ಉಡುಪಿ-ಚಿಕ್ಕಮಗಳೂರು ಲೋಕಸಭೆ ಚುನಾವಣೆ, ಪೂರ್ವಸಿದ್ಧತೆ ಸಭೆ
Team Udayavani, Jan 26, 2019, 12:50 AM IST
ಹೆಬ್ರಿ: ಬಿಜೆಪಿ ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಚುನಾವಣಾ ಪೂರ್ವ ಸಿದ್ಧತಾ ಸಭೆಯು ಜ. 24ರಂದು ಹೆಬ್ರಿಯ ಶ್ರೀ ಅನಂತಪದ್ಮನಾಭ ಸನ್ನಿಧಿಯಲ್ಲಿ ನಡೆಯಿತು.
ಕಾರ್ಯಕ್ರಮವನ್ನು ವಿಧಾನ ಪರಿಷತ್ ಪ್ರತಿಪಕ್ಷದ ನಾಯಕ ಕೋಟಾ ಶ್ರೀ ನಿವಾಸ ಪೂಜಾರಿ ಉದ್ಘಾಟಿಸಿ ಮಾತನಾಡಿ ಪ್ರಧಾನಿ ನರೇಂದ್ರ ಮೋದಿ ಸರಕಾರದ ಸಾಧನೆಯೇ ಬಿಜೆಪಿಗೆ ಶ್ರೀರಕ್ಷೆಯಾಗಿದ್ದು ಮುಂಬರುವ ಲೋಕಸಭೆ ಚುನಾವಣೆ ಉಡುಪಿ – ಚಿಕ್ಕಮಂಗಳೂರು ಕ್ಷೇತ್ರದಲ್ಲಿ ಪೂರ್ಣ ಬಹುಮತದೊಂದಿಗೆ ಬಿಜೆಪಿ ಜಯ ಸಾಧಿಸಲಿದ್ದು ಭಾರತೀಯ ಇತಿಹಾಸದಲ್ಲೇ ದಾಖಲೆ ಮಾಡಲಿದೆ ಎಂದರು.
ಈ ಸಂದರ್ಭದಲ್ಲಿ ಸಂಸದೆ ಶೋಭಾ ಕರಂದ್ಲಾಜೆ , ಶಾಸಕ ವಿ. ಸುನಿಲ್ ಕುಮಾರ್ , ಉಡುಪಿ ಜಿ.ಪಂ.ಅಧ್ಯಕ್ಷ ದಿನಕರ ಬಾಬು, ಎನ್.ಜೀವರಾಜ್, ಪಕ್ಷದ ಮುಖಂಡ ಅರುಣ್ ಕುಮಾರ್ ಜಿ., ತಿಂಗಳೆ ವಿಕ್ರಮಾರ್ಜುನ ಹೆಗ್ಡೆ , ಉದಯಕುಮಾರ್ ಶೆಟ್ಟಿ , ಶಾಸಕ ಸುಕುಮಾರ್ ಶೆಟ್ಟಿ ಹಾಲಾಡಿ ಶ್ರೀನಿವಾಸ್ ಶೆಟ್ಟಿ, ಆಯನೂರು ಮಂಜುನಾಥ್, ಚಿಕ್ಕಮಗಳೂರು ಜಿ.ಪಂ. ಅಧ್ಯಕ್ಷೆ ಸುಜಾತಾ ಕೃಷ್ಣಪ್ಪ ಮೊದಲಾದವರು ಉಪಸ್ಥಿತರಿದ್ದರು.
ಜಿಲ್ಲಾ ಕಾರ್ಯದರ್ಶಿ ಕುಯಿಲಾಡಿ ಸುರೇಶ್ ನಾಯಕ್ ಸ್ವಾಗತಿಸಿ ,ಜಿಲ್ಲಾ ಪ್ರಧಾನ ಕಾರ್ಯದರ್ಶಿ ನವೀನ್ ಶೆಟ್ಟಿ ಕುತ್ಯಾರು ಕಾರ್ಯಕ್ರಮ ನಿರೂಪಿಸಿ, ಮೀನುಗಾರಿಕೆ ಫೆಡರೇಶನ್ ಅಧ್ಯಕ್ಷ ಯಶ್ಪಾಲ್ ಸುವರ್ಣ ವಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್ ಗಾಂಧಿ
Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು
Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ
ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ
Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ