ಇನ್ನೂ ಈಡೇರದ ಆಜ್ರಿ-ಬಡಬಾಳು ಸೇತುವೆ ಬೇಡಿಕೆ

ಸೇತುವೆಯಿಲ್ಲದೆ ರಸ್ತೆ ಸಂಚಾರವೇ ಸ್ಥಗಿತ ; ಕಾಲು ಸಂಕದಲ್ಲೇ ಸಾರ್ವಜನಿಕರ ಸಂಕಷ್ಟದ ನಡಿಗೆ

Team Udayavani, Jul 20, 2019, 5:44 AM IST

1907KDPP1A

ಕುಂದಾಪುರ: ಆಜ್ರಿಯಿಂದ ಬಡಬಾಳುವಿಗೆ ಸಂಪರ್ಕಿಸಲು ಕುಬ್ಜಾ ನದಿಯನ್ನು ದಾಟಬೇಕಿದ್ದು, ಸಮರ್ಪಕ ಸೇತುವೆಯಿಲ್ಲದೆ ಸಾರ್ವಜನಿಕರು ಪರದಾಡುತ್ತಿದ್ದಾರೆ.

ಇಲ್ಲಿನ ಜಡ್ಡಿಮೂಲೆ ಬಳಿ ಊರವರು ನಿರ್ಮಿಸಿದ ಕಾಲು ಸಂಕವೇ ಇಲ್ಲಿನ ನೂರಾರು ಮನೆಗಳಿಗೆ ಹೊಳೆ ದಾಟಲು ಆಸರೆಯಾಗಿದೆ. 20 ವರ್ಷಗಳ ಹಿಂದಿನಿಂದಲೂ ಇಲ್ಲಿ ಸೇತುವೆ ನಿರ್ಮಾಣದ ಬೇಡಿಕೆಯಿದ್ದರೂ ಸಂಬಂಧಿಸಿದ ಯಾವ ಅಧಿಕಾರಿ, ಇಲಾಖೆಗಳೂ ಇತ್ತ ಗಮನ ಹರಿಸಿಲ್ಲ. ಆದ್ದರಿಂದ ಪ್ರತಿ ವರ್ಷ ಊರವರೇ ತಾತ್ಕಾಲಿಕವಾಗಿ ನಿರ್ಮಿಸುವ ಕಾಲು ಸಂಕದಲ್ಲೇ ಜನರ ಸಂಕಷ್ಟದ ನಡಿಗೆ ಮುಂದುವರಿದಿದೆ.

ಆಜ್ರಿಯಿಂದ ಜಡ್ಡಿನಮೂಲೆ, ಯಡೂರು, ಯಡ್ನಾಡಿಯಾಗಿ ಬಡಬಾಳುವಿಗೆ ಕುಬಾj ನದಿಗೆ ಸಂಪರ್ಕ ಕಲ್ಪಿಸುವ ಸೇತುವೆ ಇದಾಗಿದೆ. ಪ್ರತಿ ಬಾರಿ ಚುನಾವಣೆ ಬಂದಾಗ ಮಾತ್ರ ಸೇತುವೆ ಮಾಡಿ ಕೊಡುವ ಭರವಸೆ ಜನಪ್ರತಿನಿಧಿಗಳಿಂದ ಸಿಗುತ್ತಿದೆಯೇ ಹೊರತು, ಈ ಕನಸನ್ನು ಕಾರ್ಯರೂಪಕ್ಕೆ ತರುವಲ್ಲಿ ಯಾರೊಬ್ಬರೂ ಪ್ರಯತ್ನಿಸಿಲ್ಲ ಎಂಬುದು ಗ್ರಾಮರ್ಸತರ ಅಳಲು.

ಬಡಬಾಳುವಿನಲ್ಲಿ ಸೇತುವೆ ಇಲ್ಲದ ಕಾರಣ ಜಡ್ಡಿನಮೂಲೆ, ಯಡೂರು, ಕೇವರ್ಜಿ, ಕ್ಯಾಕೋಡು ಭಾಗದ ಜನರು ಆಜ್ರಿಗೆ ಬಂದು ಮುಖ್ಯ ಪೇಟೆ ಶಂಕರನಾರಾಯಣಕ್ಕೆ ತೆರಳಬೇಕಾದ ಪರಿಸ್ಥಿತಿ ಇದೆ. ಈ ಪ್ರಯಾಣ ಸುಮಾರು 5 ಕಿ.ಮೀ. ದೂರ ಹೆಚ್ಚುವರಿಯಾಗಿದ್ದರೂ, ಕ್ರಮಿಸಬೇಕಾದ ಅನಿವಾರ್ಯ ಇಲ್ಲಿನ ಜನರದ್ದು.

ಸಂಚಾರವೇ ಸ್ಥಗಿತ
ಆಜ್ರಿಯಿಂದ ಬಡಬಾಳು ಮಾರ್ಗ ಮಳೆಗಾಲದಲ್ಲಿ ಸಂಚಾರವೇ ಸ್ಥಗಿತಗೊಳಿಸಲಾಗುತ್ತದೆ. ಬೇಸಗೆಯಲ್ಲಿ ಕುಬಾj ನದಿಯಲ್ಲಿ ನೀರು ಕಡಿಮೆಯಾದ ಅನಂತರ ನದಿಯಲ್ಲೇ ತಾತ್ಕಾಲಿಕ ಮಾರ್ಗ ಮಾಡಿ ವಾಹನ ಸಂಚಾರಕ್ಕೆ ವ್ಯವಸ್ಥೆ ಮಾಡಿಕೊಡಲಾಗುತ್ತದೆ. ಮಳೆಗಾಲದಲ್ಲಿ ನದಿ ದಾಟಲು ಊರವರೆಲ್ಲ ಸೇರಿ ಪ್ರತಿ ವರ್ಷ ಕಾಲು ಸಂಕವನ್ನು ನಿರ್ಮಿಸಿ, ಅದರಲ್ಲಿಯೇ ಸಂಚರಿಸುತ್ತಾರೆ.

ಕೊಚ್ಚಿ ಹೋಗಿದ್ದ ಕಾಲು ಸಂಕ
3 ವರ್ಷಗಳ ಹಿಂದೊಮ್ಮೆ ಇದೇ ಜಡ್ಡಿಮೂಲೆಯಲ್ಲಿ ಊರವರು ನಿರ್ಮಿಸಿದ್ದ ತಾತ್ಕಾಲಿಕ ಕಾಲು ಸಂಕ ಭಾರೀ ಮಳೆಯಿಂದಾಗಿ ನೆರೆಗೆ ಕೊಚ್ಚಿಕೊಂಡು ಹೋಗಿತ್ತು. ಆ ಬಳಿಕ ಮಳೆಗಾಲ ಮುಗಿಯುವರೆಗೆ ಈ ದಾರಿಯಲ್ಲಿನ ಸಂಪರ್ಕವೇ ಕಡಿತಗೊಂಡಿತ್ತು.

ಇಲ್ಲಿಗೆ ಸೇತುವೆ ಬೇಡಿಕೆ ಕುರಿತಂತೆ ಎಲ್ಲ ಜನಪ್ರತಿನಿಧಿಗಳಿಗೂ ಮನವಿ ಕೊಟ್ಟಿದ್ದೇವೆ. ಚುನಾವಣೆ ಬಂದಾಗ ಸೇತುವೆ ಬೇಡಿಕೆ ಈಡೇರಿಸುವ ಭರವಸೆ ನೀಡುತ್ತಾರೆ. ಆ ಬಳಿಕ ಮಾತ್ರ ಅದು ನನೆಗುದಿಗೆ ಬಿದ್ದಿರುತ್ತದೆ. ಪ್ರತಿ ಸಲವೂ ಇದೇ ಪುನರಾವರ್ತನೆಯಾಗುತ್ತಿದೆ ಎಂದು ಬಡಬಾಳು ಗ್ರಾಮಸ್ಥರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ವಿದ್ಯಾರ್ಥಿಗಳಿಗೆ ಸಂಕಷ್ಟ
ಬಡಬಾಳು ಭಾಗದಿಂದ ಶಂಕರನಾರಾಯಣ ಪ್ರಥಮ ದರ್ಜೆ ಕಾಲೇಜು, ಆಸುಪಾಸಿನ ಶಾಲಾ- ಕಾಲೇಜುಗಳಿಗೆ ಹೋಗುವ ಸುಮಾರು 25- 30 ಮಕ್ಕಳು ಇದೇ ಕಾಲ ಸಂಕದಲ್ಲಿ ಪ್ರತಿ ನಿತ್ಯ ತೆರಳಬೇಕಾಗಿದ್ದು, ಚಿಕ್ಕ ಮಕ್ಕಳು ಕೂಡ ಇರುವುದರಿಂದ ಅವರು ಹೊಳೆ ದಾಟುವಾಗ ನಿಗಾ ಇಡಬೇಕಾಗುತ್ತದೆ.

ಗಮನಕ್ಕೆ ಬಂದಿದೆ
ಆಜ್ರಿಯಿಂದ ಬಡಬಾಳುವಿಗೆ ಸಂಪರ್ಕಿಸುವ ಸೇತುವೆ ಬೇಡಿಕೆ ಕುರಿತು ಜನರು ನೀಡಿರುವ ಮನವಿ ಗಮನಕ್ಕೆ ಬಂದಿದೆ. ಅನುದಾನ ಮಂಜೂರಾತಿಗೆ ಸರ್ವ ಪ್ರಯತ್ನ ಮಾಡಲಾಗುವುದು.
-ಬಿ.ಎಂ. ಸುಕುಮಾರ ಶೆಟ್ಟಿ,
ಬೈಂದೂರು ಶಾಸಕರು

ಕಾಲು ಸಂಕಕ್ಕೆ ಅನುದಾನ
ಕಾಲು ಸಂಕಗಳಿಗೆ ಬೇಡಿಕೆಯಿದ್ದಲ್ಲಿ ತಾ.ಪಂ.ಗೆ ಪ್ರಸ್ತಾವನೆ ಕಳುಹಿಸಿ, ಅನುದಾನ ಪಡೆಯಬಹುದು. ಅದಕ್ಕೆ ಅವಕಾಶವಿದೆ. ಮುಂದಿನ ದಿನಗಳಲ್ಲಿ ಬಡಬಾಳುವಿನ ಕಾಲು ಸಂಕ ನಿರ್ಮಾಣ ಸಂಬಂಧ ಗಮನವಹಿಸಲಾಗುವುದು. ಸೇತುವೆಗೂ ಪ್ರಯತ್ನಿಸಲಾಗುವುದು.
-ದುರ್ಗಾದಾಸ್‌,
ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್‌,
ಲೋಕೋಪಯೋಗಿ ಇಲಾಖೆ ಕುಂದಾಪುರ

– ಪ್ರಶಾಂತ್‌ ಪಾದೆ

ಟಾಪ್ ನ್ಯೂಸ್

13

Politics: ಸಿದ್ದರಾಮಯ್ಯ ಸರಕಾರ ಬಂದ ಬಳಿಕ ಮುಸ್ಲಿಂ ಮೂಲಭೂತವಾದಿಗಳು ಹೆಚ್ಚಳ; ಅಶೋಕ್‌

1-qeqeqwe

Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ

1-aaa-1

Rain; ರಾಜ್ಯದ ವಿವಿಧೆಡೆ ಸಿಡಿಲಬ್ಬರದ ಮಳೆ; ಕುಷ್ಟಗಿಯಲ್ಲಿ ರೈತ ಬಲಿ, ಅಪಾರ ನಷ್ಟ

1-weewqewqe

LS Election; ದಿಂಗಾಲೇಶ್ವರ ಶ್ರೀ ಕೋಟ್ಯಧಿಪತಿ: 3 ಅಪರಾಧ ಪ್ರಕರಣಗಳು ಇವೆ

crime (2)

Bengaluru: ಪಾರ್ಕ್ ನಲ್ಲಿ ಹಾಡಹಗಲೇ ಜೋಡಿಯ ಬರ್ಬರ ಹತ್ಯೆ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

8

Malpe Beach: ಈಜಲು ಹೋದ ಮೂವರು ಸಮುದ್ರಪಾಲು; ಓರ್ವನ ಸಾವು, ಇಬ್ಬರ ರಕ್ಷಣೆ

1-wqeqwew

BJP ನುಡಿದಂತೆ ನಡೆಯದ ಕೇಂದ್ರ ಸರಕಾರ, 15 ಲ.ರೂ. ಬಂದಿದೆಯೇ?: ಜೆ.ಪಿ. ಹೆಗ್ಡೆ

4

ಕೋತಲಕಟ್ಟೆ: ಹೆದ್ದಾರಿ ಬಳಿ ನಿಲ್ಲಿಸಿದ್ದ ಸ್ಕೂಟಿ ಕಳವು

1-wewewe

Congress;ಪ್ರತಾಪ್‌ಚಂದ್ರ ಶೆಟ್ಟಿ-ಜೆ.ಪಿ.ಹೆಗ್ಡೆ ಭೇಟಿ: ಕಾರ್ಯತಂತ್ರದ ಸಮಾಲೋಚನೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

13

Politics: ಸಿದ್ದರಾಮಯ್ಯ ಸರಕಾರ ಬಂದ ಬಳಿಕ ಮುಸ್ಲಿಂ ಮೂಲಭೂತವಾದಿಗಳು ಹೆಚ್ಚಳ; ಅಶೋಕ್‌

1-qeqeqwe

Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ

11

ಆಲೆಟ್ಟಿ: ಅರಣ್ಯಕ್ಕೆ ತಗುಲಿದ ಬೆಂಕಿ

Payaswini river: ಪಯಸ್ವಿನಿ ನದಿಯಲ್ಲಿ ಮುಳುಗಿ ಓರ್ವ ಸಾವು

Payaswini river: ಪಯಸ್ವಿನಿ ನದಿಯಲ್ಲಿ ಮುಳುಗಿ ಓರ್ವ ಸಾವು

death

Kollegala: ಕಾಡಾನೆ ದಾಳಿಗೆ ವ್ಯಕ್ತಿ ಬಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.