ಬೆಳ್ಮಣ್:ಟಿಪ್ಪರ್-ಬಸ್ ಮುಖಾಮುಖಿ;ಯುವತಿ ಸಾವು,ಹಲವರಿಗೆ ಗಾಯ
Team Udayavani, Feb 23, 2019, 1:52 PM IST
ಉಡುಪಿ: ಬೆಳ್ಮಣ್ನ ಜಂತ್ರ ಎಂಬಲ್ಲಿ ಮುಖ್ಯ ರಸ್ತೆಯಲ್ಲಿ ಶನಿವಾರ ಸಂಜೆ ಟಿಪ್ಪರ್ ಮತ್ತು ಖಾಸಗಿ ಬಸ್ ನಡುವೆ ಭೀಕರ ಅಪಘಾತ ಸಂಭವಿಸಿದ್ದು. ಬಸ್ನಲ್ಲಿದ್ದ ಯುವತಿಯೊಬ್ಬರು ದಾರುಣವಾಗಿ ಸಾವನ್ನಪ್ಪಿದ್ದು, 15 ಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.
ಅಪಘಾತದ ತೀವ್ರತೆಗೆ ಯುವತಿ ಸ್ಥಳದಲ್ಲೇ ಸಾವನ್ನಪ್ಪಿದ್ದು, ಇನ್ನೋರ್ವ ಯುವತಿಯ ಸ್ಥಿತಿ ಚಿಂತಾಜನಕವಾಗಿದೆ ಎಂದು ತಿಳಿದು ಬಂದಿದೆ.
ಮೃತ ಯುವತಿ 22 ರ ಹರೆಯದ ಮೋಕ್ಷಿತಾ ಎಂದು ತಿಳಿದು ಬಂದಿದೆ.
ಗಾಯಾಳುಗಳನ್ನು ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿದೆ.
ಕಾರ್ಕಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಅಪಘಾತದ ಬಳಿಕ ಸ್ಥಳದಲ್ಲಿ ನೂರಾರು ಜನರು ಜಮಾವಣೆಗೊಂಡ ಪರಿಣಾಮ ಸಂಚಾರ ಬಾಧಿತವಾಗಿತ್ತು.
ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಉಡುಪಿಯಲ್ಲಿ ಕೋಮು ಪ್ರಚೋದನೆಯ ಭಾಷಣ; ಕಾಜಲ್ ಹಿಂದುಸ್ತಾನಿ ವಿರುದ್ಧದ FIRಗೆ ಮಧ್ಯಂತರ ತಡೆ
Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ
Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್ ಕುಮಾರ್ ಉದ್ಯಾವರ
MUST WATCH
ಹೊಸ ಸೇರ್ಪಡೆ
ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್
Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ