ರಾಜ್ಯದಲ್ಲಿ 4 ಸಾವಿರ ಹೊಸ ಬಸ್‌ ಖರೀದಿ

ಉತ್ತರ ಕನ್ನಡ ಜಿಲ್ಲೆಗೆ 150 ಬಸ್‌ ನೀಡುವ ಭರವಸೆ

Team Udayavani, May 5, 2022, 9:32 AM IST

2

ಶಿರಸಿ: ರಾಜ್ಯದಲ್ಲಿ ಹೊಸದಾಗಿ 4 ಸಾವಿರ ಬಸ್‌ ಖರೀದಿಸಲಾಗುತ್ತಿದ್ದು, ಅದರಲ್ಲಿ 150 ಬಸ್‌ ಗಳನ್ನು ಉತ್ತರ ಕನ್ನಡ ಜಿಲ್ಲೆಗೆ ನೀಡಲಾಗುವುದು ಎಂದು ಸಾರಿಗೆ ಸಚಿವ ಬಿ ಶ್ರೀರಾಮುಲು ಹೇಳಿದರು.

ನಗರದ ಹಳೇ ಬಸ್‌ ನಿಲ್ದಾಣದ ನೂತನ ಕಟ್ಟಡ ಕಾಮಗಾರಿಗೆ ಬುಧವಾರ ಶಂಕುಸ್ಥಾಪನೆ ನೆರವೇರಿಸಿ ಅವರು ಮಾತನಾಡಿದರು.

ಬೆಂಗಳೂರಿನ ಬಿಎಂಟಿಸಿ ವ್ಯಾಪ್ತಿಯಲ್ಲಿ ಇರುವ ಹೆಚ್ಚುವರಿ ಚಾಲಕ, ಕಂಡಕ್ಟರ್‌ ಗಳನ್ನು ಕೊರತೆ ಇರುವ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಗೆ ವರ್ಗಾಯಿಸುವ ಬಗ್ಗೆ ಪರಿಶೀಲಿಸಲಾಗುವುದು ಎಂದರು. ಚಾಲಕ ವೃತ್ತಿಯಲ್ಲಿರುವವರು ಹಲವು ಒತ್ತಡದಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಪ್ರತಿ ತಿಂಗಳೂ ಅವರಿಗೆ ಸರಿಯಾದ ಸಮಯಕ್ಕೆ ಸಂಬಳ ನೀಡುವ ವ್ಯವಸ್ಥೆ ಮಾಡಲಾಗುವುದು. ಪ್ರತಿಭಟನೆ ವೇಳೆ ವರ್ಗಾವಣೆಗೊಂಡವರಿಗೆ ಅವರು ಮೊದಲು ಕಾರ್ಯನಿರ್ವಹಿಸುತ್ತಿದ್ದ ಡಿಪೋದಲ್ಲಿ ಕೆಲಸ ಮಾಡುವ ಅವಕಾಶ ಮಾಡಿಕೊಡಲಾಗುವುದು ಎಂದರು.

ವಿಧಾನ ಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಮಾತನಾಡಿ, ಶಿರಸಿಯ ಹಳೆ ಬಸ್‌ ನಿಲ್ದಾಣ 1968 ರಲ್ಲಿ ನಿರ್ಮಾಣವಾಗಿತ್ತು. ಕಟ್ಟಡ ಶಿಥಿಲಗೊಂಡ ಕಾರಣ ಹೊಸ ಬಸ್‌ ನಿಲ್ದಾಣ ನಿರ್ಮಾಣಕ್ಕೆ ಮುಂದಾದರೂ ಕೆಲ ತೊಂದರೆಗಳು ಎದುರಾಗಿದ್ದವು. ಈಗ 6.78 ಕೋಟಿ ರೂ. ವೆಚ್ಚದಲ್ಲಿ 12 ತಿಂಗಳಿನಲ್ಲಿ ಹೊಸ ಬಸ್‌ ನಿಲ್ದಾಣ ನಿರ್ಮಿಸಲಾಗುವುದು. ಪಂಡಿತ ಸಾರ್ವಜನಿಕ ಲೈಬ್ರರಿ ಕಟ್ಟಡದ ಸ್ಥಳವನ್ನೂ ಬಳಸಿಕೊಳ್ಳುವ ಬಗ್ಗೆ ಪ್ರಯತ್ನಿಸಲಾಗುವುದು ಎಂದರು.

ವಾಯವ್ಯ ರಸ್ತೆ ಸಾರಿಗೆ ಸಂಸ್ಥೆ ಅಧ್ಯಕ್ಷ ವಿ.ಎಸ್‌. ಪಾಟೀಲ, ಸರಕಾರದಿಂದ ಹೊಸ ಬಸ್‌ ಖರೀದಿಗೆ ಅನುದಾನ ಬೇಕಾಗಿದೆ. ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಗೆ ಕನಿಷ್ಠ 500 ಬಸ್‌ ಅಗತ್ಯವಿದೆ ಎಂದರು.

ನಗರಸಭೆ ಅಧ್ಯಕ್ಷ ಗಣಪತಿ ನಾಯ್ಕ, ವಿಭಾಗೀಯ ನಿಯಂತ್ರಣಾಧಿಕಾರಿ ರಾಜಕುಮಾರ ಇತರರಿದ್ದರು.

ಬಸ್‌ ನಿಲ್ದಾಣವೆಂದರೆ ವಾಣಿಜ್ಯ ಮಳಿಗೆಯಲ್ಲ. ಪ್ರಯಾಣಿಕರ ಬಳಕೆಗೆ ಸಿಗಬೇಕು. ಆ ನಿಟ್ಟಿನಲ್ಲಿ ನಿಲ್ದಾಣ ನಿರ್ಮಿಸಲಾಗುವುದು. ವಿಶ್ವೇಶ್ವರ ಹೆಗಡೆ ಕಾಗೇರಿ ಸ್ಪೀಕರ್‌

ಸಾರಿಗೆ ನೌಕರರ ವೇತನ ಪರಿಷ್ಕರಣೆ ಬಗ್ಗೆ ಅರಿವಿದ್ದು, ಈ ಬಗ್ಗೆ ಚರ್ಚೆ ನಡೆಸಿ ಶೀಘ್ರ ಕ್ರಮ ಕೈಗೊಳ್ಳಲಾಗುವುದು. –ಬಿ. ಶ್ರೀರಾಮುಲು, ಸಚಿವ

ಗ್ರಾಮೀಣ ಪ್ರದೇಶಕ್ಕೆ ಕಂಡಕ್ಟರ್‌ ಡ್ರೈವರ್ ಕೊರತೆ ಉಂಟಾಗಿದ್ದು, ಇದನ್ನು ಸರಿಪಡಿಸಲು ಪ್ರಯತ್ನಿಸಲಾಗವುದು. –ವಿ.ಎಸ್‌.ಪಾಟೀಲ, ವಾಯುವ್ಯ ಸಾರಿಗೆ ಅಧ್ಯಕ್ಷ

ಟಾಪ್ ನ್ಯೂಸ್

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’‌

ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’‌

Modi 3

PM Modi ಏ.28ರಂದು ಉತ್ತರಕನ್ನಡಕ್ಕೆ?; ಯಲ್ಲಾಪುರದಲ್ಲಿ ಬಹಿರಂಗ ಸಮಾವೇಶ?

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.