Malpe ಪುನರುಜ್ಜೀವನಕ್ಕಾಗಿ ಕಾಯುತ್ತಿದೆ ತೊಟ್ಟಂ ಕುಮೆ ಕೆರೆ

ತೆಂಕನಿಡಿಯೂರು ಗ್ರಾಮದ ಪುರಾತನ ಅತೀ ದೊಡ್ಡ ಕೆರೆ ; ತುಂಬಿದೆ ಭಾರಿ ಪ್ರಮಾಣದ ಹೂಳು -ಕೆಸರು

Team Udayavani, May 26, 2024, 7:50 AM IST

Malpe ಪುನರುಜ್ಜೀವನಕ್ಕಾಗಿ ಕಾಯುತ್ತಿದೆ ತೊಟ್ಟಂ ಕುಮೆ ಕೆರೆ

ಮಲ್ಪೆ: ಒಂದು ಕಾಲದಲ್ಲಿ ಗ್ರಾಮದ ನೂರಾರು ಎಕ್ರೆ ಕೃಷಿ ಭೂಮಿಗೆ ನೀರುಣಿಸುತ್ತಿದ್ದ ತೊಟ್ಟಂ ಕುಮೆ ಕೆರೆ ಇಂದು ಕೆಸರಿನೊಂದಿಗೆ ಹೂಳು ತುಂಬಿಕೊಂಡು ತನ್ನ ನೈಜ್ಯ ಸೌಂದರ್ಯವನ್ನು ಕಳೆದುಕೊಂಡಿದೆ.

ತೆಂಕನಿಡಿಯೂರು ಗ್ರಾಮ ಪಂಚಾಯತ್‌ ವ್ಯಾಪ್ತಿಯ ತೊಟ್ಟಂ ಬಳಿಯ ಈ ಕುಮೆ ಕೆರೆ ಸುಮಾರು 2 ಎಕ್ರೆ ಅಧಿಕ ವಿಸ್ತೀರ್ಣ ಹೊಂದಿದ್ದು ಅತೀ ದೊಡ್ಡ ಕೆರೆ ಎಂಬ ಹೆಗ್ಗಳಿಕೆಯನ್ನು ಪಡೆದುಕೊಂಡಿತ್ತು. ಆದರೆ ಇದೀಗ ಒತ್ತುವರಿಯಾಗಿ ಒಂದೂವರೆ ಎಕ್ರೆಯಷ್ಟು ಮಾತ್ರ ಉಳಿದಿದೆ.

ಭಾರಿ ಪ್ರಮಾಣದ ಹೂಳು
ಕೆರೆಯಲ್ಲಿ ತುಂಬಿರುವ ಭಾರಿ ಪ್ರಮಾಣದ ಹೂಳಿನಿಂದಾಗಿ ನೀರಿನ ಒರತೆಯೇ ಇಲ್ಲವಾಗಿದೆ. ಹಿಂದೆ ಮೇ ಕೊನೆಯ ವರೆಗೂ ಈ ಕೆರೆಯಲ್ಲಿ ನೀರು ತುಂಬಿಕೊಂಡಿರುತ್ತಿತ್ತಲ್ಲದೆ ಸುತ್ತಮುತ್ತಲಿನ ರೈತರು ಇದೇ ಕೆರೆಯ ನೀರನ್ನು ಉಪಯೋಗಿಸಿ ಹಿಂಗಾರು ಬೆಳೆ ಬೆಳೆಯುತ್ತಿದ್ದರು. ಒಂದು ವೇಳೆ ಕೆರೆಯಲ್ಲಿ ಹೂಳು ತೆಗೆದರೆ ಶಾಶ್ವತ ನೀರು ಸಿಗುವುದರಲ್ಲಿ ಸಂಶಯವೇ ಇಲ್ಲ , ಈ ಹಿನ್ನೆಲೆಯಲ್ಲಿ ಪುರಾತನ ಕೆರೆಯನ್ನು ಉಳಿಸುವಂತೆ ಈ ಭಾಗದ ನಾಗರಿಕರು ಒತ್ತಾಯಿಸಿದ್ದಾರೆ.

ಮೀನು ಹಿಡಿಯುವ ಸಂಪ್ರದಾಯ
ಪ್ರತಿ ಸೌರಮಾನ ಯುಗಾದಿಯಂದು ಜಾತಿ ಮತ ಭೇದವಿಲ್ಲದೆ ಊರಿನವರೆಲ್ಲ ಸೇರಿ ಈ ಕೆರೆಯಲ್ಲಿ ಬಲೆ ಹಾಕಿ ಮೀನು ಹಿಡಿದು ಸಂಭ್ರಮಿಸುವ ಸಂಪ್ರದಾಯ ನಡೆಯುತ್ತಿತ್ತು. ಇತ್ತೀಚಿನ ಕೆಲವೊಂದು ವರ್ಷಗಳಲ್ಲಿ ಕೆರೆಯಲ್ಲಿ ಆ ವೇಳೆ ನೀರಿನ ಪ್ರಮಾಣ ಕಡಿಮೆಯಾಗಿ ಕೆಸರು ತುಂಬಿಕೊಂಡು ಮೀನಿನ ಸಂತತಿಯೇ ಇಲ್ಲದಂತಾಗಿದೆ. ಮೀನು ಹಿಡಿಯುವ ಸಂಪ್ರದಾಯವೂ ನಿಂತು ಹೋಗಿದೆ ಎನ್ನಲಾಗಿದೆ.

ಅಭಿವೃದ್ಧಿಗೆ ಆಗ್ರಹ
ಸುಮಾರು 15 ವರ್ಷಗಳ ಹಿಂದೆ ಈ ಕೆರೆಯ ಹೂಳನ್ನು ತೆಗೆಯಲಾಗಿತ್ತು. ಅಲ್ಲಿಂದ ಇಂದಿನವರೆಗೂ ಇಲ್ಲಿ ಯಾವ ಕಾಮಗಾರಿಯೂ ನಡೆಯದ ಕಾರಣ ಪಾಳು ಬಿದ್ದಿದೆ. ಈಗಾಗಲೇ ಕೆರೆಯ ಅಭಿವೃದ್ಧಿಗೆ ಹಲವಾರು ಗ್ರಾಮಸ್ಥರು ಸಂಬಂಧಪಟ್ಟ ಇಲಾಖೆಗೆ, ಜನಪ್ರತಿನಿಧಿಗಳಿಗೆ ಮನವಿ ಮಾಡಿದ್ದರೂ ಕೂಡ ಸರಕಾರ ಮಾತ್ರ ಯಾವುದೇ ಕ್ರಮ ತೆಗೆದುಕೊಂಡಿಲ್ಲ . ಗ್ರಾಮ ಪಂಚಾಯತ್‌ ಕೆರೆಯ ಉಳಿವಿಗಾಗಿ ಪ್ರಾಮಾಣಿಕ ಪ್ರಯತ್ನ ಮಾಡುವಂತೆ ಗ್ರಾಮಸ್ಥರು ಮನವಿ ಮಾಡಿದ್ದಾರೆ.

ಮುಂದಿನ ವರ್ಷ ಆರಂಭಕ್ಕೆ ಮನವಿ
ಕಾಮಗಾರಿ ಆರಂಭಿಸಲು ಇಲಾಖೆ ಮುಂದಾಗಿ ದ್ದರೂ, ಈ ಬಾರಿ ಮಳೆ ವಿಳಂಬವಾಗಿದ್ದರಿಂದ ಕೆರೆ ನೀರನ್ನು ಬೇರೆ ಕಡೆಗೆ ಡೈವರ್ಟ್‌ ಮಾಡಿದರೆ ಸಮಸ್ಯೆಯಾಗಬಹುದೆಂದು ತೆಂಕನಿಡಿಯೂರು ಗ್ರಾ. ಪಂ. ಆಡಳಿತ ಕಾಮಗಾರಿಯನ್ನು ಮುಂದಿನ ವರ್ಷ ಆರಂಭಿಸುವಂತೆ ಮನವಿ ಮಾಡಿದೆ. 4 ಕೋ. ರೂ. ವೆಚ್ಚದ ಈ ಯೋಜನೆಯಲ್ಲಿ ಹೂಳೆತ್ತುವಿಕೆ, ಕೆರೆಯ ಸುತ್ತಲೂ ದಂಡೆ ರಚನೆ, ವಾಕಿಂಗ್‌ಟ್ರ್ಯಾಕ್ ಮಾಡಲಾಗುತ್ತದೆ.
-ಅರುಣ್‌ ಭಂಡಾರಿ, ಎ.ಇ.ಇ.,
ಸಣ್ಣ ನೀರಾವರಿ ಇಲಾಖೆ, ಉಡುಪಿ

ಕೆರೆ ಅಭಿವೃದ್ಧಿಗೆ ಸಹಕಾರ
ಕೆರೆಯ ಹೂಳು ತೆಗೆದು ಸುತ್ತ ತಡೆಗೋಡೆ ನಿರ್ಮಿಸಿ ಮೇಲೆ ದಂಡೆ ಹಾಕಿ ಸುತ್ತಲೂ ಇಂಟರ್‌ಲಾಕ್‌ ಅಳವಡಿಸಿ ವಾಕಿಂಗ್ ಟ್ರ್ಯಾಕ್ ಮಾಡಿದರೆ ವಾಯು ವಿಹಾರಕ್ಕೆ ಯೋಗ್ಯವಾಗಿದೆ. ಜತೆಗೆ ಪ್ರಕೃತಿ ಪ್ರಿಯರ ನೆಚ್ಚಿನ ತಾಣವಾಗಬಹುದು, ಅಂತರ್ಜಲ ಸಂರಕ್ಷಣೆಗೂ ಸಹಕಾರಿಯಾದಂತಾಗುತ್ತದೆ. ಈ ಬಗ್ಗೆ ಈಗಾಗಲೇ ಗಣೇಶೋತ್ಸವ ಸಮಿತಿಯ ವತಿಯಿಂದ ಎಲ್ಲ ಇಲಾಖೆಗೆ ಮನವಿ ಮಾಡಿ ಆಗ್ರಹಿಸಲಾಗಿದೆ.
– ಪ್ರಶಾಂತ್‌ ಕೆ. ಸಾಲ್ಯಾನ್‌, ಅಧ್ಯಕ್ಷರು,
ಸಾರ್ವಜನಿಕ ಗಣೇಶೋತ್ಸವ ಸಮಿತಿ, ತೊಟ್ಟಂ

-ನಟರಾಜ್‌ ಮಲ್ಪೆ

ಟಾಪ್ ನ್ಯೂಸ್

crime (2)

Loan ವ್ಯಾಜ್ಯ: ತೆಲಂಗಾಣದಲ್ಲಿ ಆದಿವಾಸಿ ಮಹಿಳೆ ಮೇಲೆ ಹಲ್ಲೆ

1-saddsad

Ram Setu ಚಿತ್ರ ಸೆರೆಹಿಡಿದ ಯುರೋಪಿಯನ್‌ ಉಪಗ್ರಹ

pinarayi

Kerala ಹೆಸರು ಕೇರಳಂ ಎಂದು ಬದಲಾಯಿಸಲು ವಿಧಾನಸಭೆ ಸಮ್ಮತಿ

ಕನ್ನಡದ ಶಾಲು ಧರಿಸಿ ಗಮನ ಸೆಳೆದ ಕೋಟ ಶ್ರೀನಿವಾಸ ಪೂಜಾರಿ

ಕನ್ನಡದ ಶಾಲು ಧರಿಸಿ ಗಮನ ಸೆಳೆದ ಕೋಟ ಶ್ರೀನಿವಾಸ ಪೂಜಾರಿ

tree

Belthangady ರಸ್ತೆಗೆ ಬಿದ್ದ ಮರ; ವಾಹನಗಳಿಗೆ ಹಾನಿ

ಓವರ್‌ ಡ್ರಾಫ್ಟ್‌ ಗುರಿ ಸಾಧನೆಯಲ್ಲಿ ಹಿನ್ನಡೆ: ಜಿ.ಪಂ.ಸಿಇಒ ಅಸಮಾಧಾನ

ಓವರ್‌ ಡ್ರಾಫ್ಟ್‌ ಗುರಿ ಸಾಧನೆಯಲ್ಲಿ ಹಿನ್ನಡೆ: ಜಿ.ಪಂ.ಸಿಇಒ ಅಸಮಾಧಾನ

ರಾಜ್ಯ ಧಾರ್ಮಿಕ ಪರಿಷತ್‌ ಸಭೆ: ಕುಕ್ಕೆ ಸುಬ್ರಹ್ಮಣ್ಯ ಪ್ರಾಧಿಕಾರ ರಚನೆಗೆ ನಿರ್ಧಾರರಾಜ್ಯ ಧಾರ್ಮಿಕ ಪರಿಷತ್‌ ಸಭೆ: ಕುಕ್ಕೆ ಸುಬ್ರಹ್ಮಣ್ಯ ಪ್ರಾಧಿಕಾರ ರಚನೆಗೆ ನಿರ್ಧಾರ

ರಾಜ್ಯ ಧಾರ್ಮಿಕ ಪರಿಷತ್‌ ಸಭೆ: ಕುಕ್ಕೆ ಸುಬ್ರಹ್ಮಣ್ಯ ಪ್ರಾಧಿಕಾರ ರಚನೆಗೆ ನಿರ್ಧಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕನ್ನಡದ ಶಾಲು ಧರಿಸಿ ಗಮನ ಸೆಳೆದ ಕೋಟ ಶ್ರೀನಿವಾಸ ಪೂಜಾರಿ

ಕನ್ನಡದ ಶಾಲು ಧರಿಸಿ ಗಮನ ಸೆಳೆದ ಕೋಟ ಶ್ರೀನಿವಾಸ ಪೂಜಾರಿ

ಅಂಬಾಗಿಲು-ಪೆರಂಪಳ್ಳಿ ಕಮರಿಗೆ ಉರುಳಿದ ಕಾರು; ತಪ್ಪಿದ ಭಾರೀ ಅನಾಹುತ

Manipal ಅಂಬಾಗಿಲು-ಪೆರಂಪಳ್ಳಿ ಕಮರಿಗೆ ಉರುಳಿದ ಕಾರು; ತಪ್ಪಿದ ಭಾರೀ ಅನಾಹುತ

Frog ಶಬ್ದ ಗ್ರಹಿಸಲು ಎಐ ಬಳಕೆ: ಕಾರ್ಕಳ ಪಶ್ಚಿಮಘಟ್ಟ ತಪ್ಪಲಿನಲ್ಲಿ ಕಪ್ಪೆ ಸಂಶೋಧನೆ

Frog ಶಬ್ದ ಗ್ರಹಿಸಲು ಎಐ ಬಳಕೆ: ಕಾರ್ಕಳ ಪಶ್ಚಿಮಘಟ್ಟ ತಪ್ಪಲಿನಲ್ಲಿ ಕಪ್ಪೆ ಸಂಶೋಧನೆ

Udupi ಮಲ್ಪೆಗೆ ಹೊರರಾಜ್ಯದ ಮೀನು ಆವಕ : ಕರಾವಳಿಯಲ್ಲಿ ಮೀನುಗಾರಿಕೆ ನಿಷೇಧ

Udupi ಮಲ್ಪೆಗೆ ಹೊರರಾಜ್ಯದ ಮೀನು ಆವಕ : ಕರಾವಳಿಯಲ್ಲಿ ಮೀನುಗಾರಿಕೆ ನಿಷೇಧ

Mumbai ಪೊಲೀಸ್‌ ಹೆಸರಿನಲ್ಲಿ ಮಹಿಳೆಗೆ ಲಕ್ಷಾಂತರ ರೂ. ವಂಚನೆ

Mumbai ಪೊಲೀಸ್‌ ಹೆಸರಿನಲ್ಲಿ ಮಹಿಳೆಗೆ ಲಕ್ಷಾಂತರ ರೂ. ವಂಚನೆ

MUST WATCH

udayavani youtube

ಹರ್ನಿಯಾ ಸಮಸ್ಯೆಗೆ ಕಾರಣವೇನು?ಚಿಕಿತ್ಸಾ ವಿಧಾನಗಳು ಯಾವುವು?

udayavani youtube

ಮಾವುತನನ್ನು ಕಾಲಿನಿಂದ ತುಳಿದು ಅಪ್ಪಚ್ಚಿ ಮಾಡಿದ ಆನೆ!

udayavani youtube

“ನನ್ನಿಂದ ತಪ್ಪಾಗಿದೆ ಸರ್‌ ಆದರೆ..” | ಸಪ್ತಮಿ ಅವರದ್ದು ಎನ್ನಲಾದ Audio

udayavani youtube

ಹುಣಸೂರು ತಾಲೂಕಿನ ಸಮಗ್ರ ಅಭಿವೃದ್ದಿಗೆ ಬದ್ದ: ಸಂಸದ ಯದುವೀರ್‌ ಒಡೆಯರ್

udayavani youtube

ಈಕೆ ಭಾರತದ ಮೊದಲ ಸರಣಿ ಕೊಲೆಗಾರ್ತಿ | ಸೈನೈಡ್ ಮಲ್ಲಿಕಾ

ಹೊಸ ಸೇರ್ಪಡೆ

crime (2)

Loan ವ್ಯಾಜ್ಯ: ತೆಲಂಗಾಣದಲ್ಲಿ ಆದಿವಾಸಿ ಮಹಿಳೆ ಮೇಲೆ ಹಲ್ಲೆ

1-saddsad

Ram Setu ಚಿತ್ರ ಸೆರೆಹಿಡಿದ ಯುರೋಪಿಯನ್‌ ಉಪಗ್ರಹ

police USA

Russia; ಚರ್ಚ್‌ಗೆ ದಾಳಿ: 19 ಜನ ಸಾವು, 5 ಉಗ್ರರ ಹತ್ಯೆ

robbers

ಪ್ರವಾದಿ ನಿಂದನೆ: ಪಾಕ್‌ನಲ್ಲಿ ವ್ಯಕ್ತಿಯ ಕೊಂದ ಬಾಲಕ!

congress

ತೆಲಂಗಾಣ; ಬಿಆರ್‌ಎಸ್‌ನ 5ನೇ ಶಾಸಕ ಕಾಂಗ್ರೆಸ್‌ ಸೇರ್ಪಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.