
ಉಡುಪಿ: ದತ್ತುಗ್ರಾಮ ಸಂಕಲ್ಪಕ್ಕೆ ಚಾಲನೆ
Team Udayavani, Nov 27, 2022, 5:45 AM IST

ಉಡುಪಿ: ಎಂಜಿಎಂ ಕಾಲೇಜು ಟ್ರಸ್ಟ್‌ನ ಅಧ್ಯಕ್ಷರಾದ ಟಿ. ಸತೀಶ್ ಪೈ ಅವರ ಜನ್ಮದಿನದಂದು (ನ. 26) ಕಾಲೇಜಿನ ರೇಂಜರ್ ಹಾಗೂ ರೋವರ್ ಘಟಕ ಸಂಕಲ್ಪಿಸಿರುವ ದತ್ತು ಗ್ರಾಮ ಸ್ವೀಕಾರ ಯೋಜನೆಗೆ ಚಾಲನೆ ನೀಡಲಾಯಿತು.
ಟಿ. ಸತೀಶ್ ಪೈಯವರು ರೋವರ್ ಹಾಗೂ ರೇಂಜರ್ ಲೀಡರ್ ಅವಿನಾಶ್ ಆಚಾರ್ಯ ಹಾಗೂ ವನಿತಾ ಮಯ್ಯ ಅವರಿಗೆ ಕಾರ್ಯಯೋಜನೆ ಕುರಿತಾದ ದಾಖಲೆಯನ್ನು ಹಸ್ತಾಂತರಿಸಿ ಚಾಲನೆ ನೀಡಿದರು. ದತ್ತುಗ್ರಾಮ ಯೋಜನೆ ಪ್ರಸ್ತಾವಕ್ಕೆ ಮೆಚ್ಚುಗೆ ಸೂಚಿಸಿ ಶುಭಹಾರೈಸಿದರು.
ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ| ಮೋಹನ ಆಳ್ವ, ಪದವಿ ಪ್ರಾಂಶುಪಾಲ ಪ್ರೊ| ಲಕ್ಷ್ಮೀ ನಾರಾಯಣ ಕಾರಂತ, ಪದವಿಪೂರ್ವ ವಿಭಾಗದ ಪ್ರಾಂಶುಪಾಲೆ ಮಾಲತಿ ದೇವಿ ಉಪಸ್ಥಿತರಿದ್ದರು. ಪತ್ರಿಕೋ ದ್ಯಮ ಉಪನ್ಯಾಸಕ ಸುಚಿತ್ ಕೋಟ್ಯಾನ್ ನಿರೂಪಿಸಿದರು.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ

ಐಪಿಎಲ್ 2023: ಆರ್ ಸಿಬಿಯ ಮೊದಲ ಪಂದ್ಯಕ್ಕೆ ಲಭ್ಯವಿಲ್ಲ ಹೇಜಲ್ವುಡ್, ಮ್ಯಾಕ್ಸವೆಲ್

ರಾಮನ ಅವತಾರ ತಾಳಿದ ರಿಷಿ; ಫಸ್ಟ್ ಲುಕ್ ಪೋಸ್ಟರ್ ಬಂತು

ಟ್ಯೂಷನ್ ಗೆ ತೆರಳಿ ನಾಪತ್ತೆಯಾಗಿದ್ದ ಬಾಲಕನ ಮೃತದೇಹ ಕುಮಾರಧಾರ ನದಿಯಲ್ಲಿ ಪತ್ತೆ

ಬಳ್ಳಾರಿ: ತವರು ಮನೆ ಸೇರಿದ್ದ ಪತ್ನಿಯ ಕೊಲೆಗೆ ಯತ್ನಿಸಿದ ಕುಡುಕ ಗಂಡ

ನಟ ನವಾಜುದ್ದೀನ್,ಮಾಜಿ ಪತ್ನಿಗೆ ಮಕ್ಕಳ ಸಲುವಾಗಿ ಹಾಜರಾಗಲು ಹೇಳಿದ ಹೈಕೋರ್ಟ್