ರಂಗದಲ್ಲೇ ಅಸ್ವಸ್ಥರಾದ ಖ್ಯಾತ ಕಲಾವಿದ ತೀರ್ಥಹಳ್ಳಿ ಗೋಪಾಲಾಚಾರ್ ;

Team Udayavani, Aug 10, 2018, 9:44 PM IST

gopalachar-10-8.jpg

ಉಡುಪಿ: ಬಡಗು ಯಕ್ಷರಂಗದ ಸುಪ್ರಸಿದ್ಧ ವೇಷಧಾರಿ ತೀರ್ಥಹಳ್ಳಿ ಗೋಪಾಲಾಚಾರ್ ಅವರು ಶುಕ್ರವಾರದಂದು ಪಾತ್ರನಿರ್ವಹಿಸುತ್ತಿದ್ದ ಸಂದರ್ಭದಲ್ಲೇ ರಂಗದಲ್ಲಿ ತಲೆಸುತ್ತುಬಂದು ಅಸ್ವಸ್ಥಗೊಂಡ ಘಟನೆ ವರದಿಯಾಗಿದೆ. ಅದೃಷ್ಟವಶಾತ್ ಗೋಪಾಲಾಚಾರ್ ಅವರ ಆರೋಗ್ಯಸ್ಥಿತಿ ಇದೀಗ ಸುಧಾರಿಸುತ್ತಿದ್ದು ಅವರ ಅಭಿಮಾನಿಗಳಲ್ಲಿ ಮನೆಮಾಡಿದ್ದ ಆತಂಕ ದೂರವಾದಂತಾಗಿದೆ.

‘ನಾನು ಆರಾಮವಾಗಿದ್ದೇನೆ…ಚಿಂತೆ ಬೇಡ…’ : ಘಟನೆಯ ಬಳಿಕ ಚೌಕಿಯಲ್ಲಿ ವೇಷ ಕಳಚುತ್ತಿರುವ ತೀರ್ಥಹಳ್ಳಿ ಗೋಪಾಲಾಚಾರ್

ಘಟನೆಯ ವಿವರ:
ಉಡುಪಿಯ ಪೂರ್ಣಪ್ರಜ್ಞಾ ಆಡಿಟೋರಿಯಂನಲ್ಲಿ ಇಂದು ಬಡಗುತಿಟ್ಟಿನ ಖ್ಯಾತನಾಮ ಕಲಾವಿದರ ಒಗ್ಗೂಡುವಿಕೆಯಲ್ಲಿ ‘ಶ್ರೀ ಕೃಷ್ಣ ಪಾರಿಜಾತ ಮತ್ತು ಶರಸೇತು ಬಂಧನ’ ಎಂಬ ಎರಡು ಯಕ್ಷಗಾನ ಪ್ರದರ್ಶನಗಳನ್ನು ಆಯೋಜಿಸಲಾಗಿತ್ತು. ಇದರಲ್ಲಿ ಪ್ರಥಮ ಪ್ರಸಂಗವಾಗಿದ್ದ ಶ್ರೀ ಕೃಷ್ಣ ಪಾರಿಜಾತದಲ್ಲಿ ತೀರ್ಥಹಳ್ಳಿ ಗೋಪಾಲಾಚಾರ್ ಅವರು ಶ್ರೀ ಕೃಷ್ಣನ ಪಾತ್ರವನ್ನು ಅಮೋಘವಾಗಿ ನಿರ್ವಹಿಸುತ್ತಿದ್ದರು. ಇನ್ನೇನು ಪ್ರಸಂಗ ಮುಗಿಯುವ ಹಂತದಲ್ಲಿ ಇದೆ ಎನ್ನುವ ಸಂದರ್ಭದಲ್ಲಿ ಸತ್ಯಭಾಮೆಯೊಂದಿಗಿನ ಸಂಭಾಷಣೆಯ ಸಮಯದಲ್ಲಿ ತೀರ್ಥಹಳ್ಳಿಯವರಿಗೆ ಇದ್ದಕ್ಕಿದ್ದಂತೆ ತಲೆಸುತ್ತುಬಂದಿದೆ. ಇದನ್ನು ತಕ್ಷಣವೇ ಗುರುತಿಸಿದ ಬಡಗಿನ ಇನ್ನೋರ್ವ ಖ್ಯಾತ ಸ್ತ್ರೀವೇಷಧಾರಿ ಶಶಿಕಾಂತ್ ಶೆಟ್ಟಿ ಕಾರ್ಕಳ ಅವರು ತೀರ್ಥಹಳ್ಳಿ ಅವರನ್ನು ತಕ್ಷಣವೇ ಆಧರಿಸಿ ಹಿಡಿಯುತ್ತಾರೆ. ಆ ಕೂಡಲೇ ಭಾಗವತರಾಗಿದ್ದ ರಾಘವೇಂದ್ರ ಆಚಾರ್ ಸಹಿತ ಹಿಮ್ಮೇಳ ಕಲಾವಿದರು ಅವರನ್ನು ತಕ್ಷಣವೇ ರಂಗದಿಂದ ಚೌಕಿಗೆ ಕರೆದುಕೊಂಡು ಹೋಗಿ ಪ್ರಾಥಮಿಕ ಉಪಚಾರವನ್ನು ಮಾಡುತ್ತಾರೆ.

ಈ ಘಟನೆಯಿಂದಾಗಿ ಪ್ರಸಂಗದ ಕೊನೆಯ ದೃಶ್ಯ ಬಾಕಿಯಿರುವಂತೆಯೇ ಪ್ರಸಂಗ ಮುಕ್ತಾಯಗೊಳಿಸಲಾಯಿತು. ವಯೋಸಹಜ ಬಳಲಿಕೆಯ ಕಾರಣದಿಂದ ತೀರ್ಥಹಳ್ಳಿಯವರಿಗೆ ಈ ರೀತಿಯಾಗಿದ್ದು ಅವರೀಗ ಚೇತರಿಸಿಕೊಳ್ಳುತ್ತಿದ್ದಾರೆ ಎಂದು ಯಕ್ಷಗಾನ ಸಂಘಟಕ ಮತ್ತು ಕಲಾವಿದ ವಾಸುದೇವ ರಂಗಭಟ್ಟರು ತಿಳಿಸಿದರು. ತಕ್ಷಣವೇ ವೈದ್ಯಕೀಯ ಪರೀಕ್ಷೆಗೊಳಪಡಿಸಲಾಗಿದ್ದು ಯಾವುದೇ ಆತಂಕಪಡುವ ಅಗತ್ಯ ಇಲ್ಲವೆಂದು ವೈದ್ಯರು ತಿಳಿಸಿದ್ದಾರೆ.

ದಯವಿಟ್ಟು ಅಪಪ್ರಚಾರ ಬೇಡ ನಾನೆ ರಂಗದಲ್ಲಿ ಅವರ ಜೊತೆಗಿದ್ದೆ , ಶುಗರ್ ಲೋ ಆಗಿ ತಲೆತಿರುಗಿತು, ನಾನೆ ಅವರನ್ನು ಒಳಗೆ ಕರೆದೊಯ್ದು ವೇಷ ಬಿಡಿಸಿ ಉಪಚರಿಸಿದೆ, ಈಗ ಸುದಾರಿಸಿಕೊಂಡಿದ್ದಾರೆ ,ಆರೋಗ್ಯವಾಗಿದ್ದಾರೆ.
– ಶಶಿಕಾಂತ್ ಶೆಟ್ಟಿ ಕಾರ್ಕಳ, ಕಲಾವಿದರು

ಟಾಪ್ ನ್ಯೂಸ್

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ

1—eewqewq

World’s largest ಅನಕೊಂಡ ಅನಾ ಜೂಲಿಯಾ ಸಾವು; ಆಗಿದ್ದೇನು?

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

1-asdasdad

Pralhad Joshi ವಿರುದ್ದ ಸಿಡಿದೆದ್ದ ದಿಂಗಾಲೇಶ್ವರ ಶ್ರಿಗಳಿಗೆ ವೀರಶೈವ ಮಹಾಸಭಾ ಬೆಂಬಲ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi: ನೇಣು ಬಿಗಿದು ಆತ್ಮಹತ್ಯೆ

Udupi: ನೇಣು ಬಿಗಿದು ಆತ್ಮಹತ್ಯೆ

Udupi: ಕರ್ತವ್ಯದಲ್ಲಿದ್ದ ಪೊಲೀಸ್‌ಗೆ ಹಲ್ಲೆ, ಜೀವಬೆದರಿಕೆ: ಪ್ರತ್ಯೇಕ ಪ್ರಕರಣ ದಾಖಲು

Udupi: ಕರ್ತವ್ಯದಲ್ಲಿದ್ದ ಪೊಲೀಸ್‌ಗೆ ಹಲ್ಲೆ, ಜೀವಬೆದರಿಕೆ: ಪ್ರತ್ಯೇಕ ಪ್ರಕರಣ ದಾಖಲು

Belapu: ರೈಲ್ವೇ ಹಳಿ ಬಳಿ ಬಿದ್ದು ಸಾವು

Belapu: ರೈಲ್ವೇ ಹಳಿ ಬಳಿ ಬಿದ್ದು ಸಾವು

Pernankila Temple:  ಪೆರ್ಣಂಕಿಲ ದೇಗುಲ: ಧಾರ್ಮಿಕ ಪ್ರಕ್ರಿಯೆ

Pernankila Temple: ಪೆರ್ಣಂಕಿಲ ದೇಗುಲ: ಧಾರ್ಮಿಕ ಪ್ರಕ್ರಿಯೆ

Kaup ಸುಗ್ಗಿ ಮಾರಿಪೂಜೆ ಸಂಪನ್ನ: 2 ಲಕ್ಷಕ್ಕೂ ಅಧಿಕ ಭಕ್ತರಿಂದ ಕ್ಷೇತ್ರ ದರ್ಶನ

Kaup ಸುಗ್ಗಿ ಮಾರಿಪೂಜೆ ಸಂಪನ್ನ: 2 ಲಕ್ಷಕ್ಕೂ ಅಧಿಕ ಭಕ್ತರಿಂದ ಕ್ಷೇತ್ರ ದರ್ಶನ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

PSI re-examination: ಪಿಎಸ್‌ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ

PSI re-examination: ಪಿಎಸ್‌ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ

Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!

Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

29

Hassan Lok sabha Constituency: ಪ್ರಜ್ವಲ್‌ ರೇವಣ್ಣ ನಾಮಪತ್ರ ಸಲ್ಲಿಕೆ

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.