ಕೇಂದ್ರದಿಂದ ಸಾವಿರ ಕೋಟಿ ರೂ. ಪರಿಹಾರ
Team Udayavani, Aug 23, 2019, 1:15 PM IST
ಕಾರವಾರ: ನೆರೆ ಪರಿಹಾರ ಉಸ್ತುವಾರಿ ಸಚಿವ ಜಗದೀಶ ಶೆಟ್ಟರ ಸಂತ್ರಸ್ತರ ಸಮಸ್ಯೆ ಆಲಿಸಿದರು.
ಕಾರವಾರ: ರಾಜ್ಯದ ನೆರೆ ಹಾಗೂ ತೀವ್ರ ಮಳೆಯ ಪರಿಸ್ಥಿತಿ ಗಮನಿಸಿದ ಕೇಂದ್ರ ಸರ್ಕಾರ ಈಗಾಗಲೆ 1000 ಕೋಟಿ ರೂ. ಪರಿಹಾರ ಬಿಡುಗಡೆ ಮಾಡಿದೆ ಎಂದು ಸಚಿವ ಜಗದೀಶ್ ಶೆಟ್ಟರ್ ಹೇಳಿದರು.
ನೆರೆ ಪೀಡಿತ ವಿವಿಧ ಪ್ರದೇಶಗಳಿಗೆ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದ ಅವರು ಗ್ರಾಮಸ್ಥರ ಅಳಲು ಕೇಳಿದರು. ನೆರೆ ಪರಿಸ್ಥಿತಿ ಅಧ್ಯಯನ ನಡೆಸಿ ಮುಖ್ಯಮಂತ್ರಿಗಳಿಗೆ ವರದಿ ನೀಡಲಾಗುವುದು ಎಂದು ವಿವರಿಸಿದರು.
ಈಗಾಗಲೆ ನೆರೆ ಪೀಡಿತ ಪ್ರದೇಶಗಳಲ್ಲಿ ಪರಿಹಾರ ಕ್ರಮಗಳನ್ನು ಜಿಲ್ಲಾಡಳಿತ ಕೈಗೊಂಡಿದೆ. ಯಾವುದೇ ಹಣಕಾಸಿನ ಕೊರತೆ ಇಲ್ಲ. ಪ್ರಸ್ತುತ ಬಿಡುಗಡೆ ಮಾಡಲಾದ ಅನುದಾನ ಖರ್ಚಾದ ಬಳಿಕ, ಹೆಚ್ಚುವರಿ ಅನುದಾನ ಬಿಡುಗಡೆ ಮಾಡಲಾಗುವುದು. ಜನ ಹಾಗೂ ರೈತರು, ತೋಟಗಾರಿಕಾ ಬೆಳೆಗಾರರು ಆತಂಕ ಪಡಬೇಕಿಲ್ಲ ಎಂದರು.
ಶಾಶ್ವತ ಸೇತುವೆ ನಿರ್ಮಿಸಿಕೊಡಿ: ರಾಮನಗುಳಿ ಕಲ್ಲೇಶ್ವರ ಬಳಿ ಗಂಗಾವಳಿ ನದಿಗೆ ಶಾಶ್ವತ ಸೇತುವೆ ನಿರ್ಮಿಸಿಕೊಡಿ ಎಂದು ಆ ಭಾಗದ ಜನರು ಸಚಿವರಿಗೆ ಮನವಿ ಮಾಡಿದರು.
ಗಂಗಾವಳಿಗೆ ನಿರ್ಮಿಸಿದ್ದ ತೂಗು ಸೇತುವೆ ಪ್ರವಾಹದಲ್ಲಿ ಕೊಚ್ಚಿಹೋದ ಹಿನ್ನೆಲೆಯಲ್ಲಿ, ತೀವ್ರ ತೊಂದರೆ ಅನುಭವಿಸುವಂತಾಗಿದೆ ಎಂದು ಸಚಿವರಿಗೆ ವಿವರಿಸಿದರು. ಸಮಸ್ಯೆ ಆಲಿಸಿದ ಸಚಿವ ಶೆಟ್ಟರ್ ಸಂತ್ರಸ್ತರಿಗೆ ಅಗತ್ಯ ಮೂಲಸೌಲಭ್ಯ ಒದಗಿಸಲಾಗುವುದು. ಸೂಕ್ತ ಪರಿಹಾರ ನೀಡಲಾಗುವುದು, ಯಾರೂ ಆತ್ಮವಿಶ್ವಾಸ ಕಳೆದುಕೊಳ್ಳಬಾರದು ಎಂದು ನುಡಿದರು.
ನೆರೆಯಿಂದ ಪೂರ್ಣ ಕುಸಿದ ಮನೆಗಳಿಗೆ 5 ಲಕ್ಷ ರೂ., ಭಾಗಶಃ ಹಾನಿಯಾದ ಮನೆಗಳ ರಿಪೇರಿಗೆ 1 ಲಕ್ಷ ರೂ. ಸರ್ಕಾರ ನೀಡಲಿದೆ ಎಂದರು.
Ad
ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ, ಜಯನಗರ ಬೆಂಗಳೂರು, ಮೋ- 8884889444