ಸಮಾಧಾನದಿಂದ ಸಮಸ್ಯೆ ಆಲಿಸಿದ ದೊರೆ

ಉಜಳಂಬದಲ್ಲಿ ಗ್ರಾಮ ವಾಸ್ತವ್ಯ-ಜನಸ್ಪಂದನ ಕಾರ್ಯಕ್ರಮ ಯಶಸ್ವಿ

Team Udayavani, Jun 29, 2019, 10:36 AM IST

29-June-6

ಬಸವಕಲ್ಯಾಣ: ಉಜಳಂಬ ಗ್ರಾಮದಲ್ಲಿ ನಡೆದ ಗ್ರಾಮ ವಾಸ್ತವ್ಯ ಮತ್ತು ಜನಸ್ಪಂದನ ಕಾರ್ಯಕ್ರಮದಲ್ಲಿ ಮಹಾರಾಷ್ಟ್ರದ ಔಸಾ ಮಹಾರಾಜರ ಚಕ್ರಿ ಭಜನೆ ಪ್ರದರ್ಶನ ಗಮನ ಸೆಳೆಯಿತು.

ಬಸವಕಲ್ಯಾಣ: ಉಜಳಂಬ ಗ್ರಾಮದಲ್ಲಿ ಗುರುವಾರ ಹಮ್ಮಿಕೊಂಡಿದ್ದ ಮುಖ್ಯಮಂತ್ರಿಗಳ ಗ್ರಾಮ ವಾಸ್ತವ್ಯ ಮತ್ತು ಜನಸ್ಪಂದನ ಕಾರ್ಯಕ್ರಮ ಯಶಸ್ವಿಯಾಗಿ ನಡೆಯಿತು.

ಉದ್ಘಾಟನಾ ಕಾರ್ಯಕ್ರಮ ಮುಗಿದ ನಂತರ ಮಧ್ಯಾಹ್ನ 3 ಗಂಟೆಗೆ ಸಾರ್ವಜನಿಕ ಅಹವಾಲು ಸ್ವೀಕರಿಸುವ ಕಾರ್ಯಕ್ರಮ ಆರಂಭವಾಯಿತು. ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು ರಾತ್ರಿ 10:30ರ ಗಂಟೆ ವರೆಗೆ ಜನರ ಸಮಸ್ಯೆಗಳನ್ನು ಆಲಿಸಿದರು. ಜಿಲ್ಲೆ ಹಾಗೂ ತಾಲೂಕು ಪ್ರದೇಶಗಳಿಂದ ಆಗಮಿಸಿ ಸುಮಾರ 4000 ಸಾವಿರ ಅರ್ಜಿಗಳಲ್ಲಿ ಕೆಲವನ್ನು ಸ್ಥಳದಲ್ಲಿಯೇ ಬಗೆಹರಿಸಿದರು. ಮತ್ತೆ ಕೆಲವಗಳಿಗೆ ಸಂಬಂಧ ಪಟ್ಟ ಅಧಿಕಾರಿಗಳನ್ನು ಕರೆಸಿ ಇಷ್ಟು ದಿನಗಳ ಒಳಗೆ ಸಾರ್ವಜನಿಕರ ಸಮಸ್ಯೆ ಬಗೆಹರಿಸಬೇಕು ಎಂದು ಆದೇಶ ಮಾಡಿದರು.

ಮುಖ್ಯಮಂತ್ರಿಗಳು ಆಯಾಸವಿಲ್ಲದಂತೆ ಸುಮಾರು 8 ಗಂಟೆ ಕಾಲ ಸಮಾಧಾನದಿಂದ ವೃದ್ಧರ, ಅಂಗವಿಕಲರ, ರೈತರ ಹಾಗೂ ವಿಧವಾ ವೇತನ, ಬೆಳೆ ವಿಮೆ, ಬ್ಯಾಂಕ್‌ ಸಾಲಮನ್ನಾಗೆ ಸಂಬಂಧಿಸಿ ಪ್ರತಿಯೊಂದು ಸಮಸ್ಯೆಗಳನ್ನು ಆಲಿಸಿ ಬಗೆಹರಿಸಿದರು. ಸುಮಾರು 10:30ರ ವರೆಗೆ ಸಾರ್ವಜನಿಕರ ಅಹವಾಲುಗಳು ಸ್ವೀಕರಿಸಿ, 11:45ರ ವರೆಗೆ ವಿವಿಧ ಶಾಲಾ ಮಕ್ಕಳಿಂದ ನಡೆದ ಸಾಂಸ್ಕೃತಿಕ ಕಾರ್ಯಕ್ರಮ ವೀಕ್ಷಿಸಿದರು. ನಂತರ ಸಚಿವ ರಾಜಶೇಖರ ಪಾಟೀಲ ಹಾಗೂ ವಿಧಾನ ಪರಿಷತ್‌ ಸದಸ್ಯ ವಿಜಯ ಸಿಂಗ್‌ ಅವರ ಜೊತೆಗೆ ಊಟ ಮಾಡಿ ಕೋಣೆಯಲ್ಲಿ ಮಲಗಿದರು.

ಸಾಂಸ್ಕೃತಿ ಕಾರ್ಯಕ್ರಮ: ವಿವಿಧ ಕಲಾ ತಂಡಗಳಿಂದ ನಡೆದ ಸಾಂಸ್ಕೃತಿಕ ಕಾರ್ಯಕ್ರಮ ಎಲ್ಲರ ಗಮನ ಸೆಳೆಯಿತು. ಬೀದರ್‌ನ ನೂಪುರ ನೃತ್ಯ ಕಲಾತಂಡದಿಂದ ನೃತ್ಯ ಪ್ರದರ್ಶನ, ಭಾಲ್ಕಿ ಕಡಿಯಾಳ ಮಕ್ಕಳಿಂದ ನಾಟಕ, ಲಮಾಣಿ ನೃತ್ಯ ಹಾಗೂ ಮಹಾರಾಷ್ಟ್ರದ ಚಕ್ರಿ ಭಜನೆ ಎಲ್ಲರ ಗಮನ ಸೆಳೆಯಿತು.

ಪಾರ್ಕಿಂಗ್‌ ವ್ಯವಸ್ಥೆ: ಕಾರ್ಯಕ್ರಮಕ್ಕೆ ಆಗಮಿಸಿದ ಸಾರ್ವಜನಿಕರಿಗೆ, ಗಣ್ಯರಿಗೆ ಯಾವುದೇ ತೊಂದರೆ ಆಗದಂತೆ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ನೇತೃತ್ವದಲ್ಲಿ ಅಚ್ಚುಕಟ್ಟಾದ ಪಾರ್ಕಿಂಗ್‌ ವ್ಯವಸ್ಥೆ ಮಾಡಲಾಗಿತ್ತು. ಅಧಿಕಾರಿಗಳು ಮತ್ತು ಗಣ್ಯ ವ್ಯಕ್ತಿಗಳ ವಾಹನಗಳು ಮಾತ್ರ ಒಳಗಡೆ ಹೋಗಲು ಅವಕಾಶ ಮಾಡಿಕೊಡಲಾಗಿತ್ತು. ಉಳಿದ ವಾಹನಗಳು ವೇದಿಕೆಯಿಂದ 1 ಕಿ.ಮೀ ದೂರದಲ್ಲಿ ನಿಲ್ಲಿಸಲು ವ್ಯವಸ್ಥೆ ಮಾಡಲಾಗಿತ್ತು. ಇದರಿಂದ ಜನ ಹಾಗೂ ವಾಹನ ಸಂಚಾರಕ್ಕೆ ಯಾವುದೇ ತೊಂದರೆಯಾಗಲಿಲ್ಲ.

ಗ್ರಾಮ ವಾಸ್ತವ್ಯ ಹಾಗೂ ಜನಸ್ಪಂದನ ಕಾರ್ಯಕ್ರಮದಲ್ಲಿ ಭಾಗವಹಿಸಿದ ಸಾರ್ವಜನಿಕರಿಗೆ ಪ್ರತ್ಯೆಕವಾದ ಪೆಂಡಾಲ್ನಲ್ಲಿ ಹುಗ್ಗಿ ಹಾಗೂ ಮಜ್ಜಿಗೆ ವ್ಯವಸ್ಥೆ ಮಾಡಲಾಗಿತ್ತು. ಕಾರ್ಯಕ್ರಮಕ್ಕೆ ಬರುವ ಅಂಗವಿಕಲರಿಗೆ ಯಾವುದೇ ಸಮಸ್ಯೆ ಆಗದಂತೆ ವ್ಹೀಲ್ ಚೇರ್‌ ಹಾಗೂ ಪ್ರತ್ಯೇಕ ಕೌಂಟರ್‌ ವ್ಯವಸ್ಥೆ ಮಾಡಲಾಗಿತ್ತು. ಇದರಿಂದ ಅಂಗವಿಕಲರು ಮತ್ತು ವೃದ್ಧರಿಗೆ ಯಾವುದೇ ತೊಂದರೆಯಾಗಲಿಲ್ಲ.

ಮರಾಠ ಸಮಾಜದಿಂದ ಮನವಿ: ಗಡಿ ಭಾಗದಲ್ಲಿ ಮರಾಠ ಸಮಾಜವರು ಹೆಚ್ಚು ಸಂಖ್ಯೆಯಲ್ಲಿದ್ದಾರೆ. ಮರಾಠ ಸಮಾಜವನ್ನು 3ಬಿಯಿಂದ 2ಎ ಸೇರ್ಪಡೆ ಮಾಡಬೇಕು ಎಂದು ಮಾಜಿ ಶಾಸಕ ಮಾರುತಿರಾವ್‌ ಮೂಳೆ ನೇತೃತ್ವದಲ್ಲಿ ಸಾಕಷ್ಟು ಬಾರಿ ಹೋರಾಟ ಮಾಡಿದರೂ ಪ್ರಯೋಜವಾಗಿಲ್ಲ. ಅ ಕೆಲಸ ಮಾಡಬೇಕು. ಮತ್ತು ಮರಾಠ ಅಭಿವೃದ್ಧಿ ನಿಗಮ ಮಂಡಳಿ ಸ್ಥಾಪನೆ ಮಾಡಬೇಕು ಎಂದು ಮರಾಠ ಸಮಾಜದಿಂದ ಮನವಿ ಮಾಡಲಾಯಿತು.

ಗ್ರಾಮಸ್ಥರಿಗೆ ಸಂತೋಷ: ಗ್ರಾಮದ ಸಮಗ್ರ ಅಭಿವೃದ್ಧಿ ಕಾಮಗಾರಿಗಳಿಗೆ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು 32 ಕೋಟಿ ರೂ. ಅನುದಾನ ನೀಡಿರುವುದು ಗ್ರಾಮಸ್ಥರಲ್ಲಿ ಸಂತಸ ಮೂಡಿಸಿದೆ. ಹಲವು ವರ್ಷಗಳಿಂದ ನನೆಗುದಿಗೆ ಬಿದ್ದಿರುವ ಬೇಡಿಕೆಗಳನ್ನು ಒಂದೇ ಸಲ ಈಡೇರಿಸಿದ್ದಾರೆ ಎಂದು ಹರ್ಷ ವ್ಯಕ್ತಪಡಿಸಿದ್ದಾರೆ.

ಟಾಪ್ ನ್ಯೂಸ್

ಛತ್ತೀಸ್‌ಗಢದ ಕಂಕೇರ್‌ನಲ್ಲಿ ಎನ್ ಕೌಂಟರ್: ನಕ್ಸಲ್ ನಾಯಕ ಸೇರಿ 18 ಮಾವೋವಾದಿಗಳ ಹತ್ಯೆ

ಛತ್ತೀಸ್‌ಗಢದ ಕಂಕೇರ್‌ನಲ್ಲಿ ಎನ್ ಕೌಂಟರ್: ನಕ್ಸಲ್ ನಾಯಕ ಸೇರಿ 18 ಮಾವೋವಾದಿಗಳ ಹತ್ಯೆ

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

ವಿಜಯಪುರ: ಗಂಡನಿಂದ ಕಿತ್ತು ಹೆಂಡತಿಗೆ ಕೊಡುವುದೇ ಸಿದ್ದು ಗ್ಯಾರಂಟಿ: ಸಿ.ಟಿ.ರವಿ ವಾಗ್ದಾಳಿ

ವಿಜಯಪುರ: ಗಂಡನಿಂದ ಕಿತ್ತು ಹೆಂಡತಿಗೆ ಕೊಡುವುದೇ ಸಿದ್ದು ಗ್ಯಾರಂಟಿ: ಸಿ.ಟಿ.ರವಿ ವಾಗ್ದಾಳಿ

Bigg Boss OTT ಸೀಸನ್‌ -3 ಅನೌನ್ಸ್:‌ ಈ ಬಾರಿ ಮತ್ತೆ ಸಲ್ಮಾನ್‌ ಖಾನ್ ನಿರೂಪಣೆ

Bigg Boss OTT ಸೀಸನ್‌ -3 ಅನೌನ್ಸ್:‌ ಈ ಬಾರಿ ಮತ್ತೆ ಸಲ್ಮಾನ್‌ ಖಾನ್ ನಿರೂಪಣೆ

Dwarakish:ಸೋಲು, ಗೆಲುವಿನ ಪಯಣ; ವ್ಯಾಪಾರ ಬಿಟ್ಟು ಖ್ಯಾತ ನಟನಾದ ಪ್ರಚಂಡ ಕುಳ್ಳ ದ್ವಾರಕೀಶ್!

Dwarakish:ಸೋಲು, ಗೆಲುವಿನ ಪಯಣ; ವ್ಯಾಪಾರ ಬಿಟ್ಟು ಖ್ಯಾತ ನಟನಾದ ಪ್ರಚಂಡ ಕುಳ್ಳ ದ್ವಾರಕೀಶ್!

19

Aamir Khan: ರಾಜಕೀಯ ಪಕ್ಷದ ಪರ ಪ್ರಚಾರ; ನಕಲಿ ವಿಡಿಯೋ ವಿರುದ್ಧ FIR ದಾಖಲಿಸಿದ ಆಮಿರ್‌

BCCI instructions to share photos of the IPL match day ground!

IPL 2024 ಪಂದ್ಯ ದಿನ ಮೈದಾನದ ಫೋಟೋ ಹಂಚದಂತೆ ಬಿಸಿಸಿಐ ಸೂಚನೆ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5-shirva

ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇವಸ್ಥಾನ

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

ವಿಜಯಪುರ: ಗಂಡನಿಂದ ಕಿತ್ತು ಹೆಂಡತಿಗೆ ಕೊಡುವುದೇ ಸಿದ್ದು ಗ್ಯಾರಂಟಿ: ಸಿ.ಟಿ.ರವಿ ವಾಗ್ದಾಳಿ

ವಿಜಯಪುರ: ಗಂಡನಿಂದ ಕಿತ್ತು ಹೆಂಡತಿಗೆ ಕೊಡುವುದೇ ಸಿದ್ದು ಗ್ಯಾರಂಟಿ: ಸಿ.ಟಿ.ರವಿ ವಾಗ್ದಾಳಿ

Loksabha

Udupi Chikmagalur Lok Sabha Election: ಮಹಿಳಾ ಮತದಾರರೇ ಅಧಿಕ

ಮೂಡಿಗೆರೆ: ನೆಮ್ಮದಿ ಕಳೆದುಕೊಂಡ ಜನರಿಂದ ತಕ್ಕ ಉತ್ತರ- ಕೆ.ಜಯಪ್ರಕಾಶ್‌ ಹೆಗ್ಡೆ

ಮೂಡಿಗೆರೆ: ನೆಮ್ಮದಿ ಕಳೆದುಕೊಂಡ ಜನರಿಂದ ತಕ್ಕ ಉತ್ತರ- ಕೆ.ಜಯಪ್ರಕಾಶ್‌ ಹೆಗ್ಡೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಛತ್ತೀಸ್‌ಗಢದ ಕಂಕೇರ್‌ನಲ್ಲಿ ಎನ್ ಕೌಂಟರ್: ನಕ್ಸಲ್ ನಾಯಕ ಸೇರಿ 18 ಮಾವೋವಾದಿಗಳ ಹತ್ಯೆ

ಛತ್ತೀಸ್‌ಗಢದ ಕಂಕೇರ್‌ನಲ್ಲಿ ಎನ್ ಕೌಂಟರ್: ನಕ್ಸಲ್ ನಾಯಕ ಸೇರಿ 18 ಮಾವೋವಾದಿಗಳ ಹತ್ಯೆ

6-thyroid

Thyroid Disease: ಥೈರಾಯ್ಡ್ ಅನಾರೋಗ್ಯ ನಿರ್ಲಕ್ಷಿಸಿದರೆ ಮಾರಕವಾದೀತು ಎಚ್ಚರ!

5-shirva

ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇವಸ್ಥಾನ

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

4-health

Nutritional Foods: ಹದಿಹರಯದಲ್ಲಿ ಪೌಷ್ಟಿಕಾಂಶ ಅಗತ್ಯಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.