ಅವಧಿಯೊಳಗೆ ಹೆದ್ದಾರಿ ಪೂರ್ಣಗೊಳ್ಳದಿದ್ದರೆ ಟೋಲ್‌ ಫ್ರೀ

Team Udayavani, Jan 30, 2020, 6:20 AM IST

toll-free

ಉಡುಪಿ: ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗಳು ನಿಗದಿತ ಅವಧಿಯೊಳಗೆ ಮುಗಿಯಬೇಕು. ಪಡುಬಿದ್ರಿ ಯಲ್ಲಿ ರಸ್ತೆ ಮತ್ತು ಕುಂದಾಪುರದ ಶಾಸಿŒ ಸರ್ಕಲ್‌ನಲ್ಲಿ ಮೇಲ್ಸೇತುವೆ ಕಾಮಗಾರಿ ಮಾ. 31 ರೊಳಗೆ ಪೂರ್ಣಗೊಳ್ಳದಿದ್ದರೆ ಎ. 1ರಿಂದ ಟೋಲ್‌ ಸಂಗ್ರಹಕ್ಕೆ ಬಿಡುವುದಿಲ್ಲ ಎಂದು ಸಂಸದೆ ಶೋಭಾ ಕರಂದ್ಲಾಜೆ ಹೇಳಿದರು.

ಜಿ.ಪಂ. ಸಭಾಂಗಣದಲ್ಲಿ ಬುಧವಾರ ದಿಶಾ (ಜಿಲ್ಲಾಭಿವೃದ್ಧಿ ಸಮನ್ವಯ ಮತ್ತು
ಉಸ್ತುವಾರಿ ಸಮಿತಿ) ಸಭೆಯ ಅಧ್ಯಕ್ಷತೆವಹಿಸಿ ಅವರು ಮಾತನಾಡಿದರು.

ಮಲ್ಪೆ-ತೀರ್ಥಹಳ್ಳಿ ಹೆದ್ದಾರಿ ಕಾಮಗಾರಿಗೆ ಅಡ್ಡಿಯಾಗಿರುವ‌ ಭೂಸ್ವಾಧೀನ ಪ್ರಕ್ರಿಯೆ ಚುರುಕು ಗೊಳ್ಳಬೇಕು. ಮಳೆಗಾಲ ಕ್ಕೂ ಮೊದಲೇ ಕಾಮಗಾರಿ ಪೂರ್ಣ ಗೊಳ್ಳಬೇಕೆಂದು ರಾ.ಹೆ. ಅಧಿಕಾರಿಗಳಿಗೆ ತಿಳಿಸಿದರು.

ಇದಕ್ಕೆ ಪ್ರತಿಕ್ರಿಯಿಸಿದ ಅಧಿಕಾರಿ ಗಳು, ಎಪ್ರಿಲ್‌ ಅಂತ್ಯದೊಳಗೆ ಪಡುಬಿದ್ರಿ ಮತ್ತು ಶಾಸಿŒ ಸರ್ಕಲ್‌ ಫ್ಲೆ  „ ಓವರ್‌ ಕಾಮಗಾರಿಗಳು ಪೂರ್ಣಗಗೊಳ್ಳಲಿದೆ ಎಂದರು.

ಕಾಮಗಾರಿ ವಿಳಂಬ ಮಾಡುವ ಕಂಪೆನಿಗಳನ್ನು ಕಪ್ಪು ಪಟ್ಟಿಗೆ ಸೇರಿಸಲು ಸಂಸದರು ಸೂಚಿಸಿದರು. ಉಡುಪಿ-ಪರ್ಕಳ ರಸ್ತೆಯ 1 ಕಿ.ಮೀ. ನಷ್ಟು ಕಾಮಗಾರಿ ಬಾಕಿಯಿದೆ. ಗೆಜೆಟ್‌ ನೋಟಿಫಿಕೇಶನ್‌ ಆದ ಅನಂತರ ಕಾಮಗಾರಿ ನಡೆಯಲಿದೆ ಎಂದರು.

ನಗದು ರಹಿತ ವ್ಯವಹಾರ
ಜಿಲ್ಲೆಯಲ್ಲಿ ನಗದು ರಹಿತ ವ್ಯವಸ್ಥೆ ಅನುಷ್ಠಾನಕ್ಕೆ ಅನುಮತಿ ಸಿಕ್ಕಿದ್ದು, ಕಾಡೂರು ಪಂಚಾಯತ್‌ನಲ್ಲಿ ಪೈಲಟ್‌ ಯೋಜನೆ ಜಾರಿಯಲ್ಲಿದೆ. ಮೊದಲ ಹಂತದಲ್ಲಿ 15 ಪಂಚಾಯತ್‌ಗಳಲ್ಲಿ ಅನುಷ್ಠಾನ ತರುವದಾಗಿ ಜಿ.ಪಂ. ಮುಖ್ಯ ಯೋಜನಾ ಧಿಕಾರಿ ಶ್ರೀನಿವಾಸ್‌ ರಾವ್‌ ತಿಳಿಸಿದರು.

ಇಲಾಖೆ ಅನುಮತಿಗೆ ಸೂಚನೆ
ಅಲೆವೂರಿನಲ್ಲಿ ಕೇಂದ್ರೀಯ ವಿದ್ಯಾಲಯ ಕಟ್ಟಡ ನಿರ್ಮಾಣಕ್ಕೆ ಅರಣ್ಯ ಇಲಾಖೆಯ ಅನುಮತಿ ಸಿಗದೇ ಶಾಲೆಗೆ ಸ್ವಂತ ಕಟ್ಟಡ ಇಲ್ಲ ವಾಗಿದೆ. ಮಂಜೂರಾದ ಹಲವು ಯೋಜನೆಗಳು ನನೆಗುದಿಗೆ ಬಿದ್ದಿದ್ದು, ರದ್ದಾಗುವ ಭೀತಿ ಇದೆ. ಅರಣ್ಯ ಇಲಾಖೆಯ ಜತೆ ಚರ್ಚಿಸಿ ಆದಷ್ಟು ಬೇಗ ಅನುಮತಿ ಕೊಡಿಸುವಂತೆ ಸಂಸದರು ಅಧಿಕಾರಿಗಳಿಗೆ ಸೂಚಿಸಿ ದರು. ಸಭೆಗೆ ಪ್ರತಿ ಬಾರಿಯೂ ಗೈರು ಹಾಜರಾಗುವ ಎಲ್ಲ ಇಲಾಖಾಧಿಕಾರಿ ಗಳಿಗೆ ಶೋಕಾಸ್‌ ನೋಟಿಸ್‌ ಜಾರಿ ಮಾಡಲು ಡಿಸಿ ಗೆ ನಿರ್ದೇಶಿಸಿದರು.

ಜಿಲ್ಲೆಯಲ್ಲಿ ಶೇ. 20ರಷ್ಟು ಮಾತ್ರ ಮಾತೃಪೂರ್ಣ ಯೋಜನೆ ಪ್ರಗತಿಯಲ್ಲಿದೆ ಎಂದು ಅಧಿಕಾರಿಗಳು ಹೇಳಿದಾಗ, ಗರ್ಭಿಣಿ ಮತ್ತು ಬಾಣಂತಿಯರಿಗೆ ಯೋಜನೆಯಿಂದ ಆಗುವ ತೊಂದರೆಗಳನ್ನು ಮುಖ್ಯ ಮಂತ್ರಿಗಳ ಗಮನಕ್ಕೆ ತರಲಾಗಿದೆ. ಯೋಜನೆಯನ್ನು ಮಾರ್ಪ ಡಿಸಿ, ನಗದು ಹಣ ಅಥವಾ ದವಸ ಧಾನ್ಯಗಳನ್ನು ನೀಡುವಂತೆ ಮನವಿ ಮಾಡಿಕೊಳ್ಳಲಾಗಿದೆ ಎಂದರು.

ಖಾಸಗಿ ಬಸ್‌ಗಳು ಸಂಚರಿಸುವ ಮಾರ್ಗದಲ್ಲೇ ನರ್ಮ್ ಬಸ್‌ಗಳೂ ಸಂಚರಿಸುವುದರಿಂದ ಆದಾಯ ಕಡಿಮೆಯಾಗುತ್ತಿದೆ. ಬಸ್‌ ಸೌಲಭ್ಯ ಇಲ್ಲದ ಪ್ರದೇಶಗಳಿಗೂ ನರ್ಮ್ ಬಸ್‌ ಸೇವೆ ವಿಸ್ತರಿಸಬೇಕು ಎಂದು ಕೆ. ರಘುಪತಿ ಭಟ್‌ ತಿಳಿಸಿದರು. ಆರ್‌ಟಿಒ ಅಧಿಕಾರಿಗಳ ಸಭೆ ಕರೆದು ಸಮಾಲೋಚಿಸಲು ಜಿಲ್ಲಾಧಿಕಾರಿಗೆ ಸಂಸದರು ಸೂಚಿಸಿದರು.

ಜಿ.ಪಂ. ಅಧ್ಯಕ್ಷ ದಿನಕರ ಬಾಬು, ತಾ.ಪಂ. ಅಧ್ಯಕ್ಷೆ ನೀತಾ ಗುರುರಾಜ್‌ ಪೂಜಾರಿ, ಜಿಲ್ಲಾಧಿಕಾರಿ ಜಿ. ಜಗದೀಶ್‌, ಜಿ.ಪಂ. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರೀತಿ ಗೆಹೊÉàಟ್‌ ಉಪಸ್ಥಿತರಿದ್ದರು.

ಬಡವರಿಗೂ ಚಿಕಿತ್ಸೆ ದೊರೆಯಲಿ
ನಗರದ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆ ಹೊಸದಾಗಿ ನಿರ್ಮಾಣಗೊಂಡ ಬಳಿಕ ಚಿಕಿತ್ಸೆಯ ಗುಣಮಟ್ಟ ಕುಸಿದಿರುವ ಬಗ್ಗೆ ದೂರುಗಳು ಬರುತ್ತಿವೆ. ಸರಕಾರಿ ಭೂಮಿಯನ್ನು ಖಾಸಗಿಯವರಿಗೆ ನೀಡಿರುವುದೇ ಈ ಸಮಸ್ಯೆಗೆ ಕಾರಣ ಎಂದು ಶಾಸಕ ರಘುಪತಿ ಭಟ್‌ ಆರೋಪಿಸಿದರು. ಜಿಲ್ಲೆಯಲ್ಲಿ 7,31,453 ಆಯುಷ್ಮಾನ್‌ ಕಾರ್ಡ್‌ ವಿತರಣೆಯಾಗಿದೆ. 6,816 ಫ‌ಲಾನುಭವಿಗಳಿಗೆ ಚಿಕಿತ್ಸೆ ನೀಡಲಾಗಿದೆ ಎಂದು ಡಿಎಚ್‌ಒ ತಿಳಿಸಿದರು. ಜಿಲ್ಲೆಯಲ್ಲಿ ಕಾನೂನು ಉಲ್ಲಂ ಸಿ ಯಾರೂ ಯಾವುದೇ ಆಸ್ಪತ್ರೆ ಅಥವಾ ಕಟ್ಟಡವನ್ನು ಕಟ್ಟುವಂತಿಲ್ಲ. ಮಹಿಳಾ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ಬಡವರಿಗೂ ಉತ್ತಮ ಚಿಕಿತ್ಸೆ ನೀಡಲು ವೈದ್ಯರ ಒಂದು ತಂಡವನ್ನು ನಿಯೋಜಿಸಬೇಕು ಎಂದು ಸಂಸದರು ಅಧಿಕಾರಿಗಳಿಗೆ ತಿಳಿಸಿದರು.

ಕುಂದಾಪುರಕ್ಕೆ ಬಾರದಿರಲಿ ಪಂಪ್‌ವೆಲ್‌ ಟ್ರೋಲ್‌!
ಪಂಪ್‌ವೆಲ್‌ ಮೇಲ್ಸೇತುವೆ ಕಾಮಗಾರಿ ವಿಳಂಬ ಸಾಮಾಜಿಕ ಜಾಲತಾಣ ಗಳಲ್ಲಿ ಸಾಕಷ್ಟು ಟ್ರೋಲ್‌ಗೆ ಗುರಿಯಾಗಿದೆ. ಅದರಂತೆ ಟ್ರೋಲಿಗರ ಆಕ್ರೋಶಕ್ಕೆ ಕುಂದಾಪುರದ ಶಾಸ್ತ್ರೀ ಸರ್ಕಲ್‌ ಗುರಿಯಾಗದಿರಲಿ. ಅಧಿಕಾರಿಗಳು ಕಾಳಜಿ ವಹಿಸಿ ಕಾಮಗಾರಿ ಪೂರ್ಣಗೊಳಿಸುವಂತೆ ಸಂಸದರು ಸೂಚಿಸಿದರು.

ಕೃಷಿ ಸಮ್ಮಾನ್‌ ನೋಂದಣಿ
ಪ್ರಧಾನ ಮಂತ್ರಿ ಕೃಷಿ ಸಮ್ಮಾನ್‌ ಯೋಜನೆಯಡಿ 1,40,371 ರೈತರು ನೋಂದಾಯಿಸಿದ್ದಾರೆ.ಇದರಲ್ಲಿ 1,28,899 ಫ‌ಲಾನು ಭವಿಗಳಿಗೆ ಮೊದಲನೆ ಕಂತು, 1,25,437 ಫ‌ಲಾನು  ಭವಿಗಳಿಗೆ ಎರಡನೆ ಕಂತು, 72,317 ಫ‌ಲಾನುಭವಿಗಳಿಗೆ ಮೂರನೇ ಮತ್ತು 3,542 ಫ‌ಲಾನು ಭವಿಗಳಿಗೆ ನಾಲ್ಕನೇ ಕಂತು ಪಾವತಿಯಾಗಿದೆ. ರಾಜ್ಯ ಸರಕಾರದ ಎಲ್ಲ ಕಂತುಗಳು ಪಾವತಿಯಾಗಿವೆ. ಮಳೆಯಿಂದ ಹಾನಿಗೊಳಗಾದ 1,192 ರೈತರ ಬೆಳೆಗೆ 17,39,000 ಲಕ್ಷ ರೂ. ಪಾವತಿಯಾಗಿದೆ ಎಂದು ಕೃಷಿ ಇಲಾಖೆ ಜಂಟಿ ನಿರ್ದೇಶಕ ಕೆಂಪೇಗೌಡ ಸಭೆಗೆ ತಿಳಿಸಿದರು.

ಟಾಪ್ ನ್ಯೂಸ್

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.