ಉಡುಪಿ: ಜಿಲ್ಲೆಯಲ್ಲಿ ಆತ್ಮಹತ್ಯೆ ಹೆಚ್ಚಳ: ಯುವ ಸಮುದಾಯವೇ ಅಧಿಕ!

Team Udayavani, May 23, 2022, 11:25 AM IST

suicide

ಉಡುಪಿ: ಜಿಲ್ಲೆಯಲ್ಲಿ ಆತ್ಮಹತ್ಯೆ ಪ್ರಕರಣಗಳು ಹೆಚ್ಚಳವಾಗುತ್ತಿದ್ದು, ಇದರಲ್ಲಿ ಯುವ ಸಮುದಾಯದವರ ಸಂಖ್ಯೆಯೇ ಅಧಿಕವಾಗಿದೆ. ಅದರಲ್ಲೂ ನೇಣು ಬಿಗಿದು ಆತ್ಮಹತ್ಯೆ ನಡೆಯುತ್ತಿರುವ ಪ್ರಕರಣಗಳು ಅತ್ಯಧಿಕವಾಗಿ ವರದಿಯಾಗುತ್ತಿವೆ.

15ರಿಂದ 35 ವಯೋಮಿತಿಯವರು ಹೆಚ್ಚಿನ ಸಂಖ್ಯೆಯಲ್ಲಿ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದು, ಸೂಕ್ತ ಜಾಗೃತಿ ಹಾಗೂ ಕಾಳಜಿಯಿಂದಷ್ಟೇ ಇದರ ನಿಯಂತ್ರಣ ಸಾಧ್ಯವಿದೆ. ಜನರನ್ನು ಇನ್ನೂ ಬೆಂಬಿಡದ ಕೋವಿಡ್‌ ಬಿಕ್ಕಟ್ಟು ಕೂಡ ಈ ಎಲ್ಲ ಸಮಸ್ಯೆಗಳಿಗೆ ಕಾರಣವಾಗಿದೆ. ಕೋವಿಡ್‌ ಸಂದರ್ಭದಲ್ಲಿ ಜನರು ವಿವಿಧ ಕಾರಣಗಳಿಗಾಗಿ ಸಾಲ ಮಾಡಿದ್ದರು. ಈಗ ಪರಿಸ್ಥಿತಿ ಸಹಜ ಸ್ಥಿತಿಗೆ ಬಂದಿದ್ದು, ಪಡೆದ ಸಾಲವನ್ನು ಹಿಂತಿರುಗಿಸಲಾಗದ ಅತಂತ್ರರಾಗಿದ್ದಾರೆ. ಇದು ಕೂಡ ಆತ್ಮಹತ್ಯೆಗೆ ಪ್ರಚೋದನೆ ನೀಡುತ್ತಿದೆ.

ಸಂಚಲನ ಉಂಟುಮಾಡಿದ್ದ ಪ್ರಕರಣಗಳು

ಜಿಲ್ಲೆಯಲ್ಲಿ ಈ ವರ್ಷದಲ್ಲಿ ಗುತ್ತಿಗೆದಾರ ಸಂತೋಷ್‌ ಪಾಟೀಲ್‌ ಹಾಗೂ ಡಿಎಆರ್‌ ಹೆಡ್‌ ಕಾನ್‌ಸ್ಟೆಬಲ್‌ ರಾಜೇಶ್‌ ಕುಂದರ್‌ ಆತ್ಮಹತ್ಯೆ ಪ್ರಕರಣಗಳು ತೀವ್ರ ಚರ್ಚೆಗೆ ಗ್ರಾಸಮಾಡಿಕೊಟ್ಟಿದ್ದವು. ಉಳಿದಂತೆ ಯುವ ಉದ್ಯಮಿ, ಮಹಿಳೆಯರು, ಅಸ್ತಮ ಕಾಯಿಲೆಯಿಂದ ಬಳಲುತ್ತಿರುವ ವಿದ್ಯಾರ್ಥಿ, ಹಣಕಾಸು ಬಾಧೆ, ಹೊಟೇಲ್‌ ಕಾರ್ಮಿಕ ಹೀಗೆ ಹಲವಾರು ಮಂದಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಕಾರಣಗಳೇನು?

ಕಳೆದ 2 ವರ್ಷಗಳಿಂದ ಹೆಚ್ಚಿನವರಿಗೆ ಸಾಮಾನ್ಯ ಜೀವನ ವೆಂಬುವುದೇ ಮರೀಚಿಕೆಯಾಗಿದೆ. ಖನ್ನತೆ, ಮದ್ಯಪಾನ, ಪರೀಕ್ಷೆ ಒತ್ತಡ ಹಾಗೂ ಅನುತೀರ್ಣ, ಕೌಟುಂಬಿಕ ದೌರ್ಜನ್ಯ ಹಾಗೂ ಕಲಹ, ಆರೋಗ್ಯ ಸಮಸ್ಯೆಗಳು, ಸಾಮಾಜಿಕ ಜಾಲತಾಣಗಳ ಮೂಲಕ ಪರಿಚಯವಾಗಿ ಮೊಟಕುಗೊಂಡ ಸಂಬಂಧಗಳು, ಬಿದ್ದುಹೋದ ಗೆಳೆತನ, ಮನೆಮಂದಿ ಸೂಕ್ತ ರೀತಿಯಲ್ಲಿ ಸ್ಪಂದಿಸದಿರುವುದೆಲ್ಲ ಆತ್ಮಹತ್ಯೆ ಮಾಡಿಕೊಳ್ಳಲು ಕಾರಣವಾಗುತ್ತಿದೆ.

ಲಾಕ್‌ಡೌನ್‌ ವೇಳೆ ಅಧಿಕ ಆತ್ಮಹತ್ಯೆ

ಜಿಲ್ಲೆಯಲ್ಲಿ 2020ರಲ್ಲಿ ಜನವರಿಯಿಂದ ಜೂನ್‌ ತಿಂಗಳವರೆಗೆ 90ಕ್ಕೂ ಅಧಿಕ ಮಂದಿ ಆತ್ಮಹತ್ಯೆಗೆ ಶರಣಾಗಿದ್ದರು. ಕೋವಿಡ್‌-ಲಾಕ್‌ಡೌನ್‌ ಸಡಿಲಿಕೆ ಅನಂತರವೂ ಆತ್ಮಹತ್ಯೆ ಪ್ರಕರಣಗಳು ಹೆಚ್ಚಳವಾಗುತ್ತಿವೆ. ಮಾನಸಿಕ ಖನ್ನತೆ, ಆರ್ಥಿಕ ಮುಗ್ಗಟ್ಟು, ಉದ್ಯೋಗ ನಷ್ಟ, ಮದ್ಯ ವ್ಯಸನ, ಕೋವಿಡ್‌ ಸೋಂಕಿನ ಭಯ, ಕೌಟುಂಬಿಕ ಕಲಹ, ದೀರ್ಘ‌ಕಾಲದ ಅನಾರೋಗ್ಯ, ವಿಪರೀತ ಒತ್ತಡಗಳು ಆತ್ಮಹತ್ಯೆಗೆ ಮೂಲ ಕಾರಣವಾಗಿದೆ.

ಪರಿಹಾರ ಹೇಗೆ?

ಒಬ್ಬ ವ್ಯಕ್ತಿಯ ಚಲನವಲನಗಳಿಂದಲೇ ಮುನ್ಸೂಚನೆ ಲಭಿಸುತ್ತದೆ. ಸಿಕ್ಕ ಸಿಕ್ಕವರಿಗೆ ಕರೆಮಾಡಿ ಮಾತನಾಡುವುದು, ತನಗೆ ಬಯಸಿದ ಸ್ಥಳಗಳಿಗೆ ಭೇಟಿ ನೀಡಿ ಸುತ್ತಾಡು ವುದು, ಒಮ್ಮೆಲೆ ಚುರುಕುತನ ಪಡೆಯುವುದು ಇವುಗಳೆಲ್ಲ ಲಕ್ಷಣ ಗಳಾಗಿವೆ. ಖನ್ನತೆಯಲ್ಲಿರುವವರು ಒಮ್ಮೆಲೇ ಚುರುಕುಗೊಂಡರೂ ಅದು ಆತ್ಮಹತ್ಯೆಗೆ ಪ್ರಚೋದನೆಗೊಳಗಾಗುವ ಸಾಧ್ಯತೆಗಳಿರುತ್ತವೆ ಎನ್ನುತ್ತಾರೆ ವೈದ್ಯಾಧಿಕಾರಿಗಳು.

ವಿನಯಪೂರ್ವಕ ಮಾತು ಅಗತ್ಯ

ಮನೆ ಮಂದಿ ಹಾಗೂ ಗೆಳೆಯರು ಪರಸ್ಪರ ಆತ್ಮೀಯವಾಗಿ ವರ್ತಿಸಬೇಕು. ಗೆಳೆಯರ ಬಗ್ಗೆ ಅನುಮಾನ ಬಂದರೆ ತತ್‌ಕ್ಷಣ ವಿನಯದಿಂದ ಮಾತನಾಡಿಸಿ ಅವರನ್ನು ಪರಿವರ್ತನೆ ಮಾಡಲು ಸಾಧ್ಯವಿದೆ. ಹೆಲ್ಪ್ಲೈನ್‌ ಸಂಖ್ಯೆ 104ಕ್ಕೆ ಕರೆಮಾಡಿಯೂ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲು ಸಾಧ್ಯವಿದೆ. ಡಾ| ಮಾನಸ್‌ ಕುಮಾರ್‌, ಮಾನಸಿಕ ತಜ್ಞರು, ಬಾಳಿಗ ಆಸ್ಪತ್ರೆ

ಪುನೀತ್‌ ಸಾಲ್ಯಾನ್

ಟಾಪ್ ನ್ಯೂಸ್

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Kapu Assembly constituency: ನಕಲಿ ಮತದಾನ;ಆರೋಪ

Kapu Assembly constituency: ನಕಲಿ ಮತದಾನ;ಆರೋಪ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.