
ಉಡುಪಿಯಿಂದ ಇನ್ನೋವಾ ಕಾರಿನಲ್ಲಿ ವ್ಯಕ್ತಿಯ ಅಪಹರಣ!
ಪ್ರಕರಣ ಸುಖಾಂತ್ಯ: ಕೂಳೂರಿನಲ್ಲಿ ಕಾರನ್ನು ಅಡ್ಡಗಟ್ಟಿ ವಶಕ್ಕೆ ಪಡೆದ ಪೊಲೀಸರು
Team Udayavani, Sep 11, 2022, 6:50 AM IST

ಉಡುಪಿ: ಇನ್ನೋವಾ ಕಾರಿನಲ್ಲಿ ಬಂದಿದ್ದ ತಂಡ ಶನಿವಾರ ಉಡುಪಿಯ ಶ್ರೀಕೃಷ್ಣ ಮಠದ ಸಮೀಪದಿಂದ ವ್ಯಕ್ತಿಯೋರ್ವರನ್ನು ಬಲವಂತವಾಗಿ ಕಾರಿನಲ್ಲಿ ಕುಳ್ಳಿರಿಸಿ ಅಪಹರಿಸಿದ್ದು, ಆ ಕಾರನ್ನು ಮಂಗಳೂರಿನ ಕೂಳೂರು ಸಮೀಪ ದಲ್ಲಿ ಪೊಲೀಸರು ಅಡ್ಡಗಟ್ಟಿದ್ದು, ಕಾರಿನಲ್ಲಿದ್ದ ನಾಲ್ವರನ್ನು ವಶಕ್ಕೆ ಪಡೆದುಕೊಂಡಿದ್ದಾರೆ!
ಕಂಟ್ರೋಲ್ ರೂಂಗೆ ಮಾಹಿತಿ
ಬೆಂಗಳೂರು ನೋಂದಣಿಯ ಇನ್ನೋವಾ ಕಾರಿನಲ್ಲಿ ಬಂದಿದ್ದ ತಂಡದವರು ಕಾರಿನಿಂದ ಇಳಿದು ಒಬ್ಬರನ್ನು ಬಲವಂತವಾಗಿ ಕಾರಿಗೆ ಹಾಕಿಕೊಂಡು ಹೋಗಿದ್ದರು. ಇದನ್ನು ಕಂಡ ಸ್ಥಳೀಯರು ಅಪಹರಣವಾಗಿರುವ ಬಗ್ಗೆ ಪೊಲೀಸ್ ಕಂಟ್ರೋಲ್ ರೂಂಗೆ ಮಾಹಿತಿ ನೀಡಿದ್ದರು. ಕೂಡಲೇ ಅಲರ್ಟ್ ಆದ ಉಡುಪಿ ನಗರ ಪೊಲೀಸರು ವಿವಿಧ ವಿಭಾಗ ಹಾಗೂ ಠಾಣೆಗಳಿಗೆ ಎಚ್ಚರಿಕೆ ನೀಡಿದ್ದರು. ವಾಹನ ಕಲ್ಸಂಕ ಮಾರ್ಗವಾಗಿ ಕರಾವಳಿ ಬೈಪಾಸ್ ತಲುಪಿರುವ ಬಗ್ಗೆ ಟ್ರಾಫಿಕ್ ಪೊಲೀಸರು ಮಾಹಿತಿ ಕಲೆ ಹಾಕಿದ್ದರು. ಅಲ್ಲಿಂದ ಹೆಜಮಾಡಿ ಟೋಲ್‌ಗೇಟ್ ದಾಟಿ ಮುಂದೆ ಹೋಗಿರುವ ಬಗ್ಗೆ ಸಿಸಿ ಕೆಮರಾ ದೃಶ್ಯಾವಳಿಗಳಿಂದ ಪೊಲೀಸರಿಗೆ ತಿಳಿದುಬಂದಿತ್ತು.
ಅನಂತರ ಉಡುಪಿ ಪೊಲೀಸರು ಮಂಗಳೂರು ಪೊಲೀಸರಿಗೆ ಮಾಹಿತಿ ನೀಡಿದ್ದರು. ಅದರಂತೆ ಕೂಳೂರು ಬಳಿ ಪೊಲೀಸರು ಇನ್ನೋವಾ ಕಾರನ್ನು ತಡೆದು ನಿಲ್ಲಿಸಿ ಕಾರಿನಲ್ಲಿದ್ದ ನಾಲ್ವರನ್ನು ವಶಕ್ಕೆ ಪಡೆದಿದ್ದರು.
ವಿಚಾರಣೆಯಲ್ಲಿ ಪೊಲೀಸರು
ಕಂಡುಕೊಂಡ ಸತ್ಯ
ಪೊಲೀಸರು ವಶಕ್ಕೆ ಪಡೆದ ನಾಲ್ವರನ್ನೂ ವಿಚಾರಣೆ ನಡೆಸಿದಾಗ ಕೆಲಕಾಲ ಸಂಚಲನ ಉಂಟು ಮಾಡಿದ್ದ ಇಡೀ ಪ್ರಕರಣ ತಿರುವು ಪಡೆದುಕೊಂಡಿತ್ತು. ಒಮ್ಮೆಗೆ ಪೊಲೀಸರೇ ದಂಗಾಗಿ ಬಿಟ್ಟರು. ತಮ್ಮ ಕಾರ್ಯಾಚರಣೆಯ ಬಗ್ಗೆ ಮಾತ್ರ ಹೆಮ್ಮೆ ಪಟ್ಟುಕೊಂಡರು. ಇಲ್ಲಿ ನಿಜಕ್ಕೂ ಅಪಹರಣವಾಗಿರಲಿಲ್ಲ.
ಕಾರಿನಲ್ಲಿದ್ದವರು ವೈದ್ಯರು. ಘಟನೆಯ ನಿಜಾಂಶವೆಂದರೆ, ಬೆಂಗಳೂರಿನ ರಾಜರಾಜೇಶ್ವರಿ ಮೆಡಿಕಲ್ ಕಾಲೇಜಿನಿಂದ ತಪ್ಪಿಸಿಕೊಂಡು ಉಡುಪಿಗೆ ಬಂದಿದ್ದ ಮಾನಸಿಕ ಅಸ್ವಸ್ಥ ರೋಗಿಯನ್ನು ಮನೆಯವರು ರಕ್ಷಣೆ ಮಾಡಿದ್ದು.
ಘಟನೆಯ ವಿವರ
ಸೆ. 8ರಂದು ಬೆಂಗಳೂರಿನ ರಾಜರಾಜೇಶ್ವರೀ ನಗರದ ಬಳಿ ಇರುವ ಮಾನಸಿಕ ಆಸ್ಪತ್ರೆಯಿಂದ ತಪ್ಪಿಸಿಕೊಂಡು ಬಂದ ಯೋಗೀಶ್ ಭಟ್ (54) ಅವರು ಉಡುಪಿಯ ಎಂಜಿಎಂ ಸಮೀಪದ ಸಂಬಂಧಿಕರ ಮನೆಯಲ್ಲಿ ಉಳಿದುಕೊಂಡಿದ್ದರು. ಆದರೆ ಇಲ್ಲಿಯೂ ಅವರ ಉಪಟಳ ಹೆಚ್ಚಿತ್ತು. ಈ ಬಗ್ಗೆ ಮನೆಯವರೇ ಆಸ್ಪತ್ರೆಯವರಿಗೆ ಮಾಹಿತಿ ನೀಡಿದ್ದರು. ಈ ನಡುವೆ ಯೋಗೀಶ್ ಭಟ್ ಅವರು ಮನೆಯಿಂದ ಕೃಷ್ಣ ಮಠದತ್ತ ತೆರಳಿದ್ದರು. ಇತ್ತ ಬೆಂಗಳೂರಿನಿಂದ ಬಂದಿದ್ದ ಮಾನಸಿಕ ವೈದ್ಯರ ತಂಡ ಉಡುಪಿಯ ಕನಕದಾಸ ರಸ್ತೆಯಲ್ಲಿ ಅವರನ್ನು ಪತ್ತೆ ಹಚ್ಚಿ ಇನ್ನೋವಾ ಕಾರಿನೊಳಗೆ ಬಲವಂತವಾಗಿ ಕೂರಿಸಿಕೊಂಡಿದ್ದರು. ಇದನ್ನು ಕಂಡ ಸ್ಥಳೀಯರು ಕಂಟ್ರೋಲ್ ರೂಮ್‌ಗೆ ಮಾಹಿತಿ ನೀಡಿದ್ದರು. ಅನಂತರ ಪೊಲೀಸರು ಕ್ಷಿಪ್ರವಾಗಿ ಕಾರ್ಯಾಚರಣೆ ನಡೆಸಿ ಕಾರನ್ನು ಕೂಳೂರಿನಲ್ಲಿ ಪತ್ತೆ ಹಚ್ಚಿ ಘಟನೆಯ ನಿಜಾಂಶ ಕಂಡುಕೊಂಡರು. ಅನಂತರ ವೈದ್ಯರ ತಂಡ ಹಾಗೂ ರೋಗಿಗೆ ಬೆಂಗಳೂರಿಗೆ ತೆರಳಲು ಅನುಮತಿಸಿದ್ದಾರೆ. ಈ ಕಾರ್ಯಾಚರಣೆಯ ಬಗ್ಗೆ ಯಾವುದೇ ದೂರು ದಾಖಲಾಗಿಲ್ಲ. ಆದರೆ ಈ ಘಟನೆ ಕೆಲಕಾಲ ಆತಂಕ ಸೃಷ್ಟಿಸಿದ್ದಂತೂ ಸತ್ಯ.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH

ಅನುದಾನ ನೀಡಿ ವರ್ಷವಾದರೂ ಆರಂಭವಾಗದ ಕಾಮಗಾರಿ ; ಗ್ರಾಮಸ್ಥರಿಂದ ಚುನಾವಣಾ ಬಹಿಷ್ಕಾರದ ಎಚ್ಚರಿಕೆ

ಮರಳಿನಲ್ಲಿ ಅರಳಿತು ತುಳುನಾಡ ನಾಗಾರಾಧನೆ | Malpe Beach Uthsava 2023 | Udupi – Udayavani

Beach Utsavaದಲ್ಲಿ ತರ ತರಹದ ಸ್ಪರ್ಧೆ, ಚಟುವಟಿಕೆಗಳು !ರಘುಪತಿ ಭಟ್ಟರು ಹೇಳಿದ್ದೇನು ?

ಕೃಷ್ಣ ನಗರಿಯ ಕುರಿತು ಅಭಿಮಾನದ ಮಾತುಗಳನ್ನಾಡಿದ Melody King Rajesh Krishnan

ಯಾರು ಬೇಕಾದರೂ ಸುಲಭವಾಗಿ ನಂದಿ ಬಟ್ಟಲು ಹೂವಿನಿಂದ ಸುಂದರ ಹಾರ ತಯಾಸಬಹುದು
ಹೊಸ ಸೇರ್ಪಡೆ

ಹಿಮಾಚಲ ಪ್ರದೇಶ ರಾಜ್ಯಪಾಲರ ಹೆಸರಿನಲ್ಲಿ ನಕಲಿ ಇನ್ಸ್ಟಾಗ್ರಾಮ್ ಖಾತೆ ಸೃಷ್ಟಿಸಿ ಹಣಕ್ಕಾಗಿ ಬೇಡಿಕೆ

ಏಪ್ರಿಲ್ 1 ರಿಂದ 15 ವರ್ಷಕ್ಕಿಂತ ಹಳೆಯದಾದ 9 ಲಕ್ಷ ವಾಹನಗಳು ಗುಜರಿಗೆ: ಗಡ್ಕರಿ

ಬಿಆರ್ಟಿಗೂ, ಅರಸರಿಗೂ ಅವಿನಾಭವ ಸಂಬಂಧ

ದ್ವಿಚಕ್ರ ವಾಹನ ಕಳ್ಳರ ಬಂಧನ: 12 ಬೈಕ್ ಪೊಲೀಸರ ವಶಕ್ಕೆ

ಜೆಡಿಎಸ್ ಅಧಿಕಾರಕ್ಕೆ ಬಂದರೆ ಸ್ತ್ರೀ ಶಕ್ತಿ ಸಂಘಗಳ ಸಾಲ ಮನ್ನಾ : ಕುಮಾರಸ್ವಾಮಿ