ಮಹಾರಾಷ್ಟ್ರದಿಂದ ಆಗಮಿಸುವವರಲ್ಲಿ ಜಿಲ್ಲೆಯವರೇ ಹೆಚ್ಚು

ಬೆಳಗಾವಿ ಗಡಿಯಲ್ಲಿ ಉಡುಪಿ ಜಿಲ್ಲಾಡಳಿತ ತಂಡದ ಕೆಲಸ

Team Udayavani, May 14, 2020, 5:19 AM IST

ಮಹಾರಾಷ್ಟ್ರದಿಂದ ಆಗಮಿಸುವವರಲ್ಲಿ ಜಿಲ್ಲೆಯವರೇ ಹೆಚ್ಚು

ಉಡುಪಿ: ಮಹಾರಾಷ್ಟ್ರದಿಂದ ಉಡುಪಿ ಜಿಲ್ಲೆಗೆ ಬರುವ ಸಾರ್ವಜನಿಕರಿಗೆ ರಾಜ್ಯಕ್ಕೆ ಪ್ರವೇಶಿಸಲು ಅಗತ್ಯ ನೆರವು ನೀಡುವ ಉದ್ದೇಶದಿಂದ ಜಿಲ್ಲಾಧಿಕಾರಿ ಜಿ.ಜಗದೀಶ್‌ ಅವರ ಸೂಚನೆಯಂತೆ ಉಡುಪಿಯಿಂದ ತೆರಳಿರುವ ಅಧಿಕಾರಿಗಳ ತಂಡ ಬೆಳಗಾವಿಯ ಗಡಿಭಾಗವಾದ ನಿಪ್ಪಾಣಿ ಸಮೀಪದ ಕುಗ್ಗನಹಳ್ಳಿ ಚೆಕ್‌ಪೋಸ್ಟ್‌ ನಲ್ಲಿ ತೆರೆದಿರುವ ಸಹಾಯಕೇಂದ್ರದಲ್ಲಿ ನಿರಂತರವಾಗಿ ಕಾರ್ಯ ನಿರ್ವಹಿಸುತ್ತಿದೆ.

ಮಹಾರಾಷ್ಟ್ರದಿಂದ ಬರುವ ಜಿಲ್ಲೆಯ ನಾಗರಿಕರ ಉಡುಪಿ ಜಿಲ್ಲೆಯಲ್ಲಿನ ವಿಳಾಸದ ಕುರಿತು ಪರಿಶೀಲನೆ ನಡೆಸಿ ಅದನ್ನು ದೃಢೀಕರಿಸಿ ಅವರು ರಾಜ್ಯ ಪ್ರವೇಶಿಸಲು ತಂಡ ಸಹಾಯ ಮಾಡುತ್ತಿದೆ. ಉಡುಪಿ ಜಿಲ್ಲೆಗೆ ಆಗಮಿಸಿದ ಅನಂತರದ ಇಲ್ಲಿನ ಕ್ವಾರಂಟೈನ್‌ ಕ್ರಮಗಳು, ಜಿಲ್ಲಾಡಳಿತದಿಂದ ಒದಗಿಸುವ ಸೌಲಭ್ಯಗಳು ಮತ್ತಿತರ ಅಗತ್ಯ ಮಾಹಿತಿಯನ್ನು ನೀಡಿ ಅವರ ಅನಗತ್ಯ ಆತಂಕವನ್ನು ದೂರ ಮಾಡುತ್ತಿದೆ. ಮುಖ್ಯವಾಗಿ ಅವರು ನಿರಾಳವಾಗಿ ಜಿಲ್ಲೆಗೆ ತಲುಪಲು ಬೇಕಾದ ವ್ಯವಸ್ಥೆ ಮಾಡಲಾಗುತ್ತಿದೆ. ಆಗಮಿಸುತ್ತಿರುವ ಸಾರ್ವಜನಿಕರ ಸಂಪೂರ್ಣ ವಿವರಗಳನ್ನು ಅವರು ಜಿಲ್ಲೆಗೆ ತಲುಪುವ ಮೊದಲೇ ಜಿಲ್ಲಾಡಳಿತಕ್ಕೆ ತಲುಪಿಸಲಾಗುತ್ತಿದೆ.

ಮೊದಲು ಬೆಳಗಾವಿ ಜಿಲ್ಲಾಡಳಿತದ ತಂಡಕ್ಕೆ ಬರುವವರನ್ನು ನಿಭಾಯಿಸುವುದು ಕಷ್ಟಕರವಾಗಿತ್ತು. ಹೀಗಾಗಿ ಅಲ್ಲಿನ ಜಿಲ್ಲಾಡಳಿತ ಉಡುಪಿ ಜಿಲ್ಲಾಡಳಿತಕ್ಕೆ ಪತ್ರ ಬರೆದು ಸಹಕರಿಸಲು ಕೋರಿತ್ತು. ಅದರಂತೆ ಮೇ 11ರಿಂದ ಈ ತಂಡವನ್ನು ಕಳುಹಿಸಲಾಯಿತು. ಪ್ರಾಯಃ ಮೇ 16ರ ವರೆಗೆ ಇಲ್ಲಿ ಕಾರ್ಯ ನಿರ್ವಹಿಸಬೇಕಾಗುವ ಸಾಧ್ಯತೆ ಇದೆ.

10 ಜಿಲ್ಲೆಗಳ ತಂಡಗಳು
ಮೈಸೂರು, ಕೊಡಗು, ದ.ಕ., ಉಡುಪಿ, ಮಂಡ್ಯ ಹೀಗೆ ವಿವಿಧ ಜಿಲ್ಲೆಗಳಿಗೆ ಮಹಾರಾಷ್ಟ್ರದಿಂದ ಬರುತ್ತಿದ್ದಾರೆ. ಮುಖ್ಯವಾಗಿ ಬರುವವರು ಮುಂಬೈ ನಿವಾಸಿಗಳು. ಉಳಿದ ಜಿಲ್ಲೆಗಳಿಗೆ ಹೋಲಿಸಿದರೆ ಉಡುಪಿ ಜಿಲ್ಲೆಗೆ ಅತಿ ಹೆಚ್ಚು ಜನರು ಬರುತ್ತಿದ್ದಾರೆ. ಪ್ರಸ್ತುತ ಉಡುಪಿ ಜಿಲ್ಲೆಗೆ ಪ್ರತಿನಿತ್ಯ ಬರುವವರ ಸಂಖ್ಯೆ ಸುಮಾರು 600. ದ.ಕ. ಜಿಲ್ಲೆಗೆ ಬರುವವರ ಸಂಖ್ಯೆ 30ರಿಂದ 40 ಅಷ್ಟೆ, ಮೈಸೂರಿಗೆ ಮೂರ್‍ನಾಲ್ಕು ಜನರು ಬರುತ್ತಿದ್ದಾರೆ. ಬೆಳಗಾವಿ ಜಿಲ್ಲಾಡಳಿತ ಕೋರಿದಂತೆ 19 ಜಿಲ್ಲೆಗಳ ಪೈಕಿ ಹತ್ತು ಜಿಲ್ಲಾಡಳಿತದಿಂದ ಮಾತ್ರ ತಂಡವನ್ನು ಕಳುಹಿಸಲಾಗಿದೆ.

ಕಾಯಬೇಕಾದ ಸಮಯ ಇಳಿಕೆ
ಬೆಳಗಾವಿಯ ಸರಕಾರಿ ನೌಕರರಿಗೆ ಸಾರ್ವಜನಿಕರು ಹೇಳುವ ಉಡುಪಿ ಜಿಲ್ಲೆಯ ತಾಲೂಕು, ಗ್ರಾಮಗಳ ಹೆಸರುಗಳನ್ನು ಸರಿಯಾಗಿ ಗುರುತಿಸಲು ಆಗುತ್ತಿರಲಿಲ್ಲ. ಈಗ ಉಡುಪಿಯಿಂದ ಹೋದ ತಂಡವೇ ಕಂಪ್ಯೂಟರ್‌ನಲ್ಲಿ ಸುಲಭವಾಗಿ ನಿರ್ವಹಿಸುತ್ತಿದೆ. ಹೀಗಾಗಿ ಹಿಂದೆ ಐದಾರು ಗಂಟೆ ಕಾಲ ಕಾಯ ಬೇಕಾಗಿದ್ದ ಸಾರ್ವಜನಿಕರು ಈಗ ಅರ್ಧ, ಒಂದು ಗಂಟೆಯೊಳಗೆ ಗಡಿಯೊಳಗೆ ಬರಬಹುದಾಗಿದೆ. ಇಲ್ಲಿ ದೇಹದ ಉಷ್ಣಾಂಶ ಪರೀಕ್ಷೆಯೂ ನಡೆಯುತ್ತಿದ್ದು ಜ್ವರವೇನಾದರೂ ಇದ್ದಲ್ಲಿ ವಾಪಸು ಕಳುಹಿಸಲಾಗುತ್ತದೆ. ಸೀಲ್‌ ಹಾಕುವ ಕೆಲಸವೂ ನಡೆಯುತ್ತಿದೆ. ತಂಡವು ಬೆಳಗ್ಗೆ 7ರಿಂದ ರಾತ್ರಿ 9 ಗಂಟೆವರೆಗೆ ಕೆಲಸ ಮಾಡುತ್ತಿದೆ. ರಾತ್ರಿ ಉಳಿದುಕೊಳ್ಳುವ ವ್ಯವಸ್ಥೆಯನ್ನು ಚೆಕ್‌ಪೋಸ್ಟ್‌ನಿಂದ 80 ಕಿ.ಮೀ. ದೂರದಲ್ಲಿರುವ ಚಿಕ್ಕೋಡಿಯಲ್ಲಿ ಮಾಡಲಾಗಿದೆ.

ತಂಡದ ಸದಸ್ಯರು
ತಂಡದಲ್ಲಿ ಯುವ ಸಶಕ್ತೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಡಾ| ರೋಶನ್‌ ಕುಮಾರ್‌ ಶೆಟ್ಟಿ, ನಿರ್ಮಿತಿ ಕೇಂದ್ರದ ಯೋಜನಾ ನಿರ್ದೇಶಕ ಅರುಣ್‌ ಕುಮಾರ್‌ ಮತ್ತು ಸಹಾಯಕರಾಗಿ ಜಿಲ್ಲಾ ನಗರಾಭಿವೃಧಿª ಕೋಶದ ಕಾಶೀನಾಥ್‌ ಕಾರ್ಯ ನಿರ್ವಹಿಸುತ್ತಿದ್ದಾರೆ.

ಹೆಚ್ಚಬಹುದು
ಈಗ ಸದ್ಯ ಸ್ವಂತ ವಾಹನ ಅಥವಾ ಬಾಡಿಗೆ ವಾಹನಗಳಲ್ಲಿ ಜನರು ಬರುತ್ತಿದ್ದಾರೆ. ಮುಂದೆ ಬಸ್‌, ರೈಲಿನಲ್ಲಿ ಬರಲು ಅನುಮತಿ ಕೊಟ್ಟರೆ ಆಗಮಿಸುವವರ ಸಂಖ್ಯೆ ಇನ್ನಷ್ಟು ಹೆಚ್ಚಬಹುದು.
-ಡಾ|ರೋಶನ್‌ ಕುಮಾರ್‌ ಶೆಟ್ಟಿ

ಟಾಪ್ ನ್ಯೂಸ್

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

8

Malpe Beach: ಈಜಲು ಹೋದ ಮೂವರು ಸಮುದ್ರಪಾಲು; ಓರ್ವನ ಸಾವು, ಇಬ್ಬರ ರಕ್ಷಣೆ

4

ಕೋತಲಕಟ್ಟೆ: ಹೆದ್ದಾರಿ ಬಳಿ ನಿಲ್ಲಿಸಿದ್ದ ಸ್ಕೂಟಿ ಕಳವು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-aaa

Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.