ಉಷ್ಣಾಂಶ ಏರಿಕೆ; ಮಳೆ ಮತ್ತಷ್ಟು ದೂರ ಸಾಧ್ಯತೆ

Team Udayavani, Sep 20, 2021, 8:00 AM IST

ಉಷ್ಣಾಂಶ ಏರಿಕೆ; ಮಳೆ ಮತ್ತಷ್ಟು ದೂರ ಸಾಧ್ಯತೆ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳೆದ ಒಂದು ವಾರದಿಂದ ಗರಿಷ್ಠ ಉಷ್ಣಾಂಶದಲ್ಲಿ ಏರಿಕೆ ಕಾಣುತ್ತಿದ್ದು, ಇದು ಮುಂಗಾರು ಮಳೆಯ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ.

ಮುಂಗಾರು ಅವಧಿಯಲ್ಲಿ ವಾಡಿಕೆಯಂತೆ ಹೆಚ್ಚಾಗಿ ಮೋಡಗಳು ಸೃಷ್ಟಿಯಾಗಿ ಉತ್ತಮ ಮಳೆ ಸುರಿಯುತ್ತದೆ. ಆದರೆ ಸದ್ಯ ಮೋಡಗಳು ಸೃಷ್ಟಿಯಾಗುತ್ತಿಲ್ಲ. ಮೋಡಗಳೆಲ್ಲಾ ಉತ್ತರ ಭಾರತದತ್ತ ಚಲಿಸುತ್ತಿದ್ದು, ಇದರ ಪರಿಣಾಮ ರಾಜ್ಯ ಕರಾವಳಿ ಭಾಗಕ್ಕೂ ತಟ್ಟಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿಯೂ ಬಿಸಿಲಿನ ತಾಪ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದ್ದು, ಗರಿಷ್ಠ ಉಷ್ಣಾಂಶವು ವಾಡಿಕೆಗಿಂತ ಸುಮಾರು 2 ಡಿ.ಸೆ. ಹೆಚ್ಚುತ್ತಿದೆ.

ರಾಜ್ಯ ಕರಾವಳಿಯಲ್ಲಿ ಸಾಮಾನ್ಯವಾಗಿ ಸೆಪ್ಟಂಬರ್‌ ವೇಳೆಗೆ ಉತ್ತಮ ಮಳೆ ಸುರಿದು ವಾತಾವರಣ ತಂಪಿರುತ್ತದೆ. ಆದರೆ ಜಿಲ್ಲೆಯಲ್ಲಿ ಕಳೆದ ಕೆಲ ದಿನಗಳಿಂದ ಬಿರುಸಿನ ಮಳೆಯಾಗಿಲ್ಲ. ಇದರಿಂದ ಮಧ್ಯಾಹ್ನ ವೇಳೆ ಸೆಕೆ ಹೆಚ್ಚಾಗಿದೆ. ಇನ್ನೂ ಕೆಲವು ದಿನ ಇದೇ ವಾತಾವರಣ ಇರುವ ಸಾಧ್ಯತೆ ಇದೆ ಎನ್ನುತ್ತಾರೆ ಹವಾಮಾನ ಇಲಾಖೆ ಅಧಿಕಾರಿಗಳು. ಉಷ್ಣಾಂಶ ಏರಿಕೆಯಾಗುತ್ತಿದ್ದರೆ ಅದರ ಪರಿಣಾಮ ಮುಂಗಾರು ಮಳೆಯ ಮೇಲೆ ಬೀರಲಿದ್ದು, ಕರಾವಳಿಯಲ್ಲಿ ಈಗಾಗಲೇ ದುರ್ಬಲಗೊಂಡಿರುವ ಮಳೆ ಮತ್ತಷ್ಟು ಕ್ಷೀಣಿಸುವ ಸಾಧ್ಯತೆ ಇದೆ.

ಕರಾವಳಿ, ಮಲೆನಾಡಿನಲ್ಲಿ ಮಳೆ ಕೊರತೆ:

ಸಾಮಾನ್ಯವಾಗಿ ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂಗಾರು ಉತ್ತಮವಾಗಿರುತ್ತದೆ. ಆದರೆ ಈ ಬಾರಿ ಹವಾಮಾನ ವೈಪರೀತ್ಯದ ಪರಿಣಾಮ ಎರಡೂ ವಿಭಾಗಗಳಲ್ಲಿ ಮಳೆ ಕೊರತೆ ಇದೆ. ಕರಾವಳಿಯ ದ.ಕ. ಜಿಲ್ಲೆಯಲ್ಲಿ ಶೇ. 26, ಉಡುಪಿಯಲ್ಲಿ ಶೇ. 15 ಮತ್ತು ಉತ್ತರ ಕನ್ನಡ ಜಿಲ್ಲೆಯಲ್ಲಿ ಶೇ. 5ರಷ್ಟು ಕೊರತೆ ಇದೆ. ಮಲೆನಾಡು ವಿಭಾಗದ ಶಿವಮೊಗ್ಗದಲ್ಲಿ ಶೇ. 13, ಹಾಸನದಲ್ಲಿ ಶೇ. 10, ಚಿಕ್ಕಮಗಳೂರಿನಲ್ಲಿ ಶೇ. 15, ಕೊಡಗು ಜಿಲೆಯಲ್ಲಿ ಶೇ. 21ರಷ್ಟು ವಾಡಿಕೆಗಿಂತ ಕಡಿಮೆ ಮಳೆಯಾಗಿದೆ. ಕರಾವಳಿಯಲ್ಲಿ ಶೇ. 13 ಮತ್ತು ಮಲೆನಾಡಿನಲ್ಲಿ ಶೇ. 15ರಷ್ಟು ಮಳೆ ಕೊರತೆ ಇದೆ.

ಕರಾವಳಿ ಸೇರಿದಂತೆ ರಾಜ್ಯದಲ್ಲಿ ಸದ್ಯ ಮಳೆ ಸೃಷ್ಟಿಸುವ ಮೋಡಗಳ ಚಲನೆ ಇಲ್ಲ. ಇದರಿಂದಾಗಿ ದಿನದಿಂದ ದಿನಕ್ಕೆ ಗರಿಷ್ಠ ಉಷ್ಣಾಂಶದಲ್ಲಿ ಏರಿಕೆ ಕಾಣುತ್ತಿದೆ. ಸದ್ಯದ ಹವಾಮಾನ ಮುನ್ಸೂಚನೆಯಂತೆ ಕೆಲವು ದಿನಗಳವರೆಗೆ ಉಷ್ಣಾಂಶ ಹೆಚ್ಚಾಗಿ ಸೆಕೆ ಹೀಗೇ ಇರುವ ಸಾಧ್ಯತೆ ಇದೆ. ಇದರಿಂದಾಗಿ ಮಳೆ ಮತ್ತಷ್ಟು ಕ್ಷೀಣಿಸಬಹುದು..– ಸುನಿಲ್‌ ಗವಾಸ್ಕರ್‌, ಕೆಎಸ್‌ಎನ್‌ಡಿಎಂಸಿ ವಿಜ್ಞಾನಿ

ಟಾಪ್ ನ್ಯೂಸ್

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಉಡುಪಿಯಲ್ಲಿ ಕೋಮು ಪ್ರಚೋದನೆಯ ಭಾಷಣ; ಕಾಜಲ್‌ ಹಿಂದುಸ್ತಾನಿ ವಿರುದ್ಧದ FIRಗೆ ಮಧ್ಯಂತರ ತಡೆ

Exam

Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ

Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.