“ಮಾಧ್ಯಮಗಳು ಒಳ್ಳೆಯದನ್ನು ವೈಭವೀಕರಿಸಲಿ’ 


Team Udayavani, Jan 16, 2018, 11:08 AM IST

19-12.jpg

ಕೋಟ: ಇಂದಿನ ಮಾಧ್ಯಮ ವ್ಯವಸ್ಥೆ ಸಮಾಜ ದಲ್ಲಾಗುವ ಕೆಟ್ಟ ಕೆಲಸಗಳನ್ನು ವೈಭವೀಕರಿಸುತ್ತದೆ. ಇದು ಸಮಾಜದ ಮೇಲೆ ದುಷ್ಪರಿಣಾಮ  ಬೀರುತ್ತದೆ. ಉತ್ತಮ ಕೆಲಸಗಳ ಕುರಿತು ಹೆಚ್ಚು ಪ್ರಚಾರ ನೀಡಿದರೆ ಸಾಮಾಜಿಕ ವ್ಯವಸ್ಥೆ ಸರಿಯಾದ ದಾರಿಯಲ್ಲಿ ಸಾಗುತ್ತದೆ ಎಂದು ವಿಧಾನ ಪರಿಷತ್‌ ಸಭಾಪತಿ ಡಿ.ಎಚ್‌. ಶಂಕರ‌ಮೂರ್ತಿ ಹೇಳಿದರು.

ಅವರು ಸೋಮವಾರ ಸಾಲಿಗ್ರಾಮ ಗುರುನರಸಿಂಹ ದೇವಸ್ಥಾನದಲ್ಲಿ  ಜಾತ್ರೆಯ ಪ್ರಯುಕ್ತ ನಡೆದ ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ಸಾಧಕರಿಗೆ ಸಮ್ಮಾನ ನೆರವೇರಿಸಿ ಮಾತನಾಡಿದರು. ದೇಗುಲಗಳು ಈ ರಾಷ್ಟ್ರದ ಸಾಂಸ್ಕೃತಿಕ ವೈಭವದ ಪ್ರತೀಕ. ಸಾಲಿಗ್ರಾಮ ಕ್ಷೇತ್ರ ದೇಶಕ್ಕೆ ಮಾದರಿಯಾಗುವಂತ ಧಾರ್ಮಿಕ ಕ್ಷೇತ್ರ ಎಂದು ಹೇಳಿದ ಅವರು ಕಾರ್ಯಕ್ರಮದಲ್ಲಿ ಸಮ್ಮಾನಿತರಾದ ಸಮಾಜ ಸೇವಕ ವಿಶು ಶೆಟ್ಟಿ ಸೇರಿದಂತೆ ಎಲ್ಲರ ಕೊಡುಗೆಯನ್ನು ಶ್ಲಾಘಿಸಿದರು. ದೇಗುಲದ ಆಡಳಿತ ಮಂಡಳಿ ಅಧ್ಯಕ್ಷ ಕೆ. ಅನಂತಪದ್ಮನಾಭ ಐತಾಳ ಕಾರ್ಯ ಕ್ರಮದ ಅಧ್ಯಕ್ಷತೆ ವಹಿಸಿದ್ದರು. 

ಈ ಸಂದರ್ಭ ಉಚ್ಚ ನ್ಯಾಯಾಲಯದ ಹಿರಿಯ ನ್ಯಾಯವಾದಿ, ವಿಶ್ರಾಂತ ಅಡ್ವೊಕೇಟ್‌ ಜನರಲ್‌ ಉದಯ ಹೊಳ್ಳ, ಮಂಗಳೂರು ಕರಾವಳಿ ಸಮೂಹ ಸಂಸ್ಥೆಯ ಅಧ್ಯಕ್ಷ ಗಣೇಶ ರಾವ್‌, ಕಾರ್ಪೊರೇಶನ್‌ ಬ್ಯಾಂಕ್‌ ಮಹಾ ಪ್ರಬಂಧಕ ಬಾಲಕೃಷ್ಣ ಅಲ್ಸೆ, ಬೆಂಗಳೂರು ಮಹಾನಗರ ಪಾಲಿಕೆಯ ಸದಸ್ಯೆ ಸುಮಂಗಲಾ ಕೇಶವ ಐತಾಳ, ಸಮಾಜ ಸೇವಕ ವಿಶು ಶೆಟ್ಟಿ ಅಂಬಲಪಾಡಿ ಅವರನ್ನು ಸಮ್ಮಾನಿಸಲಾಯಿತು.  ಕ್ರೀಡಾ ಸಾಧಕ ಕೃಷ್ಣ ದೇವಾಡಿಗ ಹಾಗೂ ಶೈಕ್ಷಣಿಕ ಸಾಧಕ ಡಾ| ಸ್ವಸ್ತಿಕ್‌ ಉಪಾಧ್ಯ ಅವರನ್ನು ಗೌರವಿಸಲಾಯಿತು.

ಆನೆಗುಡ್ಡೆ  ಶ್ರೀ ವಿನಾಯಕ ದೇಗುಲದ ಆಡಳಿತ ಧರ್ಮದರ್ಶಿ ಕೆ. ಸೂರ್ಯನಾರಾಯಣ ಉಪಾಧ್ಯಾಯ, ಕೂಟ ಮಹಾಜಗತ್ತು ಕೇಂದ್ರ ಸಂಸ್ಥೆಯ ಅಧ್ಯಕ್ಷ ಪಿ. ವೆಂಕಟ್ರಾವ್‌ ಮುಂತಾದವರು ಶುಭ ಹಾರೈಸಿದರು. ದೇಗುಲದ ಆಡಳಿತ ಮಂಡಳಿ ಉಪಾಧ್ಯಕ್ಷ ಬಿ. ರಘುನಾಥ ಸೋಮಯಾಜಿ, ಖಜಾಂಚಿ ಪ್ರಸನ್ನ ತುಂಗ, ಸದಸ್ಯರಾದ ವೈ| ಸದಾರಮ ಹೇಳೆì, ಜಿ. ಚಂದ್ರಶೇಖರ ಉಪಾಧ್ಯ, ಎಂ.ಕೆ. ಅಶೋಕ್‌ ಕುಮಾರ್‌ ಹೊಳ್ಳ, ಬಿಜೂರು ಬಲರಾಮ ಮಯ್ಯ, ಪಿ. ಸುಬ್ರಹ್ಮಣ್ಯ ಹೇಳೆì ಉಪಸ್ಥಿತರಿದ್ದರು. ಆಡಳಿತ ಮಂಡಳಿಯ ಕಾರ್ಯದರ್ಶಿ ಜಿ. ಮಂಜುನಾಥ ಮಯ್ಯ ಸ್ವಾಗತಿಸಿ, ಶಿಕ್ಷಕ ಶ್ರೀಧರ್‌ ಶಾಸ್ತ್ರಿ, ಸತೀಶ್‌ ಐತಾಳ ಕಾರ್ಯಕ್ರಮ ನಿರೂಪಿಸಿದರು.

ಟಾಪ್ ನ್ಯೂಸ್

Modi (2)

Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ

arrested

Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Kapu Assembly constituency: ನಕಲಿ ಮತದಾನ;ಆರೋಪ

Kapu Assembly constituency: ನಕಲಿ ಮತದಾನ;ಆರೋಪ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Modi (2)

Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ

arrested

Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು

accident

Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.