Ankola; ಆಟೋ ಗೆ ಮೀನು ಲಾರಿ ಢಿಕ್ಕಿ: ಆರು ಮಂದಿಗೆ ಗಂಭೀರ ಗಾಯ
Team Udayavani, Aug 19, 2023, 10:45 PM IST
ಅಂಕೋಲಾ : ಆಟೋ ರಿಕ್ಷಾಕ್ಕೆ ಮೀನು ತುಂಬಿದ ಗೂಡ್ಸ್ ಲಾರಿ ಢಿಕ್ಕಿ ಹೊಡೆದ ಪರಿಣಾಮ ಆರು ಜನ ಗಂಭೀರವಾಗಿ ಗಾಯಗೊಂಡ ಘಟನೆ ಶನಿವಾರ ರಾತ್ರಿ ರಾ.ಹೆ. 66 ಶೇಟಗೇರಿ ಕ್ರಾಸ್ ಬಳಿ ನಡೆದಿದೆ.
ಆಟೋ ರಿಕ್ಷಾ ಚಾಲಕ ತಾಲೂಕಿನ ಪೂಜಗೇರಿ ನಿವಾಸಿ ವಿನೋದ ಚುಡಾಮಣಿ ಗಾವ್ಕಂರ (46) ಮತ್ತು ಆಟೋರಿಕ್ಷಾದಲ್ಲಿ ಪ್ರಯಾಣಿಸುತ್ತಿದ್ದ ಮುಂಬೈ ನಿವಾಸಿಗಳಾದ ಪರೇಶ ಪ್ರಭಾಕರ ಶೊಯೆನ್ (50) ಅವರ ಪತ್ನಿ ಭಾಗ್ಯಶ್ರೀ ಶೊಯೆನ್ (42) ಮಕ್ಕಳಾದ ಶಶಾಂಕ (16) ಗೌರಂಗ (10) ಸಂಬಂಧಿ ಮೀರಾ ನಂದಕುಮಾರ (77) ಎನ್ನುವರಿಗೆ ಗಂಭೀರ ಸ್ವರೂಪದ ಗಾಯಗಳಾಗಿವೆ.
ಅಂಕೋಲಾ ಕಡೆ ಹೋಗುತ್ತಿದ್ದ ಆಟೋರಿಕ್ಷಾಕ್ಕೆ ಹಿಂದಿನಿಂದ ಅತಿ ವೇಗದಲ್ಲಿ ಬಂದ ಮೀನು ತುಂಬಿದ ಲಾರಿ ಡಿಕ್ಕಿ ಹೊಡೆದಿರುವುದೇ ಈ ಅಪಘಾತಕ್ಕೆ ಕಾರಣವೆಂದು ತಿಳಿದು ಬಂದಿದೆ. ಈ ಸಂದರ್ಭದಲ್ಲಿ ಎರಡು ವಾಹನಗಳು ಜಖಂಗೊಂಡಿವೆ. ಮೀನು ಲಾರಿ ಚಾಲಕ ಕೇರಳ ಕಣ್ಣೂರು ನಿವಾಸಿ ಮಹಮ್ಮದ್ ಹಸೀಮ್ ಎಂಬಾತನ ಮೇಲೆ ದೂರು ದಾಖಲಾಗಿದ್ದು ಪಿಎಸ್ಐ ಸುನಿಲ್ ಹುಳ್ಳೊಳ್ಳಿ ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sirsi ; ಪ್ರಧಾನಿ ಮುಡಿಗೇರಿದ ಬೇಡರ ವೇಷದ ಕಿರೀಟ!
BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ
ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ
Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ
Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ
MUST WATCH
ಹೊಸ ಸೇರ್ಪಡೆ
Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ
Sirsi ; ಪ್ರಧಾನಿ ಮುಡಿಗೇರಿದ ಬೇಡರ ವೇಷದ ಕಿರೀಟ!
Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ
Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ
Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !