“ದೃಷ್ಟಿ ದೋಷ ಪರೀಕ್ಷೆ ಎಲ್ಲರಿಗೂ ಅನಿವಾರ್ಯ’

Team Udayavani, Oct 3, 2019, 5:31 AM IST

0210RA1E_0210MN__1

ಪಡುಬಿದ್ರಿ: ಶಾಲಾ ಮಕ್ಕಳು, ವಯೋ ಪ್ರಬುದ್ಧರು ಇಂದಿನ ಕಾಲಘಟ್ಟ ದಲ್ಲಿ ದೃಷ್ಟಿ ದೋಷದ ಪರೀಕ್ಷೆಗೆ ಒಳಗಾಗುವುದು ಅನಿವಾರ್ಯ. ವಯೋ ಸಹಜವಾಗಿ ಕಾಣಿಸಿಕೊಳ್ಳುವ ಡಯಾಬಿಟೀಸ್‌ ಮತ್ತು ರಕ್ತದೊತ್ತಡದಿಂದಾಗಿ ದೃಷ್ಟಿಗೆ ತೊಂದರೆ ಉಂಟಾಗಬಹುದು. ಇದನ್ನು ವೈದ್ಯರಲ್ಲಿ ಪರೀಕ್ಷಿಸಿಕೊಳ್ಳಿ ಎಂದು ಉಡುಪಿಯ ಪ್ರಸಾದ್‌ ನೇತ್ರಾಲಯದ ಡಾ| ಶ್ರೀ ತೇಜಾ ಹೇಳಿದರು.

ಅವರು ಅ. 2ರಂದು ಮಹಾತ್ಮಾ ಗಾಂಧಿ, ಶಾಸ್ತ್ರಿ ಜಿ ಜಯಂತಿಯಂದು ಪಡುಬಿದ್ರಿಯ ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನದ ಪ್ರಾಂಗಣ ದಲ್ಲಿ ಪಡುಬಿದ್ರಿ ಗಣಪತಿ ಪ್ರೌಢಶಾಲೆ, ಉಡುಪಿ ಶ್ರೀ ಅದಮಾರು ಮಠ ಶಿಕ್ಷಣ ಮಂಡಳಿ, ಗಣಪತಿ ಪ್ರೌಢಶಾಲೆ ಹಳೆ ವಿದ್ಯಾರ್ಥಿ ಸಂಘ, ಉಡುಪಿಯ ಸೂಪರ್‌ ಸ್ಪೆಶಾಲಿಟಿ ಕಣ್ಣಿನ ಆಸ್ಪತ್ರೆ ಪ್ರಸಾದ್‌ ನೇತ್ರಾಲಯ, ನೇತ್ರಜ್ಯೋತಿ ಚಾರಿಟೆಬಲ್‌ ಟ್ರಸ್ಟ್‌, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೊಸೈಟಿ (ಅಂಧತ್ವ ವಿಭಾಗ), ನವಶಕ್ತಿ ವಿಮೆನ್ಸ್‌ ವೆಲ್ಫೆàರ್‌ ಸೊಸೈಟಿ, ಲಯನ್ಸ್‌ ಕ್ಲಬ್‌ ಪಡುಬಿದ್ರಿ ಮತ್ತು ಇನ್ನರ್‌ವೀಲ್‌ ಕ್ಲಬ್‌ ಪಡುಬಿದ್ರಿ ಇವುಗಳ ಸಂಯುಕ್ತ ಆಶ್ರಯದಲ್ಲಿ ಸತತ 8ನೇ ವರ್ಷ ನಡೆಸಲಾಗುತ್ತಿರುವ ಕಣ್ಣಿನ ಉಚಿತ ತಪಾಸಣೆ, ಚಿಕಿತ್ಸಾ ಶಿಬಿರದ ಉದ್ಘಾಟನೆ ನೆರವೇರಿಸಿ ಅವರು ಮಾತನಾಡಿದರು.

ಪಡುಬಿದ್ರಿ ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನದ ಆನುವಂಶಿಕ ಮೊಕ್ತೇಸರ ರತ್ನಾಕರ ರಾಜ್‌ ಅರಸು ಕಿನ್ಯಕ್ಕ ಬಲ್ಲಾಳರು, ಪಡುಬಿದ್ರಿ ಲಯನ್ಸ್‌ ಕ್ಲಬ್‌ ಅಧ್ಯಕ್ಷ ಲಕ್ಷ್ಮಣ ಡಿ. ಪೂಜಾರಿ, ಕೇಂದ್ರೀಯ ಮತ್ಸ ಸಂಶೋಧನಾ ಇಲಾಖೆಯ ಸೇವಾ ನಿವೃತ್ತ ಲೋಹಿತಾಕ್ಷ ಸುವರ್ಣ ಪಡುಹಿತ್ಲು ಮಾತನಾಡಿದರು.

ವೇದಿಕೆಯಲ್ಲಿ ಇನ್ನರ್‌ವೀಲ್‌ ಕ್ಲಬ್‌ ಅಧ್ಯಕ್ಷೆ ಸುನಂದಾ ವಿಜಯ್‌, ಪಡುಬಿದ್ರಿ ಗಣಪತಿ ಪ್ರೌಢಶಾಲಾ ಹಳೆ ವಿದ್ಯಾರ್ಥಿ ಸಂಘದ ಪ್ರಧಾನ ಕಾರ್ಯದರ್ಶಿ ಕಸ್ತೂರಿ ರಾಮಚಂದ್ರ ಮತ್ತಿತರರು ಉಪಸ್ಥಿತರಿದ್ದರು.

ಪಡುಬಿದ್ರಿ ಗಣಪತಿ ಪ್ರೌಢಶಾಲಾ ಮುಖ್ಯೋಪಾಧ್ಯಾಯ ಗಣಪತಿ ಭಟ್‌ ಅಧ್ಯಕ್ಷತೆ ವಹಿಸಿ ಮಾತನಾಡಿದರು.ಪ್ರೌಢಶಾಲಾ ಸಹಶಿಕ್ಷಕಿ ಅನುರಾಧಾ ಸ್ವಾಗತಿಸಿದರು. ರಾಜೇಶ್‌ ಶೇರಿಗಾರ್‌ ನಿರ್ವಹಿಸಿದರು. ಎಸ್‌ಬಿವಿಪಿ ಹಿ. ಪ್ರಾ. ಶಾಲಾ ಮುಖ್ಯ ಶಿಕ್ಷಕಿ ಸುಮತಿ ಹೆಗಡೆ ವಂದಿಸಿದರು. ಒಟ್ಟು 138 ಮಂದಿ ನೇತ್ರ ಪರೀಕ್ಷಣೆಗೊಳಗಾಗಿದ್ದು 58 ಮಂದಿಗೆ ಕನ್ನಡಕ ವಿತರಣೆ ನಡೆಯಲಿದೆ.

ಟಾಪ್ ನ್ಯೂಸ್

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.