ವಸುಂಧರಾ ರಾಜೇ ಕೊಲ್ಲೂರಿಗೆ ಭೇಟಿ

Team Udayavani, Nov 21, 2017, 8:02 AM IST

21-6.jpg

ಕೊಲ್ಲೂರು: ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಿ ದರ್ಶನಕ್ಕೆ ರಾಜಸ್ಥಾನದ ಮುಖ್ಯಮಂತ್ರಿ ವಸುಂಧರಾ ರಾಜೇ ಅವರು ಸೋಮವಾರ ಆಗಮಿಸಿದರು. ಈ ಸಂದರ್ಭ ಅವರು ಪುತ್ರನ ವಿಚಾರವಾಗಿ ಹೊತ್ತಿದ್ದ ಹರಕೆಯನ್ನು ಪೂರೈಸಿದರು. ಮಂಗಳೂರಿಂದ ಹೆಲಿಕಾಪ್ಟರ್‌ ಮೂಲಕ ಆಗಮಿಸಿದ್ದ ರಾಜೇ ಅವರೊಂದಿಗೆ ಸಂಸದ, ಪುತ್ರ ದುಷ್ಯಂತ ಸಿಂಗ್‌ ಅವರೂ ಇದ್ದರು.

ದೇಗುಲದಲ್ಲಿ ಕುಂಕುಮಾರ್ಚನೆಯಲ್ಲಿ ಪಾಲ್ಗೊಂಡ ಅವರು ಬಳಿಕ ಸನ್ನಿಧಿಯಲ್ಲಿ ಧ್ಯಾನಮಗ್ನರಾದರು. ಭೇಟಿ ಸಂದರ್ಭದಲ್ಲಿ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಹರೀಶ್‌ ಕುಮಾರ್‌ ಶೆಟ್ಟಿ , ಉಪಕಮಿಷನರ್‌ ಶಿಲ್ಪಾ ನಾಗ್‌, ಕೊಲ್ಲೂರು ದೇಗುಲದ ಕಾರ್ಯನಿರ್ವಹಣಾಧಿಕಾರಿ ಜನಾರ್ದನ್‌, ಉಪ ಕಾರ್ಯ ನಿರ್ವಹಣಾಧಿಕಾರಿ ಕೃಷ್ಣಮೂರ್ತಿ, ಮಾಜಿ ಆಡಳಿತ ಧರ್ಮದರ್ಶಿ ಬಿ.ಎಂ. ಸುಕುಮಾರ ಶೆಟ್ಟಿ, ಸಮಿತಿಯ ಸದಸ್ಯರಾದ ರಮೇಶ್‌ ಗಾಣಿಗ ಕೊಲ್ಲೂರು, ವಂಡಬಳ್ಳಿ ಜಯರಾಮ ಶೆಟ್ಟಿ, ನರಸಿಂಹ ಹಳಗೇರಿ, ಅಂಬಿಕಾ ದೇವಾಡಿಗ, ತಂತ್ರಿ ಹಾಗೂ ಸಮಿತಿ ಸದಸ್ಯ ಮಂಜುನಾಥ ಅಡಿಗ, ಜಿಲ್ಲಾ ಬಿಜೆಪಿ ಅಧ್ಯಕ್ಷ ಮಟ್ಟಾರು ರತ್ನಾಕರ ಶೆಟ್ಟಿ, ತಾ.ಪಂ. ಸದಸ್ಯೆ ಗ್ರೀಷ್ಮಾ ಭಿಡೆ ಮುಂತಾದವರು ಉಪಸ್ಥಿತ ರಿದ್ದರು. ದೇಗುಲದ ಅರ್ಚಕರಾದ ಡಾ| ಕೆ.ಎನ್‌. ನರಸಿಂಹ ಅಡಿಗ, ಶ್ರೀಧರ ಅಡಿಗ, ಕೆ.ಎನ್‌. ಗೋವಿಂದ ಅಡಿಗ, ಸುಬ್ರಹ್ಮಣ್ಯ ಅಡಿಗ ಅವರ ನೇತೃತ್ವದಲ್ಲಿ  ಶ್ರೀ ದೇವಿಗೆ ವಿಶೇಷ ಪೂಜೆ ಸಲ್ಲಿಸಲಾಯಿತು. ಬಳಿಕ ದೇಗುಲ ಸಮಿತಿಯವರು ರಾಜೇ, ದುಷ್ಯಂತ ಅವರನ್ನು ಗೌರವಿಸಿದರು. 

ಇಂದು ಕೊಲ್ಲೂರಿಗೆ ಶ್ರೀಲಂಕಾ ಪ್ರಧಾನಿ 
ಕೊಲ್ಲೂರು: ಶ್ರೀಲಂಕಾ ಪ್ರಧಾನಿ ರಣಿಲ್‌ ವಿಕ್ರಮ ಸಿಂಘೆಅವರು ಮಂಗಳವಾರ ಕೊಲ್ಲೂರಿಗೆ ಆಗಮಿಸಿ ಶತಚಂಡಿ ಯಾಗದ ಪೂರ್ಣಾಹುತಿಯಲ್ಲಿ ಪಾಲ್ಗೊಳ್ಳುವರು. ಪ್ರಧಾನಿ ಸಿಂಘೆ ಅವರ ಭೇಟಿ ಹಿನ್ನೆಲೆಯಲ್ಲಿ ಬೆಳಗ್ಗೆ 10ರಿಂದ ಅಪರಾಹ್ನ 3ರ ವರೆಗೆ ದೇಗುಲ ದಲ್ಲಿ ಭಕ್ತರ ದರ್ಶನಕ್ಕೆ ನಿರ್ಬಂಧ ಹೇರಲಾಗಿದೆ. ಭದ್ರತೆ ಹಿನ್ನೆಲೆಯಲ್ಲಿ ಅಂಗಡಿಗಳನ್ನು ಮುಚ್ಚುವಂತೆ ಸೂಚಿಸಲಾಗಿದೆ. ಶ್ರೀಲಂಕಾ, ಕೇಂದ್ರ ಹಾಗೂ ರಾಜ್ಯ ಸರಕಾರದ ವಿಶೇಷ ಭದ್ರತಾ ಪಡೆಗಳು ಕೊಲ್ಲೂರಿಗೆ ಆಗಮಿ ಸಿದ್ದು ಅರೆಶಿರೂರಿನ ಹೆಲಿ ಪ್ಯಾಡ್‌ ಸಮೇತ ವಿವಿಧ ಸೂಕ್ಷ್ಮ ಪ್ರದೇಶಗಳ ಪರಿಶೀಲನೆ ನಡೆಸಿವೆ. ಈ ಹಿಂದೆಯೇ ಕೊಲ್ಲೂರಿಗೆ ಶ್ರೀಲಂಕಾ ಪ್ರಧಾನಿ ಅವರು ಆಗಮಿಸಬೇಕಿತ್ತಾದರೂ ಹವಾಮಾನ ವೈಪರೀತ್ಯದಿಂದ ಕಾರ್ಯಕ್ರಮ ರದ್ದುಗೊಂಡಿತ್ತು.

ಟಾಪ್ ನ್ಯೂಸ್

11-

Koppala: ವೈದ್ಯರ ನಿರ್ಲಕ್ಷ್ಯ-ಚಿಕಿತ್ಸೆ ಫಲಿಸದೇ ಗರ್ಭಿಣಿ ಸಾವು ; ಕುಟುಂಬಸ್ಥರ ಪ್ರತಿಭಟನೆ

10-mudigere

Mudigere: ಹುಲಿ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ವಶಕ್ಕೆ

Rupali Ganguly : ʼಅನುಪಮಾʼ ಧಾರಾವಾಹಿ ಖ್ಯಾತಿಯ ನಟಿ ರೂಪಾಲಿ ಗಂಗೂಲಿ ಬಿಜೆಪಿ ಸೇರ್ಪಡೆ

Rupali Ganguly : ʼಅನುಪಮಾʼ ಧಾರಾವಾಹಿ ಖ್ಯಾತಿಯ ನಟಿ ರೂಪಾಲಿ ಗಂಗೂಲಿ ಬಿಜೆಪಿ ಸೇರ್ಪಡೆ

Extortion:  ಆನ್‌ಲೈನ್‌ ಗೇಮ್‌; ಬಾಲಕನ ಬೆದರಿಸಿ ಸುಲಿಗೆ

Extortion: ಆನ್‌ಲೈನ್‌ ಗೇಮ್‌; ಬಾಲಕನ ಬೆದರಿಸಿ ಸುಲಿಗೆ

8-

Politics: ಕೇಂದ್ರ ಬರ ಪರಿಹಾರ ನೀಡದಿರಲು ವಿಧಾನಸಭೆ ಚುನವಾಣೆ ಸೋಲಿನ ಸೇಡು: ರಾಮಲಿಂಗಾರೆಡ್ಡಿ

LPG Cylinders: ವಾಣಿಜ್ಯ ಬಳಕೆಯ ಎಲ್‌ ಪಿಜಿ ಸಿಲಿಂಡರ್ ಬೆಲೆ ಮತ್ತೆ ಇಳಿಕೆ; ಹೊಸ ದರ ಎಷ್ಟು?

LPG Cylinders: ವಾಣಿಜ್ಯ ಬಳಕೆಯ ಎಲ್‌ ಪಿಜಿ ಸಿಲಿಂಡರ್ ಬೆಲೆ ಮತ್ತೆ ಇಳಿಕೆ; ಹೊಸ ದರ ಎಷ್ಟು?

ಧ್ರುವ್‌ ರಾಠಿ ಮುಸ್ಲಿಂ, ಆತನ ಪತ್ನಿ ಪಾಕಿಸ್ತಾನಿ: ವೈರಲ್‌ ಪೋಸ್ಟ್‌ನ ಸತ್ಯಾಸತ್ಯತೆ ಏನು?

ಧ್ರುವ್‌ ರಾಠಿ ಮುಸ್ಲಿಂ, ಆತನ ಪತ್ನಿ ಪಾಕಿಸ್ತಾನಿ: ವೈರಲ್‌ ಪೋಸ್ಟ್‌ನ ಸತ್ಯಾಸತ್ಯತೆ ಏನು?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಇವರ ಬದುಕಿನ ಬಂಡಿಗೆ ಆತ್ಮವಿಶ್ವಾಸ-ಛಲವೇ ಚಕ್ರಗಳು! ಇರುವುದೊಂದೇ ಕಾಲು, ಇರುವುದೊಂದೇ ಬದುಕು

ಇವರ ಬದುಕಿನ ಬಂಡಿಗೆ ಆತ್ಮವಿಶ್ವಾಸ-ಛಲವೇ ಚಕ್ರಗಳು! ಇರುವುದೊಂದೇ ಕಾಲು, ಇರುವುದೊಂದೇ ಬದುಕು

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

19

Malpe ಬೀಚ್‌: ಸಮುದ್ರ ಪಾಲಾಗತ್ತಿದ್ದ ಬಾಲಕನ ರಕ್ಷಣೆ

18

Kaup: ಕೆಲಸಕ್ಕಾಗಿ ಬಂದಿದ್ದ ಯುವತಿ ನಾಪತ್ತೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

11-

Koppala: ವೈದ್ಯರ ನಿರ್ಲಕ್ಷ್ಯ-ಚಿಕಿತ್ಸೆ ಫಲಿಸದೇ ಗರ್ಭಿಣಿ ಸಾವು ; ಕುಟುಂಬಸ್ಥರ ಪ್ರತಿಭಟನೆ

7

Bengaluru: ಸೈಕಲ್‌ ಕದಿಯುತ್ತಿದ್ದ ಸೆಕ್ಯೂರಿಟಿ ಗಾರ್ಡ್‌ ಬಂಧನ

10-mudigere

Mudigere: ಹುಲಿ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ವಶಕ್ಕೆ

Rupali Ganguly : ʼಅನುಪಮಾʼ ಧಾರಾವಾಹಿ ಖ್ಯಾತಿಯ ನಟಿ ರೂಪಾಲಿ ಗಂಗೂಲಿ ಬಿಜೆಪಿ ಸೇರ್ಪಡೆ

Rupali Ganguly : ʼಅನುಪಮಾʼ ಧಾರಾವಾಹಿ ಖ್ಯಾತಿಯ ನಟಿ ರೂಪಾಲಿ ಗಂಗೂಲಿ ಬಿಜೆಪಿ ಸೇರ್ಪಡೆ

Extortion:  ಆನ್‌ಲೈನ್‌ ಗೇಮ್‌; ಬಾಲಕನ ಬೆದರಿಸಿ ಸುಲಿಗೆ

Extortion: ಆನ್‌ಲೈನ್‌ ಗೇಮ್‌; ಬಾಲಕನ ಬೆದರಿಸಿ ಸುಲಿಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.