ಆತ್ಮಗಳ ನಿರಂತರ ಸಾಧನೆ: ಶ್ರೀ ಈಶಪ್ರಿಯತೀರ್ಥರ ಆಶಯ

ಅದಮಾರು ಪರ್ಯಾಯದ ದರ್ಬಾರ್‌ ಸಮಾಪನ

Team Udayavani, Jan 23, 2020, 6:45 AM IST

led-33

ಬುಧವಾರ ನಡೆದ ಅದಮಾರು ಮಠ ಪರ್ಯಾಯದ ದರ್ಬಾರ್‌ ಸಮಾಪನ ಸಭೆಯಲ್ಲಿ ಶ್ರೀ ಈಶಪ್ರಿಯತೀರ್ಥ ಶ್ರೀಪಾದರು ಆಶೀರ್ವಚನ ನೀಡಿದರು.

ಉಡುಪಿ: ಶ್ರೀಕೃಷ್ಣ ಮಠದ ರಾಜಾಂಗಣದಲ್ಲಿ ಜ. 18ರಂದು ಆರಂಭಗೊಂಡ ಅದಮಾರು ಮಠ ಪರ್ಯಾಯದ ದರ್ಬಾರ್‌ ಸಭೆ ಬುಧವಾರ ಸಮಾಪನಗೊಂಡಿತು. ಅಧಿಕಾರವಿರುವಾಗ ಎಲ್ಲವೂ ಖುಷಿಯಾಗುತ್ತದೆ, ಅಧಿಕಾರ ಹೋಗುವಾಗ ಬೇಸರವಾಗುತ್ತದೆ. ಆದ್ದರಿಂದ ವ್ಯಕ್ತಿಯನ್ನಾಗಲೀ, ಹುದ್ದೆಯನ್ನಾಗಲೀ ಯಾವುದನ್ನೂ ಅತಿಯಾಗಿ ಹಚ್ಚಿಕೊಳ್ಳವುದು ಒಳ್ಳೆಯ ದಲ್ಲ. ಜೀವನಕ್ಕೆ ಎಷ್ಟು ಬೇಕೋ ಅಷ್ಟನ್ನು ಮಾತ್ರ ತೆಗೆದುಕೊ. ಈ ಶರೀರವೂ ಕೂಡ ಬಾಡಿಗೆ ಮನೆಯಂತೆ. ಆತ್ಮ ಮಾತ್ರ ನಿತ್ಯಸತ್ಯ.
ಜೀವರು(ಆತ್ಮ)ಗಳು ಈ ಶರೀರವನ್ನು ನಿರಂತರ ಸಾಧನೆಗಾಗಿ ಬಳಸಿಕೊಳ್ಳಬೇಕು ಎಂಬ ಸಂದೇಶ ಶ್ರೀಮದ್ಭಾಗವತದಲ್ಲಿ ಸಿಗುತ್ತದೆ. ಪರ್ಯಾಯೋತ್ಸವದಲ್ಲಿ ಸಹಕರಿಸಿ ದವರಿಗೆಲ್ಲರಿಗೂ ಶ್ರೀದೇವರು ಅನುಗ್ರಹಿಸಲಿ ಎಂದು ಅದಮಾರು ಮಠದ ಶ್ರೀ ಈಶಪ್ರಿಯತೀರ್ಥ ಶ್ರೀಪಾದರು ಆಶೀರ್ವದಿಸಿದರು.

ದಿಯಾ ಸಿಸ್ಟಮ್ಸ್‌ನ ಡಾ| ರವಿಚಂದ್ರನ್‌ ಅವರನ್ನು ಪರ್ಯಾಯ ದರ್ಬಾರ್‌ ಸಮ್ಮಾನದಿಂದ ಮತ್ತು ವಿಧಾನ ಪರಿಷತ್‌ ಅರ್ಜಿ ಸಮಿತಿ ಅಧ್ಯಕ್ಷ ಮತ್ತು ಉಪಸಭಾಪತಿ ಧರ್ಮೇಗೌಡ ಮತ್ತು ಸಮಿತಿ ಸದಸ್ಯರನ್ನು ಗೌರವಿಸಲಾಯಿತು.

ಶಾಸಕ ಬಿ.ಎಂ. ಸುಕುಮಾರ ಶೆಟ್ಟಿ, ಕಾರ್ಪೊರೇಶನ್‌ ಬ್ಯಾಂಕ್‌ ಆಡಳಿತ ನಿರ್ದೇಶಕಿ ಪಿ.ವಿ. ಭಾರತಿ, ಅದಾನಿ ಗ್ರೂಪ್‌ನ ಹಿರಿಯ ಅಧಿಕಾರಿ ಕಿಶೋರ್‌ ಆಳ್ವ, ಉದ್ಯಮಿ ಹರಿಯಪ್ಪ ಕೋಟ್ಯಾನ್‌, ಪೂರ್ಣಪ್ರಜ್ಞ ಸಂಧ್ಯಾ ಕಾಲೇಜಿನ ನಿವೃತ್ತ ಪ್ರಾಂಶುಪಾಲ ಪ್ರೊ| ರಾಧಾಕೃಷ್ಣ ಆಚಾರ್ಯ ಶುಭ ಕೋರಿದರು.

ಓಂಪ್ರಕಾಶ ಭಟ್‌ ವಿರಚಿತ ಪುಸ್ತಕವನ್ನು ಬಿಡುಗಡೆಗೊಳಿಸಲಾಯಿತು. ಶ್ರೀಮಠದ ದಿವಾನ ಐ. ಲಕ್ಷ್ಮೀ ನಾರಾಯಣ ಮುಚ್ಚಿಂತಾಯ ಸ್ವಾಗತಿಸಿ ಶ್ರೀಕೃಷ್ಣ ಸೇವಾ ಬಳಗದ ಗೋವಿಂದರಾಜ್‌ ಕಾರ್ಯಕರ್ತರಿಗೆ ಕೃತಜ್ಞತೆ ಸಲ್ಲಿಸಿದರು. ಬಳಗದ ಗೌರವಾಧ್ಯಕ್ಷ ಕೆ. ರಘುಪತಿ ಭಟ್‌, ಅಧ್ಯಕ್ಷ ಪ್ರೊ| ಎಂ.ಬಿ. ಪುರಾಣಿಕ್‌ ಮೊದಲಾದವರು ಉಪಸ್ಥಿತರಿದ್ದರು.

ಗೌರವಾರ್ಪಣೆ
ಜಿಲ್ಲಾಧಿಕಾರಿ ಜಿ. ಜಗದೀಶ್‌, ಎಸ್‌ಪಿ ವಿಷ್ಣುವರ್ಧನ್‌, ಜಿ.ಪಂ. ಸಿಇಒ ಪ್ರೀತಿ ಗೆಹಲೋಟ್, ಪೌರಾಯುಕ್ತ ಆನಂದ್‌ ಕಲ್ಲೋಳಿಕರ್‌ ಮೊದಲಾದವರನ್ನು ಗೌರವಿಸಲಾಯಿತು. ಶ್ರೀಕೃಷ್ಣ ಮಠದ ಮೇಸ್ತ್ರಿಯಾಗಿದ್ದ ಗುಂಡು ಮೇಸ್ತ್ರಿ ಸ್ಮರಣಾರ್ಥ ಕಾವಲುಗಾರ ನಾಗರಾಜ ಪರಮಪ್ಪ ಜಾಲಿ, ಪಾತ್ರೆಗಳನ್ನು ಶುಚಿಗೊಳಿಸುತ್ತಿದ್ದ ತುಕ್ರ ಮರಕಾಲರ ಸ್ಮರಣಾರ್ಥ ಹೊನ್ನಪ್ಪ ಯಮುನಪ್ಪ ಬಿ. ಶೆಟ್ಟಿಯವರಿಗೆ ಕೃಷ್ಣ ಸೇವಾ ಪ್ರಶಸ್ತಿ ಪ್ರದಾನ ಮಾಡಲಾಯಿತು.

ಟಾಪ್ ನ್ಯೂಸ್

prahlad-joshi

LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ

1-wewqeq

Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು

it

Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

20-

Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

9-tmpl

Malpe: ವಡಭಾಂಡೇಶ್ವರ ಭಕ್ತವೃಂದ; ಉತ್ತಿಷ್ಠ ಭಾರತ, ಸಾಧಕರಿಗೆ ಸಮ್ಮಾನ

8-pernankila

Pernankila ದೇವಾಲಯ ಬ್ರಹ್ಮಕುಂಭಾಭಿಷೇಕ ಸಂಪನ್ನ

6-good-friday

Good Friday: ಕ್ರೈಸ್ತರಿಂದ ಕೊನೆಯ ಭೋಜನದ ಸ್ಮರಣೆ

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

Udupi: ನೇಣು ಬಿಗಿದು ಆತ್ಮಹತ್ಯೆ

Udupi: ನೇಣು ಬಿಗಿದು ಆತ್ಮಹತ್ಯೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

prahlad-joshi

LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ

1-wewqeq

Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ

partner kannada movie

Kannada Cinema; ಸ್ನೇಹಿತರ ಸುತ್ತ ‘ಪಾರ್ಟ್ನರ್‌’: ಟ್ರೇಲರ್‌, ಆಡಿಯೋದಲ್ಲಿ ಹೊಸಬರ ಚಿತ್ರ

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.