ಕಳತ್ತೂರು – ಗುರ್ಮೆ ಸೇತುವೆ ರಕ್ಷಿಸಲು ಮರಳು ಚೀಲ ಅಳವಡಿಕೆ

Team Udayavani, Jul 25, 2018, 2:50 AM IST

kalatthur-24-7.jpg

ಕಾಪು: ಭಾರೀ ಮಳೆ ಮತ್ತು ನೆರೆಯಿಂದಾಗಿ ಅಡಿಪಾಯ ಕುಸಿದು ಅಪಾಯದ ಸ್ಥಿತಿ ಎದುರಿಸುತ್ತಿದ್ದ ಕಳತ್ತೂರು – ಗುರ್ಮೆ ಸೇತುವೆ ರಕ್ಷಿಸಿ, ಸಂಚಾರಕ್ಕೆ ಅವಕಾಶ ಮಾಡಿಕೊಡುವ ನಿಟ್ಟಿನಲ್ಲಿ ತಾತ್ಕಾಲಿಕ ತಡೆಗೋಡೆ ರಚನೆಯ ತುರ್ತು ಪರಿಹಾರ ಕಾರ್ಯಕ್ಕೆ ಚಾಲನೆ ದೊರಕಿದೆ.

ಬೆಳಕು ಚೆಲ್ಲಿದ ವರದಿ
ಕಳತ್ತೂರು – ಗುರ್ಮೆ – ಪೈಯ್ನಾರು – ಬೆಳಪು ನಡುವಿನ ಪ್ರಧಾನ ಸಂಪರ್ಕ ಸೇತುವಾಗಿರುವ ಗುರ್ಮೆ ಸೇತುವೆಯ ಪಿಲ್ಲರ್‌ ನ ಅಡಿಪಾಯ ಕುಸಿದು ಸೇತುವೆ ಮೇಲಿನ ಸಂಚಾರಕ್ಕೆ ಅಪಾಯವುಂಟಾಗಿರುವ ಬಗ್ಗೆ ಉದಯವಾಣಿಯಲ್ಲಿ ಸಚಿತ್ರ ಲೇಖನ ಪ್ರಕಟವಾಗಿತ್ತು. ವರದಿ ಪ್ರಕಟಗೊಂಡ ಬಳಿಕ ಉಡುಪಿ ಜಿಲ್ಲಾ ಪಂಚಾಯತ್‌ ಸದಸ್ಯೆ ಶಿಲ್ಪಾ ಜಿ. ಸುವರ್ಣ ಅವರು ಸೋಮವಾರ ಇದಕ್ಕೆ ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳನ್ನು ಸ್ಥಳಕ್ಕೆ ಕರೆಸಿ ಸಮಸ್ಯೆಯನ್ನು ಪರಿಹರಿಸಿಕೊಡುವಂತೆ ಸೂಚನೆ ನೀಡಿದ್ದರು.

ಹತ್ತು ದಿನಗಳ ಒಳಗಾಗಿ ಕಾಮಗಾರಿ ಪೂರ್ಣ
ಕಂದಾಯ ಇಲಾಖೆಯ ಅಧಿಕಾರಿಗಳು ಮತ್ತು ಪಂಚಾಯತ್‌ ರಾಜ್‌ ಎಂಜಿನಿಯರಿಂಗ್‌ ಇಲಾಖೆಯ ಎಂಜಿನಿಯರ್‌ ಸ್ಥಳ ಪರಿಶೀಲನೆ ನಡೆಸಿ, ತುರ್ತಾಗಿ ಮರಳು ಚೀಲಗಳನ್ನು ಇರಿಸಿ ಸೇತುವೆ ರಕ್ಷಿಸುವ ನಿಟ್ಟಿನಲ್ಲಿ ಪ್ರಯತ್ನಿಸಲಾಗುವುದು ಎಂಬ ಭರವಸೆ ನೀಡಿದ್ದರು. ಅದರಂತೆ ಮಂಗಳವಾರದಿಂದಲೇ ಮರಳು ಚೀಲ ಅಳವಡಿಕೆ ಕಾಮಗಾರಿ ಆರಂಭಿಸಿದ್ದು, ಹತ್ತು ದಿನಗಳ ಒಳಗಾಗಿ ಕಾಮಗಾರಿ ಪೂರ್ಣಗೊಳಿಸುವ ಭರವಸೆ ನೀಡಿದ್ದಾರೆ.

ಕುತ್ಯಾರು ಗ್ರಾಮ ಪಂಚಾಯತ್‌ ಅಭಿವೃದ್ಧಿ ಅಧಿಕಾರಿ ರಜನಿ, ಸಮಾಜ ಸೇವಕ ಸುರೇಶ್‌ ಶೆಟ್ಟಿ ಗುರ್ಮೆ, ಗ್ರಾಮ ಪಂಚಾಯತ್‌ ಮಾಜಿ ಉಪಾಧ್ಯಕ್ಷ ಪ್ರವೀಣ್‌ ಕುಮಾರ್‌ ಗುರ್ಮೆ, ಗುತ್ತಿಗೆದಾರ ಕಿಶೋರ್‌ ಕುಮಾರ್‌ ಗುರ್ಮೆ ಕಾಮಗಾರಿಯನ್ನು ಪರಿಶೀಲಿಸಿದರು.

ಎಚ್ಚೆತ್ತ ಅರಣ್ಯ ಇಲಾಖೆ

ಗುರ್ಮೆ ಹೊಳೆಯಲ್ಲಿ ನೀರು ಸರಾಗವಾಗಿ ಹರಿದು ಹೋಗಲು ತಡೆಯುಂಟು ಮಾಡುತ್ತಿದ್ದ ಬೃಹತ್‌ ಮರ ತೆರವುಗೊಳಿಸಲು ಅರಣ್ಯ ಇಲಾಖೆಯೂ ಮುಂದಾಗಿದೆ. ಮಂಗಳವಾರ ಬೆಳಗ್ಗಿನಿಂದಲೇ ಹೊಳೆಯಲ್ಲಿ ಅಡ್ಡಲಾಗಿ ಬಿದ್ದಿರುವ ಮರಗಳ ತೆರವು ಕಾಮಗಾರಿಗೆ ಚಾಲನೆ ನೀಡಿದ್ದು ಹೊಳೆಯಲ್ಲಿ ನೀರು ಸರಾಗವಾಗಿ ಹರಿದು ಹೋಗಲು ಬೇಕಾಗುವ ವ್ಯವಸ್ಥೆ ಮಾಡಿಕೊಡುವುದಾಗಿ ಅರಣ್ಯ ಇಲಾಖೆ ಸಿಬಂದಿ ತಿಳಿಸಿದ್ದಾರೆ.

ಟಾಪ್ ನ್ಯೂಸ್

Shobha, Bharathi Shetty  ಹೊರತು ಬಿಎಸ್‌ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ

Shobha, Bharathi Shetty ಹೊರತು ಬಿಎಸ್‌ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

High Court ಎಚ್‌ಡಿಕೆಗೆ ಮಹಿಳಾ ಆಯೋಗ ನೀಡಿದ್ದ ನೋಟಿಸ್‌ಗೆ ಹೈಕೋರ್ಟ್‌ ತಡೆ

High Court ಎಚ್‌ಡಿಕೆಗೆ ಮಹಿಳಾ ಆಯೋಗ ನೀಡಿದ್ದ ನೋಟಿಸ್‌ಗೆ ಹೈಕೋರ್ಟ್‌ ತಡೆ

banMysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

Mysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

1-aaaaaa

BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ

1-weqwewqe

Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

4-udupi

Udupi: ರಮಾಬಾಯಿ ಕೊಚ್ಚಿಕಾರ್‌ ಪೈ ನಿಧನ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ ಅಡಿಗೆ ಸಿಲುಕಿದ ಬೈಕ್; ಯಕ್ಷಗಾನ ಕಲಾವಿದ ಸ್ಥಳದಲ್ಲೇ ಮೃತ್ಯು

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

8

Malpe Beach: ಈಜಲು ಹೋದ ಮೂವರು ಸಮುದ್ರಪಾಲು; ಓರ್ವನ ಸಾವು, ಇಬ್ಬರ ರಕ್ಷಣೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Shobha, Bharathi Shetty  ಹೊರತು ಬಿಎಸ್‌ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ

Shobha, Bharathi Shetty ಹೊರತು ಬಿಎಸ್‌ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

High Court ಎಚ್‌ಡಿಕೆಗೆ ಮಹಿಳಾ ಆಯೋಗ ನೀಡಿದ್ದ ನೋಟಿಸ್‌ಗೆ ಹೈಕೋರ್ಟ್‌ ತಡೆ

High Court ಎಚ್‌ಡಿಕೆಗೆ ಮಹಿಳಾ ಆಯೋಗ ನೀಡಿದ್ದ ನೋಟಿಸ್‌ಗೆ ಹೈಕೋರ್ಟ್‌ ತಡೆ

Kanakagiri ದೇಗುಲಕ್ಕೆ ಬಂದಿದ್ದ ಕರಡಿ ಸೆರೆ ಹಿಡಿಯುವಾಗ ದಾಳಿ: ವೃದ್ಧ ಸಾವು

Kanakagiri ದೇಗುಲಕ್ಕೆ ಬಂದಿದ್ದ ಕರಡಿ ಸೆರೆ ಹಿಡಿಯುವಾಗ ದಾಳಿ: ವೃದ್ಧ ಸಾವು

banMysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

Mysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.