20 ವರ್ಷದಿಂದ ಡಾಮರೇ ಕಂಡಿಲ್ಲ ಈ ರಸ್ತೆ!​​​​​​​

Team Udayavani, Jun 21, 2018, 6:00 AM IST

1706kdpp4a.jpg

ಕುಂದಾಪುರ: ಬೈಂದೂರು ವಿಧಾನಸಭಾ ಕ್ಷೇತ್ರದ ವಂಡ್ಸೆ ಜಿಲ್ಲಾ ಪಂಚಾಯತ್‌ ವ್ಯಾಪ್ತಿಯ ನಾಡಾ ಗುಡ್ಡೆಯಂಗಡಿಯಿಂದ ಬಡಾಕೆರೆಗೆ ಸಂಚರಿಸುವ ರಸ್ತೆ ಸಂಪೂರ್ಣ ಹದಗೆಟ್ಟು ಹೋಗಿದ್ದು, ಈ ಭಾಗದ ಜನರು ಸಂಚಾರ ದುಸ್ತರದಿಂದಾಗಿ ಹೈರಾಣಾಗಿದ್ದಾರೆ. 

ಸುಮಾರು 4 ಕಿ.ಮೀ. ಉದ್ದದ ರಸ್ತೆಗೆ ಹಾಕಲಾದ ಡಾಂಬರು ಕಿತ್ತು ಹೋಗಿ ಅಲ್ಲಲ್ಲಿ ಬೃಹತ್‌ ಹೊಂಡ- ಗುಂಡಿಗಳು ಸೃಷ್ಟಿಯಾಗಿವೆ. ಮಳೆಗಾದಲ್ಲಿ ನೀರು ನಿಂತು ವಾಹನ ಸವಾರರು, ಪಾದಚಾರಿಗಳೂ ಸಂಚರಿಸುವುದು ಕಷ್ಟಕರವಾಗಿದೆ.  

20 ವರ್ಷದಿಂದ ಡಾಮರೇ ಹಾಕಿಲ್ಲ
ನಾಡಾಗುಡ್ಡೆಯಂಗಡಿ ಪೇಟೆಯ ಪ್ರಾರಂಭದಲ್ಲಿ ಸ್ವಲ್ಪ ದೂರದವರೆಗೆ ಕಾಂಕ್ರೀಟ್‌ ರಸ್ತೆ ನಿರ್ಮಾಣವಾಗಿದ್ದು, ಅದು ಬಿಟ್ಟರೆ ಈ ಬಡಾಕೆರೆ- ನಾಡಾ ರಸ್ತೆಗೆ ಕಳೆದ 20 ವರ್ಷದಿಂದ ಡಾಂಬರೇ ಹಾಕಿಲ್ಲ. ಆಳುವ ವರ್ಗದಿಂದ ಈ ರಸ್ತೆ ಸಂಪೂರ್ಣ ನಿರ್ಲಕ್ಷಿಸಲ್ಪಟ್ಟಿದೆ ಎನ್ನುವುದು ಸ್ಥಳೀಯರ ಆರೋಪ. 

ಈ ರಸ್ತೆ ಸಂಪೂರ್ಣ ಹದಗೆಡಲು ಕಾರಣ ಈ ರಸ್ತೆಯ ಎರಡೂ ಬದಿಗಳಲ್ಲಿ ಮಳೆ ನೀರು ಹರಿದು ಹೋಗಲು ಸರಿಯಾದ ಚರಂಡಿಯ ವ್ಯವಸ್ಥೆಯೇ ಇಲ್ಲ. ಈಗ ನೀರೆಲ್ಲ ಈ ರಸ್ತೆಯಲ್ಲಿಯೇ ಹರಿದು ಹೋಗುತ್ತಿರುವುದರಿಂದ ರಸ್ತೆಯೇ ಇಲ್ಲವಾಗಿದೆ.  

ಘನ ವಾಹನಗಳಿಂದ ಹಾನಿ
ನಾಡಾದಿಂದ ಬಡಾಕೆರೆ ಮಾರ್ಗವಾಗಿ ಹೆದ್ದಾರಿಗೆ ಕಲ್ಲು, ಜಲ್ಲಿ, ಮರಳು ತುಂಬಿದ ಘನ ಲಾರಿಗಳು, ಟಿಪ್ಪರ್‌ಗಳು ಹೆಚ್ಚಾಗಿ ಸಂಚರಿಸುತ್ತಿದ್ದು, ಇದರಿಂದ ಈ ರಸ್ತೆ ಮತ್ತಷ್ಟು ಹದಗೆಟ್ಟು ಹೋಗಿದೆ. ಅದರಲ್ಲೂ ರಾತ್ರಿ ವೇಳೆಯೇ ಹೆಚ್ಚಾಗಿ ಈ ರಸ್ತೆಯ ಮೂಲಕ ಘನ ವಾಹನಗಳು ಸಂಚರಿಸುತ್ತಿದ್ದು, ಇದಕ್ಕೆ ಸಂಬಂಧಪಟ್ಟವರು ಕಡಿವಾಣ ಹಾಕಬೇಕಿದೆ ಎನ್ನುವುದಾಗಿ ಸ್ಥಳೀಯರು ಆಗ್ರಹಿಸಿದ್ದಾರೆ.

ರಸ್ತೆ ದುರಸ್ತಿ ಮಾಡಿ
ಈ ಹೊಂಡ- ಗುಂಡಿಗಳ ರಸ್ತೆ ಯಿಂದಾಗಿ ದಿನಾಲೂ ಸಾಕಷ್ಟು ಮಂದಿ ತೊಂದರೆ ಅನುಭವಿಸುತ್ತಿದ್ದಾರೆ. ಅನೇಕ ಬಾರಿ ಈ ಬಗ್ಗೆ ಸಂಬಂಧಪಟ್ಟವರಿಗೆ ಮನವಿ ಮಾಡಿದರೂ ಸ್ಪಂದಿಸಿಲ್ಲ. ಇನ್ನಾದರೂ ಈ ಬಗ್ಗೆ ಎಚ್ಚೆತ್ತುಕೊಂಡು ಈ ರಸ್ತೆಯನ್ನು ದುರಸ್ತಿಪಡಿಸಲು ಪ್ರಯತ್ನಿಸಲಿ. 
 – ಸುಚಿತಾ ಎಂ. ಕಾಮತ್‌, 
ನಾಡಾ ನಿವಾಸಿ 

ಅನುದಾನ ಬೇಕಿದೆ
ಕಳೆದ ವರ್ಷ ಜಿ.ಪಂ.ನಿಂದ ಬಿಡುಗಡೆಯಾದ 3.50 ಲಕ್ಷ ರೂ. ಅನುದಾನದಲ್ಲಿ ಈ ರಸ್ತೆ ಸುಮಾರು 2 ಲಕ್ಷ ರೂ. ಬಳಕೆ ಮಾಡಲಾಗಿದೆ. ಇದು ದೊಡ್ಡ ರಸ್ತೆಯಾಗಿರುವುದರಿಂದ ಜಿ.ಪಂ. ಅನುದಾನದಲ್ಲಿ ಡಾಂಬರೀಕರಣ ಮಾಡಲು ಆಗಲ್ಲ. ಕೇವಲ ಪ್ಯಾಚ್‌ವರ್ಕ್‌ ಅಷ್ಟೇ ಮಾಡಬಹುದು. ಇದಕ್ಕೆ ರಾಜ್ಯ ಸರಕಾರದ ಅನುದಾನದ ಅಗತ್ಯವಿದೆ. 
– ಬಾಬು ಶೆಟ್ಟಿ ತಗ್ಗರ್ಸೆ, 
ಸ್ಥಳೀಯ ಜಿ.ಪಂ. ಸದಸ್ಯರು 

– ಪ್ರಶಾಂತ್‌ ಪಾದೆ

ಟಾಪ್ ನ್ಯೂಸ್

1-weeeqwe

ಅಮೃತಶಿಲೆಯಲ್ಲಿ ಕೆತ್ತಿದ 18 ಅಡಿ ಕಾಳಿ ಮಾತೆ ಪ್ರತಿಮೆ ಇಂದು ಕೇರಳಕ್ಕೆ

ಇಂದಿನಿಂದ ದ್ವಿತೀಯ ಪಿಯು-2 ಪರೀಕ್ಷೆ: 1.5 ಲಕ್ಷ ವಿದ್ಯಾರ್ಥಿಗಳ ನೋಂದಣಿ

ಇಂದಿನಿಂದ ದ್ವಿತೀಯ ಪಿಯು-2 ಪರೀಕ್ಷೆ: 1.5 ಲಕ್ಷ ವಿದ್ಯಾರ್ಥಿಗಳ ನೋಂದಣಿ

Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು

Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು

1-weqweeqwe

10 ವರ್ಷಗಳಲ್ಲಿ ವಿಶ್ವದ ದೊಡ್ಡ ವಿಮಾನ ನಿಲ್ದಾಣ ನಿರ್ಮಾಣ

1-aasasa

IPL; ಈಡನ್‌ನಲ್ಲಿ ಕೆಕೆಆರ್‌-ಡೆಲ್ಲಿ ಮೇಲಾಟ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Amit Shah

UP; ಗುಂಡಿಟ್ಟವರು,ದೇಗುಲ ಕಟ್ಟಿದವರ ನಡುವಿನ ಚುನಾವಣೆ: ಅಮಿತ್‌ ಶಾ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Brahmavar

Padubidri: ಅಪಘಾತದ ಗಾಯಾಳು ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weeeqwe

ಅಮೃತಶಿಲೆಯಲ್ಲಿ ಕೆತ್ತಿದ 18 ಅಡಿ ಕಾಳಿ ಮಾತೆ ಪ್ರತಿಮೆ ಇಂದು ಕೇರಳಕ್ಕೆ

ಇಂದಿನಿಂದ ದ್ವಿತೀಯ ಪಿಯು-2 ಪರೀಕ್ಷೆ: 1.5 ಲಕ್ಷ ವಿದ್ಯಾರ್ಥಿಗಳ ನೋಂದಣಿ

ಇಂದಿನಿಂದ ದ್ವಿತೀಯ ಪಿಯು-2 ಪರೀಕ್ಷೆ: 1.5 ಲಕ್ಷ ವಿದ್ಯಾರ್ಥಿಗಳ ನೋಂದಣಿ

Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು

Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು

1-weqweeqwe

10 ವರ್ಷಗಳಲ್ಲಿ ವಿಶ್ವದ ದೊಡ್ಡ ವಿಮಾನ ನಿಲ್ದಾಣ ನಿರ್ಮಾಣ

1-aasasa

IPL; ಈಡನ್‌ನಲ್ಲಿ ಕೆಕೆಆರ್‌-ಡೆಲ್ಲಿ ಮೇಲಾಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.