ಉಡುಪಿ: ಅಪಘಾತ ನಡೆಸಿದ್ದ ಬೈಕ್ ಸವಾರನಿಗೆ ಶಿಕ್ಷೆ
Team Udayavani, Jan 10, 2023, 12:25 AM IST
ಉಡುಪಿ: ಅತೀವೇಗ ಹಾಗೂ ಅಜಾಗರೂಕತೆಯಿಂದ ಬೈಕ್ ಚಲಾಯಿಸಿ, ಪಾದಚಾರಿಯ ಸಾವಿಗೆ ಕಾರಣವಾದ ಆರೋಪಿಗೆ ನಗರದ ಪ್ರಧಾನ ಸಿ.ಜೆ ಮತ್ತು ಜೆ.ಎಂ.ಎಫ್.ಸಿ ನ್ಯಾಯಾಲಯವು ಜೈಲು ಶಿಕ್ಷೆ ಹಾಗೂ ದಂಡ ವಿಧಿಸಿದೆ.
2018ರ ಮೇ 28ರಂದು ದೀಪ್ರಾಜ್ ನಾಯ್ಕ ಕೊಕ್ಕರ್ಣೆಯಿಂದ ಮುದ್ದೂರು ಕಡೆಗೆ ಹೋಗುವಾಗ ತನ್ನ ಬೈಕನ್ನು ಅತೀವೇಗ ಹಾಗೂ ಅಜಾಕರೂಕತೆಯಿಂದ ಚಲಾಯಿಸಿ, ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಸಾಕು ಪೂಜಾರ್ತಿ ಅವರಿಗೆ ಹಿಂಬದಿಯಿದ ಢಿಕ್ಕಿ ಹೊಡೆಸಿದ್ದ. ಪರಿಣಾಮ, ಅವರು ರಸ್ತೆಗೆ ಬಿದ್ದು ಹಣೆಗೆ ತೀವ್ರ ಸ್ವರೂಪದ ಗಾಯವಾಗಿ ಮೃತಪಟ್ಟಿದ್ದರು.
ಹೆಬ್ರಿ ಪೊಲೀಸ್ ಠಾಣೆ ಉಪನಿರೀಕ್ಷಕರು ಪ್ರಕರಣ ದಾಖಲಿಸಿಕೊಂಡು ಆರೋಪಿಯ ವಿರುದ್ಧ ದೋಷಾರೋಪಣ ಪಟ್ಟಿ ಸಲ್ಲಿಸಿದ್ದರು.
ಪ್ರಕರಣದ ವಿಚಾರಣೆ ನಡೆದು ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ನಗರದ ಪ್ರಧಾನ ಸಿ.ಜೆ. ಮತ್ತು ಜೆ.ಎಂ.ಎಫ್.ಸಿ. ನ್ಯಾಯಾಲಯದ ನ್ಯಾಯಾಧೀಶೆ ದೀಪಾ ಅವರು ಆರೋಪಿ ದೀಪ್ರಾಜ್ ನಾಯ್ಕಗೆ 6 ತಿಂಗಳ ಸಾದಾ ಶಿಕ್ಷೆ ವಿಧಿಸಿ ತೀರ್ಪು ನೀಡಿದ್ದಾರೆ. ಸರಕಾರದ ಪರ ಹಿರಿಯ ಸಹಾಯಕ ಸರಕಾರಿ ಅಭಿಯೋಜಕಿ ಜಯಂತಿ ಕೆ. ವಾದಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ
ಜಯಪ್ರಕಾಶ್ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್ ಕುಮಾರ್ ಮುರೊಳ್ಳಿ
ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು
ಕಾರ್ಗಿಲ್ ಯೋಧ ಮೆಲ್ವಿನ್ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ
ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್