Udupi; ಮಾ. 17: ಕು.ಶಿ. ಹರಿದಾಸ ಭಟ್ಟ ಜನ್ಮ ಶತಮಾನೋತ್ಸವ

Team Udayavani, Mar 12, 2024, 1:28 AM IST

Udupi; ಮಾ. 17: ಕು.ಶಿ. ಹರಿದಾಸ ಭಟ್ಟ ಜನ್ಮ ಶತಮಾನೋತ್ಸವ

ಉಡುಪಿ: ಎಂಜಿಎಂ ಕಾಲೇಜು ವತಿಯಿಂ ದ ಪ್ರೊ| ಕು.ಶಿ. ಹರಿದಾಸ ಭಟ್ಟ ಅವರ ಜನ್ಮ ಶತಮಾನೋತ್ಸವ ಮಾ. 17 ರಂದು ನೂತನ ರವೀಂದ್ರ ಮಂಟಪದಲ್ಲಿ ನಡೆಯಲಿದೆ ಎಂದು ಪ್ರಾಂಶುಪಾಲ ಪ್ರೊ| ಲಕ್ಷ್ಮೀನಾರಾಯಣ ಕಾರಂತ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

ಕು.ಶಿ. ಹರಿದಾಸ ಭಟ್ಟರು ಕಾಲೇಜಿನಲ್ಲಿ ಉಪನ್ಯಾಸಕರಾಗಿ, ವಿಭಾಗ ಮುಖ್ಯಸ್ಥರಾಗಿ, ಪ್ರಾಂಶುಪಾಲರಾಗಿ ಸುದೀರ್ಘ‌ ಸೇವೆ ಸಲ್ಲಿಸಿ ಕಾಲೇಜನ್ನು ಸಾಂಸ್ಕೃತಿಕ ಕೇಂದ್ರವಾಗಿ ಪರಿವರ್ತಿಸಿದವರು. ಶಿಕ್ಷಣದ ಜತೆಗೆ ಕಲೆ, ಸಾಹಿತ್ಯಕ್ಕೂ ವಿಶಿಷ್ಟ ಪ್ರೋತ್ಸಾಹ ನೀಡಿದ ವ್ಯಕ್ತಿತ್ವ ಅವರದು. ಕಲೆ, ಸಾಹಿತ್ಯ, ಜನಪದ ವಿಚಾರದಲ್ಲಿ ಉಡುಪಿ ಸಾಂಸ್ಕೃತಿಕ ನಗರಿ ಹೆಸರು ಪಡೆಯಲು ಕು.ಶಿ. ಅವರ ಶ್ರಮ ಅಪಾರ. ಈ ನಿಟ್ಟಿನಲ್ಲಿ ಅವರ ಜನ್ಮ ಶತಮಾನೋತ್ಸವ ಆಚರಣೆ ಯನ್ನು ಅರ್ಥ ಪೂರ್ಣ ವಾಗಿಸಲು ಹಲವು ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ ಎಂದರು.

ಬೆಳಗ್ಗೆ 10ಕ್ಕೆ ಮಾಹೆಯ ಸಹ ಕುಲಾಧಿಪತಿ ಡಾ| ಎಚ್‌.ಎಸ್‌. ಬಲ್ಲಾಳ್‌ ಉದ್ಘಾಟನೆ ನೆರವೇರಿಸಲಿದ್ದಾರೆ. ಎಂಜಿಎಂ ಕಾಲೇಜು ಟ್ರಸ್ಟ್‌ ಅಧ್ಯಕ್ಷ ಟಿ. ಸತೀಶ್‌ ಯು. ಪೈ ಅಧ್ಯಕ್ಷತೆ ವಹಿಸಲಿದ್ದಾರೆ. ಹಂಪಿ ಕನ್ನಡ ವಿ.ವಿ. ವಿಶ್ರಾಂತ ಕುಲಪತಿ ಡಾ| ಬಿ.ಎ. ವಿವೇಕ ರೈ ದಿಕ್ಸೂಚಿ ಭಾಷಣ ಮಾಡಲಿದ್ದಾರೆ. ಟ್ರಸ್ಟ್‌ ಸದಸ್ಯ ಅಶೋಕ್‌ ಟಿ. ಪೈ, ಅಕಾಡೆಮಿ ಆಫ್ ಜನರಲ್‌ ಎಜುಕೇಶನ್‌ ಕಾರ್ಯದರ್ಶಿ ವರದರಾಯ ಪೈ, ನಿವೃತ್ತ ಪ್ರಾಧ್ಯಾಪಕ ಪ್ರೊ| ಎನ್‌.ಟಿ. ಭಟ್‌, ಟಿ. ಮೋಹನದಾಸ ಪೈ ಕೌಶಲಾಭಿವೃದ್ಧಿ ಕೇಂದ್ರದ ನಿರ್ದೇಶಕ ಟಿ. ರಂಗ ಪೈ, ಕು.ಶಿ. ಹರಿದಾಸ ಭಟ್ಟರ ಮಕ್ಕಳು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.

ಕಾರ್ಯಕ್ರಮ ವೈವಿಧ್ಯ
ಎಂಜಿಎಂ ಸಂಧ್ಯಾ ಕಾಲೇಜಿನ ಪ್ರಾಂಶುಪಾಲ ಡಾ| ದೇವಿದಾಸ್‌ ನಾಯ್ಕ ಮಾತನಾಡಿ, ಬೆಳಗ್ಗೆ 9ಕ್ಕೆ ಅಡ್ಮಿನಿಸ್ಟ್ರೇಟಿವ್‌ ಬ್ಲಾಕ್‌ನಿಂದ ರವೀಂದ್ರ ಮಂಟಪದ ವರೆಗೆ ಹರಿದಾಸ ಭಟ್ಟರ ಭಾವಚಿತ್ರದ ಮೆರವಣಿಗೆ ನಡೆಯಲಿದೆ. ಅನಂತರ ಉದ್ಘಾಟನೆ, 11.30ಕ್ಕೆ ಪಂ| ಟಿ. ರಂಗ ಪೈ ಅವರಿಂದ ಲಘು ಸಂಗೀತ, ನಿವೃತ್ತ ಪ್ರಾಚಾರ್ಯ ಪ್ರೊ| ಎಂ.ಎಲ್‌. ಸಾಮಗ ಅವರಿಗೆ ಗುರುವಂದನೆ, ಮಧ್ಯಾಹ್ನ 2ಕ್ಕೆ ಕಾಲೇಜು ವಿದ್ಯಾರ್ಥಿಗಳಿಂದ ಜಾನಪದ ನೃತ್ಯ, ಅಪರಾಹ್ನ 3ಕ್ಕೆ ಸಮಾರೋಪ, ಸಂಜೆ 4ಕ್ಕೆ “ವೀರ ಅಭಿಮನ್ಯು’ ಯಕ್ಷಗಾನ ಪ್ರದರ್ಶನ ಜರಗಲಿದೆ. ಆಳ್ವಾಸ್‌ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ| ಎಂ. ಮೋಹನ ಆಳ್ವ ಸಮಾರೋಪ ಭಾಷಣ ಮಾಡಲಿದ್ದಾರೆ.

ಹರಿದಾಸ ಭಟ್ಟರ ವಿದ್ಯಾರ್ಥಿಗಳು, ಸಹ ಉಪನ್ಯಾಸಕರು, ಬೋಧಕೇತರ ಸಿಬಂದಿ, ಹಳೆ ವಿದ್ಯಾರ್ಥಿಗಳು ಭಾಗವಹಿಸಲಿದ್ದಾರೆ ಎಂದರು.

ಎಂಜಿಎಂ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲೆ ಮಾಲತಿ ದೇವಿ, ಇಂದ್ರಾಳಿ ಯಕ್ಷಗಾನ ಸಲಹಾ ಸಮಿತಿ ಅಧ್ಯಕ್ಷ ಕಿಶನ್‌ ಹೆಗ್ಡೆ, ಗೋವಿಂದ ಪೈ ಸಂಶೋಧನ ಕೇಂದ್ರದ ಆಡಳಿತಾಧಿಕಾರಿ ಡಾ| ಬಿ. ಜಗದೀಶ್‌ ಶೆಟ್ಟಿ, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಪ್ರೊ| ಕೊಕ್ಕರ್ಣೆ ಸುರೇಂದ್ರನಾಥ್‌ ಶೆಟ್ಟಿ, ಪ್ರ. ಕಾರ್ಯದರ್ಶಿ ಡಾ| ಎಂ. ವಿಶ್ವನಾಥ್‌ ಪೈ ಪತ್ರಿಕಾಗೋಷ್ಠಿಯಲ್ಲಿದ್ದರು.

ಟಾಪ್ ನ್ಯೂಸ್

Assam: ಎರಡು ಪ್ರತ್ಯೇಕ ಕಾರ್ಯಾಚರಣೆಯಲ್ಲಿ 48 ಕೋಟಿ ರೂ. ಮೌಲ್ಯದ ಡ್ರಗ್ಸ್‌ ವಶ

Assam: ಎರಡು ಪ್ರತ್ಯೇಕ ಕಾರ್ಯಾಚರಣೆಯಲ್ಲಿ 48 ಕೋಟಿ ರೂ. ಮೌಲ್ಯದ ಡ್ರಗ್ಸ್‌ ವಶ

ಸರಕಾರ ನಿಮ್ಮ ಜೊತೆಗಿದೆ, ಅಂಗನವಾಡಿ ಕಾರ್ಯಕರ್ತರು ಆತಂಕ ಪಡಬೇಕಾಗಿಲ್ಲ: ಸಚಿವ ಈಶ್ವರ ಖಂಡ್ರೆ

ಸರಕಾರ ನಿಮ್ಮ ಜೊತೆಗಿದೆ, ಅಂಗನವಾಡಿ ಕಾರ್ಯಕರ್ತರು ಆತಂಕ ಪಡಬೇಕಾಗಿಲ್ಲ: ಸಚಿವ ಈಶ್ವರ ಖಂಡ್ರೆ

Udupi: ಪೆಟ್ರೋಲ್ ಪಂಪ್‌ನಲ್ಲಿ ಅಗ್ನಿ ಅವಘಡ… ಕಾರ್ಮಿಕರ ಸಮಯಪ್ರಜ್ಞೆಯಿಂದ ತಪ್ಪಿದ ಅನಾಹುತ

Udupi: ಪೆಟ್ರೋಲ್ ಪಂಪ್‌ನಲ್ಲಿ ಅಗ್ನಿ ಅವಘಡ… ಕಾರ್ಮಿಕರ ಸಮಯಪ್ರಜ್ಞೆಯಿಂದ ತಪ್ಪಿದ ಅನಾಹುತ

Udupi: ಸೆಲೂನ್‌ ಸಿಬಂದಿಯ ಕೊಲೆ ಯತ್ನ ಪ್ರಕರಣ… ಮೂವರು ಅರೆಸ್ಟ್

Udupi: ಸೆಲೂನ್‌ ಸಿಬಂದಿಯ ಕೊಲೆ ಯತ್ನ ಪ್ರಕರಣ… ಮೂವರು ಅರೆಸ್ಟ್

Share Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ಜಿಗಿತ; ಲಾಭ ಗಳಿಸಿದ ಷೇರು ಯಾವುದು?

Share Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ಜಿಗಿತ; ಲಾಭ ಗಳಿಸಿದ ಷೇರು ಯಾವುದು?

7-chitradurga

ಒತ್ತಡಕ್ಕೆ ಮಣಿಯದೆ ರೇಣುಕಾಸ್ವಾಮಿ ಕೊಲೆ ಪ್ರಕರಣದ ತನಿಖೆಯಾಗಲಿ; ಬಿ.ವೈ.ವಿಜಯೇಂದ್ರ

On Camera: ರಿವರ್ಸ್‌ ಅವಾಂತರ-ಗೆಳೆಯನ ಕಣ್ಣೆದುರೇ ಕಾರು ಕಂದಕಕ್ಕೆ ಬಿದ್ದು ಗೆಳತಿ ಸಾವು

On Camera: ರಿವರ್ಸ್‌ ಅವಾಂತರ-ಗೆಳೆಯನ ಕಣ್ಣೆದುರೇ ಕಾರು ಕಂದಕಕ್ಕೆ ಬಿದ್ದು ಗೆಳತಿ ಸಾವು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi: ಪೆಟ್ರೋಲ್ ಪಂಪ್‌ನಲ್ಲಿ ಅಗ್ನಿ ಅವಘಡ… ಕಾರ್ಮಿಕರ ಸಮಯಪ್ರಜ್ಞೆಯಿಂದ ತಪ್ಪಿದ ಅನಾಹುತ

Udupi: ಪೆಟ್ರೋಲ್ ಪಂಪ್‌ನಲ್ಲಿ ಅಗ್ನಿ ಅವಘಡ… ಕಾರ್ಮಿಕರ ಸಮಯಪ್ರಜ್ಞೆಯಿಂದ ತಪ್ಪಿದ ಅನಾಹುತ

Udupi: ಸೆಲೂನ್‌ ಸಿಬಂದಿಯ ಕೊಲೆ ಯತ್ನ ಪ್ರಕರಣ… ಮೂವರು ಅರೆಸ್ಟ್

Udupi: ಸೆಲೂನ್‌ ಸಿಬಂದಿಯ ಕೊಲೆ ಯತ್ನ ಪ್ರಕರಣ… ಮೂವರು ಅರೆಸ್ಟ್

4-udupi

Udupi: ಹಿರಿಯ ನ್ಯಾಯವಾದಿ, ಕಾಂಗ್ರೆಸ್ ಪಕ್ಷದ ಮುಖಂಡ ಚೇರ್ಕಾಡಿ ವಿಜಯ್ ಹೆಗ್ಡೆ ನಿಧನ

Udupi ಇನ್ನು ಮುತ್ತು ರತ್ನ ನಗರಿ! ಕೇಂದ್ರ ಸರಕಾರದ ಒಂದು ಜಿಲ್ಲೆ ಒಂದು ಉತ್ಪನ್ನ ಪರಿಕಲ್ಪನೆ

Udupi ಇನ್ನು ಮುತ್ತು ರತ್ನ ನಗರಿ! ಕೇಂದ್ರ ಸರಕಾರದ ಒಂದು ಜಿಲ್ಲೆ ಒಂದು ಉತ್ಪನ್ನ ಪರಿಕಲ್ಪನೆ

June 27: ಕಂಬಳ ಅನುದಾನ ಬಿಡುಗಡೆ ಆಗ್ರಹಿಸಿ ಸಿಎಂ, ಸಚಿವರ ಭೇಟಿ ನಿಗದಿ

June 27: ಕಂಬಳ ಅನುದಾನ ಬಿಡುಗಡೆ ಆಗ್ರಹಿಸಿ ಸಿಎಂ, ಸಚಿವರ ಭೇಟಿ ನಿಗದಿ

MUST WATCH

udayavani youtube

ಕಮಲಶಿಲೆ ದೇಗುಲದಿಂದ ಗೋ ಕಳವು ಯತ್ನ ವಿಫಲ

udayavani youtube

ಈದ್ಗಾ ಮೈದಾನದಲ್ಲಿ ನಡೆದ ಬಕ್ರೀದ್ ಆಚರಣೆಯಲ್ಲಿ ಪ್ರಾರ್ಥನೆ ಸಲ್ಲಿಸಿದ ಆರ್ ಬಿ ತಿಮ್ಮಾಪುರ

udayavani youtube

ಮಾನಸಿಕ ಸಮಸ್ಯೆಯ ಲಕ್ಷಣಗಳೇನು?

udayavani youtube

ಈ ಇಳಿವಯಸ್ಸಿನಲ್ಲಿ ಇಂತದ್ದೆಲ್ಲ ಒಳ್ಳೆಯದಲ್ಲ… BSY ಕುರಿತು ಸಚಿವ ತಿಮ್ಮಾಪುರ ಹೇಳಿಕೆ

udayavani youtube

ಸಿದ್ದರಾಮಯ್ಯ ಡಿಕೆ ಶಿವಕುಮಾರ್ ಆಡಳಿತ ಮಾಡಲು ಅಸಮರ್ಥರು

ಹೊಸ ಸೇರ್ಪಡೆ

Assam: ಎರಡು ಪ್ರತ್ಯೇಕ ಕಾರ್ಯಾಚರಣೆಯಲ್ಲಿ 48 ಕೋಟಿ ರೂ. ಮೌಲ್ಯದ ಡ್ರಗ್ಸ್‌ ವಶ

Assam: ಎರಡು ಪ್ರತ್ಯೇಕ ಕಾರ್ಯಾಚರಣೆಯಲ್ಲಿ 48 ಕೋಟಿ ರೂ. ಮೌಲ್ಯದ ಡ್ರಗ್ಸ್‌ ವಶ

ಸರಕಾರ ನಿಮ್ಮ ಜೊತೆಗಿದೆ, ಅಂಗನವಾಡಿ ಕಾರ್ಯಕರ್ತರು ಆತಂಕ ಪಡಬೇಕಾಗಿಲ್ಲ: ಸಚಿವ ಈಶ್ವರ ಖಂಡ್ರೆ

ಸರಕಾರ ನಿಮ್ಮ ಜೊತೆಗಿದೆ, ಅಂಗನವಾಡಿ ಕಾರ್ಯಕರ್ತರು ಆತಂಕ ಪಡಬೇಕಾಗಿಲ್ಲ: ಸಚಿವ ಈಶ್ವರ ಖಂಡ್ರೆ

Udupi: ಪೆಟ್ರೋಲ್ ಪಂಪ್‌ನಲ್ಲಿ ಅಗ್ನಿ ಅವಘಡ… ಕಾರ್ಮಿಕರ ಸಮಯಪ್ರಜ್ಞೆಯಿಂದ ತಪ್ಪಿದ ಅನಾಹುತ

Udupi: ಪೆಟ್ರೋಲ್ ಪಂಪ್‌ನಲ್ಲಿ ಅಗ್ನಿ ಅವಘಡ… ಕಾರ್ಮಿಕರ ಸಮಯಪ್ರಜ್ಞೆಯಿಂದ ತಪ್ಪಿದ ಅನಾಹುತ

9-bellary

Ballari: ಪೆಟ್ರೋಲ್,ಡೀಸೆಲ್ ಬೆಲೆ ಏರಿಕೆ ಖಂಡಿಸಿ ಬಿಜೆಪಿ ಜಿಲ್ಲಾ ಘಟಕದಿಂದ ಪ್ರತಿಭಟನೆ

Udupi: ಸೆಲೂನ್‌ ಸಿಬಂದಿಯ ಕೊಲೆ ಯತ್ನ ಪ್ರಕರಣ… ಮೂವರು ಅರೆಸ್ಟ್

Udupi: ಸೆಲೂನ್‌ ಸಿಬಂದಿಯ ಕೊಲೆ ಯತ್ನ ಪ್ರಕರಣ… ಮೂವರು ಅರೆಸ್ಟ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.