ಹೊಗೆ ಮುಕ್ತ ಹಾದಿಯಲ್ಲಿ ಉಡುಪಿ ಜಿಲ್ಲೆ

ಉಜ್ವಲ, ಅನಿಲಭಾಗ್ಯ ಯೋಜನೆ: 29,275 ಅನಿಲ ಸಂಪರ್ಕ ವಿತರಣೆ

Team Udayavani, Jan 23, 2020, 5:35 AM IST

UJWALA-YOJANA

ಉಡುಪಿ: ಸುಸ್ಥಿರ ಅಭಿವೃದ್ಧಿ, ಜನರ ಆರೋಗ್ಯ ದೃಷ್ಟಿಯಿಂದ ಜಾರಿಗೆ ತಂದಿರುವ ಉಜ್ವಲ ಹಾಗೂ ಅನಿಲ ಭಾಗ್ಯ ಯೋಜನೆಯನ್ನು ಸಮರ್ಪಕವಾಗಿ ಬಳಸಿಕೊಳ್ಳುವಲ್ಲಿ ಉಡುಪಿ ಜಿಲ್ಲೆ ಯಶಸ್ವಿಯಾಗಿದೆ.

ಕೇಂದ್ರದ ಉಜ್ವಲ್‌ ಯೋಜನೆ ಹಾಗೂ ರಾಜ್ಯದ‌ ಅನಿಲ ಭಾಗ್ಯ ಯೋಜನೆಯಡಿ ಜಿಲ್ಲೆಯಲ್ಲಿ ಇದುವರೆಗೆ 29,274 ಕುಟುಂಬಗಳಿಗೆ ಉಚಿತ ಎಲ್‌ಪಿಜಿ ಸಂಪರ್ಕ ನೀಡಲಾಗಿದೆ. ಈ ಮೂಲಕ ಶೇ.95.ರಷ್ಟು ಗುರಿ ಸಾಧಿಸಿದೆ.

ನಾಲ್ಕು ವರ್ಷಗಳಿಂದ ಅಭಿಯಾನ
ಉಜ್ವಲ ಯೋಜನೆಯಡಿ ಫ‌ಲಾನುಭವಿಗಳನ್ನು ಗುರುತಿಸುವ ಕೆಲಸ ಹಿಂದಿನ ನಾಲ್ಕು ವರ್ಷಗಳಲ್ಲಿ ನಡೆದಿತ್ತು. ಕುಟುಂಬ ಸದಸ್ಯರಿಂದ‌ ಅರ್ಜಿ ಆಹ್ವಾನಿಸಿ ಫ‌ಲಾನುಭವಿಗಳನ್ನು ಗುರುತಿಸುವ ಕೆಲಸ ನಡೆದಿತ್ತು. ಅರ್ಜಿ ಸಲ್ಲಿಸಿದ ಬಡ ಕುಟುಂಬಗಳ ಆರ್ಹ ಫ‌ಲಾನುಭವಿಗಳಿಗೆ ಗ್ಯಾಸ್‌ ವಿತರಣೆ ಪೂರ್ಣಗೊಂಡಿದೆ. ದಾಖಲೆಗಳಿಲ್ಲದೆ ಅಸಮರ್ಪಕವಾಗಿರುವ ಕೆಲ ಅರ್ಜಿದಾರರಿಗೆ ವಿತರಣೆಗೆ ಬಾಕಿ ಇದೆ. ಸದ್ಯ ವಿತರಣೆ ಸ್ಥಗಿತಗೊಳಿಸಲಾಗಿದೆ ಎಂದು ಆಹಾರ ನಾಗರಿಕ ಇಲಾಖೆಯಿಂದ ನೇಮಕಗೊಂಡ ನೋಡಲ್‌ ಅಧಿಕಾರಿಗಳು ತಿಳಿಸಿದ್ದಾರೆ.

ಯೋಜನೆ ಸಮರ್ಪಕ ಬಳಕೆ
ಬಡ ಕುಟುಂಬಗಳಿಗೆ ಅನುಕೂಲವಾಗುವ ದೃಷ್ಟಿಯಿಂದ ಕೇಂದ್ರ ಸರಕಾರ ಉಜ್ವಲ ಯೋಜನೆಯನ್ನು 2016ರಲ್ಲಿ ಜಾರಿಗೆ ತಂದಿತ್ತು. 2017ರ ಸೆಪ್ಟಂಬರ್‌ನಲ್ಲಿ ರಾಜ್ಯ ಸರಕಾರ ಅನಿಲಭಾಗ್ಯ ಯೋಜನೆಯನ್ನು ಜಾರಿಗೆ ತಂದಿತ್ತು. ಎರಡು ಯೋಜನೆಗಳನ್ನು ಸಾರ್ವಜನಿಕರು ಸದುಪಯೋಗಪಡಿಸಿಕೊಂಡಿದ್ದಾರೆ.

3 ಪೆಟ್ರೋಲಿಯಂ ಸಂಸ್ಥೆಗಳಿಂದ ವಿತರಣೆ
ಉಜ್ವಲ ಯೋಜನೆಯಲ್ಲಿ ಹಿಂದೂಸ್ತಾನ್‌ ಪೆಟ್ರೋಲಿಯಂ, ಭಾರತ್‌ ಪೆಟ್ರೋಲಿಯಂ, ಇಂಡಿಯನ್‌ ಆಯಿಲ್‌ ಸಂಸ್ಥೆಗಳ ಮೂಲಕ ಸಂಪರ್ಕವನ್ನು ಬಿಪಿಎಲ್‌ ಕಾರ್ಡ್‌ಗಳನ್ನು ಹೊಂದಿದ ಬಡತನ ರೇಖೆಗಿಂತ ಕೆಳಗಿನ ಫ‌ಲಾನುಭವಿಗಳಿಗೆ ವಿತರಿಸಲಾಗಿದೆ.

ಬಹುತೇಕ ವಿತರಣೆ ಪೂರ್ಣ
2019ರ ಜನವರಿ ವರೆಗೆ ಅರ್ಜಿ ಸಲ್ಲಿಸಿದವರೆಲ್ಲರಿಗೆ ಎರಡು ಯೋಜನೆಯ ಒಂದರಲ್ಲಿ ಸಂಪರ್ಕ ನೀಡಿದ್ದೇವೆ.ನಮ್ಮ ಪ್ರಕಾರ ವಿತರಣೆ ಪ್ರಕ್ರಿಯೆ ಒಂದು ಹಂತದಲ್ಲಿ ಪೂರ್ಣ ಕಂಡಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಸಂಪರ್ಕ ಜತೆ ಜೀವವಿಮೆ
ಉಜ್ವಲ ಯೋಜನೆಯಲ್ಲಿ ಗ್ಯಾಸ್‌ ಜತೆಗೆ ಸುರಕ್ಷತೆಗಾಗಿ ರೂ. 6 ಲಕ್ಷ ಮೌಲ್ಯದ ಜೀವವಿಮೆಯನ್ನು ನೀಡಲಾಗಿದೆ, ಸೌದೆ ಒಲೆಯಿಂದ ಉಂಟಾಗುವ ಹೊಗೆಯಿಂದ ಬಡ ಮಹಿಳೆಯರ ಆರೋಗ್ಯದ ಮೇಲೆ ಗಂಭೀರ ಪರಿಣಾಮ ಬೀರುತ್ತದೆ, ಈ ಉದ್ದೇಶದಿಂದ ಬಡವರಿಗಾಗಿ ಕೇಂದ್ರ ಸರಕಾರ ತಂದ ಮಹತ್ವಕಾಂಕ್ಷೆಯ ಯೋಜನೆ ಇದಾಗಿದೆ.

ಉಜ್ವಲ್‌, ಅನಿಲ ಭಾಗ್ಯ ಯೋಜನೆಗಳು ಉಡುಪಿ ಜಿಲ್ಲೆಯಲ್ಲಿ ಯಶಸ್ವಿಯಾಗಿದ್ದು ಶೇ.95ರಷ್ಟು ಗುರಿ ಸಾಧಿಸಿದೆ. ಇದರಿಂದ ಅಡುಗೆಗೆ ಉರುವಲು ಬಳಸುವ, ಹೊಗೆ ವಾತಾವರಣದಲ್ಲಿ ಮಹಿಳೆಯರು ಇರಬೇಕಾದ ಪರಿಸ್ಥಿತಿಯೂ ಇಲ್ಲವಾಗಿದೆ.

ಸೂಕ್ತ ದಾಖಲೆ ಸಲ್ಲಿಸಿದವರಿಗೆ ಸಂಪರ್ಕ
ಯೋಜನೆಯಲ್ಲಿ ಅರ್ಜಿ ನೋಂದಾಯಿಸಿ ಸೌಲಭ್ಯ ಪಡೆಯಲು ಫ‌ಲಾನುಭವಿಗಳು ಬಿಪಿಎಲ್‌ ಪ್ರಮಾಣ ಪತ್ರ, ಬಿಪಿಎಲ್‌ ಪಡಿತರ ಚೀಟಿ, ಆಧಾರ್‌ ಕಾರ್ಡ್‌, ಚುನಾವಣೆ ಚೀಟಿ, ಡ್ರೈವಿಂಗ್‌ ಚಾಲನೆ ಪರವಾನಿಗೆ, ಭಾವಚಿತ್ರಗಳೊಂದಿಗೆ ವಿತರಣೆ ಕೇಂದ್ರಗಳಿಗೆ ತೆರಳಿ ನಿಗದಿತ ಅರ್ಜಿ ಸಮೂನೆಯಲ್ಲಿ ಭರ್ತಿಗೊಳಿಸಿ ನೀಡಿದ್ದರು. ಬಳಿಕ ದಾಖಲೆ ಪರಿಶೀಲನೆ ನಡೆದು ಸಮರ್ಪಕವಿದ್ದ‌ ಅರ್ಜಿದಾರರಿಗೆ ಗ್ಯಾಸ್‌ ಸಂಪರ್ಕ ದೊರಕಿದೆ.

ಯೋಜನೆ
ಹೊಗೆ ಮುಕ್ತ ಅಡುಗೆ ಮನೆ ದೃಷ್ಟಿಯಿಂದ ಜಾರಿಗೆ ತಂದ ಈ ಯೋಜನೆಯನ್ನು ಜನರೂ ಮುಕ್ತವಾಗಿ ಸ್ವೀಕರಿಸಿದ್ದಾರೆ.

ಬಡ ಮಹಿಳೆಯರಲ್ಲಿ ಸುಧಾರಣೆ
ಉಜ್ವಲ ಯೋಜನೆಯ ಪ್ರಯೋಜವನ್ನು ಅನೇಕ ಬಡ ಕುಟುಂಬಗಳು ಪಡಕೊಂಡಿವೆ. ಒಲೆಯ ಮುಂದೆ ಕುಳಿತು ಹೊಗೆಯಿಂದ ಕಷ್ಟಪಡುತ್ತಿದ್ದ ಬಡ ಮಹಿಳೆಯರು ಅದರಿಂದ ಹೊರಬಂದಿದ್ದಾರೆ. ಗ್ರಾಮೀಣ ಮಹಿಳೆಯರ ಜೀವನ ಸುಧಾರಿಸಿದೆ. ದಾಖಲೆಗಳ ವ್ಯತ್ಯಾಸಗಳಿಂದ ಕೆಲವರಿಗೆ ಸಂಪರ್ಕ ಕೈ ತಪ್ಪಿದೆ. ಮುಂದಿನ ದಿನಗಳಲ್ಲಿ ಅದನ್ನು ಸರಿಪಡಿಸಿಕೊಂಡು ಅವರನ್ನು ಸೇರಿಸಿ ವಿತರಿಸುತ್ತೇವೆ.
-ರಘುಪತಿ ಭಟ್‌, ಶಾಸಕರು, ಉಡುಪಿ.

ನಿರೀಕ್ಷಿತ ಗುರಿ ತಲುಪಿದ್ದೇವೆ
ಉಜ್ವಲ ಯೋಜನೆಯಲ್ಲಿ ಅರ್ಜಿ ಸಲ್ಲಿಸಿದ ಎಲ್ಲ ಅರ್ಹರಿಗೆ ಗ್ಯಾಸ್‌ ಸಂಪರ್ಕ ನೀಡಿದ್ದೇವೆ. ದಾಖಲೆಗಳು ಸರಿ ಇಲ್ಲದೆ ಇರುವವರಿಗೆ ತಾಂತ್ರಿಕ ತೊಂದರೆಗಳಿಂದ ವಿತರಿಸಲು ಸಾಧ್ಯವಾಗಿಲ್ಲ. ಜಿಲ್ಲೆಯಲ್ಲಿ ನಿರೀಕ್ಷಿತ ಗುರಿ ಸಾಧಿಸಿದ ವಿಶ್ವಾಸವಿದೆ.
-ಶ್ರೀನಿವಾಸ, ಜಿಲ್ಲಾ ಮಟ್ಟದ
ನೋಡೆಲ್‌ ಅಧಿಕಾರಿ, ಉಜ್ವಲ ಯೋಜನೆ.

ಗ್ಯಾಸ್‌ ಬಳಸುತ್ತಿದ್ದೇನೆ
ಸೌದೆ ಬಳಸಿ ಅಡುಗೆ ತಯಾರಿಸುತ್ತಿದ್ದೆವು. ಸರಕಾರದಿಂದ ಇಂತಹದ್ದೊಂದು ಯೋಜನೆ ಇದೆ ಎಂದು ಸಂಬಂದಿಕರೊಬ್ಬರಿಂದ ತಿಳಿಯಿತು. ಅವರ ಸಲಹೆ ಪಡೆದು ಅರ್ಜಿ ಸಲ್ಲಿಸಿದೆ. ಸಂಪರ್ಕ ಲಭಿಸಿತು. ಈಗ ಗ್ಯಾಸ್‌ ಬಳಸಿ ಅಡುಗೆ ಸಿದ್ಧಪಡಿಸುತ್ತಿದ್ದೇನೆ.
– ಶಾರದೇಶ್ವರಿ ಕಡಿಯಾಳಿ, ಗೃಹಿಣಿ

-ಬಾಲಕೃಷ್ಣ ಭೀಮಗುಳಿ

ಟಾಪ್ ನ್ಯೂಸ್

ಹಳದಿ ಶಾಸ್ತ್ರದ ವೇಳೆ ವರನಿಗೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿಯಲ್ಲಿ ಕೊನೆಯುಸಿರು

ಹಳದಿ ಶಾಸ್ತ್ರದ ವೇಳೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿ ಮಧ್ಯೆ ಕೊನೆಯುಸಿರೆಳೆದ ವರ

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Rahul Gandhi 3

U-turn ಹೊಡೆದ ರಾಹುಲ್: ಸಂಪತ್ತು ಹಂಚಿಕೆ ಬಗ್ಗೆ ಹೇಳಿಲ್ಲ,ಅನ್ಯಾಯ…

ತಂಗಿ ಮದುವೆಗೆ ಟಿವಿ ಗಿಫ್ಟ್‌ ಕೊಟ್ಟದ್ದಕ್ಕೆ ಅಸಮಾಧಾನ: ಪತಿಯನ್ನು ಥಳಿಸಿ ಕೊಲ್ಲಿಸಿದ ಪತ್ನಿ

ತಂಗಿ ಮದುವೆಗೆ ಟಿವಿ ಗಿಫ್ಟ್‌ ಕೊಟ್ಟದ್ದಕ್ಕೆ ಅಸಮಾಧಾನ: ಪತಿಯನ್ನು ಥಳಿಸಿ ಕೊಲ್ಲಿಸಿದ ಪತ್ನಿ

15

ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ

Bommai BJP

Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ: 405 ಸೂಕ್ಷ್ಮ ಮತಗಟ್ಟೆ : ಕೆ. ವಿದ್ಯಾಕುಮಾರಿ

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ: 405 ಸೂಕ್ಷ್ಮ ಮತಗಟ್ಟೆ : ಕೆ. ವಿದ್ಯಾಕುಮಾರಿ

Lok Sabha Election ; ಪ್ರಚಾರ ಜೋರು, ಚರ್ಚಾ ವಿಷಯ ಮೂರು!

Lok Sabha Election ; ಪ್ರಚಾರ ಜೋರು, ಚರ್ಚಾ ವಿಷಯ ಮೂರು!

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

12

Theft; ಕೊಲ್ಲೂರು: ಮಹಿಳೆಯ ಚಿನ್ನ, ನಗದು ಕಳವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

7-uv-fsuion

Yugadi: ಯುಗ ಯುಗಾದಿ ಕಳೆದರೂ ಯುಗಾದಿ ಮರಳಿ ಬರುತಿದೆ

6-uv-fusion

UV Fusion: ಯುಗಾದಿ ಸಂಭ್ರಮೋತ್ಸವ

ಹಳದಿ ಶಾಸ್ತ್ರದ ವೇಳೆ ವರನಿಗೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿಯಲ್ಲಿ ಕೊನೆಯುಸಿರು

ಹಳದಿ ಶಾಸ್ತ್ರದ ವೇಳೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿ ಮಧ್ಯೆ ಕೊನೆಯುಸಿರೆಳೆದ ವರ

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

5-uv-fusion

Yugadi: ವರುಷದ ಆದಿ ಯುಗಾದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.