ಉಡುಪಿ: ತ್ರಿವಳಿ ಮಕ್ಕಳಿಗೆ ಜನ್ಮ ನೀಡಿದ ತಾಯಿ
Team Udayavani, Jul 7, 2022, 12:45 PM IST
ಉಡುಪಿ: ಇಲ್ಲಿನ ಸರ್ಕಾರಿ ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ಗುರುವಾರ ಮುಂಜಾನೆ ತಾಯಿಯೋರ್ವರು ತ್ರಿವಳಿ ಮಕ್ಕಳಿಗೆ ಜನ್ಮ ನೀಡಿದ್ದು, ತಾಯಿ ಮಕ್ಕಳು ಆರೋಗ್ಯವಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.
ಉತ್ತರಕನ್ನಡ ಜಿಲ್ಲೆಯ ಅಂಕೋಲಾ ನಿವಾಸಿ ಸುನೀತಾ (27) ತ್ರಿವಳಿ ಮಕ್ಕಳಿಗೆ ಜನ್ಮ ನೀಡಿದ್ದಾರೆ.
ಡಾ.ಕವಿಶಾ ಭಟ್ , ಡಾ.ರಜನಿ ಕಾರಂತ್, ಡಾ.ಸೂರ್ಯನಾರಾಯಣ, ಡಾ.ಗಣಪತಿ ಹೆಗಡೆ ಹಾಗೂ ಡಾ.ಮಹಾದೇವ ಭಟ್ ತಜ್ಞ ವೈದ್ಯರ ತಂಡ ಯಶಸ್ವಿಯಾಗಿ ಸಿಸೇರಿಯನ್ ಹೆರಿಗೆ ಮಾಡಿದ್ದಾರೆ. ಸದ್ಯ ತಾಯಿ ಮತ್ತು ತ್ರಿವಳಿಗಳು ಆರೋಗ್ಯವಾಗಿರುವರೆಂದು ಆಸ್ಪತ್ರೆ ಮೂಲಗಳು ತಿಳಿಸಿವೆ.
ಇದನ್ನೂಓದಿ: ಡೋಲೋ ಮಾತ್ರೆ ತಯಾರಿಕೆ ಕಂಪನಿಗೆ ಐಟಿ ಶಾಕ್; 40 ಕಡೆ ದಾಳಿ