ಉಡುಪಿ: ಕ್ಯಾಟರಿಂಗ್ ಮುಗಿಸಿ ಹಿಂತಿರುಗುತ್ತಿದ್ದವರ ದರೋಡೆ, ಅಪಹರಣ; ನಾಲ್ವರು ವಶಕ್ಕೆ

Team Udayavani, Aug 31, 2022, 8:38 PM IST

ಉಡುಪಿ: ಕ್ಯಾಟರಿಂಗ್ ಮುಗಿಸಿ ಹಿಂತಿರುಗುತ್ತಿದ್ದವರ ದರೋಡೆ, ಅಪಹರಣ: ನಾಲ್ವರು ವಶಕ್ಕೆ

ಉಡುಪಿ: ಕ್ಯಾಟರಿಂಗ್ ಉದ್ಯೋಗ ಮುಗಿಸಿ ಮಣಿಪಾಲ ಕಡೆಗೆ ನಡೆದುಕೊಂಡು ಹೋಗುತ್ತಿದ್ದ ಇಬ್ಬರು ವಿದ್ಯಾರ್ಥಿಗಳನ್ನು ಕಾರಿನಲ್ಲಿ ಬಂದ ತಂಡವೊಂದು ಅಪಹರಣ ಮಾಡಿ, ಹಲ್ಲೆ ನಡೆಸಿ ದರೋಡೆ ಮಾಡಿದ ಘಟನೆಗೆ ಸಂಬಂಧಿಸಿದಂತೆ ನಾಲ್ವರು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ಜಕ್ರೀಯಾ, ರಜೀಂ, ಖಾಲೀದ್, ರೆಹಮಾನ್‌ ನಾಲ್ವರು ತಡರಾತ್ರಿ ಮಣಿಪಾಲಕ್ಕೆ ತೆರಳುವ ವೇಳೆ ಈ ಅಪಹರಣ ಮತ್ತು ದರೋಡೆ ಯತ್ನ ನಡೆಸಿದ್ದು, ಉಡುಪಿ ನಗರ ಠಾಣಾ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಘಟನೆಯ ವಿವರ:

ಮಣಿಪಾಲದ ಉಡುಪಿ ನರ್ಸಿಂಗ್ ಕಾಲೇಜಿನಲ್ಲಿ ವಿದ್ಯಾಭ್ಯಾಸ ಮಾಡಿಕೊಂಡಿರುವ ವಿದ್ಯಾರ್ಥಿಗಳಾದ ಬ್ರೈಟಿಲ್ ಬಿಜು ಮತ್ತು ಮಹಮ್ಮದ್ ಸಿನಾನ್‌ ಕರಾವಳಿ ಬೈಪಾಸ್ ಬಳಿಯಿರುವ ಖಾಸಗಿ ಹೋಟೆಲಿನಲ್ಲಿ ಕ್ಯಾಟರಿಂಗ್ ಕೆಲಸ ಮುಗಿಸಿ ಮಣಿಪಾಲದ ಕಡೆಗೆ ನಡೆದುಕೊಂಡು ಹೋಗುತ್ತಿದ್ದಾಗ ಕಲ್ಸಂಕ ಜಂಕ್ಷನ್ ಬಳಿ ಕರಾವಳಿ ಬೈಪಾಸ್ ಕಡೆಯಿಂದ ಬಂದ KA -01-MA-5287 ನೋಂದಣಿ ಸಂಖ್ಯೆಯ ಕಾರನ್ನು ಕೈ ತೋರಿಸಿ ಡ್ರಾಪ್ ಕೇಳಿದ್ದಾರೆ.

ಕಾರನ್ನು ನಿಲ್ಲಿಸಿದ್ದು, ಚಾಲಕನು ಸೇರಿ ಕಾರಿನಲ್ಲಿ ನಾಲ್ವರಿದ್ದರು. ಕಾರಿನೊಳಗಿಂದ ಬಂದ ವಾಸನೆಯನ್ನು ಗಮನಿಸಿ ಕಾರಿನಲ್ಲಿ ತೆರಳಲು ವಿದ್ಯಾರ್ಥಿಗಳು ನಿರಾಕರಿಸಿದ್ದಾರೆ. ಆಗ ಕಾರಿನಲ್ಲಿದ್ದ ಒಬ್ಬತಾ ಇಳಿದು ಚೂರಿಯನ್ನು ತೋರಿಸಿ, ಕಾರಿನಲ್ಲಿ ಕುಳಿತುಕೊಳ್ಳದೇ ಇದ್ದರೇ ಕೊಲ್ಲುವುದಾಗಿ ಬೆದರಿಸಿ, ವಿದ್ಯಾರ್ಥಿಗಳಿಬ್ಬರನ್ನು ಅಪಹರಣ ಮಾಡಿದ್ದಾರೆ

ನಂತರ ಇವರ ಮೊಬೈಲ್ ಕಿತ್ತುಕೊಂಡು ದೊಡ್ಡಣಗುಡ್ಡೆಯ ಪಾರ್ಕ್ ನಲ್ಲಿ ಇಬ್ಬರಿಗೆ ಹಲ್ಲೆ ನಡೆಸಿ 2 ಲಕ್ಷ ರೂ.ಗೆ ಬೇಡಿಕೆ ಇಟ್ಟಿದ್ದಾರೆ. ಅದರಲ್ಲಿ ಒಬ್ಬಾತ ತಪ್ಪಿಸಿಕೊಂಡು ಬಂದು ಠಾಣೆಯಲ್ಲಿ ದೂರು ನೀಡಿದ್ದಾನೆ. ಇನ್ನೊಬ್ಬ ವಿದ್ಯಾರ್ಥಿಯನ್ನು ಕಾಪು, ಶಿರ್ವದಲ್ಲಿ ಸುತ್ತಾಡಿಸಿ ಕಾರಿನಲ್ಲೇ ಹಲ್ಲೆ ನಡೆಸಿದ್ದಾರೆ. ಶಿರ್ವ ಬಳಿ ಪೋಲಿಸರು ಇವರನ್ನು ವಶಕ್ಕೆ ಪಡೆದಿದ್ದಾರೆ.

ಉಡುಪಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.