ಪಡುಬಿದ್ರಿ: ಬಾವಿಗೆ ಹಾರಿ ಯುವತಿ ಆತ್ಮಹತ್ಯೆ
Team Udayavani, May 26, 2022, 6:22 PM IST
ಪಡುಬಿದ್ರಿ: ಬಾಡಿಗೆ ಮನೆ ಮಾಲೀಕರ ಬಾವಿಗೆ ಹಾರಿ ಆತ್ಮಹತ್ಯೆ ಯುವತಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹೆಜಮಾಡಿ ಗ್ರಾಮದ ಕೋಡಿ ಎಂಬಲ್ಲಿ ನಡೆದಿದೆ.
ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾ| ಬಂಕಿಕೂಡ್ಲ ಗ್ರಾಮದ ಯುವತಿ ಗೋದಾವರಿ (24) ಆತ್ಮಹತ್ಯೆ ಮಾಡಿಕೊಂಡ ಯುವತಿ.
ಈಕೆ ಕ್ವಾಲಿಟಿ ಮೆರೈನ್ ಪುಡ್ ಹೆಸರಿನ ಫ್ಯಾಕ್ಟರಿಯಲ್ಲಿ ಮೀನು ಕಟಿಂಗ್ ಕೆಲಸ ಮಾಡಿಕೊಂಡಿದ್ದಳು. ಹೆಜಮಾಡಿ ಕೋಡಿಯಲ್ಲಿ ಒಂದು ಬಾಡಿಗೆ ಮನೆಯಲ್ಲಿ ಇತರ ಮೂವರು ಹುಡುಗಿಯರ ಜೊತೆ ವಾಸ ಮಾಡಿಕೊಂಡಿದ್ದಳು. ಯಾವುದೋ ಕಾರಣಕ್ಕೆ ಜೀವನದಲ್ಲಿ ಜಿಗುಪ್ಸೆಗೊಂಡು ರಾಜು ಕರ್ಕೇರ ಅವರಿಗೆ ಸೇರಿರುವ ಬಾವಿಗೆ ಹಾರಿ ಸಾವನ್ನಪ್ಪಿದ್ದಾಳೆ. ಗೋದಾವರಿಯ ಮೃತದೇಹವು ಇಂದು ಬೆಳಿಗ್ಗೆ ಬಾವಿಯಲ್ಲಿ ತೇಲುತ್ತಿದ್ದುದು ಪತ್ತೆಯಾಗಿದೆ.
ಪಡುಬಿದ್ರಿ ಪೊಲೀಸ್ ಠಾಣೆಯಲ್ಲಿ ಅಸ್ವಾಭಾವಿಕ ಸಾವಿನ ಪ್ರಕರಣವು ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ರಸ್ತೆ ಮಧ್ಯೆಯೇ ಪ್ರವಾಸಿಗರ ಸೆಲ್ಪಿ… ಚಾರ್ಮಾಡಿ ಘಾಟ್ ನಲ್ಲಿ ವಾಹನ ಸವಾರರ ಪರದಾಟ
ವರ್ಷದ ಬಳಿಕ ತಾಯಿ ಮಡಿಲು ಸೇರಿದ ಮಗ: ವಿಳಾಸ ಪತ್ತೆಗೆ ನೆರವಾಯಿತು ಫೇಸ್ ಬುಕ್
ಉಡುಪಿ : ಆಟೋರಿಕ್ಷಾ ಬಳಿ ತೆರಳಿ ಪ್ರಕರಣ ಇತ್ಯರ್ಥಪಡಿಸಿದ ನ್ಯಾಯಾಧೀಶರು
ಸುಳ್ಯ, ಕೊಡಗಿನ ಕೆಲವೆಡೆ ಭಾರಿ ಶಬ್ದದೊಂದಿಗೆ ಭೂಕಂಪನ, ಗೋಡೆ ಬಿರುಕು
ಸಕಲೇಶಪುರ : ರಸ್ತೆ ಅಪಘಾತಕ್ಕೆ ದೈಹಿಕ ಶಿಕ್ಷಕ ಸ್ಥಳದಲ್ಲೇ ಸಾವು: ವಿದ್ಯಾರ್ಥಿಗಳ ಕಣ್ಣೀರು…
ಹೊಸ ಸೇರ್ಪಡೆ
ಕೇಂದ್ರ ಸರ್ಕಾರದಿಂದ ಎಸ್ಸಿ ಎಸ್ಟಿ ಹಿಂದುಳಿದ ವರ್ಗಗಳ ದಮನ ನೀತಿ: ಸಿದ್ಧರಾಮಯ್ಯ
ನಾವೂರು: ಇನ್ನಷ್ಟು ಅನುದಾನ ಹರಿದು ಬಂದರೆ ಅಭಿವೃದ್ಧಿ ಮಲ್ಲಿಗೆ ಅರಳೀತು
ತಾಯಿಯಾಗುತ್ತಿರುವ ಸಂತಸ ವ್ಯಕ್ತಪಡಿಸಿದ ಬಾಲಿವುಡ್ ನಟಿ ಆಲಿಯಾ ಭಟ್
ಸನಾತನ ಧರ್ಮದ ನೆಮ್ಮದಿ ವಿದೇಶಿ ಸಂಸ್ಕೃತಿಯಲ್ಲಿಲ್ಲ: ವಿದ್ಯಾಪ್ರಸನ್ನ ಸ್ವಾಮೀಜಿ
ಕಲರ್ಫುಲ್ ಇವೆಂಟ್ನಲ್ಲಿ ‘’ಬೈರಾಗಿ”: ಜುಲೈ 1 ರಿಲೀಸ್