“ಜನಸೇವೆಗೆ ಹಣ ಬೇಕಾಗಿಲ್ಲ,ಮನಸ್ಸಿದ್ದರೆ ಸಾಕು’

Team Udayavani, May 11, 2019, 6:00 AM IST

050519ASTRO06

ಉಡುಪಿ: ಸಮಾಜಸೇವೆ ಮಾಡಲು ಹಣ ಬೇಕಾಗಿಲ್ಲ, ಅದಕ್ಕಾಗಿ ತುಡಿಯುವ ಮನಸ್ಸಿದ್ದರೆ ಸಾಕು ಎಂದು ಸಮಾಜಸೇವಕಿ, ಮಹಿಳೆಯರ ಆರೋಗ್ಯಕ್ಕಾಗಿ, ವಂಚಿತರಿಗೆ ಸೌಲಭ್ಯ ಒದಗಿಸುವುದಕ್ಕಾಗಿ ರಾಜ್ಯದಾದ್ಯಂತ ಕಾರ್ಯನಿರ್ವಹಿಸುತ್ತಿರುವ ಮಂಗಳೂರಿನ ಕಲ್ಪ ಟ್ರಸ್ಟ್‌ನ ಪ್ರಮೀಳಾ ರಾವ್‌ ಹೇಳಿದರು.

“ಕೂತು ಮಾತಾಡುವ’ ತಂಡದ ವತಿಯಿಂದ ರೋಟರಿ ಮಣಿಪಾಲ ಹಿಲ್ಸ್‌ ಸಹಭಾಗಿತ್ವದಲ್ಲಿ ಮಣಿಪಾಲದ ರೋಟರಿ ಶತಾಬ್ಧ ವೇದಿಕೆ ಬಯಲು ರಂಗಮಂದಿರದಲ್ಲಿ ಜರಗಿದ ಕಾರ್ಯ ಕ್ರಮದಲ್ಲಿ ಅವರು ಮಾತನಾಡಿದರು.

ನನ್ನ ಸೇವಾ ಕಾರ್ಯಗಳಿಗೆ ನನ್ನ ಕಾಲೇಜಿನ ವಿದ್ಯಾರ್ಥಿಗಳೇ ಸ್ಪೂರ್ತಿ. ಇರುವವರಿಗೆ ಹಳೆಯ ಬಟ್ಟೆಗಳನ್ನು ನೀಡುವ ಸೇವಾ ಕಾರ್ಯ ಆರಂಭಿಸಿ ಅನಂತರ ಹಳೆ ಬಟ್ಟೆಯಿಂದ ಸ್ಯಾನಿಟರಿ ಪ್ಯಾಡ್‌ ತಯಾರಿಸಿ ಅದನ್ನು ಅಗತ್ಯ ಇರುವವರಿಗೆ ವಿತರಿಸುವ ಯೋಜನೆ ಹಾಕಿಕೊಂಡೆವು. ಈ ಕೆಲಸದಲ್ಲಿ ಯುವತಿಯರ ಜತೆಗೆ ಯುವಕರನ್ನು ಕೂಡ ಬಳಸಿಕೊಂಡೆವು. ಮಹಿಳೆಯರ ಆರೋಗ್ಯ ಕಾಳಜಿ ಯುವಕರಲ್ಲಿಯೂ ಮೂಡಬೇಕೆಂಬ ಉದ್ದೇಶ ನನ್ನದು. ಗುಜರಾತ್‌, ಹೊಸದಿಲ್ಲಿ ಸೇರಿದಂತೆ ವಿವಿಧೆಡೆ ತರಬೇತಿ ಪಡೆದು ಆರೋಗ್ಯಕರವಾದ ಸ್ಯಾನಿಟರಿ ಪ್ಯಾಡ್‌ಗಳ ತಯಾರಿ ನಡೆಯುತ್ತಿದೆ. ಮಹಿಳೆಯರು ಪ್ರೀತಿ, ವಿಶ್ವಾಸದಿಂದ ನಮ್ಮ ಸೇವೆಯನ್ನು ಪಡೆಯುತ್ತಿರುವುದು ನನಗೆ ತುಂಬಾ ತೃಪ್ತಿ ನೀಡಿದೆ ಎಂದು ಪ್ರಮೀಳಾ ರಾವ್‌ ಹೇಳಿದರು.

18 ಕಾಲನಿಗಳಿಗೆ
ಪ್ಯಾಡ್‌ ಪೂರೈಕೆ
ರಾಜ್ಯದ ಸ್ಲಂ ಏರಿಯಾಗಳು, ಪರಿಶಿಷ್ಟ ಪಂಗಡ, ಹಿಂದುಳಿದವರು ಸೇರಿದಂತೆ ಒಟ್ಟು 18 ಕಾಲನಿಗಳಿಗೆ ನಿರಂತರವಾಗಿ ಉಚಿತವಾಗಿ ಸ್ಯಾನಿಟರಿ ಪ್ಯಾಡ್‌ ಪೂರೈಕೆ ಮಾಡುತ್ತಿದ್ದೇವೆ. ನಾನು ಪ್ರಾಧ್ಯಾಪಕಿಯಾಗಿ ಕೆಲಸ ಮಾಡುವ ಕಾವೂರು ಸರಕಾರಿ ಕಾಲೇಜಿನಲ್ಲೇ ಸ್ಯಾನಿಟರಿ ಪ್ಯಾಡ್‌ ಉತ್ಪಾದನೆ ಮಾಡುತ್ತೇವೆ. ಇಲಾಖೆಯ ಅಧಿಕಾರಿಗಳು ಕೂಡ ಹಲವು ಬಾರಿ ಪ್ರೋತ್ಸಾಹ ನೀಡಿದ್ದಾರೆ. ಹಲವರಿಗೆ ಶೌಚಾಲಯ ಕೂಡ ನಿರ್ಮಿಸಿಕೊಟ್ಟಿದ್ದೇವೆ. ಈ ಬಾರಿ ಮತ್ತಷ್ಟು ಸುಧಾರಿತವಾದ ಸ್ಯಾನಿಟರಿ ಪ್ಯಾಡ್‌ಗಳ ತಯಾರಿಕೆ ನಮ್ಮ ಯೋಜನೆಯಾಗಿದೆ ಎಂದವರು ತಿಳಿಸಿದರು.

“ಕೂತು ಮಾತಾಡುವ’ ತಂಡದ ಅವಿನಾಶ್‌ ಕಾಮತ್‌ ಕಾರ್ಯಕ್ರಮ ನಿರ್ವಹಿಸಿದರು. ಅಭಿಯಾನದ ಮೂಲಕ ಸಂಗ್ರಹಿಸಲಾದ ಸ್ಯಾನಿಟರಿ ಪ್ಯಾಡ್‌ಗಳ ತಯಾರಿಕೆಗೆ ಬೇಕಾದ ಕಾಟನ್‌ ಬಟ್ಟೆಗಳನ್ನು ಪ್ರಮೀಳಾ ರಾವ್‌ ಅವರಿಗೆ ಹಸ್ತಾಂತರಿಸಲಾಯಿತು.

ಟಾಪ್ ನ್ಯೂಸ್

Yogendra Yadav:ಕೃಷಿ ಉಳಿಯಬೇಕಾದರೆ ರೈತರು ಕಾಂಗ್ರೆಸ್‌ಗೆ ಮತಹಾಕಲಿ: ಯೋಗೇಂದ್ರ ಯಾದವ್

Yogendra Yadav:ಕೃಷಿ ಉಳಿಯಬೇಕಾದರೆ ರೈತರು ಕಾಂಗ್ರೆಸ್‌ಗೆ ಮತಹಾಕಲಿ: ಯೋಗೇಂದ್ರ ಯಾದವ್

ರಜಿನಿಕಾಂತ್‌ ʼಕೂಲಿʼಯಲ್ಲಿ ಅನುಮತಿಯಿಲ್ಲದೆ ಹಾಡು ಬಳಕೆ: ಲೀಗಲ್‌ ನೋಟಿಸ್‌ ಕಳುಹಿಸಿದ ಇಳಯರಾಜ

ರಜಿನಿಕಾಂತ್‌ ʼಕೂಲಿʼಯಲ್ಲಿ ಅನುಮತಿಯಿಲ್ಲದೆ ಹಾಡು ಬಳಕೆ: ಲೀಗಲ್‌ ನೋಟಿಸ್‌ ಕಳುಹಿಸಿದ ಇಳಯರಾಜ

Viral: ಮದುವೆಯ ದಿನ ವಧುವಿಗೆ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಭಾವಚಿತ್ರ ಉಡುಗೊರೆ ನೀಡಿದ ವರ

Viral: ಮದುವೆಯ ದಿನ ವಧುವಿಗೆ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಭಾವಚಿತ್ರ ಉಡುಗೊರೆ ನೀಡಿದ ವರ

15-1

ಖಡಕ್ ಬಿಸಿಲು- ಪೊಲೀಸ್ ತಳ್ಳಾಟದಿಂದ ಸಂಸದ ಡಾ.‌ಜಾಧವ್ ಅಸ್ವಸ್ಥ: ಆಸ್ಪತ್ರೆಗೆ ದಾಖಲು

14-bidar

Prajwal Pendrive Case: ವಿಶ್ವದ ನಾಗರಿಕ ಸಮಾಜವೇ ತಲೆ ತಗ್ಗಿಸುವಂತಹ ಘಟನೆ ಇದು

ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಕ್ರಮ ಕೈಗೊಳ್ಳಲು ವಿಳಂಬವಾಗಿಲ್ಲ: ಗೃಹ ಸಚಿವ ಜಿ.‌ಪರಮೇಶ್ವರ್

ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಕ್ರಮ ಕೈಗೊಳ್ಳಲು ವಿಳಂಬವಾಗಿಲ್ಲ: ಗೃಹ ಸಚಿವ ಜಿ.‌ಪರಮೇಶ್ವರ್

ಸಲ್ಮಾನ್‌ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್‌ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ

ಸಲ್ಮಾನ್‌ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್‌ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಇವರ ಬದುಕಿನ ಬಂಡಿಗೆ ಆತ್ಮವಿಶ್ವಾಸ-ಛಲವೇ ಚಕ್ರಗಳು! ಇರುವುದೊಂದೇ ಕಾಲು, ಇರುವುದೊಂದೇ ಬದುಕು

ಇವರ ಬದುಕಿನ ಬಂಡಿಗೆ ಆತ್ಮವಿಶ್ವಾಸ-ಛಲವೇ ಚಕ್ರಗಳು! ಇರುವುದೊಂದೇ ಕಾಲು, ಇರುವುದೊಂದೇ ಬದುಕು

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

19

Malpe ಬೀಚ್‌: ಸಮುದ್ರ ಪಾಲಾಗತ್ತಿದ್ದ ಬಾಲಕನ ರಕ್ಷಣೆ

18

Kaup: ಕೆಲಸಕ್ಕಾಗಿ ಬಂದಿದ್ದ ಯುವತಿ ನಾಪತ್ತೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಗುಲ್ವಾಡಿ: ಗುಜಿರಿ ಅಂಗಡಿಯಲ್ಲಿ ಅರಳಿದ ಗ್ರಂಥಾಲಯ-ತರಂಗ ವಾರಪತ್ರಿಕೆ ಪ್ರೇರಣೆ

ಗುಲ್ವಾಡಿ: ಗುಜಿರಿ ಅಂಗಡಿಯಲ್ಲಿ ಅರಳಿದ ಗ್ರಂಥಾಲಯ-ತರಂಗ ವಾರಪತ್ರಿಕೆ ಪ್ರೇರಣೆ

Yogendra Yadav:ಕೃಷಿ ಉಳಿಯಬೇಕಾದರೆ ರೈತರು ಕಾಂಗ್ರೆಸ್‌ಗೆ ಮತಹಾಕಲಿ: ಯೋಗೇಂದ್ರ ಯಾದವ್

Yogendra Yadav:ಕೃಷಿ ಉಳಿಯಬೇಕಾದರೆ ರೈತರು ಕಾಂಗ್ರೆಸ್‌ಗೆ ಮತಹಾಕಲಿ: ಯೋಗೇಂದ್ರ ಯಾದವ್

Manipal ಆಸ್ಪತ್ರೆಯ ಡಾ.ರಾಮದಾಸ್‌ ಪೈ ಬ್ಲಾಕ್; 161 ವಿಶೇಷ ಹಾಸಿಗೆಗಳ ವಾರ್ಡ್‌ ಸೇವೆ ಆರಂಭ

Manipal ಆಸ್ಪತ್ರೆಯ ಡಾ.ರಾಮದಾಸ್‌ ಪೈ ಬ್ಲಾಕ್; 161 ವಿಶೇಷ ಹಾಸಿಗೆಗಳ ವಾರ್ಡ್‌ ಸೇವೆ ಆರಂಭ

ರಜಿನಿಕಾಂತ್‌ ʼಕೂಲಿʼಯಲ್ಲಿ ಅನುಮತಿಯಿಲ್ಲದೆ ಹಾಡು ಬಳಕೆ: ಲೀಗಲ್‌ ನೋಟಿಸ್‌ ಕಳುಹಿಸಿದ ಇಳಯರಾಜ

ರಜಿನಿಕಾಂತ್‌ ʼಕೂಲಿʼಯಲ್ಲಿ ಅನುಮತಿಯಿಲ್ಲದೆ ಹಾಡು ಬಳಕೆ: ಲೀಗಲ್‌ ನೋಟಿಸ್‌ ಕಳುಹಿಸಿದ ಇಳಯರಾಜ

Viral: ಮದುವೆಯ ದಿನ ವಧುವಿಗೆ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಭಾವಚಿತ್ರ ಉಡುಗೊರೆ ನೀಡಿದ ವರ

Viral: ಮದುವೆಯ ದಿನ ವಧುವಿಗೆ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಭಾವಚಿತ್ರ ಉಡುಗೊರೆ ನೀಡಿದ ವರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.