ಬಹಿರ್ದೆಸೆಗಾಗಿ ಜನಸಾಮಾನ್ಯರ ನಿತ್ಯ ಪರದಾಟ

ಪ್ರವಾಸಿ ಕೇಂದ್ರವಾದ ಮಲ್ಪೆ ಬಸ್‌ ನಿಲ್ದಾಣದಲ್ಲಿಲ್ಲ ಸಾರ್ವಜನಿಕ ಶೌಚಾಲಯ

Team Udayavani, Oct 6, 2019, 5:56 AM IST

2909MLE1

ಮಲ್ಪೆ: ಪ್ರಮುಖ ವಾಣಿಜ್ಯ ಕೇಂದ್ರ ಹಾಗೂ ಪ್ರವಾಸಿ ತಾಣವಾಗಿ ಅತ್ಯಂತ ವೇಗದಲ್ಲಿ ಬೆಳೆಯುತ್ತಿರುವ ನಗರವಾದ ಮಲ್ಪೆಯಲ್ಲಿ ಸಾರ್ವಜನಿಕ ಶೌಚಾಲಯದ ಕೊರತೆ ಸಮಸ್ಯೆ ಕಳೆದ ಹಲವಾರು ವರ್ಷದಿಂದ ಕಾಡುತ್ತಿದೆ.

ಒಂದು ನಗರ ಪ್ರದೇಶದಲ್ಲಿನ ನಾಗರಿಕರ ಸೌಲಭ್ಯದ ದೃಷ್ಟಿಯಿಂದ ನಗರದಲ್ಲಿ ಲಭ್ಯವಿರಲೇ ಬೇಕಾದ ಪ್ರಾಥಮಿಕ ಅಗತ್ಯಗಳಲ್ಲಿ ಶೌಚಾಲಯ ಪ್ರಮುಖವಾದುದು. ಪ್ರವಾಸಿಗಳು ಹಾಗೂ ಹೊರ ಊರುಗಳಿಂದ ಅಗಮಿಸುವ ಜನತೆ ಮಲ್ಪೆ ಬಸ್ಸು ನಿಲ್ದಾಣದಲ್ಲಿ ಶೌಚಗೃಹ ಹುಡುಕುವುದರಲ್ಲೆ ಸುಸ್ತಾಗುತ್ತಾರೆ. ಅನಿವಾರ್ಯವಾಗಿ ಎಲ್ಲೆಂದರಲ್ಲಿ ಮೂತ್ರ ವಿಸರ್ಜನೆ ಮಾಡುವ ಪರಿಸ್ಥಿತಿ ಇದೆ.

ಮಲ್ಪೆ ಮೀನುಗಾರಿಕಾ ಬಂದರಿನ ಒಳಗೆ ಬಿಟ್ಟರೆ ನಗರದ ಸುತ್ತಮುತ್ತ ಎಲ್ಲೂ ಶೌಚಾಲಯದ ವ್ಯವಸ್ಥೆ ಇಲ್ಲ. ಜನರು ಕಣ್ಣು ತಪ್ಪಿಸಿ ಹತ್ತಿರ ಕಟ್ಟಡದ ಮರೆಯಲ್ಲಿಯೋ ಅಥವಾ ಚರಂಡಿ ಬದಿಯೋ ಮೂತ್ರ ವಿಸರ್ಜಿಸಿ ನಿರಾಳರಾದರೆ, ಮಹಿಳೆಯರ ಸಂಕಷ್ಟವನ್ನಂತೂ ಹೇಳತೀರದು.

15ವರ್ಷಗಳ ಹಿಂದೆ ಬಸ್ಸು ನಿಲ್ದಾಣದ ಬಳಿ ಸ್ಥಳೀಯ ಸಂಸ್ಥೆಯೊಂದರ ನೆರವಿನಿಂದ ಚಿಕ್ಕದಾದ ಒಂದು ಶೌಚಾಲಯ ನಿರ್ಮಾಣವಾಗಿತ್ತು. ಕ್ರಮೇಣ ಅಲ್ಲಿನ ಕಟ್ಟಡವೂ ತೆರವಾಗಿ ಶೌಚಾಲಯವೂ ಇಲ್ಲದಂತಾಯಿತು. ಮಲ್ಪೆ ವ್ಯವಹಾರ ಕೇÒತ್ರದಲ್ಲಿ ಸಾಕಷ್ಟು ಅಭಿವೃದ್ದಿಯನ್ನು ಕಂಡರೂ ನಗರದ ಬೆಳವಣಿಗೆಯ ಜೊತೆಗೆ ಕೆಲವೊಂದು ಅವಶ್ಯಕತೆಯನ್ನು ಪೂರೈಸಲು ಸಾಧ್ಯವಾಗುತ್ತಿಲ್ಲ ಎಂಬ ಆರೋಪವೂ ಕೇಳಿಬರುತ್ತಿದೆ.

ಪ್ರಸ್ತಾವನೆ ಸಿದ್ಧ
ಮಲ್ಪೆ ಬಸ್ಸು ನಿಲ್ದಾಣದ ಸಮೀಪ ಒಂದು ಸುಸಜ್ಜಿತವಾದ ಶೌಚಾಲಯದ ನಿರ್ಮಾಣಕ್ಕೆ ಈಗಾಗಲೇ ಪ್ರೊಪೊಸಲ್‌ ಸಿದ್ಧವಾಗಿದೆ. ಆದರೆ ನಿರ್ಮಾಣ ಮಾಡಬೇಕಾದ ಜಾಗದ ತಾಂತ್ರಿಕ ಸಮಸ್ಯೆಯಿಂದ ಯೋಜನೆಗೆ ಸ್ವಲ್ಪ ಹಿನ್ನಡೆಯಾಗಿದೆ. ಜಾಗದ ಸಮಸ್ಯೆ ಇತ್ಯರ್ಥವಾದ ಕೂಡಲೇ ಕಾಮಗಾರಿ ನಡೆಸಲಾಗುವುದು.
-ಆನಂದ ಸಿ. ಕಲ್ಲೋಳಿಕರ್‌, ಪೌರಾಯುಕ್ತರು, ಉಡುಪಿ ನಗರಸಭೆ

ಸಾರ್ವಜನಿಕರ ಪರದಾಟ
ನಿತ್ಯವೂ ಇಲ್ಲಿ ಸಾವಿರಾರು ಮಹಿಳೆಯರು, ವೃದ್ದರು ಮಕ್ಕಳು ನಗರಕ್ಕೆ ಆಗಮಿಸುತ್ತಾರೆ. ಶೌಚಗೃಹ ಇಲ್ಲದೆ ಇರುವುದರಿಂದ ಪರದಾಡುವಂತಾಗಿದೆ. ಸ್ಥಳೀಯಾಡಳಿತ ಜನರ ಸಮಸ್ಯೆಯನ್ನು ಅರಿತು ಬಸ್ಸು ನಿಲ್ದಾಣ ಅಥವಾ ನಗರದ ಪ್ರಮುಖ ಸ್ಥಳಗಳಲ್ಲಿ ಸಾರ್ವಜನಿಕ ಶೌಚಾಲಯವನ್ನು ನಿರ್ಮಾಣ ಮಾಡಬೇಕಾಗಿದೆ.
-ಹರೀಶ್‌, ಗೋಳಿದಡಿ,
ಸ್ಥಳೀಯರು

ಟಾಪ್ ನ್ಯೂಸ್

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ

Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ

Shobha, Bharathi Shetty  ಹೊರತು ಬಿಎಸ್‌ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ

Shobha, Bharathi Shetty ಹೊರತು ಬಿಎಸ್‌ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

High Court ಎಚ್‌ಡಿಕೆಗೆ ಮಹಿಳಾ ಆಯೋಗ ನೀಡಿದ್ದ ನೋಟಿಸ್‌ಗೆ ಹೈಕೋರ್ಟ್‌ ತಡೆ

High Court ಎಚ್‌ಡಿಕೆಗೆ ಮಹಿಳಾ ಆಯೋಗ ನೀಡಿದ್ದ ನೋಟಿಸ್‌ಗೆ ಹೈಕೋರ್ಟ್‌ ತಡೆ

banMysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

Mysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

4-udupi

Udupi: ರಮಾಬಾಯಿ ಕೊಚ್ಚಿಕಾರ್‌ ಪೈ ನಿಧನ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ ಅಡಿಗೆ ಸಿಲುಕಿದ ಬೈಕ್; ಯಕ್ಷಗಾನ ಕಲಾವಿದ ಸ್ಥಳದಲ್ಲೇ ಮೃತ್ಯು

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

8

Malpe Beach: ಈಜಲು ಹೋದ ಮೂವರು ಸಮುದ್ರಪಾಲು; ಓರ್ವನ ಸಾವು, ಇಬ್ಬರ ರಕ್ಷಣೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ

Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ

Shobha, Bharathi Shetty  ಹೊರತು ಬಿಎಸ್‌ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ

Shobha, Bharathi Shetty ಹೊರತು ಬಿಎಸ್‌ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

High Court ಎಚ್‌ಡಿಕೆಗೆ ಮಹಿಳಾ ಆಯೋಗ ನೀಡಿದ್ದ ನೋಟಿಸ್‌ಗೆ ಹೈಕೋರ್ಟ್‌ ತಡೆ

High Court ಎಚ್‌ಡಿಕೆಗೆ ಮಹಿಳಾ ಆಯೋಗ ನೀಡಿದ್ದ ನೋಟಿಸ್‌ಗೆ ಹೈಕೋರ್ಟ್‌ ತಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.