ಹಳ್ಳಿಹೊಳೆ ಪಶು ಚಿಕಿತ್ಸಾಲಯದಲ್ಲಿ ವೈದ್ಯರೇ ಇಲ್ಲ !

4 -5 ವರ್ಷಗಳಿಂದ ವೈದ್ಯಾಧಿಕಾರಿ ಹುದ್ದೆ ಖಾಲಿ ; ಜಡ್ಕಲ್‌ನ ಪಶುಪಾಲನ ಪರಿವೀಕ್ಷಕರಿಗೆ ಹೆಚ್ಚುವರಿ ಹೊಣೆ

Team Udayavani, Nov 22, 2019, 5:24 AM IST

2011KDPP1

ಹಳ್ಳಿಹೊಳೆ: ಪಶುಪಾಲನ ಮತ್ತು ಪಶು ವೈದ್ಯಕೀಯ ಸೇವೆ ನೀಡುವ ಸಲುವಾಗಿ ಬೈಂದೂರು ತಾಲೂಕು ವ್ಯಾಪ್ತಿಯ ಹಳ್ಳಿಹೊಳೆಯಲ್ಲಿ 19.80 ಲಕ್ಷ ರೂ. ವೆಚ್ಚದಲ್ಲಿ ನಿರ್ಮಾಣಗೊಂಡಿರುವ ಎಲ್ಲ ಸೌಕರ್ಯಗಳಿರುವ ಪಶು ಚಿಕಿತ್ಸಾಲಯದಲ್ಲಿ ಪಶು ವೈದ್ಯಾಧಿಕಾರಿಯೇ ಇಲ್ಲ. ಈಗ ಜಡ್ಕಲ್‌ನಲ್ಲಿರುವ ಪಶು ಪಾಲನ ಪರಿವೀಕ್ಷಕರೊಬ್ಬರು ವಾರದಲ್ಲಿ 4 ದಿನ ಬಂದು ಹೋಗುತ್ತಾರೆ.

ಹಳ್ಳಿಹೊಳೆ ಹಾಗೂ ಕಮಲಶಿಲೆ ಈ ಎರಡೂ ಗ್ರಾಮಗಳ ಹೈನುಗಾರರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಕಳೆದ ಹಲವು ವರ್ಷಗಳಿಂದ ಹಳ್ಳಿಹೊಳೆಯಲ್ಲಿ ಈ ಪಶು ಚಿಕಿತ್ಸಾಲಯವನ್ನು ತೆರೆಯಲಾಗಿದೆ. ಆಗಿನ ಶಾಸಕ ಗೋಪಾಲ ಪೂಜಾರಿ ಪ್ರಯತ್ನದಿಂದ ಉಡುಪಿಯ ಕೆಆರ್‌ಐಡಿಎಲ್‌ ಇಲಾಖೆಯಿಂದ ಮಂಜೂರಾದ 19.80 ಲಕ್ಷ ರೂ. ವೆಚ್ಚದಲ್ಲಿ ಈ ಆಸ್ಪತ್ರೆಗೆ ನೂತನ ಕಟ್ಟಡ ನಿರ್ಮಾಣಗೊಂಡಿತ್ತು.

ಹಳ್ಳಿಹೊಳೆ ಗ್ರಾಮದ ದೇವರಬಾಳು, ಶೆಟ್ಟಿಪಾಲು, ಕಬ್ಬಿನಾಲೆ, ಬರೆಗುಂಡಿ, ಕಮಲಶಿಲೆ ಗ್ರಾಮದ ಕೆರೆಕಾಡು, ತಟ್ಟೆಗುಳಿ, ಅಕ್ಕಿನಕೊಡ್ಲು, ವಾಟೆಬಚ್ಚಲು, ಯಳಬೇರು ಸಹಿತ ಅನೇಕ ಊರುಗಳಿಂದ ಇಲ್ಲಿಗೆ ಹೈನುಗಾರರು, ಕೃಷಿಕರು ಇಲ್ಲಿಗೆ ಪಶು ಚಿಕಿತ್ಸೆ, ಔಷಧಿಗಳಿಗಾಗಿ ಬರುತ್ತಾರೆ.

3 ಹಾಲಿನ ಸಹಕಾರ ಸಂಘ
ಈ ಹಳ್ಳಿಹೊಳೆಯ ಪಶು ಚಿಕಿತ್ಸಾಲಯದ ವ್ಯಾಪ್ತಿಯಲ್ಲಿನ ಕಮಲಶಿಲೆ, ಹಳ್ಳಿಹೊಳೆಯ ಶೆಟ್ಟಿಪಾಲು ಹಾಗೂ ಇರಿಗೆಯಲ್ಲಿ ಒಟ್ಟು ಮೂರು ಕಡೆಗಳಲ್ಲಿ ಹಾಲಿನ ಸಹಕಾರ ಸಂಘಗಳಿದ್ದು, ನೂರಾರು ಮಂದಿ ಹೈನುಗಾರರಿದ್ದಾರೆ. ಕಮಶಿಲೆ ಯಲ್ಲಿ 250 ಲೀಟರ್‌ಗಿಂತ ಹೆಚ್ಚು, ಇರಿಗೆಯಲ್ಲಿ 300 ಲೀಟರ್‌ ಹಾಗೂ ಶೆಟ್ಟಿಪಾಲಿನಲ್ಲಿ 250 ಲೀಟರ್‌ಗಿಂತಲೂ ಹೆಚ್ಚು ಹಾಲು ಪ್ರತಿ ದಿನ ಸಂಗ್ರಹವಾಗುತ್ತದೆ.

ಯಾಕೆ ಅಗತ್ಯ?
ಹಳ್ಳಿಹೊಳೆ ಪ್ರದೇಶ ತೀರಾ ಗ್ರಾಮೀಣ ಪ್ರದೇಶವಾಗಿರುವುದರಿಂದ ಹಾಗೂ ಹೆಚ್ಚಿನ ಸಮಯದಲ್ಲಿ ಇಲ್ಲಿ ಮೊಬೈಲ್‌ ನೆಟ್‌ವರ್ಕ್‌ ಕೂಡ ಸರಿಯಿಲ್ಲದೆ ಇರುವುದರಿಂದ ಜಾನುವಾರುಗಳಿಗೆ ಏನಾದರೂ ಅನಾರೋಗ್ಯ ಕಾಣಿಸಿಕೊಂಡರೆ, ಇಲ್ಲಿ ವೈದ್ಯರಿಲ್ಲದ ಕಾರಣ, ಜಡ್ಕಲ್‌ನಲ್ಲಿರುವ ಪಶು ಪಾಲನಾ ಪರಿವೀಕ್ಷಕರನ್ನು ಕರೆಸುವಷ್ಟರಲ್ಲಿ ಏನಾದರೂ ಅನಾಹುತ ಸಂಭವಿಸಿದರೆ ಯಾರು ಹೊಣೆ. ಆ ಕಾರಣಕ್ಕಾಗಿ ಈ ಎರಡೂ ಗ್ರಾಮಗಳ ನೂರಾರು ಮಂದಿ ಹೈನುಗಾರರ ಪ್ರಯೋಜನಕ್ಕಾಗಿ ಇಲ್ಲಿಗೆ ಒಬ್ಬರು ಖಾಯಂ ಪಶು ವೈದ್ಯಾಧಿಕಾರಿಯನ್ನು ನೀಡಲಿ ಎನ್ನುವುದು ಸ್ಥಳೀಯರ ಬೇಡಿಕೆಯಾಗಿದೆ.ಇಲ್ಲಿನ ಸರಕಾರಿ ಆಸ್ಪತ್ರೆ ಸಮೀಪವಿದ್ದ ಪಶು ಚಿಕಿತ್ಸಾಲಯವು ಹೊಸ ಕಟ್ಟಡಕ್ಕೆ ಕಳೆದ ವರ್ಷವಷ್ಟೇ ಸ್ಥಳಾಂತರಗೊಂಡಿದೆ. ಆದರೆ ಕಳೆದ 4-5 ವರ್ಷಗಳಿಂದ ಈ ಪಶು ವೈದ್ಯಾಧಿಕಾರಿ ಹುದ್ದೆ ಖಾಲಿಯಾಗಿಯೇ ಇದೆ.

ಖಾಯಂ ವೈದ್ಯಾಧಿಕಾರಿ ಬೇಕು
ಇಲ್ಲಿಗೆ ಖಾಯಂ ಆಗಿರುವ ಒಬ್ಬರು ಪಶು ವೈದ್ಯಾಧಿಕಾರಿಯ ಅಗತ್ಯವಿದೆ. ಈಗಿರುವ ಪಶು ಪರಿವೀಕ್ಷಕರಿಗೆ ಹೆಚ್ಚುವರಿ ಹೊಣೆ ಕೊಟ್ಟಿರುವುದರಿಂದ ಅವರು ವಾರದಲ್ಲಿ ಎಲ್ಲ ದಿನ ಇಲ್ಲದ ಕಾರಣ, ಕೆಲವೊಮ್ಮೆ ನಾವು ತುರ್ತು ಅಗತ್ಯಕ್ಕೆ ಬಂದಾಗ ಅವರು ಇರುವುದಿಲ್ಲ. ಇದರಿಂದ ಬಂದು ವಾಪಾಸು ಹೋಗಬೇಕಾಗುತ್ತದೆ. ಶೀಘ್ರ ಖಾಯಂ ವೈದ್ಯಾಧಿಕಾರಿಯನ್ನು ನಿಯೋಜಸಲಿ.
-ಚಂದ್ರ ನಾಯ್ಕ,
ಕೆರೆಕಾಡು (ಕಮಲಶಿಲೆ ಗ್ರಾಮ)

8 ಕಡೆ ವೈದ್ಯಾಧಿಕಾರಿ ಹುದ್ದೆ ಖಾಲಿಯಿದೆ
ಕುಂದಾಪುರ, ಬೈಂದೂರು ತಾಲೂಕು ವ್ಯಾಪ್ತಿಯ ಹಳ್ಳಿಹೊಳೆ, ಜಡ್ಕಲ್‌, ಬಿದ್ಕಲ್‌ಕಟ್ಟೆ, ಅಂಪಾರು, ಆಜ್ರಿ ಸೇರಿದಂತೆ ಒಟ್ಟು 8 ಕಡೆಗಳಲ್ಲಿ ಪಶು ವೈದ್ಯಾಧಿಕಾರಿ ಹುದ್ದೆ ಖಾಲಿಯಿದೆ. ಈ ಬಗ್ಗೆ ಶಾಸಕರ ಗಮನಕ್ಕೂ ತರಲಾಗಿದ್ದು, ಸಂಬಂಧಪಟ್ಟ ಮೇಲಾಧಿಕಾರಿಗಳಿಗೆ ಮನವಿ ಮಾಡಿಕೊಳ್ಳಲಾಗಿದೆ.
-ಡಾ| ಸೂರ್ಯನಾರಾಯಣ ಉಪಾಧ್ಯಾಯ,
ಕುಂದಾಪುರ ತಾ| ಪಶುಪಾಲನ
ಇಲಾಖೆ ಸಹ ನಿರ್ದೇಶಕ

– ಪ್ರಶಾಂತ್‌ ಪಾದೆ

ಟಾಪ್ ನ್ಯೂಸ್

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಉಡುಪಿಯಲ್ಲಿ ಕೋಮು ಪ್ರಚೋದನೆಯ ಭಾಷಣ; ಕಾಜಲ್‌ ಹಿಂದುಸ್ತಾನಿ ವಿರುದ್ಧದ FIRಗೆ ಮಧ್ಯಂತರ ತಡೆ

ಉಡುಪಿಯಲ್ಲಿ ಕೋಮು ಪ್ರಚೋದನೆಯ ಭಾಷಣ; ಕಾಜಲ್‌ ಹಿಂದುಸ್ತಾನಿ ವಿರುದ್ಧದ FIRಗೆ ಮಧ್ಯಂತರ ತಡೆ

Exam

Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ

Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ

Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.