ಉಡುಪಿ: 18.78 ಕೋ. ರೂ. ಹೆಚ್ಚುವರಿ ನೀಡಿದರೆ ಎಲ್ಲರಿಗೂ ಮನ್ನಾ ಲಾಭ

Team Udayavani, Jul 4, 2017, 3:45 AM IST

230617ppe6.jpg

ಉಡುಪಿ : ರೈತರು ಕೃಷಿ ಪತ್ತಿನ ಸಹಕಾರಿ ಸಂಸ್ಥೆಗಳಿಂದ ಪಡೆದ ಅಲ್ಪಾವಧಿ ಸಾಲದಲ್ಲಿ 50 ಸಾವಿರದವರೆಗೆ ಮನ್ನಾ ಮಾಡುವ ನಿರ್ಧಾರ ರಾಜ್ಯ ಸರಕಾರ ಕೈಗೊಂಡಿದ್ದು, ಅದರನ್ವಯ ಉಡುಪಿ ಜಿಲ್ಲೆಯ 19,302 ರೈತರ ಸುಮಾರು 83.80 ಕೋ. ರೂ. ಸಾಲ ಮನ್ನಾ ಆಗಲಿದೆ. ಆದರೆ ಸರಕಾರ ಜಿಲ್ಲೆಯ ಸಹಕಾರಿ ಸಂಸ್ಥೆಗಳಿಗೆ ನೀಡಲಿರುವ ಹಣದಲ್ಲಿ 18.78 ಕೋ. ರೂ. ಹೆಚ್ಚುವರಿಯಾಗಿ ನೀಡಿದರೆ ಉಡುಪಿಯ ಎಲ್ಲ ರೈತರಿಗೂ ಸಾಲಮನ್ನಾದ ಲಾಭ ಸಿಗಲಿದೆ.
 
ಸಹಕಾರಿ ಇಲಾಖೆ ಅಧಿಕಾರಿಗಳು ಹೇಳುವ ಪ್ರಕಾರ ಉಡುಪಿ ಜಿಲ್ಲೆಯಲ್ಲಿ ಒಟ್ಟು 54 ಕೃಷಿ ಪತ್ತಿನ ಸಹಕಾರಿ ಸಂಸ್ಥೆಗಳಿಂದ 23,950 ರೈತರು ಒಟ್ಟು 208 ಕೋ. ರೂ. ಅಲ್ಪಾವಧಿ ಸಾಲ ಪಡೆದಿದ್ದು, ಅದರಲ್ಲಿ ಈಗ ಒಟ್ಟು 83.80 ಕೋ. ರೂ. ಮನ್ನಾ ಆಗಲಿದೆ. ಆದರೆ ಜೂ. 19 ರೊಳಗೆ 4,455 ರೈತರು 43,508 ಕೋ. ರೂ. ಸಾಲ ಸಂದಾಯ ಮಾಡಿದ್ದು, ಅದರಲ್ಲಿ ಆದೇಶ ಪ್ರಕಾರ 50 ಸಾವಿರದಂತೆ ಒಟ್ಟು 18.78 ಕೋ. ರೂ. ಹಣ ಪಾವತಿಯಾಗಿದ್ದು, ಅದನ್ನು ಸರಕಾರ ಹೆಚ್ಚುವರಿಯಾಗಿ ನೀಡಲು ಯೋಚಿಸಿದರೆ ಸಾಲ ಪಡೆದ ಎಲ್ಲ ರೈತರೂ ಸಹ ಮನ್ನಾದ ಫ‌ಲಾನುಭವಿಗಳಾಗುತ್ತಾರೆ. 

ಸರಕಾರ ಈ ಸಮಯದಲ್ಲಿ ಏಕಾಏಕಿ ಸಾಲ ಮನ್ನಾ ಘೋಷಣೆಯನ್ನು ಮಾಡಿರುವುದರಿಂದ ಹೆಚ್ಚಿನ ರೈತರಿಗೆ ಪ್ರಯೋಜನ ಕಡಿಮೆ ಎನ್ನಲಾಗುತ್ತಿದೆ. ಕಾರಣ ಈಗ ರೈತರ ಸಾಲ ಮನ್ನಾ ಆದರೂ ಅವರು ಮತ್ತೆ ಹೊಸ ಸಾಲ ಪಡೆಯಬೇಕೆಂದರೆ ಅದರ ಪಾವತಿ ಅವಧಿ ಮುಗಿಯಬೇಕು ಅಂದರೆ ಮುಂದಿನ ಮಾರ್ಚ್‌ವರೆಗೆ ಕಾಯಲೇಬೇಕು. 

ಸಾಲಮನ್ನಾ ಸ್ವಾಗತಾರ್ಹ
ಈ ಮೊದಲೇ ಸಾಲಮನ್ನಾ ನಿರ್ಧಾರ ಕೈಗೊಳ್ಳಬೇಕಿತ್ತು. ತಡವಾಗಿಯಾದರೂ ಘೋಷಿಸಿರುವುದು ಸ್ವಾಗತಾರ್ಹ ನಿರ್ಧಾರ. ಎಲ್ಲ ಕಡೆ ಬರದಿಂದ ರೈತರು ಕಂಗಾಲಾಗಿದ್ದು, ಉಡುಪಿ ಜಿಲ್ಲೆಯಲ್ಲಿಯೇ ಶೆ. 75 ರಷ್ಟು ರೈತರು ಬರದಿಂದ ನಷ್ಟ ಅನುಭವಿಸಿದ್ದಾರೆ. ಆದ್ದರಿಂದ ಪಾವತಿಸಿದ ರೈತರಿಗೂ ಈ ಲಾಭ ಸಿಗುವಂತಾಗಲಿ. ರಾಜ್ಯ ಸರಕಾರದಂತೆ ಕೇಂದ್ರ ಸರಕಾರವು ರಾಷ್ಟ್ರೀಕೃತ ಬ್ಯಾಂಕ್‌ಗಳಲ್ಲಿರುವ ಬೆಳೆಸಾಲವನ್ನು ಮನ್ನಾ ಮಾಡಲು ನಿರ್ಧಾರ ಕೈಗೊಳ್ಳಲಿ ಎಂದು ಉಡುಪಿ ಜಿಲ್ಲಾ ಕೃಷಿಕ ಸಂಘದ ಅಧ್ಯಕ್ಷ ಬಂಟಕಲ್ಲು ರಾಮಕೃಷ್ಣ ಹೇಳಿದರು.  
ಸಿಎಂ ಸಿದ್ದರಾಮಯ್ಯ ಅವರು ಕೃಷಿ ಸಾಲ ಮನ್ನಾ ಮಾಡಿರುವುದರಿಂದ ರೈತರಿಗೆ ಹೆಚ್ಚಿನ ಪ್ರಯೋಜನವಾಗಲಿದೆ ಎನ್ನುವುದರಲ್ಲಿ ಎರಡು ಮಾತಿಲ್ಲ. ಅದು ಈವರೆಗೆ ಪಾವತಿ ಮಾಡಿದವರಿಗೂ ಅನ್ವಯಿಸಲಿ ಎನ್ನುವುದು ರೈತರ ಬೇಡಿಕೆಯಾಗಿದೆ.

ಪಾವತಿಸಿದವರಿಗೂ ಲಾಭ ಸಿಗಲಿ 
ಸಾಲ ಮನ್ನಾ ಮಾಡಿರುವ ನಿರ್ಧಾರ ಅಭಿನಂದನಾರ್ಹ. ಆದರೆ ಸರಕಾರ ಸಾಲಪಾವತಿಗೆ ಬಾಕಿ ಇರುವ ರೈತರಿಗೆ ಮಾತ್ರ ಮನ್ನಾ ಭಾಗ್ಯ ಅವಕಾಶ ಕಲ್ಪಿಸಿರುವುದು ಸರಿಯಲ್ಲ. ನ್ಯಾಯವಾಗಿ ಸಮಯಕ್ಕೆ ಸರಿಯಾಗಿ ಪಾವತಿಸಿದವರಿಗೂ ಈ ಲಾಭ ಸಿಗುವಂತಾಗಲಿ. ಈ ಬಗ್ಗೆ ವರದಿ ಸಿದ್ದಪಡಿಸಿದ್ದು, ಶೀಘ್ರ ಮುಖ್ಯಮಂತ್ರಿಗಳು, ಸಚಿವರನ್ನು ಭೇಟಿ ಮಾಡಿ ವಸ್ತುಸ್ಥಿತಿಯ ಬಗ್ಗೆ ವರದಿ ನೀಡಲಾಗುವುದು. 
– ಕಿಶನ್‌ ಹೆಗ್ಡೆ ಕೊಳ್ಕೆಬೈಲು, ಸಹಕಾರಿ ಯೂನಿಯನ್‌ ಅಧ್ಯಕ್ಷ

ಹೊರಬಾಕಿ ಇರುವವರಿಗೆ ಮಾತ್ರ ಲಾಭ
ಸರಕಾರದ ಆದೇಶ ಪತ್ರದಲ್ಲಿರುವ ಮಾರ್ಗಸೂಚಿಗಳ ಅನ್ವಯ ಎಲ್ಲ ಸಹಕಾರಿ ಸಂಸ್ಥೆಗಳಿಗೂ ಸೂಚನೆ ನೀಡಿದ್ದೇವೆ. ಅದರನ್ವಯ ಜೂ. 20 ರವರೆಗೆ ಯಾರದೆಲ್ಲ ಹೆಸರಿನಲ್ಲಿ ಹೊರಬಾಕಿ ಇದೆಯೋ ಅವರಿಗೆ ಮಾತ್ರ ಈ ಸಾಲ ಮನ್ನಾ ಲಾಭ ಸಿಗಲಿದೆ. ಅದರ ಪ್ರಕಾರವೇ ಸಾಲ ಪಾವತಿಗೆ ಬಾಕಿ ಇರುವ ರೈತರ ಪಟ್ಟಿಯನ್ನು ಸಿದ್ಧಪಡಿಸಲಾಗುತ್ತಿದೆ.

  – ಪ್ರವೀಣ್‌ ನಾಯಕ್‌, ಉಪ ನಿಬಂಧಕರು, ಜಿಲ್ಲಾ ಸಹಕಾರಿ ಸಂಘ ಉಡುಪಿ

-ಪ್ರಶಾಂತ್‌ ಪಾದೆ

ಟಾಪ್ ನ್ಯೂಸ್

Shobha, Bharathi Shetty  ಹೊರತು ಬಿಎಸ್‌ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ

Shobha, Bharathi Shetty ಹೊರತು ಬಿಎಸ್‌ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

High Court ಎಚ್‌ಡಿಕೆಗೆ ಮಹಿಳಾ ಆಯೋಗ ನೀಡಿದ್ದ ನೋಟಿಸ್‌ಗೆ ಹೈಕೋರ್ಟ್‌ ತಡೆ

High Court ಎಚ್‌ಡಿಕೆಗೆ ಮಹಿಳಾ ಆಯೋಗ ನೀಡಿದ್ದ ನೋಟಿಸ್‌ಗೆ ಹೈಕೋರ್ಟ್‌ ತಡೆ

banMysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

Mysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

1-aaaaaa

BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ

1-weqwewqe

Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

4-udupi

Udupi: ರಮಾಬಾಯಿ ಕೊಚ್ಚಿಕಾರ್‌ ಪೈ ನಿಧನ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ ಅಡಿಗೆ ಸಿಲುಕಿದ ಬೈಕ್; ಯಕ್ಷಗಾನ ಕಲಾವಿದ ಸ್ಥಳದಲ್ಲೇ ಮೃತ್ಯು

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

8

Malpe Beach: ಈಜಲು ಹೋದ ಮೂವರು ಸಮುದ್ರಪಾಲು; ಓರ್ವನ ಸಾವು, ಇಬ್ಬರ ರಕ್ಷಣೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Shobha, Bharathi Shetty  ಹೊರತು ಬಿಎಸ್‌ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ

Shobha, Bharathi Shetty ಹೊರತು ಬಿಎಸ್‌ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

High Court ಎಚ್‌ಡಿಕೆಗೆ ಮಹಿಳಾ ಆಯೋಗ ನೀಡಿದ್ದ ನೋಟಿಸ್‌ಗೆ ಹೈಕೋರ್ಟ್‌ ತಡೆ

High Court ಎಚ್‌ಡಿಕೆಗೆ ಮಹಿಳಾ ಆಯೋಗ ನೀಡಿದ್ದ ನೋಟಿಸ್‌ಗೆ ಹೈಕೋರ್ಟ್‌ ತಡೆ

Kanakagiri ದೇಗುಲಕ್ಕೆ ಬಂದಿದ್ದ ಕರಡಿ ಸೆರೆ ಹಿಡಿಯುವಾಗ ದಾಳಿ: ವೃದ್ಧ ಸಾವು

Kanakagiri ದೇಗುಲಕ್ಕೆ ಬಂದಿದ್ದ ಕರಡಿ ಸೆರೆ ಹಿಡಿಯುವಾಗ ದಾಳಿ: ವೃದ್ಧ ಸಾವು

banMysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

Mysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.