ಉಡುಪಿ: ಶಾಲಾ-ಕಾಲೇಜುಗಳಲ್ಲಿ ಕಳ್ಳತನ ಪ್ರಕರಣ; ಇಬ್ಬರು ಕುಖ್ಯಾತ ಅಂತರ್ ಜಿಲ್ಲಾ ಕಳ್ಳರ ಬಂಧನ
Team Udayavani, Nov 22, 2022, 6:55 AM IST
ಉಡುಪಿ: ಶಾಲಾ-ಕಾಲೇಜುಗಳಿಗೆ ನುಗ್ಗಿ ಕಳ್ಳತನ ಮಾಡುತ್ತಿದ್ದ ಇಬ್ಬರು ಕುಖ್ಯಾತ ಅಂತರ್‌ಜಿಲ್ಲಾ ಕಳ್ಳರನ್ನು ಉಡುಪಿ ಪೊಲೀಸರು ಬಂಧಿಸಿದ್ದಾರೆ. ತಮಿಳುನಾಡಿನ ಕುಮಾರಸ್ವಾಮಿ(59), ಹೆಜಮಾಡಿಯ ಜಾಹೀದ್ ಸಿನಾನ್ (32) ಬಂಧಿತರು.
ಜಿಲ್ಲೆಯಲ್ಲಿ ಕಳೆದ 5-6 ತಿಂಗಳಿನಿಂದ ರಾತ್ರಿ ಸಮಯ ಶಾಲಾ- ಕಾಲೇಜುಗಳಿಗೆ ನುಗ್ಗಿ ಬೀಗ ಮುರಿದು ಹಣ ಹಾಗೂ ಬೆಲೆಬಾಳುವ ಸೊತ್ತುಗಳು ಕಳ್ಳತನವಾಗಿರುವ ಬಗ್ಗೆ ಸರಣಿ ಪ್ರಕರಣಗಳು ಉಡುಪಿ ಜಿಲ್ಲೆಯ ಬೇರೆ ಬೇರೆ ಠಾಣೆಗಳಲ್ಲಿ ದಾಖಲಾಗಿತ್ತು.
ಈ ಬಗ್ಗೆ ಜಿಲ್ಲಾ ಪೊಲೀಸ್ ಅಧೀಕ್ಷಕ ಹಾಕೆ ಅಕ್ಷಯ್ ಮಚ್ಚೀಂದ್ರ ಅವರ ಆದೇಶದಂತೆ ಬ್ರಹ್ಮಾವರ ಸಿಪಿಐ ಅನಂತಪದ್ಮನಾಭ ಅವರ ನೇತೃತ್ವದಲ್ಲಿ ವಿಶೇಷ ತಂಡವನ್ನು ರಚಿಸಲಾಗಿತ್ತು. ತಂಡದಲ್ಲಿ ಕೋಟ ಠಾಣಯ ಪಿಎಸ್‌ಐ ಮಧು ಬಿ.ಇ. ಹಾಗೂ ಸಿಬಂದಿಗಳು ಆರೋಪಿ ಪತ್ತೆಗೆ ಎಲ್ಲ ಶಾಲಾ ಕಾಲೇಜುಗಳ ಮಾಹಿತಿ, ಅಪರಾಧ ನಡೆದ ದಿನಾಂಕ ಹಾಗೂ ಇನ್ನಿತರ ಮಾಹಿತಿಯನ್ನು ಆಧರಿಸಿ, ಸಿಸಿ ಕೆಮರಾಗಳ ಪರಿಶೀಲನೆ, ಲಾಡ್ಜ್ ಪರಿಶೀಲನೆ, ಜೈಲಿನಿಂದ ಬಿಡುಗಡೆಯಾದ ಕಳ್ಳತನ ಪ್ರಕರಣದ ಆರೋಪಿಗಳ ಮಾಹಿತಿ, ತಾಂತ್ರಿಕ ಮಾಹಿತಿಯನ್ನು ಕಲೆಹಾಕಿ ಹೊರ ರಾಜ್ಯ ಹಾಗೂ ಹೊರ ಜಿಲ್ಲೆಯಿಂದ ಬರುವ ವ್ಯಕ್ತಿಗಳು ಹಾಗೂ ವಾಹನದ ಮಾಹಿತಿ ಬಗ್ಗೆ ನಿಗಾವಹಿಸಿದ್ದರು.
ಕೋಟದಲ್ಲಿ ವಶಕ್ಕೆ:
ಸೋಮವಾರ ಕೋಟ ಠಾಣೆ ವ್ಯಾಪ್ತಿಯ ಆವರ್ಶೆ ಗ್ರಾಮದ ಬಳಿ ಬೈಕ್ ನಲ್ಲಿ ಸಂಶಯಾಸ್ಪದವಾಗಿ ತಿರುಗಾಡುತ್ತಿದ್ದ ಇಬ್ಬರು ವ್ಯಕ್ತಿಗಳನ್ನು ವಶಕ್ಕೆ ಪಡೆದು ವಿಚಾರಿಸಿದಾಗ ಬೆಳಕಿಗೆ ಬಂದಿದೆ. ಬಂಧಿತ ಕುಮಾರಸ್ವಾಮಿಯ ಮೇಲೆ ಈ ಹಿಂದೆ ಭಟ್ಕಳ ನಗರ ಠಾಣೆಯಲ್ಲಿ 5 ಮನೆ ಕಳ್ಳತನ ಪ್ರಕರಣ, ಹೊನ್ನಾವರ ಠಾಣೆಯಲ್ಲಿ 4 ಮನೆ ಕಳ್ಳತನ ಪ್ರಕರಣ ಹಾಸನ ಜಿಲ್ಲೆ ಬೇಲೂರು ಠಾಣೆಯಲ್ಲಿ 4 ಮನೆ ಕಳ್ಳತನ ಪ್ರಕರಣದಲ್ಲಿ ಹಳೆ ಆರೋಪಿಯಾಗಿದ್ದಾನೆ. ಈ ಪ್ರಕರಣ ಗಳಿಗೆ ಸಂಬಂಧಿಸಿದಂತೆ ನ್ಯಾಯಾಲಯದಿಂದ ಶಿಕ್ಷೆಗೆ ಒಳಪಟ್ಟು 2014 ರಿಂದ 2021 ರವರೆಗೆ ಸುಮಾರು 7 ವರ್ಷಗಳ ಕಾಲ ಕಾರವಾರ ಜೈಲಿನಲ್ಲಿದ್ದು ಶಿಕ್ಷೆ ಅನುಭವಿಸಿದ್ದಾನೆ.
ಮತ್ತೋರ್ವ ಆರೋಪಿ ಜಾಹೀದ್ ಸಿನಾನ್ ಕಳ್ಳತನ ನಡೆಸಲೆಂದೇ ಉಡುಪಿಯ ಸಂತೆಕಟ್ಟೆ ಬಳಿ ಬಾಡಿಗೆ ಮನೆಯನ್ನು ಮಾಡಿಕೊಂಡಿದ್ದು ಕುಮಾರಸ್ವಾಮಿಯನ್ನು ಕರೆಯಿಸಿಕೊಂಡು ಕಳ್ಳತನ ಮಾಡುತ್ತಿದ್ದನು. ಕುಮಾರಸ್ವಾಮಿ 2021ರಲ್ಲಿ ಕಾರವಾರ ಜೈಲಿನಿಂದ ಬಿಡುಗಡೆಯಾದ ಅನಂತರ ಈತನೊಂದಿಗೆ ಸೇರಿ ಉಡುಪಿ, ಉತ್ತರ ಕನ್ನಡ, ಶಿವಮೊಗ್ಗ, ದಕ್ಷಿಣ ಕನ್ನಡ ಜಿಲ್ಲೆಯ ಸುಮಾರು 37 ಕಡೆ ರಾತ್ರಿ ಸಮಯ ಶಾಲಾ- ಕಾಲೇಜಿನ ಬೀಗ ಮುರಿದು ಕಳ್ಳತನ ಮಾಡಿದ್ದರು.
ಈ ಕುಖ್ಯಾತ ಕಳ್ಳರು ಉಡುಪಿ ಜಿಲ್ಲೆಯ ಬೈಂದೂರು, ಕೊಲ್ಲೂರು, ಶಂಕರನಾರಾಯಣ, ಕುಂದಾಪುರ, ಬ್ರಹ್ಮಾವರ, ಹಿರಿಯಡ್ಕ, ಉಡುಪಿ ನಗರ, ಮಲ್ಪೆ, ಕಾರ್ಕಳ, ಪಡುಬಿದ್ರೆ ಠಾಣಾ ಸರಹದ್ದಿನಲ್ಲಿ ಒಟ್ಟು 27 ಕಡೆ ಶಾಲಾ-ಕಾಲೇಜುಗಳಿಗೆ ನುಗ್ಗಿ ಕಳ್ಳತನ ನಡೆಸಿದ್ದರು.
ದ.ಕ.ಜಿಲ್ಲೆಯ ಮೂಲ್ಕಿ ಠಾಣೆಯಲ್ಲಿ 2 ಪ್ರಕರಣ, ಶಿವಮೊಗ್ಗ ಜಿಲ್ಲೆಯ ತೀಥಹಳ್ಳಿ, ಹೊಸನಗರ, ರಿಪ್ಪನಪೇಟೆ, ನಗರ ಠಾಣೆಗಳಲ್ಲಿ 6 ಪ್ರಕರಣ, ಉತ್ತರ ಕನ್ನಡ ಜಿಲ್ಲೆಯ ಮುಡೇìಶ್ವರ ಠಾಣೆಯಲ್ಲಿ 2 ಪ್ರಕರಣ ದಾಖಲಾಗಿದೆ. ಆರೋಪಿಗಳಿಂದ 1 ಬೈಕು 2 ಮೊಬೈಲ್ ಫೋನ್ ಹಾಗೂ 10,000 ರೂ.ನಗದು ವಶಪಡಿಸಿಕೊಂಡಿದ್ದು, ತನಿಖೆ ಮುಂದುವರಿಸಲಾಗಿದೆ.
ಜಿಲ್ಲಾ ಪೊಲೀಸ್ ಅಧೀಕ್ಷಕರ ಆದೇಶದಂತೆ ಎಎಸ್‌ಪಿ ಎಸ್.ಟಿ. ಸಿದ್ದಲಿಂಗಪ್ಪ ಅವರ ಮಾರ್ಗದಶನದಲ್ಲಿ ಉಡುಪಿ ಡಿವೈಎಸ್‌ಪಿ ಸುಧಾಕರ ಎಸ್ ನಾಯ್ಕ ನಿರ್ದೇಶನದಂತೆ ಪಿಎಸ್‌ಐಗಳಾದ ಅನಂತ ಪದ್ಮನಾಭ, ಮಧು ಬಿ.ಇ., ಪುಷ್ಪಾ, ನೂತನ್ ಡಿ., ರವಿ ಕುಮಾರ್, ಸಿಬಂದಿಗಳಾದ ರಾಘವೇಂದ್ರ, ರಾಘವೇಂದ್ರ ಶೆಟ್ಟಿ, ಪ್ರಸನ್ನ, ಮೋಹನ್ ಕೊತ್ವಾಲ್, ವಿಜೆಯೇಂದ್ರ ಮತ್ತು ಬ್ರಹ್ಮಾವರ ವೃತ್ತ ಕಚೇರಿಯ ಪ್ರದೀಪ ನಾಯಕ, ಪೊಲೀಸ್ ಅಧೀಕ್ಷಕರ ಕಚೇರಿಯ ತಾಂತ್ರಿಕ ವಿಭಾಗದ ಶಿವಾನಂದ, ದಿನೇಶ, ನಿತಿನ್ ಅವರು ಪ್ರಕರಣ ಭೇದಿಸುವಲ್ಲಿ ಪ್ರಮುಖ ಪಾತ್ರ ವಹಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kaup ಹೊಸ ಮಾರಿಗುಡಿ: ಸ್ವರ್ಣ ಗದ್ದುಗೆ ನಿರ್ಮಾಣಕ್ಕೆ ಮುಹೂರ್ತ
Udupi: ದೊಡ್ಡಣಗುಡ್ಡೆ ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ ನವರಾತ್ರಿ ಮಹೋತ್ಸವಕ್ಕೆ ಚಾಲನೆ
Udupi: ಗೀತಾರ್ಥ ಚಿಂತನೆ-54: ಕೆಲಸದ ಶೈಲಿ: ಕೃಷ್ಣ ಮಾರ್ಗ, ದುರ್ಯೋಧನ ಮಾರ್ಗ
Navaratri 2024: ಕರಾವಳಿಯಲ್ಲಿ ಶರನ್ನವರಾತ್ರಿ ಉತ್ಸವಕ್ಕೆ ಅದ್ದೂರಿ ಚಾಲನೆ
Dr. G. Shankar: ಅ.5ರಂದು ನಾಡೋಜ ಡಾ| ಜಿ. ಶಂಕರ್ 69ನೇ ಹುಟ್ಟುಹಬ್ಬ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Bantwala ಬೈಪಾಸ್ ಜಂಕ್ಷನ್ ಅವ್ಯವಸ್ಥೆ; ಹೆಚ್ಚುತ್ತಿರುವ ಅಪಘಾತ
Kalaburagi: ಅಧಿಕಾರಿಗಳಿಗೆ ಕೊಬ್ಬು ಹೆಚ್ಚಾಗಿದೆ; ಛಳಿ ಬಿಡಿಸಬೇಕಿದೆ: ಬಿ.ಆರ್.ಪಾಟೀಲ್
Darshan Bail: ಇಂದು ದರ್ಶನ್ ಜಾಮೀನು ಅರ್ಜಿ ವಿಚಾರಣೆ: ಕುತೂಹಲ
Koppala: ಆದಷ್ಟು ಬೇಗ ಆರ್ಥಿಕ- ಜಾತಿ ಗಣತಿ ವರದಿ ಜಾರಿಯಾಗಲಿ: ಬಸವರಾಜ ರಾಯರಡ್ಡಿ
Bantwala: ಹುಲಿ ಕುಟುಂಬದಲ್ಲಿ ಆಕೆ ಬ್ಲ್ಯಾಕ್ ಟೈಗರ್!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.