ಯಡಿಯೂರಪ್ಪ ಅವರೇ ಸಿಎಂ ಅಭ್ಯರ್ಥಿ: ಈಶ್ವರಪ್ಪ

Team Udayavani, Apr 24, 2017, 12:50 PM IST

eshwarappa.jpg

ಉಡುಪಿ: ಬಿಜೆಪಿ ಶಿಸ್ತಿನ ಪಕ್ಷ ಆಗಿದ್ದು, ನಮ್ಮಲ್ಲಿ ಯಾರೂ ಯಾರಿಗೂ ಕತ್ತಿ ಮಸೆಯುತ್ತಿಲ್ಲ. ರಾಷ್ಟ್ರೀಯ ಅಧ್ಯಕ್ಷ ಅಮಿತ್‌ ಶಾ ಹೇಳಿರುವಂತೆ ಬಿ.ಎಸ್‌. ಯಡಿಯೂರಪ್ಪ ಅವರೇ ನಮ್ಮ ಮುಂದಿನ ಮುಖ್ಯಮಂತ್ರಿ ಅಭ್ಯರ್ಥಿ. ಅದಧಿರಲ್ಲಿ ಎರಡನೇ ಆಯ್ಕೆಯೇ ಇಲ್ಲ ಎಂದು ವಿಪಕ್ಷ ನಾಯಕ ಕೆ.ಎಸ್‌. ಈಶ್ವರಪ್ಪ ಹೇಳಿದರು. 

ಉಡುಪಿ ಶ್ರೀಕೃಷ್ಣ ಮಠಕ್ಕೆ ರವಿವಾರ ಭೇಟಿ ನೀಡಿದ ಸಂದರ್ಭ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿಯಲ್ಲಿ ಗೊಂದಲಗಳಿರುವುದು ನಿಜ. ನಾವೆಲ್ಲ ಚರ್ಚಿಸಿ, ಮಾತುಕತೆ ನಡೆಸಿ ಪರಿಹರಿಸಿಕೊಳ್ಳುತ್ತೇವೆ. ಪಕ್ಷದಲ್ಲಿರುವ ಸಮಸ್ಯೆ ಪರಿಹರಿಸಿಕೊಳ್ಳಲು ಶಾ ಸೂಚಿಸಿದ್ದು, ಯಡಿಯೂರಪ್ಪ ಈ ವಿಚಾರದಲ್ಲಿ ಸ್ವಲ್ಪ ತಾತ್ಸಾರ ಮಾಡುತ್ತಿದ್ದಾರೆ. ಸಂಗೊಳ್ಳಿ ರಾಯಣ್ಣ ಬ್ರಿಗೇಡ್‌ ಮುಂದುವರಿಸಲು ಸೂಚನೆ ಸಿಕ್ಕಿದೆ ಎಂದು ಹೇಳಿದರು.

ಉಡಾಫೆ ಸರಕಾರ
ಬೆಳಗಾವಿಯಲ್ಲಿ ಬಾಲಕಿ ಕೊಳವೆ ಬಾವಿಗೆ ಬಿದ್ದ ಪ್ರಕರಣ ಸಂಬಂಧ ಉಡಾಫೆಯಾಗಿ ಉತ್ತರಿಸಿದ ಉಸ್ತುವಾರಿ ಸಚಿವ ರಮೇಶ್‌ ಜಾರಕಿಹೊಳಿ ಹೇಳಿಕೆ ಕುರಿತು ಪ್ರತಿಕ್ರಿಯಿಸಿದ ಅವರು ಸರಕಾರದಲ್ಲಿ ಎಲ್ಲ ಮಂತ್ರಿಗಳು ಉಡಾಫೆಯಾಗಿ ಮಾತನಾಡುತ್ತಾರೆ. ಮುಖ್ಯಮಂತ್ರಿಗಳೇ ಎಸ್‌ಪಿ ಅವರನ್ನು ಸಾರ್ವಜನಿಕವಾಗಿ ಬೈಯುತ್ತಾರೆ. ಉಡುಪಿ ಜಿಲ್ಲಾಧಿಕಾರಿ ಹಾಗೂ ಎಸಿ ಮೇಲಿನ ಹಲ್ಲೆ ಪ್ರಕರಣ ಹಾಗೂ ರಾಜ್ಯದಲ್ಲಿ ನಡೆಯುತ್ತಿರುವ ಎಲ್ಲ ಅಕ್ರಮಗಳಿಗೆ ಸಚಿವರು ಪೂರಕವಾಗಿ ಬೆಂಬಲ ಕೊಡುತ್ತಿದ್ದಾರೆ ಎಂದರು.

ಪಕ್ಷದ ಸೋಲು:ಜನರ ತೀರ್ಪು
ಗುಂಡ್ಲುಪೇಟೆ, ನಂಜನಗೂಡು ಉಪಚುನಾವಣೆ ಸೋಲು ಪಕ್ಷದ ಸೋಲು. ಇದು ಜನರ ತೀರ್ಪು. ನಾವೆಲ್ಲ ಅದನ್ನು ಗೌರವಿಸುತ್ತೇವೆ. ಶೇ. 100 ಗೆಲುವಿಗೆ ಪಕ್ಷದ ಎಲ್ಲರೂ ಪ್ರಯತ್ನಿಸಿದ್ದೇವೆ. ಈ ಸೋಲಿಗೆ ಎಲ್ಲರೂ ಹೊಣೆ. ಸೋಲಿನ ಪರಾಮರ್ಶೆ ನಡೆಯುತ್ತಿದೆ. ಜಿಲ್ಲಾಧ್ಯಕ್ಷರ ನೇಮಕ ಬಗ್ಗೆಯೂ ಭಿನ್ನಾಭಿಪ್ರಾಯಗಳಿದ್ದು, ಈ ಕುರಿತು ಮಾತುಕತೆ ನಡೆಯುತ್ತಿವೆ ಎಂದು ಈಶ್ವರಪ್ಪ ಹೇಳಿದರು.

ಸಿಎಂ ಅಹಂಕಾರದ ಮಾತು
ದಿಗ್ವಿಜಯ್‌ ಸಿಂಗ್‌ ಅವರು ಸಿದ್ದರಾಮಯ್ಯ ನೇತೃತ್ವದಲ್ಲಿ ಕಾಂಗ್ರೆಸ್‌ ಚುನಾವಣೆ ಎದುರಿಸುತ್ತದೆ, ಮುಖ್ಯಮಂತ್ರಿಗಳನ್ನು ಮುಂದಿನ ದಿನಗಳಲ್ಲಿ ತೀರ್ಮಾನ ಮಾಡುತ್ತೇವೆ ಎಂದಿದ್ದಾರೆ. ಆದರೆ ಸಿದ್ದರಾಮಯ್ಯ ಅವರೇ ಮುಂದಿನ ಮುಖ್ಯಮಂತ್ರಿ ಅಂತ ಮಾತನಾಡುತ್ತಿದ್ದಾರೆ. ಇದು ಅಹಂಕಾರದ ಮಾತು. ಕತ್ತಿ ಮಸೆಯುತ್ತಿರುವುದು, ಅಶಿಸ್ತಿನಿಂದ ವರ್ತಿಸುತ್ತಿರುವುದು ಯಾರು. ಕೇಂದ್ರ ನಾಯಕರು ಹಾಗೇ ಹೇಳುತ್ತಿದ್ದಾರೆ. ಆದರೆ ಇವರಿಗೆ ಈಗಲೇ ಹೇಳಿಕೊಳ್ಳಲು ಅಧಿಕಾರ ಕೊಟ್ಟವರಾರು? ಎಂದು ಈಶ್ವರಪ್ಪ  ಅವರು ಪ್ರಶ್ನಿಸಿದರು.

ಟಾಪ್ ನ್ಯೂಸ್

COVID vaccine ಅಡ್ಡಪರಿಣಾಮ ನಿವಾರಣೆ: ಈ ಗಳಿಗೆಯ ತುರ್ತು

COVID vaccine ಅಡ್ಡಪರಿಣಾಮ ನಿವಾರಣೆ: ಈ ಗಳಿಗೆಯ ತುರ್ತು

Supreme Court slams IMA

Supreme Court; ಪತಂಜಲಿ ಆಯ್ತು, ಈಗ ಐಎಂಎ ವಿರುದ್ಧ ಸುಪ್ರೀಂ ಕೋರ್ಟ್‌ ಗರಂ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

19

Malpe ಬೀಚ್‌: ಸಮುದ್ರ ಪಾಲಾಗತ್ತಿದ್ದ ಬಾಲಕನ ರಕ್ಷಣೆ

18

Kaup: ಕೆಲಸಕ್ಕಾಗಿ ಬಂದಿದ್ದ ಯುವತಿ ನಾಪತ್ತೆ

13

Gangolli: ಮಹಿಳೆಗೆ ಬೈಕ್‌ ಢಿಕ್ಕಿ; ಗಾಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

COVID vaccine ಅಡ್ಡಪರಿಣಾಮ ನಿವಾರಣೆ: ಈ ಗಳಿಗೆಯ ತುರ್ತು

COVID vaccine ಅಡ್ಡಪರಿಣಾಮ ನಿವಾರಣೆ: ಈ ಗಳಿಗೆಯ ತುರ್ತು

Supreme Court slams IMA

Supreme Court; ಪತಂಜಲಿ ಆಯ್ತು, ಈಗ ಐಎಂಎ ವಿರುದ್ಧ ಸುಪ್ರೀಂ ಕೋರ್ಟ್‌ ಗರಂ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.