ಉಡುಪಿ: ಮೆಹಂದಿ ಸಂಭ್ರಮದಲ್ಲಿ ನೃತ್ಯ ಮಾಡುತ್ತಿದ್ದ ವ್ಯಕ್ತಿ ಹೃದಯಾಘಾತದಿಂದ ಸಾವು
Team Udayavani, Jun 22, 2022, 3:51 PM IST
ಉಡುಪಿ: ಮೆಹಂದಿ ಕಾರ್ಯಕ್ರಮದಲ್ಲಿ ನೃತ್ಯ ಮಾಡುತ್ತಿದ್ದ ವೇಳೆ ಹೃದಯಾಘಾತದಿಂದ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಉಡುಪಿ ಜಿಲ್ಲೆಯ ಅಂಬಾಗಿಲಿನ ಪುತ್ತೂರಿನಲ್ಲಿ ನಡೆದಿದೆ.
ಪುತ್ತೂರು ನಿವಾಸಿ ಗಣಪತಿ ಆಚಾರ್ಯ (56) ಮೃತಪಟ್ಟ ದುರ್ದೈವಿ ಎಂದು ತಿಳಿದುಬಂದಿದೆ.
ಜೂ.21 ರಾತ್ರಿ ನೆರೆಮನೆಯ ಸಂಬಂಧಿಕರ ಮೆಹೆಂದಿ ಕಾರ್ಯಕ್ರಮದಲ್ಲಿ ಇತರರೊಂದಿಗೆ ನೃತ್ಯ ಮಾಡುತ್ತಿದ್ದರು. ಈ ವೇಳೆ ಕುಸಿದು ಬಿದ್ದಿದ್ದು, ಕೂಡಲೇ ಇವರನ್ನು ಚಿಕಿತ್ಸೆಗಾಗಿ ಮಣಿಪಾಲ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ ಆಸ್ಪತ್ರೆಗೆ ತಲುಪುವಾಗಲೇ ಹೃದಯಾಘಾತದಿಂದ ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದಾರೆ.
ಇದನ್ನೂ ಓದಿ:ಮಂಗಳೂರಿನಿಂದ ಉಡುಪಿಗೆ ಆತ್ಮಹತ್ಯೆ ಮಾಡಿಕೊಳ್ಳಲು ಬಂದ ಬಾಣಸಿಗ
ಚಿನ್ನದ ಆಭರಣ ತಯಾರಿಕೆ ವೃತ್ತಿ ನಡೆಸುತ್ತಿದ್ದ ಗಣಪತಿ ಆಚಾರ್ಯ, ಸೊಸೈಟಿಯೊಂದರ ಪಿಗ್ಮಿ ಸಂಗ್ರಹಕಾರರಾಗಿಯೂ ಕಾರ್ಯ ನಿರ್ವಹಿಸಿದ್ದರು. ಮೃತರು ಪತ್ನಿ, ಇಬ್ಬರು ಪುತ್ರಿಯರು, ಪುತ್ರನನ್ನು ಅಗಲಿದ್ದಾರೆ.