“ಸಾಹಿತ್ಯ ಸಮ್ಮೇಳನ ಹೊಸ ಸಾಹಿತಿಗಳ ಸೃಷ್ಟಿಗೆ ಕಾರಣವಾಗಲಿ’


Team Udayavani, Feb 25, 2017, 12:53 PM IST

2402bdre4.jpg

ಬೈಂದೂರು: ಸಾಹಿತ್ಯ ಚಿಂತನೆ, ಮನೋರಂಜನೆ, ವೈಚಾರಿಕ ಮನೋಭಾವವನ್ನು ಹೆಚ್ಚಿಸುವುದರೊಂದಿಗೆ ಮಾನವನ ಹೃದಯಲ್ಲಿ ಬೇಕಾಗಿರುವ ಕರುಣೆ, ದಯೆಯನ್ನು ತುಂಬುತ್ತದೆ. ಆ ಮೂಲಕ ಕ್ಷೀಣಿಸುತ್ತಿರುವ ಭಾವನಾತ್ಮಕ ಸಂಬಂಧಗಳನ್ನು ಒಟ್ಟುಗೂಡಿಸಿಕೊಳ್ಳಿ ಎಂಬ ಮಾರ್ಮಿಕ ಧ್ವನಿ ಹೊರ ಹೊಮ್ಮಿಸುತ್ತದೆ. ಕನ್ನಡ ಅಭಿಮಾನ ಕನ್ನಡ ನಾಡಿನ ಸಂಸ್ಕೃತಿಯ ಜತೆಗೆ ಒಂದಾಗಬೇಕಿದೆ. ಸಾಹಿತಿ ಸಾಹಿತಿಯೇ ವಿನಃ ಆತನಿಗೆ ಜಾತಿ, ಧರ್ಮವಿಲ್ಲ ಎಂದು ಕರ್ನಾಟಕ ಜನಪದ ಸಿಂಡಿಕೇಟ್‌ ಸದಸ್ಯ ಡಾ| ಸೈಯ್ಯದ್‌ ಝಮೀರುಲ್ಲಾ ಶರೀಫ್‌ ಹೇಳಿದರು.

ಅವರು ಕಿರಿಮಂಜೇಶ್ವರ ಶ್ರೀ ಅಗಸೆöàಶ್ವರ ದೇವಸ್ಥಾನದ ಆವರಣದ ಉಳ್ಳೂರು ಮೂಕಜ್ಜಿ ವೇದಿಕೆಯಲ್ಲಿ ಜರಗಿದ ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಕುಂದಾಪುರ ತಾಲೂಕು ಘಟಕದ ನೇತೃತ್ವದಲ್ಲಿ ಆಯೋಜನೆಗೊಂಡ 15ನೇ ಕನ್ನಡ ಸಾಹಿತ್ಯ ಸಮ್ಮೇಳನ ಡಿಂಡಿಮ 2016ರ ಸಮಾರೋಪ ನುಡಿಗಳನ್ನಾಡಿದರು.

ಸಮ್ಮೇಳನಗಳು ಪ್ರತಿಯೊಬ್ಬರ ಮೇಲೂ ಸಾಂಸ್ಕೃತಿಕ ಜವಾಬ್ದಾರಿಯನ್ನು ಹೊರಿಸಿ ಕಳುಹಿಸುತ್ತದೆ. ಸಾಹಿತ್ಯ ಸಮ್ಮೇಳನ ಹೊಸ ಸಾಹಿತಿಗಳ ಸೃಷ್ಟಿಗೆ ಕಾರಣವಾಗಬೇಕು. ಪ್ರತಿ ಸಾಹಿತಿಯೂ ಸಾಂಸ್ಕೃತಿಕ ರಾಯಭಾರಿಯಾಗಿ ಕೆಲಸ ಮಾಡುತ್ತಾರೆ. ಆದ್ದರಿಂದ ಹೊಸಬರಿಗೆ ಅವಕಾಶ ನೀಡುವ ವಿಶಾಲ ಮನೋಭಾವ ನಮ್ಮದಾಗಬೇಕು. ಪ್ರಶಸ್ತಿ ಹಿಂದೆ ಬಿದ್ದಿರುವ ಸಾಹಿತಿಗಳು ಹೊಸ ಮೊಗ್ಗುಗಳನ್ನು ಅರಳಿಸುವ ಕೆಲಸ ಮಾಡುತ್ತಿಲ್ಲ ಎನ್ನುವುದು ಖೇದಕರ ಎಂದರು.

ತಾಲೂಕು ಕನ್ನಡ ಸಾಹಿತ್ಯ ಪರಿಷತ್‌ ಅಧ್ಯಕ್ಷ ಡಾ. ಸುಬ್ರಹ್ಮಣ್ಯ ಭಟ್‌ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ ಕನ್ನಡ ಶಾಲೆ ಉಳಿದರೆ ಮಾತ್ರವೇ ಸಾಲದು. ಕನ್ನಡ ಭಾಷೆ ಉಳಿಸಬೇಕಾದರೇ ಮನೆಗಳಲ್ಲಿ, ಮನದಲ್ಲಿ ಕನ್ನಡ ಕಟ್ಟುವ ಕಾರ್ಯವನ್ನು ಮಾಡಬೇಕಿದೆ. ಕವಿ ಗೋಪಾಲಕೃಷ್ಣ ಅಡಿಗ ಜನ್ಮಶತಾಬ್ದದ ನೆನಪಿಗಾಗಿ ಅವರ ಹುಟ್ಟೂರಿನಲ್ಲಿಯೇ ಸಾಕ್ಷಿ ಕೇಂದ್ರವನ್ನು ಸ್ಥಾಪಿಸಲು ತಾಲೂಕು  ಕಸಾಪ ಬದ್ಧವಾಗಿದೆ ಎಂದರು.

ಸಮ್ಮೇಳನದ ಸರ್ವಾಧ್ಯಕ್ಷ ಸತೀಶ್‌ ಚಪ್ಪರಿಕೆ ಸಮಾರೋಪ ನುಡಿಗೆ ಪ್ರತಿಕ್ರಿಯಿಸಿ ಇಡಿ ಸಮ್ಮೇಳನ ತನಗೆ ಖುಷಿ ನೀಡಿದ್ದು, ಪ್ರಪಂಚದ ಎಲ್ಲಾ ಪ್ರಶಸ್ತಿಗಿಂತಲೂ ಮಿಗಿಲಾದದ್ದು ಗೌರವ ದೊರೆತ ಸಂತಸ ಸಿಕ್ಕಿದೆ. ಸಮ್ಮೇಳನಾಧ್ಯಕ್ಷನಾದ ಬಳಿಕ ಸಾಹಿತ್ಯದಲ್ಲಿ ಮತ್ತಷ್ಟು ಗಂಭೀರವಾಗಿ ತೊಡಗಿಸಿಕೊಳ್ಳುವ ಜವಾಬ್ದಾರಿ ಬಂದಿದೆ. ಹುಟ್ಟೂರಿನ ನಂಟು ಹೆಚ್ಚಿದೆ. ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್‌ ಹಮ್ಮಿಕೊಳ್ಳುವ ಕನ್ನಡದ ಕಾರ್ಯಗಳಿಗೆ ಜತೆಯಾಗುವೆ ಎಂದರು.

ಈ ಸಂದರ್ಭದಲ್ಲಿ ವಿವಿಧ ಕ್ಷೇತ್ರಗಳ ಸಾಧಕರನ್ನು ಜಿಲ್ಲಾ ಕಸಾಪ ಮಾಜಿ ಅಧ್ಯಕ್ಷ ಎಎಸ್‌ಎನ್‌ ಹೆಬ್ಟಾರ್‌ ಸಮ್ಮಾನಿಸಿದರು.  15ನೇ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನಾಧ್ಯಕ್ಷ ಸತೀಶ್‌ ಚಪ್ಪರಿಕೆ ಹಾಗೂ ತಾಲೂಕು ಕಸಾಪ ಅಧ್ಯಕ್ಷ ಡಾ. ಸುಬ್ರಹ್ಮಣ್ಯ ಭಟ್‌ ರವರನ್ನು ಸಮ್ಮಾನಿಸಲಾಯಿತು. ಸಮ್ಮೇಳನಕ್ಕಾಗಿ ಶ್ರಮಿಸಿದದವರನ್ನು ಗೌರವಿಸಲಾಯಿತು.

ವೇದಿಕೆಯಲ್ಲಿ ತಾಲೂಕು ಪಂಚಾಯತ್‌ ಸದಸ್ಯೆ ಶ್ಯಾಮಲಾ ಕುಂದರ್‌, ಕಸಾಪ   ಜಿಲ್ಲಾಧ್ಯಕ್ಷ ನೀಲಾವರ ಸುರೇಂದ್ರ ಅಡಿಗ, ನಿವೃತ್ತ ಶಿಕ್ಷಕ ಸದಾಶಿವ ಶ್ಯಾನುಭೋಗ್‌, ದ್ರಾವಿಡ ಬ್ಯಾಹ್ಮಣ ಪರಿಷತ್‌ ಅಧ್ಯಕ್ಷ ಮಂಜುನಾಥ ಉಡುಪಿ, ವಿಶ್ರಾಂತ ಪ್ರಾಧ್ಯಾಪಕ ವಾಸುದೇವ ಕಾರಂತ ಕೊಡೇರಿ, ಕಿರಿಮಂಜೇಶ್ವರ ಜುಮ್ಮಾ ಮಸೀದಿಯ ಕೆ.ಎಂ. ಇರ್ಷಾದ್‌, ಕಸಪಾ ಜಿಲ್ಲಾ ಕಾರ್ಯದರ್ಶಿ ಸೂರಾಲು ನಾರಾಯಣ ಮಡಿ, ಕಾರ್ಕಳ ತಾಲೂಕು ಅಧ್ಯಕ್ಷ ಪ್ರಭಾಕರ ಶೆಟ್ಟಿ ಕೊಂಡಳ್ಳಿ, ಕುಂದಾಪುರ ತಾಲೂಕು ಕಸಾಪ ಕಾರ್ಯದರ್ಶಿ ಡಾ. ಕಿಶೋರ್‌ ಕುಮಾರ್‌, ಬೈಂದೂರು ಹೋಬಳಿ ಅಧ್ಯಕ್ಷ ಗಣಪತಿ ಹೋಬಳಿದಾರ್‌, ವಂಡ್ಸೆ ಹೋಬಳಿ ಅಧ್ಯಕ್ಷ ಚಂದ್ರ ಕೆ. ಹೆಮ್ಮಾಡಿ, ಕೋಟೇಶ್ವರ ಘಟಕ ಅಧ್ಯಕ್ಷ ಅಶೋಕ್‌ ತೆಕ್ಕಟ್ಟೆ  ಉಪಸ್ಥಿತರಿದ್ದರು.
ನಿವೃತ್ತ ಬ್ಯಾಂಕ್‌ ಅಧಿಕಾರಿ ಗೋವಿಂದ ಎಂ. ಸ್ವಾಗತಿಸಿದರು. ಶಿಕ್ಷಕ ಸುಬ್ರಹ್ಮಣ್ಯ ಜಿ. ಉಪ್ಪುಂದ ಕಾರ್ಯಕ್ರಮ ನಿರ್ವಹಿಸಿದರು. ರತನ್‌ ಬಿಜೂರು ವಂದಿಸಿದರು.

ಟಾಪ್ ನ್ಯೂಸ್

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

musk

Tesla; ಭಾರತದಲ್ಲಿ ಎಲಾನ್‌ ಮಸ್ಕ್ 25,000 ಕೋಟಿ ಹೂಡಿಕೆ?

voter

EVM ಯಾವ ಗುಂಡಿ ಒತ್ತಿದರೂ ಬಿಜೆಪಿಗೆ ಮತ: ಭಾರೀ ಚರ್ಚೆ

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

accident

Bramavara; ಹೆದ್ದಾರಿಯಲ್ಲಿ ಭೀಕರ ಅಪಘಾತ: ಲಾರಿಗೆ ಸಿಲುಕಿ ಬೈಕ್ ಸವಾರ ದುರ್ಮರಣ

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

8

Malpe Beach: ಈಜಲು ಹೋದ ಮೂವರು ಸಮುದ್ರಪಾಲು; ಓರ್ವನ ಸಾವು, ಇಬ್ಬರ ರಕ್ಷಣೆ

1-wqeqwew

BJP ನುಡಿದಂತೆ ನಡೆಯದ ಕೇಂದ್ರ ಸರಕಾರ, 15 ಲ.ರೂ. ಬಂದಿದೆಯೇ?: ಜೆ.ಪಿ. ಹೆಗ್ಡೆ

4

ಕೋತಲಕಟ್ಟೆ: ಹೆದ್ದಾರಿ ಬಳಿ ನಿಲ್ಲಿಸಿದ್ದ ಸ್ಕೂಟಿ ಕಳವು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.