟು ; ದೇವದಾರಿಗೆ ತಡೆ : ಕೇಂದ್ರ ಸಚಿವ ಕುಮಾರಸ್ವಾಮಿ

Highway ಕಾಮಗಾರಿ ಅವ್ಯವಸ್ಥೆ: ಕಲ್ಲಡ್ಕದಲ್ಲಿ ಕೃತಕ ನೆರೆ ಸೃಷ್ಟಿ!

Highway ಕಾಮಗಾರಿ ಅವ್ಯವಸ್ಥೆ: ಕಲ್ಲಡ್ಕದಲ್ಲಿ ಕೃತಕ ನೆರೆ ಸೃಷ್ಟಿ!

Surathkal ಕುಳಾಯಿ ಕಿರು ಜೆಟ್ಟಿಯ ಬ್ರೇಕ್‌ವಾಟರ್‌ ಕಲ್ಲು ಸಮುದ್ರಪಾಲು

Surathkal ಕುಳಾಯಿ ಕಿರು ಜೆಟ್ಟಿಯ ಬ್ರೇಕ್‌ವಾಟರ್‌ ಕಲ್ಲು ಸಮುದ್ರಪಾಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.