Sanjeevini Supermarket: ಮಹಿಳೆಯರ”ಸಂಜೀವಿನಿ ಸೂಪರ್‌ ಮಾರ್ಕೆಟ್‌’

ತಿಂಡಿ, ತಿನಿಸುಗಳು, ಪೂಜಾ ಸಾಮಗ್ರಿ ಸಹಿತ ಇತರ ಸಾವಯವ ಉತ್ಪನ್ನಗಳು ಲಭ್ಯವಿದೆ.

Team Udayavani, Aug 14, 2023, 10:46 AM IST

Sanjeevini Supermarket: ಮಹಿಳೆಯರ”ಸಂಜೀವಿನಿ ಸೂಪರ್‌ ಮಾರ್ಕೆಟ್‌’

ಉಡುಪಿ: ಮಹಿಳಾ ಸಬಲೀಕರಣದ ಮೂಲಕ ಕುಟುಂಬದ ಆರ್ಥಿಕ ಬೆಳವಣಿಗೆ ಉದ್ದೇಶದಿಂದ ಜಾರಿಗೆ ತಂದಿರುವ
ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಅಭಿಯಾನ ಯೋಜನೆಯಡಿ ಜಿಲ್ಲೆಯ ಮಹಿಳೆಯರು ಆರ್ಥಿಕ ಲಾಭ ತರುವ ಹಲವು ಉದ್ಯಮಗಳಲ್ಲಿ ತೊಡಗಿಸಿಕೊಂಡಿದ್ದು, ಇದೇ ಮೊದಲ ಬಾರಿಗೆ ಎಲ್ಲ ಸೇವೆಗಳನ್ನು ಒದಗಿಸುವ ಸೂಪರ್‌ ಮಾರ್ಕೆಟ್‌ ಆರಂಭಿಸಲಾಗುತ್ತಿದೆ.

ಮಳಿಗೆಯನ್ನು ಉಡುಪಿ ತಾ. ಪಂ., ನಬಾರ್ಡ್‌ ಸಂಸ್ಥೆಯ ಸಹಯೋಗದಲ್ಲಿ ಚೇರ್ಕಾಡಿ ಗ್ರಾ.ಪಂ. ಪ್ರಗತಿ ಜಿಪಿಎಲ್‌ಎಫ್ ನ ಸಮೃದ್ಧಿ ಸಂಜೀವಿನಿ ಸ್ವಸಹಾಯ ಗುಂಪಿನ ಸದಸ್ಯರು ನಡೆಸಲಿದ್ದಾರೆ. ಜಿಲ್ಲೆಯ ವಿವಿಧ ಸಂಜೀವಿನಿ ಸಂಘದ ಸದಸ್ಯರು ಉತ್ಪಾದಿಸಿರುವ ವಸ್ತುಗಳನ್ನು ಈ ಕೇಂದ್ರದ ಮೂಲಕ ಮಾರಾಟ ಮಾಡಲಾಗುತ್ತದೆ. ಈ ಮಾರ್ಕೆಟ್‌ನಲ್ಲಿ ಸಂಜೀವಿನಿ ಮಹಿಳಾ ಸ್ವಸಹಾಯ ಸಂಘದ ಉತ್ತಮ ಗುಣಮಟ್ಟದ ಆಲಂಕಾರಿಕ, ಒಳಾಂಗಣ ಗಿಡಗಳು, ಯಕ್ಷಗಾನ ಮುಖವಾಡಗಳು, ಹ್ಯಾಂಡ್‌ ಮೇಡ್‌ ಬ್ಯಾಗ್‌ಗಳು, ಕ್ಯಾಂಡಲ್ಸ್‌, ಬಿದಿರಿನ ಬುಟ್ಟಿ, ಗ್ರೊ ಬ್ಯಾಗ್‌, ಕೀ ಚೈನ್‌, ವಾಲ್‌ಪೈಂಟಿಂಗ್ಸ್‌ ಲಭ್ಯವಿದೆ.

ಜಿಐ ಟ್ಯಾಗ್‌ ಹೊಂದಿರುವ ಕೈ ಮಗ್ಗದ ಸೀರೆಗಳು, ಮಣ್ಣಿನ ಮಡಕೆ ಇತ್ಯಾದಿ, ಡೋರ್‌ ಮ್ಯಾಟ್‌, ಜೇನುತುಪ್ಪ, ಕಜೆ ಅಕ್ಕಿ, ಸಾವಯವ ಬೆಲ್ಲ, ಫಿನಾಯಿಲ್‌, ಸೋಪ್‌ ಆಯಿಲ್‌, ಡಿಟರ್ಜೇಂಟ್‌, ದೇಸಿ ಗೋ ಉತ್ಪನ್ನಗಳು, ವಿವಿಧ ಬಗೆಯ ತಿಂಡಿ, ತಿನಿಸುಗಳು, ಪೂಜಾ ಸಾಮಗ್ರಿ ಸಹಿತ ಇತರ ಸಾವಯವ ಉತ್ಪನ್ನಗಳು ಲಭ್ಯವಿದೆ.

85 ಸಾವಿರಕ್ಕೂ ಅಧಿಕ ಸದಸ್ಯರು
ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಅಭಿಯಾನ ಯೋಜನೆಯಡಿ ಜಿಲ್ಲೆಯಲ್ಲಿ 155 ಗ್ರಾ. ಪಂ. ಮಟ್ಟದ ಒಕ್ಕೂಟಗಳ ಮೂಲಕ ಒಟ್ಟು 7,623 ಸ್ವ ಸಹಾಯ ಗುಂಪು ರಚಿಸಲಾಗಿದೆ. ಈ ಗುಂಪುಗಳಲ್ಲಿ 85,000 ಅಧಿಕ ಮಂದಿ ಸದಸ್ಯರಿದ್ದು, ಜಿಲ್ಲೆಯ ಗ್ರಾಮೀಣ ಭಾಗದ ಮಹಿಳೆಯರು ಸಮುದಾಯ ಬಂಡವಾಳ ನಿಧಿ ಪಡೆದು ಅನೇಕ ರೀತಿಯ ಜೀವನೋಪಾಯ ಚಟುವಟಿಕೆ ನಡೆಸುತ್ತಿದ್ದಾರೆ.

ಇಂದು ಉದ್ಘಾಟನೆ, ಆಹಾರೋತ್ಸವ
ಸಂಜೀವಿನಿ ಸೂಪರ್‌ ಮಾರ್ಕೆಟನ್ನು ಆ.14ರಂದು ಮಧ್ಯಾಹ್ನ 12.15ಕ್ಕೆ ಉಡುಪಿ ತಾ. ಪಂ. ಕಟ್ಟಡದಲ್ಲಿ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಉದ್ಘಾಟಿಸಲಿದ್ದಾರೆ. ಇದರೊಂದಿಗೆ  ಆ. 14ರಂದು ಆಹಾರೋತ್ಸವ ನಡೆಯಲಿದ್ದು ಆಷಾಢ ಮಾಸದ ಆಟಿ ತಿಂಡಿ ತಿನಿಸುಗಳು ದೊರಕಲಿವೆ.

ಹಲವು ಸೇವೆಗಳು ಲಭ್ಯ
ಈ ಸೂಪರ್‌ ಮಾರ್ಕೆಟ್‌ನಲ್ಲಿ ಸೇವಾ ಸಿಂಧು, ಪಾಸ್‌ ಪೋರ್ಟ್‌, ಪಾನ್‌ ಕಾರ್ಡ್‌, ಡ್ರೈವಿಂಗ್‌ ಲೈಸೆನ್ಸ್‌, ಕಾರ್ಮಿಕರ ನೋಂದಣಿ ಇತ್ಯಾದಿ ಆನ್‌ಲೈನ್‌ ಸೇವೆಗಳು, ಶಿಕ್ಷಣ, ಬ್ಯೂಟೀಶಿಯನ್‌, ಟೈಲರಿಂಗ್‌, ಎಂಬ್ರಾಯಿಡರಿ, ಕುಚ್ಚು ಮೆಹಂದಿ, ಚೆಂಡೆ, ಯಕ್ಷಗಾನ, ಕ್ಯಾಟರಿಂಗ್‌, ಕಾನೂನು ಮತ್ತು ಆಪ್ತ ಸಲಹೆ, ಪೋಟೋಗ್ರಫಿ ಮತ್ತು ವೀಡಿಯೋಗ್ರಫಿ, ಆರೋಗ್ಯ ಸಲಹೆ ಸೇವೆಗಳು ದೊರೆಯಲಿದೆ.

ಜಿಲ್ಲೆಯ ಸಂಜೀವಿನಿ ಸ್ವ ಸಹಾಯ ಸಂಘದ ಮಹಿಳೆಯರಿಗೆ ಜಿ. ಪಂ. ಮೂಲಕ ಸೊದ್ಯೋಗ ಆರಂಭಿಸಲು ಅಗತ್ಯವಿರುವ ತರಬೇತಿ ಮತ್ತು ಸಮುದಾಯ ಬಂಡವಾಳ ನೀಡಲಾಗುತ್ತಿದೆ. ಅವರು ತಯಾರಿಸುವ ಉತ್ಪನ್ನಗಳಿಗೆ ಸೂಕ್ತ ಮಾರುಕಟ್ಟೆ ದೊರೆತಲ್ಲಿ ಹೆಚ್ಚಿನ ಆರ್ಥಿಕ ಲಾಭ ಗಳಿಸಬಹುದಾಗಿದೆ. ಈ ನಿಟ್ಟಿನಲ್ಲಿ ಮಹಿಳೆಯರೇ ತಮ್ಮ ಉತ್ಪನ್ನಗಳ ಮಾರಾಟಕ್ಕೆ ಸೂಪರ್‌ ಮಾರ್ಕೆಟ್‌ ತೆರೆಯುತ್ತಿರುವುದು ಆರ್ಥಿಕ ಬೆಳವಣಿಗೆಗೆ ಸಹಕಾರಿಯಾಗಲಿದೆ.
ಪ್ರಸನ್ನ ಎಚ್‌., ಸಿಇಒ, ಉಡುಪಿ ಜಿ. ಪಂ.

ಟಾಪ್ ನ್ಯೂಸ್

1-qewqeqw

Tragedy; ಲಚ್ಯಾಣ ರಥೋತ್ಸವ ಗಾಯಾಳುವೂ ಸಾವು: ಮೃತರ ಸಂಖ್ಯೆ ಮೂರಕ್ಕೇರಿಕೆ

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

1-qeqwewqe

Hukkeri;ಧಾರ್ಮಿಕ ಕೇಂದ್ರದಲ್ಲಿ ಚುನಾವಣ ಪ್ರಚಾರ ಗಲಾಟೆ: ದೂರು ದಾಖಲು

1-qeqewewq

Vijayapura; 33 ಲಕ್ಷ ರೂ. ಮೌಲ್ಯದ ಮಾದಕ ವಸ್ತು, ವಾಹನ ವಶ : ದೆಹಲಿ ಮೂಲದ ವ್ಯಕ್ತಿ ಬಂಧನ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

1-qwqweqwe

Navalgund:ರಾಜಾಹುಲಿ ಭರ್ಜರಿ ರೋಡ್ ಶೋ: ಜೋಶಿ ಗೆಲುವು ನಿಶ್ಚಿತ ಎಂದ ಮಾಜಿ ಸಿಎಂ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qewqeqw

Tragedy; ಲಚ್ಯಾಣ ರಥೋತ್ಸವ ಗಾಯಾಳುವೂ ಸಾವು: ಮೃತರ ಸಂಖ್ಯೆ ಮೂರಕ್ಕೇರಿಕೆ

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

1-qeqwewqe

Hukkeri;ಧಾರ್ಮಿಕ ಕೇಂದ್ರದಲ್ಲಿ ಚುನಾವಣ ಪ್ರಚಾರ ಗಲಾಟೆ: ದೂರು ದಾಖಲು

police

Bidar; ಹಣ ಹಂಚುವ ದೂರು: ನಾಗಮಾರಪಳ್ಳಿ‌ ಮನೆಯಲ್ಲಿ ಪರಿಶೀಲನೆ

1-qeqewewq

Vijayapura; 33 ಲಕ್ಷ ರೂ. ಮೌಲ್ಯದ ಮಾದಕ ವಸ್ತು, ವಾಹನ ವಶ : ದೆಹಲಿ ಮೂಲದ ವ್ಯಕ್ತಿ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.