ಉಡುಪಿ: ‘ಸಹಕಾರ ವೈಭವ-2018’ ಉದ್ಘಾಟನೆ


Team Udayavani, Dec 17, 2018, 12:44 PM IST

17-december-8.gif

ಉಡುಪಿ : ಪ್ರತಿಯೋರ್ವರಲ್ಲಿಯೂ ಪ್ರತಿಭೆ ಇರುತ್ತದೆ. ಅದು ಹೊರಹೊಮ್ಮಬೇಕಾದರೆ ಸೂಕ್ತ ವೇದಿಕೆ, ಅವಕಾಶ ದೊರೆಯಬೇಕು ಎಂದು ಮಾಜಿ ಸಚಿವ ಪ್ರಮೋದ್‌ ಮಧ್ವರಾಜ್‌ ಹೇಳಿದರು. ಡಿ.16ರಂದು ಬಡಗಬೆಟ್ಟು ಕ್ರೆಡಿಟ್‌ ಕೋ-ಆಪರೇಟಿವ್‌ ಸೊಸೈಟಿ ಲಿ.ನ ಶತಮಾನೋತ್ಸವ ಸಂಭ್ರಮಾಚರಣೆ ಅಂಗವಾಗಿ ಶ್ರೀಮತಿ ಅಮ್ಮಣ್ಣಿ ರಾಮಣ್ಣ ಶೆಟ್ಟಿ ಸಭಾಂಗಣದಲ್ಲಿ ಆಯೋಜಿಸಲಾದ ಜಿಲ್ಲಾ ಮಟ್ಟದ ಸಹಕಾರಿ ಕ್ಷೇತ್ರದ ಸಿಬಂದಿ ಹಾಗೂ ಆಡಳಿತ ಮಂಡಳಿ ಸದಸ್ಯರ ಪ್ರತಿಭಾ ಸ್ಪರ್ಧೆ ‘ಸಹಕಾರ ವೈಭವ-2018’ ಉದ್ಘಾಟಿಸಿ ಅವರು ಮಾತನಾಡಿದರು.

ಅತ್ಯಂತ ಹಳೆಯ ಬ್ಯಾಂಕ್‌ ಆಗಿದ್ದರೂ ನವೀನ ಕಾರ್ಯಕ್ರಮ, ಚಿಂತನೆಗಳ ಮೂಲಕ ಬ್ಯಾಂಕ್‌ ಮೆಚ್ಚುಗೆ ಗಳಿಸಿದೆ. ಇದೀಗ ಸಹಕಾರಿ ಕ್ಷೇತ್ರದಲ್ಲಿರುವವರ ಪ್ರತಿಭೆ ಅನಾವರಣಕ್ಕೂ ಅವಕಾಶ ಮಾಡಿಕೊಟ್ಟಿರುವುದು ಶ್ಲಾಘನೀಯ ಎಂದು ಹೇಳಿದರು. ಮುಖ್ಯ ಅತಿಥಿಯಾಗಿ ಪಾಲ್ಗೊಂಡಿದ್ದ ಉಡುಪಿ ದ.ಕ ಸಹಕಾರ ಮೀನುಮಾರಾಟ ಫೆಡರೇಷನ್‌ ಅಧ್ಯಕ್ಷ ಯಶ್‌ಪಾಲ್‌ ಸುವರ್ಣ ಅವರು ಮಾತನಾಡಿ ‘ಮನೆ ಮಾತಾಗಿರುವ ಬಡಗಬೆಟ್ಟು ಸೊಸೈಟಿ ತನ್ನ ಶತಮಾನೋತ್ಸವವನ್ನು ಕೂಡ ಅರ್ಥಪೂರ್ಣವಾಗಿ ಆಚರಿಸಿ ಇತರ ಸಹಕಾರಿ ಸಂಸ್ಥೆಗಳಿಗೆ ಮಾದರಿಯಾಗಿದೆ’ ಎಂದು ಹೇಳಿದರು.

ಪ್ರಥಮ ಪ್ರಯತ್ನ
ಸೊಸೈಟಿಯ ಪ್ರಧಾನ ವ್ಯವಸ್ಥಾಪಕ ಜಯಕರ ಶೆಟ್ಟಿ ಇಂದ್ರಾಳಿ ಅವರು ಮಾತನಾಡಿ, ‘ಸೊಸೈಟಿ ಕೇವಲ ಹಣಕಾಸು ವ್ಯವಹಾರ, ಲಾಭಕ್ಕೆ ಮಾತ್ರವೇ ಆದ್ಯತೆ ಕೊಡದೆ ಸಮಾಜದಿಂದ ಪಡೆದದ್ದನ್ನು ಸಮಾಜಕ್ಕೆ ನೀಡುವ ಜವಾಬ್ದಾರಿಯನ್ನು ನಿಭಾಯಿಸುತ್ತಾ ಬಂದಿದೆ. ಸಾಮಾಜಿಕ, ಧಾರ್ಮಿಕ ಸೇವಾ ಕಾರ್ಯಗಳಲ್ಲಿ ತೊಡಗಿಸಿಕೊಂಡಿದೆ. ಇದೇ ಮೊದಲ ಬಾರಿಗೆ ಸಹಕಾರಿ ಕ್ಷೇತ್ರದಲ್ಲಿರುವವರಿಗೆ ಅವರ ಪ್ರತಿಭೆ ತೋರ್ಪಡಿಸಲು ಅವಕಾಶ ಒದಗಿಸುವ ಉದ್ದೇಶದಿಂದ ಸಹಕಾರ ವೈಭವ ಹಮ್ಮಿಕೊಂಡಿದ್ದು ಇದಕ್ಕೆ ಅದ್ಭುತ ಸ್ಪಂದನೆ ದೊರೆತಿದೆ. ಪ್ರತಿಭೆ ಅನಾವರಣ ಜತೆಗೆ ಸಹಕಾರಿ ಕ್ಷೇತ್ರದಲ್ಲಿ ದುಡಿಯುವವರೆಲ್ಲರೂ ಒಂದೇ ಕುಟುಂಬ ಎಂಬ ಭಾವನೆ ಮೂಡಿಸುವ ಉದ್ದೇಶದಿಂದ ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ’ ಎಂದು ಹೇಳಿದರು.

ಹಿರಿಯ ಸಹಕಾರಿ ಧುರೀಣ ಕೃಷ್ಣರಾಜ ಸರಳಾಯ, ದುಬೈ ಅನಿವಾಸಿ ತುಳುವರ ತುಳುಕೂಟದ ಅಧ್ಯಕ್ಷ ಸರ್ವೋತ್ತಮ ಶೆಟ್ಟಿ, ಸಹಕಾರ ಸಂಘಗಳ ಉಪನಿಬಂಧಕ ಪ್ರವೀಣ್‌ ಬಿ.ನಾಯಕ್‌, ಕುಂದಾಪುರ ಉಪವಿಭಾಗದ ಸಹಾಯಕ ನಿಬಂಧಕಿ ಚಂದ್ರಪ್ರತಿಮಾ, ಸೊಸೈಟಿ ಅಧ್ಯಕ್ಷ ಸಂಜೀವ ಕಾಂಚನ್‌, ಶತಮಾನೋತ್ಸವ ಸಮಿತಿ ಸಂಚಾಲಕ ಪುರುಷೋತ್ತಮ ಪಿ.ಶೆಟ್ಟಿ, ಉಪಾಧ್ಯಕ್ಷ ಎಲ್‌.ಉಮಾನಾಥ್‌, ರಘುರಾಮ ಶೆಟ್ಟಿ ಉಪಸ್ಥಿತರಿದ್ದರು. ಸೊಸೈಟಿಯ ಉದ್ಯಾವರ ಶಾಖಾ ವ್ಯವಸ್ಥಾಪಕ ಪ್ರವೀಣ್‌ ಕುಮಾರ್‌ ವಂದಿಸಿದರು.

ಟಾಪ್ ನ್ಯೂಸ್

1-sss

ನಾನು ಕಂಬಳಿ ನೇಯ್ದಿಲ್ಲ, ಆದ್ರೆ ಕುರಿ ಉಣ್ಣೆ ಮಾರಿದ್ದೇನೆ: ಸಿದ್ಧರಾಮಯ್ಯ

Sam Sung Galaxy M52 5G: Slim and Power Full – tech

ಸ್ಯಾಮ್‍ ಸಂಗ್‍ ಗೆಲಾಕ್ಸಿ ಎಂ52 5ಜಿ: ಸ್ಲಿಮ್‍ ಮತ್ತು ಪವರ್ ಫುಲ್‍

7454

ರಾಜ್ಯ ಸರಕಾರಿ ನೌಕರರಿಗೆ ದೀಪಾವಳಿ ಗಿಫ್ಟ್ : ತುಟ್ಟಿಭತ್ಯೆ ಹೆಚ್ಚಳ

ಬಾಂಬೆ ಷೇರುಪೇಟೆ ಸೆನ್ಸೆಕ್ಸ್ 207 ಅಂಕ ಕುಸಿತ, 18,250ಕ್ಕಿಂತ ಕೆಳಕ್ಕೆ ಕುಸಿದ ನಿಫ್ಟಿ

ಬಾಂಬೆ ಷೇರುಪೇಟೆ ಸೆನ್ಸೆಕ್ಸ್ 207 ಅಂಕ ಕುಸಿತ, 18,250ಕ್ಕಿಂತ ಕೆಳಕ್ಕೆ ಕುಸಿದ ನಿಫ್ಟಿ

arya-khan

ಆರ್ಯನ್‌ ಖಾನ್‌ ಜಾಮೀನು ಅರ್ಜಿ ವಿಚಾರಣೆ ಇಂದೂ ಮುಂದೂಡಿಕೆ

b-c-nagesh

ಕಲ್ಯಾಣ ಕರ್ನಾಟಕದಲ್ಲಿ ಶಿಕ್ಷಕರ ಕೊರತೆ ನೀಗಿಸಲು ಕ್ರಮ: ಸಚಿವ ಬಿ.ಸಿ.ನಾಗೇಶ್

bhagavanth-kubha

ರಸಗೊಬ್ಬರ ಕೊರತೆ; ಕಾಂಗ್ರೆಸ್ ಸುಳ್ಳಿನಿಂದ ಆತಂಕ ಸೃಷ್ಟಿ : ಭಗವಂತ್ ಖೂಬಾ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕಾಪು ಪುರಸಭೆ ವ್ಯಾಪ್ತಿಯಲ್ಲಿ ಎಲ್‌ಇಡಿ ಲೈಟ್ ಅಳವಡಿಕೆಗೆ ಪ್ರಾಯೋಗಿಕ ಚಾಲನೆ

ಕಾಪು ಪುರಸಭೆ ವ್ಯಾಪ್ತಿಯಲ್ಲಿ ಎಲ್‌ಇಡಿ ಲೈಟ್ ಅಳವಡಿಕೆಗೆ ಪ್ರಾಯೋಗಿಕ ಚಾಲನೆ

ಜನಪ್ರತಿನಿಧಿಗಳೇ… ವಿಳಂಬ ನೀತಿಯಿಂದ ಪ್ರಯೋಜನವಿಲ್ಲ

ಜನಪ್ರತಿನಿಧಿಗಳೇ… ವಿಳಂಬ ನೀತಿಯಿಂದ ಪ್ರಯೋಜನವಿಲ್ಲ

ನಾಳೆ ರಾಜ್ಯಾದ್ಯಂತ ಏಕಕಾಲಕ್ಕೆ ಕನ್ನಡ ಗೀತೆಗಳ ಗಾಯನ: ಸುನಿಲ್‌

ನಾಳೆ ರಾಜ್ಯಾದ್ಯಂತ ಏಕಕಾಲಕ್ಕೆ ಕನ್ನಡ ಗೀತೆಗಳ ಗಾಯನ: ಸುನಿಲ್‌

ಐದರ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ: 10 ವರ್ಷ ಜೈಲು

ಐದರ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ: 10 ವರ್ಷ ಜೈಲು

Untitled-1

ಶಿರ್ವ ಶ್ರೀ ಸಿದ್ಧಿ ವಿನಾಯಕ ದೇಗುಲದಲ್ಲಿ ದೃಢಕಲಶ ಸಂಪನ್ನ

MUST WATCH

udayavani youtube

ಸಾವಯವ ಕೃಷಿಯಲ್ಲಿ ಅನುಸರಿಸಬೇಕಿರುವ ಪ್ರಮುಖ ಅಂಶಗಳ ಬಗ್ಗೆ ನಿಮಗೆ ಗೊತ್ತೇ?

udayavani youtube

ಶಾಲೆಗೆ ಬಂತು ಬಿಸಿಯೂಟ : ದೋಟಿಹಾಳ ಶಾಲಾ ಮಕ್ಕಳ ಒಂದು ಕಿಲೋಮೀಟರ್ ಪಾದಯಾತ್ರೆಗೆ ಬ್ರೇಕ್

udayavani youtube

ಸಾವಿರಾರು ವರ್ಷಗಳ ಇತಿಹಾಸವಿರುವ ಕನ್ನಡ ಭಾಷೆಯನ್ನು ಉಳಿಸಬೇಕಾಗಿದೆ : ಆರ್. ಅಶೋಕ್

udayavani youtube

ಆಧುನಿಕ ಪದ್ಧತಿಯೊಂದಿಗೆ ಬ್ಯಾಡಗಿ ಮೆಣಸಿನಕಾಯಿ ಕೃಷಿಗೆ ಮುಂದಾದ ಅಡಕೆ ಕೃಷಿಕ

udayavani youtube

ಬಸ್ ಕಂಡಕ್ಟರ್‌ನಿಂದ ಸೂಪರ್ ಸ್ಟಾರ್ ಆದ ರಜನಿಕಾಂತ್ ಕಥೆ

ಹೊಸ ಸೇರ್ಪಡೆ

1-sss

ನಾನು ಕಂಬಳಿ ನೇಯ್ದಿಲ್ಲ, ಆದ್ರೆ ಕುರಿ ಉಣ್ಣೆ ಮಾರಿದ್ದೇನೆ: ಸಿದ್ಧರಾಮಯ್ಯ

23kannada

ಕನ್ನಡ ಸಿನಿಮಾ ಪ್ರೇಕ್ಷಕರಿಗಿದೆ ದೊಡ್ಡ ಗೌರವ

22film

ವರ್ಷಾಂತ್ಯಕ್ಕೆ ಮದುವೆಯಾಗಲಿದ್ದಾರಾ ಕತ್ರಿನಾ ಕೈಫ್, ವಿಕ್ಕಿ ಕೌಶಲ್?!

Sam Sung Galaxy M52 5G: Slim and Power Full – tech

ಸ್ಯಾಮ್‍ ಸಂಗ್‍ ಗೆಲಾಕ್ಸಿ ಎಂ52 5ಜಿ: ಸ್ಲಿಮ್‍ ಮತ್ತು ಪವರ್ ಫುಲ್‍

7454

ರಾಜ್ಯ ಸರಕಾರಿ ನೌಕರರಿಗೆ ದೀಪಾವಳಿ ಗಿಫ್ಟ್ : ತುಟ್ಟಿಭತ್ಯೆ ಹೆಚ್ಚಳ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.