ಕುಮಟಾ: ಹೆಂಡತಿ, ಮಗನನ್ನು ಕೊಂದು ವ್ಯಕ್ತಿ ಆತ್ಮಹತ್ಯೆ
Team Udayavani, Jul 8, 2022, 5:50 PM IST
ಕುಮಟಾ: ಕುಡಿದ ಮತ್ತಿನಲ್ಲಿ ವ್ಯಕ್ತಿಯೊರ್ವ ಜಗಳವಾಡಿ, ಹೆಂಡತಿ ಹಾಗೂ ಮಗನನ್ನು ಕೊಲೆ ಮಾಡಿ, ಬಳಿಕ ತಾನೂ ಆತ್ಮಹತ್ಯೆ ಮಾಡಿಕೊಂಡ ಘಟನೆ ತಾಲೂಕಿನ ಸಂತೆಗುಳಿ ಗಾ.ಪಂ ವ್ಯಾಪ್ತಿಯ ಬಂಗಣೆಯಲ್ಲಿ ನಡೆದಿದೆ.
ತಾಕಿ ಮರಾಠಿ (35), ಲಕ್ಷ್ಮಣ ಮರಾಠಿ (12) ಕೊಲೆಯಾದವರಾಗಿದ್ದು, ರಾಮ ಮರಾಠಿ (40) ಹೆಂಡತಿ ಮಗನನ್ನು ಕೊಲೆ ಮಾಡಿ ನಂತರ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಯಾಗಿದ್ದಾನೆ.
ವೃತ್ತಿಯಲ್ಲಿ ಕೃಷಿಕನಾಗಿರುವ ರಾಮ ಮರಾಠಿ ಗುರುವಾರ ಕುಡಿದ ಮತ್ತಿನಲ್ಲಿ ಮನೆಗೆ ಬಂದು ಮಲಗಿರುವ ಹೆಂಡತಿಯನ್ನು ಕತ್ತಿಯಿಂದ ಕೊಚ್ಚಿ ಕೊಲೆಗೈದಿದ್ದಾನೆ. ಈ ವೇಳೆ ಶಬ್ದ ಕೇಳಿ ಹೊರ ಬಂದ ಮಕ್ಕಳನ್ನು ಕಡಿಯಲು ಅಟ್ಟಿಸಿಕೊಂಡು ಹೋಗಿದ್ದಾನೆ. ಈ ವೇಳೆ ಓರ್ವ ಮಗ ಕೈಗೆ ಸಿಕ್ಕಿದ್ದು, ಆತನನ್ನು ಕತ್ತಿಯಿಂದ ಕಡಿದಿದ್ದಾನೆ. ಇನ್ನೋರ್ವ ತಪ್ಪಿಸಿಕೊಂಡು ಜೀವ ಉಳಿಸಿಕೊಂಡಿದ್ದಾರೆ. ನಂತರ ಮನೆಗೆ ಬಂದು ತಾನೂ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ತಿಳಿದು ಬಂದಿದೆ.
ಇದನ್ನೂ ಓದಿ: ಉಡುಪಿ: ಮುಂದಿನ 5 ದಿನಗಳ ಕಾಲ ಭಾರಿ ಮಳೆ ಸಾಧ್ಯತೆ
ಘಟನೆ ಕುಮಟಾ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ
Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್
ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ
ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ
ಕಾಂಗ್ರೆಸ್ ನವರು ಕೇಸರಿ ಶಾಲು ಹಾಕಿದಾಕ್ಷಣ ಮನಸ್ಥಿತಿ ಬದಲಾಗಲ್ಲ… ಶೆಟ್ಟರ್ ಆರೋಪ
MUST WATCH
ಹೊಸ ಸೇರ್ಪಡೆ
ಮೈಸೂರು:ಶೃಂಗೇರಿ ಶಂಕರ ಮಠ-ಮಾ. 30ರಿಂದ ಅಭಿನವ ಶಂಕರಾಲಯದ ಶತಮಾನೋತ್ಸವ ಆಚರಣೆ
Delhi: ದುಬಾರಿ ಮರ್ಸಿಡೆಸ್ ಕಾರಿನಲ್ಲಿ ಡ್ರಗ್ಸ್ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!
Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ
Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್ ಮೆಂಟ್ ಮಾಡಿಕೊಂಡ ಜೋಡಿ
RC 17: ಮತ್ತೆ ಒಂದಾದ ರಂಗಸ್ಥಳಂ ತಂಡ