17ನೇ ಶತಮಾನದ ಮಣ್ಣಿನ ಮಡಿಕೆಗಳು ಪತ್ತೆ

Team Udayavani, Dec 17, 2020, 3:00 PM IST

17th Century Clay Pottery Discovery

ಶಿರಸಿ: 17ನೇ ಶತಮಾನಕ್ಕೆ ಸಂಬಂಧಿ ಸಿದ ಮಣ್ಣಿನ ಕುಡಿಯುವ ನೀರಿನ ಮಡಿಕೆ, ಮಣ್ಣಿನ ಪಾತ್ರೆಗಳು ತಾಲೂಕಿನ ನೆಗ್ಗು ಗ್ರಾಪಂ ವ್ಯಾಪ್ತಿಯ ನೇರ್ಲವಳ್ಳಿ ಗ್ರಾಮದಲ್ಲಿ ಪತ್ತೆಯಾಗಿವೆ.

ಜೈನರ ಕಾಲದಲ್ಲಿ ಇದು ಬಳಕೆ ಆಗಿರಬಹುದು ಎಂದು ಅಂದಾಜಿಸಲಾಗಿದೆ. ಇಲ್ಲಿಯ ದೇವಿಕೈ ಮಜರೆಯಲ್ಲಿ ಈ ಕುರುಹುಗಳು ಪತ್ತೆಯಾಗಿವೆ. ಇಲ್ಲಿಯ ಅರಣ್ಯ ಪ್ರದೇಶದಲ್ಲಿ ಇಲಾಖೆ ಗಿಡಗಳನ್ನು ನೆಡುವ ಸಲುವಾಗಿ ಗುಂಡಿಗಳನ್ನು ನಿರ್ಮಿಸುತ್ತಿದೆ. ಸುಮಾರು ಎರಡು ಅಡಿ ಆಳದ ಗುಂಡಿಗಳನ್ನು ತೋಡುವಾಗ ಈ ಮಡಿಕೆಗಳು ಪತ್ತೆಯಾಗಿವೆ. ಸನಿಹದಲ್ಲಿಯೇ ಜೀರ್ಣಾವಸ್ಥೆಯಲ್ಲಿರುವ ಸಾವಿರಾರು ವರ್ಷಗಳ ಹಿಂದಿನ ಕಲ್ಲೇಶ್ವರ ದೇವಾಲಯವಿದ್ದು, ದೇವಾಲಯಕ್ಕೂ ಈ ಮಡಿಕೆಗಳಿಗೂ ಸಂಬಂಧವಿರಬಹುದು ಎಂದು ಸ್ಥಳೀಯರು ಅಂದಾಜಿಸಿದ್ದಾರೆ.

ಮಹಿಳೆಯ ಚಿತ್ರ ಇರುವ ಮಡಿಕೆಗಳು, ಕಿರೀಟ ಹೊತ್ತ ಮಡಿಕೆಗಳು ಇಲ್ಲಿ ಪತ್ತೆಯಾಗಿವೆ. ಮೂರು ಮಡಿಕೆಗಳು ಪತ್ತೆಯಾಗಿದ್ದು, ಒಡೆದ ಸ್ಥಿತಿಯಲ್ಲಿವೆ. ಈ ಜಾಗದಲ್ಲಿ ಉತVನನ ನಡೆಸಿದರೆ ಇನ್ನಷ್ಟು ಪುರಾತನ ಮಡಿಕೆಗಳು ಸಿಗಬಹುದು ಎಂದು ಸ್ಥಳೀಯರು ಅಂದಾಜಿಸಿದ್ದಾರೆ. ಇಲ್ಲಿಯ ಮಣ್ಣಿನ ಮಡಿಕೆಗಳನ್ನು ಪರಿಶೀಲಿಸಿರುವ ಇತಿಹಾಸ ತಜ್ಞ ಲಕ್ಷ್ಮೀಶ ಸೋಂದಾ, 17ನೇ ಶತಮಾನಕ್ಕೆ ಇವು ಸೇರಿದ್ದಾಗಿರಬಹುದು. ಜೈನ ಸಮುದಾಯದಲ್ಲಿ ಬಂಡಿ ಹಬ್ಬ ಆಚರಣೆ ನಡೆಯುತ್ತದೆ. ಆ ಹಬ್ಬದಲ್ಲಿ ಈ ರೀತಿಯ ಆಕೃತಿಗಳನ್ನು ರಚಿಸಿ ರಾತ್ರಿ ವೇಳೆ ಬೆಂಕಿ ಹಾಕಿಕೊಂಡು ನರ್ತಿಸುತ್ತ ಅವುಗಳನ್ನು ಹೊರ ಪ್ರದೇಶದಲ್ಲಿ ಇಡುವ ಸಂಪ್ರದಾಯ ಸ್ಥಳೀಯವಾಗಿ ನಡೆಯುತ್ತಿತ್ತು ಎಂದಿದ್ದಾರೆ. ಇತಿಹಾಸ ತಜ್ಞ ಡಾ| ಅ. ಸುಂದರ ಅವರೂ ಸಹ ಜೈನರ ಈ ಸಂಪ್ರದಾಯದ ಬಗ್ಗೆ ಇಟಲಿಯ ಸೆಮಿನಾರ್‌ನಲ್ಲಿ ಸಹ ಪ್ರಬಂಧ ಮಂಡನೆ ನಡೆಸಿದ್ದರು.

ಇದನ್ನೂ ಓದಿ:ಕಿಂಡಿ ಅಣೆಕಟ್ಟು ಕಾಮಗಾರಿ ಆರಂಭ

ಅವರು ಪ್ರತಿಪಾದಿಸಿದ್ದ ಸಂಗತಿಗಳಿಗೆ ಈ ಅವಶೇಷಗಳ ಹೋಲಿಕೆ ಕಂಡುಬರುತ್ತಿದೆ. ಕೆಲ ಕಲಾಕೃತಿಗಳು ಇತಿಹಾಸ ಪೂರ್ವ ಯುಗದ್ದಾಗಿಯೂ ಕಂಡುಬರುತ್ತಿದೆ. ಈ ಬಗ್ಗೆ ಸಂಪೂರ್ಣ ಅಧ್ಯಯನ ನಡೆಸಬೇಕಾಗಿದೆ. ಇಲ್ಲಿ ದೊರೆತ ಕುರುಹುಗಳನ್ನು ಜೋಪಾನ ಮಾಡಬೇಕಾದ ಅಗತ್ಯತೆ ಇದೆ ಎಂದಿದ್ದಾರೆ. ಜಾನ್ಮನೆ ವಲಯಾರಣ್ಯಾಧಿಕಾರಿ ಪವಿತ್ರ ಸಿ.ಜೆ., ಈ ಕುರುಹುಗಳನ್ನು ಸಂಗ್ರಹಿಸಿ ಸುರಕ್ಷಿತವಾಗಿ ಇಡಲಾಗುವುದು ಎಂದು ತಿಳಿಸಿದ್ದಾರೆ.

ಟಾಪ್ ನ್ಯೂಸ್

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’‌

ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’‌

Modi 3

PM Modi ಏ.28ರಂದು ಉತ್ತರಕನ್ನಡಕ್ಕೆ?; ಯಲ್ಲಾಪುರದಲ್ಲಿ ಬಹಿರಂಗ ಸಮಾವೇಶ?

Bhatkal: ಇಬ್ಬರು ಸಮುದ್ರಪಾಲು

Bhatkal: ಇಬ್ಬರು ಸಮುದ್ರಪಾಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

4-annamalai

Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.