ರಾ.ಹೆ. 66ರ ಅಪಾಯಕಾರಿ ಸ್ಥಳಗಳ ಗುರುತು: ಎಸ್ಪಿ

ಪೊಲೀಸ್‌ ಫೋನ್‌-ಇನ್‌ ಕಾರ್ಯಕ್ರಮ

Team Udayavani, Jun 15, 2019, 5:34 AM IST

140619ASTRO04

ಉಡುಪಿ: ಜಿಲ್ಲಾಡಳಿತ ಸೂಚನೆಯ ಮೇರೆಗೆ ರಾ.ಹೆ. ಪ್ರಾಧಿಕಾರ, ಪೊಲೀಸ್‌, ಪಿಡಬ್ಲ್ಯುಡಿ ಅಧಿಕಾರಿಗಳು ವಿಶೇಷ ತಂಡ ರಚಿಸಿ ರಾ.ಹೆ. 66ರಲ್ಲಿ ಅಪಘಾತ ಸಂಭವಿಸುವ ಬ್ಲ್ಯಾಕ್‌ಸ್ಪಾಟ್‌ಗಳನ್ನು ಗುರುತಿಸಲಾಗಿದೆ. ಈ ಪ್ರದೇಶದಲ್ಲಿ ಅಪಘಾತಗಳನ್ನು ಕಡಿಮೆ ಮಾಡುವ ನಿಟ್ಟಿನಲ್ಲಿ ತೆಗೆದುಕೊಳ್ಳಬಹುದಾದ ಕ್ರಮಗಳ ಕುರಿತು ಆರ್‌ಟಿಒ ಹಾಗೂ ರಾ.ಹೆ. ಪ್ರಾಧಿ ಕಾರಕ್ಕೆ ವರದಿಯನ್ನು ಸಲ್ಲಿಸಲಾಗುತ್ತದೆ ಎಂದು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ನಿಶಾ ಜೇಮ್ಸ್‌ ತಿಳಿಸಿದ್ದಾರೆ.

ಶುಕ್ರವಾರ ನಡೆದ ಪೊಲೀಸ್‌ ಫೋನ್‌-ಇನ್‌ ಕಾರ್ಯಕ್ರಮದಲ್ಲಿ ಅವರು ನಾಗರಿಕರ ಪ್ರಶ್ನೆಗಳಿಗೆ ಉತ್ತರಿಸುತ್ತ ಈ ಮಾಹಿತಿ ನೀಡಿದರು. ಮಳೆ ಹಿನ್ನೆಲೆಯಲ್ಲಿ ರಾ.ಹೆ. 66ರ ಕುರಿತು ಸಾಕಷ್ಟು ದೂರುಗಳು ಕೇಳಿ ಬರುತ್ತಿವೆ. ಈ ನಿಟ್ಟಿನಲ್ಲಿ ಕಾಮಗಾರಿ ನಡೆಸುತ್ತಿರುವ ಎಂಜಿನಿಯರ್‌ ಜತೆ ಎರಡು ದಿನಗಳ ಕಾಲ ರಸ್ತೆ ಸುರಕ್ಷಾ ಪರಿಶೋಧನೆ ನಡೆಸಲಾಗಿದೆ. ಕೆಟ್ಟು ನಿಂತಿರುವ ಬೀದಿದೀಪ, ಏಕಮುಖ ರಸ್ತೆ ಸಂಚಾರ, ಗುಂಡಿಗಳು, ನೀರು ನಿಲ್ಲುವ ಪ್ರದೇಶಗಳನ್ನು ಗುರುತಿಸಿ ಕ್ರಮ ಕೈಗೊಳ್ಳುವಂತೆ ಆದೇಶ ನೀಡಲಾಗಿದೆ ಎಂದರು.

ಪೊಲೀಸ್‌ ವಿರುದ್ಧ ದೂರು
ಪಾಸ್‌ಪೋಟ್ ವಿಚಾರಣೆಗೆ ತೆರಳಿದ71 ವರ್ಷದ ಹಿರಿಯ ನಾಗರಿಕರೊಬ್ಬ ರಿಗೆ ಉಡುಪಿ ನಗರ ಠಾಣಾ ಸಿಬಂದಿ ಗಳು ಗೌರವ ನೀಡದೆ ಅಸಭ್ಯವಾಗಿ ನಡೆಸಿಕೊಂಡಿರುವ ಕುರಿತು ಸ್ಥಳೀಯರೊಬ್ಬರು ದೂರು ನೀಡಿದರು.

ಪೊಲೀಸರಿಗೆ ‘ಸೌಜನ್ಯ’ ತರಬೇತಿ
ಪೊಲೀಸ್‌ ಸಿಬಂದಿಗಳು ಸಾರ್ವ ಜನಿಕರೊಂದಿಗೆ ಅನುಚಿತವಾಗಿ ವರ್ತಿಸುವಂತಿಲ್ಲ.

ಠಾಣೆಯಲ್ಲಿ ಸಿಸಿ ಕೆಮರಾ ಆಳವಡಿಸಲಾಗಿದೆ. ಅದನ್ನು ಪರಿಶೀಲನೆ ನಡೆಸಿ ತನಿಖೆ ಮಾಡಲಾಗುತ್ತದೆ. ಪೊಲೀಸರು ಹೇಗೆ ಕೆಲಸ ಮಾಡಬೇಕು ಎನ್ನುವ ಸೂಕ್ಷ್ಮತೆಯನ್ನು ಕಳೆದುಕೊಂಡಿದ್ದಾರೆ. ಈ ನಿಟ್ಟಿನಲ್ಲಿ ಅವರಿಗೆ ಸಾರ್ವಜನಿಕರೊಂದಿಗೆ ಸೌಜನ್ಯಯುತವಾಗಿ ವರ್ತಿಸುವಂತೆ ತರಬೇತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗುತ್ತದೆ ಎಂದು ಎಸ್ಪಿ ತಿಳಿಸಿದ್ದಾರೆ.

ಸುರಕ್ಷಾ ನಿಯಮ ಪಾಲಿಸಿ
ಪರ್ಕಳದಲ್ಲಿ ವಿದ್ಯಾರ್ಥಿಗಳನ್ನು ಶಾಲೆಗೆ ಕರೆದೊಯ್ಯುವ ವಾಹನ ಚಾಲಕರು ಮಕ್ಕಳನ್ನು ವಾಹನದಲ್ಲಿ ಕುರಿಗಳಂತೆ ತುಂಬಿಸಿಕೊಂಡು ಕರೆದೊಯ್ಯುತ್ತಿದ್ದಾರೆಂದು ಸಾರ್ವಜನಿಕರೊಬ್ಬರು ದೂರು ನೀಡಿದರು. ವಾಹನಗಳಲ್ಲಿ ನಿಯಮ ಮೀರಿ ಮಕ್ಕಳನ್ನು ತುಂಬಿಸುವಂತಿಲ್ಲ. ಶಾಲಾ ವಾಹನ ಚಾಲಕರು ಕಡ್ಡಾಯವಾಗಿ ಸುರಕ್ಷಾ ನಿಯಮವನ್ನು ಪಾಲಿಸಬೇಕು. ನಿಯಮ ಉಲ್ಲಂಘಿಸಿದವರ ವಿರುದ್ಧ ಕ್ರಮಕೈಗೊಳ್ಳಲಾಗುತ್ತದೆ ಎಂದು ಎಸ್ಪಿ ಎಚ್ಚರಿಕೆ ನೀಡಿದರು.

ಪುಂಡರಿಂದ ಕಾಟ
ನಗರದ ಶಾಲೆ ಬಿಡುವ ಸಮಯಕ್ಕೆ ಬೈಕ್‌ನಲ್ಲಿ ಬರುವ ಪುಂಡರು ವಿದ್ಯಾರ್ಥಿನಿಯರಿಗೆ ತೊಂದರೆ ನೀಡುತ್ತಿದ್ದಾರೆ. ಇದರಿಂದಾಗಿ ಶಾಲೆ ಹೊರ ವಲಯದಲ್ಲಿ ವಿದ್ಯಾರ್ಥಿನಿಯರು ಓಡಾಡಲು ಭಯದ ಪಡುತ್ತಿರುವ ನಾಗರಿಕರೊಬ್ಬರು ಕರೆ ಮಾಡಿ ದೂರು ನೀಡಿದರು.

ಮಹಿಳೆಯರ ಸುರಕ್ಷತೆಗಾಗಿ ಜಿಲ್ಲೆಯಲ್ಲಿ ರಾಣಿ ಅಬ್ಬಕ್ಕ ಪಡೆ ಕಾರ್ಯಚರಿಸುತ್ತಿದೆ. ಈ ಬಗ್ಗೆ ರಾಣಿ ಅಬ್ಬಕ್ಕ ಪಡೆಯ ಮಾಹಿತಿ ನೀಡಲಾಗುತ್ತದೆ. ವಿದ್ಯಾರ್ಥಿನಿಯರಿಗೆ ತೊಂದರೆ ನೀಡುವವರ ವಿರುದ್ಧ ಸೂಕ್ತ ಕ್ರಮಕೈಗೊಳ್ಳಲಾಗುತ್ತದೆ ಎಂದರು.

ಜಾಹೀರಾತು ಫ‌ಲಕದಿಂದ ಸಂಚಾರಕ್ಕೆ ತೊಂದರೆ
ಕಿನ್ನಿಮೂಲ್ಕಿ ಸ್ವಾಗತ ಗೋಪುರ ಪಕ್ಕದಲ್ಲಿ ದೊಡ್ಡ ದೊಡ್ಡ ಜಾಹೀರಾತು ಫ್ಲೆಕ್ಸ್‌ಗಳನ್ನು ಆಳವಡಿಸಲಾಗಿದೆ. ಇದರಿಂದಾಗಿ ಮುಂಭಾಗದಲ್ಲಿ ಏನಿದೆ ಎನ್ನುವುದು ವಾಹನ ಸವಾರರಿಗೆ ಕಾಣುತ್ತಿಲ್ಲ. ಈ ಮಾರ್ಗದಲ್ಲಿ ಬಳಿ ಪಾದಾಚಾರಿ ಕ್ರಾಸಿಂಗ್‌ ಸಮಸ್ಯೆ ಕುರಿತು ಸಾರ್ವಜನಿಕರೊಬ್ಬರು ದೂರು ನೀಡಿದರು.

ನಗರಸಭೆ ಅಧಿಕಾರಿಗಳಿಗೆ ಫ್ಲೇಕ್ಸ್‌ ತೆರವು ಮಾಡುವಂತೆ ಮಾಹಿತಿ ನೀಡಲಾಗುತ್ತದೆ. ಪಾದಚಾರಿ ಕ್ರಾಸಿಂಗ್‌ ವ್ಯವಸ್ಥೆ ನಿಗದಿ ಪ್ರದೇಶವನ್ನು ಗುರುತಿಸುವುದಾಗಿ ಎಸ್ಪಿ ತಿಳಿಸಿದರು.

ಸಾರ್ವಜನಿಕರಿಗೆ ತೊಂದರೆ
ಕಾರ್ಕಳದ ನಗರ ಬಸ್‌ ನಿಲ್ದಾಣದ ಸಮಿಪದ ಮಾರಿಗುಡಿ ದೇವಸ್ಥಾನದ ಬಳಿ ಬಸ್‌ ನಿಲ್ದಾಣದಲ್ಲಿ ಬೆಳಗ್ಗೆ ಕೂಲಿ ಕಾರ್ಮಿಕರು ಕಿಕ್ಕಿರಿದು ತುಂಬಿರುವುದರಿಂದ ಸಾರ್ವಜನಿಕರಿಗೆ ನಡೆದಾಡಲು ತೊಂದರೆಯಾಗುತ್ತಿರುವ ಕುರಿತು ಸಾರ್ವಜನಿಕರೊಬ್ಬರು ದೂರು ನೀಡಿದರು. ಈ ಕುರಿತು ಪೊಲೀಸ್‌ ಅಧಿಕಾರಿಗಳ ನೇತೃತ್ವದಲ್ಲಿ ಮಾತುಕತೆ ನಡೆಸಿ ಸಮಸ್ಯೆ ಪರಿಹಾರ ಕಂಡುಕೊಳ್ಳುವಂತೆ ಸಿಬಂದಿಗಳಿಗೆ ತಿಳಿಸಿದರು.

ಕಲ್ಸಂಕ ಸೇತುವೆ ಬಳಿ ಪಾದಚಾರಿಗಳಿಗೆ ಅನುಕೂಲವಾಗುವಂತೆ ಕ್ರಾಸಿಂಗ್‌ ವ್ಯವಸ್ಥೆ ಕಲ್ಪಿಸಬೇಕು. ಹೆಬ್ರಿ ಪ್ರಥಮ ದರ್ಜೆ ಕಾಲೇಜಿನ ಆವರಣದಲ್ಲಿ ತಾಲೂಕು ಮಿನಿವಿಧಾನಸೌಧ ನಿರ್ಮಾಣವಾದರೆ ವಿದ್ಯಾರ್ಥಿಗಳಿಗೆ ಆಟದ ಮೈದಾನ ಕೊರತೆ ಆಗುತ್ತದೆ. ಪರ್ಕಳದ ಸಂತೆ ಮಾರುಕಟ್ಟೆಯಲ್ಲಿ ಸರಣಿ ಮೊಬೈಲ್ ಕಳ್ಳತನ, ಗಂಗೊಳ್ಳಿಯಲ್ಲಿ ಮಟ್ಕಾ ಹಾಗೂ ಇಸ್ಪೀಟ್, ಅಕ್ರಮ ಮರಳುಗಾರಿಕೆ, ಕುಂದಾಪುರದ ಕಂಡ್ಲೂರಿನ ಗೂಡು ಅಂಗಡಿಗಳಲ್ಲಿ ಅಕ್ರಮ ಮದ್ಯ ಮಾರಾಟ, ಉಡುಪಿ ನಗರದಲ್ಲಿ ದ್ವಿಚಕ್ರ ವಾಹನಗಳಲ್ಲಿ ಹೈಮಾಸ್ಟ್‌ ಬಳಕೆೆ. ಕೆ.ಎಸ್‌.ಆರ್‌.ಟಿ.ಸಿ. ಬಸ್‌ ನಿಲ್ದಾಣದಲ್ಲಿ ಖಾಸಗಿ ವಾಹನ್‌ ಪಾರ್ಕಿಂಗ್‌ ಸಮಸ್ಯೆ. ಉಡುಪಿ ನಾರ್ತ್‌ ಶಾಲೆಯ ಬಳಿ ಅನಧಿಕೃತ ಬೋರ್ಡ್‌ ಆಳವಡಿಕೆ ಸಂಚಾರಕ್ಕೆ ಅಡ್ಡಿ, ಗೋವಿಂದ ಕಲ್ಯಾಣಮಂಟಪದಲ್ಲಿ ಸಮೀಪದ ರಸ್ತೆಯಲ್ಲಿ ಗುಂಡಿ, ಕೊಲ್ಲೂರು ದೇವಸ್ಥಾನಕ್ಕೆ ಹೋಗುವ ರಸ್ತೆಯಲ್ಲಿಯೇ ವಾಹನ ಪಾರ್ಕಿಂಗ್‌, ಕಟಪಾಡಿ ಪೇಟೆಯಲ್ಲಿ ವರ್ತಕ ಸಂಘದ ಮುಖ್ಯಸ್ಥರು ಆಟೋ ಚಾಲಕರಿಗೆ ಕಿರುಕುಳ, ಬ್ರಹ್ಮಗಿರಿ ರಸ್ತೆಯಲ್ಲಿ ಹಂಪ್‌ಗೆ ಬಿಳಿ ಬಣ್ಣ ಹಾಕದೆ ಇರುವುದರಿಂದ ಅಪಘಾತಗಳ ಸಂಖ್ಯೆ ಹೆಚ್ಚುತ್ತಿರುವುದು ಸೇರಿದಂತೆ ಫೋನ್‌ಇನ್‌ ಕಾರ್ಯಕ್ರಮದಲ್ಲಿ ಒಟ್ಟು 17 ದೂರು ಕರೆಗಳು ಬಂದಿದ್ದವು.

ಫೋನ್‌ ಇನ್‌: 17 ದೂರುಗಳು

ಟಾಪ್ ನ್ಯೂಸ್

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Kapu Assembly constituency: ನಕಲಿ ಮತದಾನ;ಆರೋಪ

Kapu Assembly constituency: ನಕಲಿ ಮತದಾನ;ಆರೋಪ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

3-uv-fusion

Devotion: ಭಕ್ತಿಯ ಅರ್ಥವಾದರೂ ಏನು?

Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ

Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.