
ಗುಡ್ಡೆಯಂಗಡಿ: ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಆಟೋ ರಿಕ್ಷಾ
ಚಾಲಕ ಅಪಾಯದಿಂದ ಪಾರು
Team Udayavani, Jan 21, 2023, 8:46 PM IST

ತೆಕ್ಕಟ್ಟೆ: ಇಲ್ಲಿನ ಪ್ರಮುಖ ರಾ.ಹೆ.ಗುಡ್ಡೆಯಂಗಡಿ ಸಮೀಪದ ಚಲಿಸುತ್ತಿದ್ದ ಆಟೋ ರಿಕ್ಷಾ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಸಮೀಪದ ಚರಂಡಿಗೆ ಪಲ್ಟಿಯಾಗಿ ಚಾಲಕ ಅಪಾಯದಿಂದ ಪಾರಾದ ಘಟನೆ ಜ.21ರಂದು ಸಂಭವಿಸಿದೆ.
ಜನ್ನಾಡಿ ಆಟೋ ತಂಗುದಾಣದ ಅಟೋ ಚಾಲಕ ಅಶೋಕ್ ಎನ್ನುವವರು ಇಲ್ಲಿನ ಹುಣ್ಸೆಮಕ್ಕಿಯಲ್ಲಿ ಪ್ರಯಾಣಿಕರನ್ನು ಬಿಟ್ಟು ಬಿದ್ಕಲ್‌ಕಟ್ಟೆ ಕಡೆಗೆ ಹಿಂದಿರುಗುತ್ತಿರುವ ಸಂದರ್ಭದಲ್ಲಿ ಏಕಾಏಕಿ ದನವೊಂದು ಅಡ್ಡಲಾಗಿ ಓಡಿ ಬಂದಿದ್ದು, ಪರಿಣಾಮ ರಿಕ್ಷಾ ಚಾಲಕ ವಾಹನ ನಿಯಂತ್ರಿಸುವ ಭರದಲ್ಲಿ ಆಯಾತಪ್ಪಿ ಚರಂಡಿಗೆ ಪಲ್ಟಿಯಾಗಿದೆ.
ಅಪಘಾತದ ತೀವ್ರತೆಗೆ ರಿಕ್ಷಾ ಸಂಪೂರ್ಣ ನುಜ್ಜುಗುಜ್ಜಾಗಿದ್ದು, ಅದೃಷ್ಟವಶಾತ್ ಚಾಲಕ ಪ್ರಾಣಪಾಯದಿಂದ ಪಾರಾಗಿದ್ದಾರೆ. ಆಟೋ ಚಾಲಕ ಅಶೋಕ್ ಇತ್ತೀಚೆಗಷ್ಟೇ ಹೊಸದಾಗಿ ಅಟೋ ಖರೀದಿಸಿದ್ದರು ಎಂದು ಹೇಳಲಾಗಿದೆ.
ಸಾರ್ವಜನಿಕರ ಮಾನವೀಯ ಸ್ಪಂದನೆ : ಅಪಘಾತ ಸಂಭವಿಸುತ್ತಿದ್ದಂತೆ ಸ್ಥಳೀಯರಾದ ರಾಜೇಶ್ ಬಿದ್ಕಲ್‌ಕಟ್ಟೆ, ರಂಜಿತ್, ರಮೇಶ್, ಸಂದೀಪ್ ಸೌಡ, ಶರತ್, ಶ್ರೀಕಾಂತ್ ಸೌಡ ಹಾಗೂ ಕಿರಣ್ ಅವರು ತತ್‌ಕ್ಷಣವೇ ರಕ್ಷಣೆಗೆ ಧಾವಿಸಿ, ಆಟೋ ರಿಕ್ಷಾ ವನ್ನು ಮೇಲೆತ್ತುವ ಕಾರ್ಯದಲ್ಲಿ ಶ್ರಮಿಸುವ ಮೂಲಕ ಮಾನವೀಯತೆ ಮೆರೆದಿದ್ದಾರೆ.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH

ಗ್ಯಾರಂಟಿ ಖಚಿತ, ಪ್ರಯಾಣ ಉಚಿತ, ಷರತ್ತು ನಿಯಮಿತ… | ಗ್ಯಾರಂಟಿ ಯೋಜನೆಗಳ ನಿಯಮಗಳು ಇಲ್ಲಿದೆ

Yellur: ಗೋಶಾಲೆ ನಿರ್ಮಾಣಕ್ಕೆ ಮೀಸಲಿಟ್ಟ ಜಾಗದಲ್ಲಿ ಅದಮಾರು ಶ್ರೀಗಳಿಂದ ಗೋಪೂಜೆ

ಕಪ್ಪು ಬಣ್ಣದ ತುಟಿ…ಕೆಂಪು ಬಣ್ಣವಾಗಿ ಕಾಣಲು ಇಲ್ಲಿದೆ ಸರಳ ಮನೆಮದ್ದು

ಜಾನಪದ ಕಲೆಯನ್ನು ಅಂತರಾಷ್ಟ್ರೀಯ ಮಟ್ಟಕ್ಕೆ ಕೊಂಡೊಯ್ದ ಸೋಲಿಗರು

ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಕಾರುಗಳ ನಡುವೆ ಅಪಘಾತ, ನಾಲ್ವರಿಗೆ ಗಾಯ
ಹೊಸ ಸೇರ್ಪಡೆ

ಲಂಚ ನೀಡಬೇಡಿ, ಮಧ್ಯವರ್ತಿಗಳ ಬಗ್ಗೆ ಎಚ್ಚರದಿಂದಿರಿ: ಶಾಸಕ ಹರೀಶ್‌ಗೌಡ

ಸಿಡಿಲಿಗೆ ಬಲಿಯಾಗಿದ್ದ ಹರೀಶ್ ಕುಟುಂಬಕ್ಕೆ 5 ಲಕ್ಷ ರೂ. ಚೆಕ್ ವಿತರಣೆ

Congress ದೌರ್ಜನ್ಯ ತಡೆಯಲು ಶೀಘ್ರದಲ್ಲೇ ಸಹಾಯವಾಣಿ: ತೇಜಸ್ವಿ ಸೂರ್ಯ

ಕಾರ್ಕಳ: ಮೀನಿನ ಗೊಬ್ಬರ ಸಾಗಿಸುತ್ತಿದ್ದ ಲಾರಿ ಮರಕ್ಕೆ ಢಿಕ್ಕಿ: ಗಾಯ

ರೈಲು ದುರಂತ: ಕೋಲ್ಕತಾದಲ್ಲಿ ಸಂಕಷ್ಟ; ಕ್ರೀಡಾಪಟುಗಳಿಗೆ ರಾಜ್ಯ ಸರಕಾರದ ನೆರವು