ಆಯುಷ್ಮಾನ್‌ ತೊಡಕು ನಿವಾರಣೆಗೆ ಬದ್ಧ

Team Udayavani, Aug 31, 2019, 12:11 PM IST

uk-tdy-1

ಹೊನ್ನಾವರ: ಆಯುಷ್ಮಾನ್‌ ಕಾರ್ಡ್‌ ವಿತರಣಾ ಕೇಂದ್ರವನ್ನು ಶಾಸಕರಾದ ದಿನಕರ ಶೆಟ್ಟಿ ಹಾಗೂ ಸುನೀಲ್ ನಾಯ್ಕ ಉದ್ಘಾಟಿಸಿದರು.

ಹೊನ್ನಾವರ: ರಾಜ್ಯ ಸರ್ಕಾರದ ಆರೋಗ್ಯ ಕರ್ನಾಟಕ ಯೋಜನೆಯಲ್ಲಿರುವ ತೊಡಕುಗಳನ್ನು ನಿವಾರಿಸಿ ಕೇಂದ್ರ ಸರ್ಕಾರದ ಆಯುಷ್ಮಾನ್‌ ಭಾರತ ಯೋಜನೆ ಪ್ರಯೋಜನ ಎಲ್ಲ ಕಾರ್ಡುದಾರರಿಗೂ ಸಿಗುವಂತೆ ಮಾಡಲು ನಾವು ಬದ್ಧರಾಗಿದ್ದೇವೆ ಎಂದು ಶಾಸಕ ದಿನಕರ ಶೆಟ್ಟಿ ಮತ್ತು ಸುನೀಲ ನಾಯ್ಕ ಹೇಳಿದರು.

ತಾಲೂಕು ಸರ್ಕಾರಿ ಆಸ್ಪತ್ರೆಯಲ್ಲಿ ನೂತನವಾಗಿ ತೆರೆಯಲಾದ ಆಯುಷ್ಮಾನ್‌ ಕಾರ್ಡ್‌ ವಿತರಣಾ ಕೇಂದ್ರವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಕೇಂದ್ರ ಸರ್ಕಾರದ ಕನಸಿನ ಯೋಜನೆ ಇದಾಗಿದ್ದು, ಇದರ ಪ್ರಯೋಜನ ಇಡೀ ದೇಶದ ಜನತೆಗೆ ಆರೊಗ್ಯ ಸುಧಾರಣೆಗೆ ಏಕರೂಪವಾಗಿ ಜಾರಿಗೆ ತರಲಾಗಿದ್ದು ನಮ್ಮ ರಾಜ್ಯದ ಆರೋಗ್ಯ ಕರ್ನಾಟಕ ಯೋಜನೆ ಸೇರಿಸಿ ಜಾರಿಗೆ ತರಲಾಗಿದೆ. ಇದರಲ್ಲಿ ಕೆಲವೊಂದು ದೋಷಗಳಿದ್ದು ಅದನ್ನು ಸರಿಪಡಿಸಲು ಮುಖ್ಯಮಂತ್ರಿಗಳೊಂದಿಗೆ ಈಗಾಗಲೇ ಚರ್ಚಿಸಿದ್ದು ಉತ್ತರಕನ್ನಡ ಸಹಿತ ಹಲವು ಜಿಲ್ಲೆಗಳಿಗೆ ಇದು ಸಮಸ್ಯೆಯಾಗಿದೆ. ಬಿಜೆಪಿಯ ಎಲ್ಲ ಶಾಸಕರು ಒಟ್ಟಾಗಿ ಶೀಘ್ರದಲ್ಲಿ ಆಯುಷ್ಮಾನ್‌ ಯೋಜನೆ ಕಾನೂನನ್ನು ಮಾತ್ರ ಅನ್ವಯಿಸುವಂತೆ ಮಾಡಲು ಸರ್ಕಾರ ನಿರ್ಣಯಿಸುವಂತೆ ಮಾಡಲಾಗುವುದು ಎಂದರು.

ಪ್ರಾಸ್ತಾವಿಕ ಮಾತನಾಡಿದ ತಾಲೂಕು ಆಸ್ಪತ್ರೆ ಮುಖ್ಯ ವೈದ್ಯಾಧಿಕಾರಿ ಡಾ| ರಾಜೇಶ ಕಿಣಿ, ಈವರೆಗೆ ಒಟ್ಟು ಈ ಯೋಜನೆಯಲ್ಲಿ 1,356 ಒಳ ರೋಗಿಗಳು ಚಿಕಿತ್ಸೆ ಪಡೆದು ಈ ಯೋಜನೆ ಲಾಭ ಪಡೆದಿದ್ದಾರೆ. ಮೂರನೇ ಹಂತದ ಚಿಕಿತ್ಸೆಗೆ ಈ ಆಸ್ಪತ್ರೆಯಿಂದ 881 ಜನ ಶಿಫಾರಸ್ಸು ಪಡೆದು ಚಿಕಿತ್ಸೆ ಪಡೆದಿದ್ದಾರೆ ಎಂದು ಹೇಳಿದರು.

ಕೇಂದ್ರದ ಮುಖ್ಯಸ್ಥ ಆರೋಗ್ಯ ಮಿತ್ರ ವೆಂಕಟೇಶ ಪಟಗಾರ ಮಾತನಾಡಿ ಈ ಕೇಂದ್ರದಲ್ಲಿ ಪ್ರತಿದಿನಕ್ಕೆ 50 ಕಾರ್ಡ್‌ಗಳನ್ನು ಮಾಡಿಕೊಡಲಾಗುವುದು. ಪ್ರತಿಯೊಬ್ಬರೂ ಬಿಪಿಎಲ್ ಹಾಗೂ ಎಪಿಎಲ್ ಕಾರ್ಡದಾರರು ಈ ಯೋಜನೆ ಲಾಭ ಪಡೆಯಲು ಸಾಧ್ಯವಿದೆ. ಮುಂಗಡವಾಗಿ ಫಾರ್ಮುಗಳನ್ನು ನೀಡಿ, ದಿನಾಂಕ, ವೇಳೆ ಸೂಚಿಸಲಾಗುವುದು. ಅಂದು ಬಂದು ಕಾರ್ಡ್‌ ಪಡೆಯಬೇಕೇ ವಿನಃ ಒತ್ತಡ ತರಬಾರದು. ಕಾರ್ಡಿಗೆ ಕೇವಲ 10 ರೂ. ಪಡೆಯಲಾಗುವುದು ಎಂದು ಹೇಳಿದರು. ಕಾರ್ಡ್‌ ಇಲ್ಲದವರು ಅವಸರಿಸದೆ ಬಿಪಿಎಲ್ ಕಾರ್ಡ್‌ ನೀಡಿ ಈ ಯೋಜನೆಯ ಪ್ರಯೋಜನ ಪಡೆಯಬಹುದು ಎಂದು ಹೇಳಿದರು.

ಪಪಂ ಸದಸ್ಯ ಮಹೇಶ ಮೇಸ್ತ, ಉಮೇಶ ನಾಯ್ಕ, ಮಂಜುನಾಥ ನಾಯ್ಕ, ವೈದ್ಯರು, ಸಿಬ್ಬಂದಿ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Karwar; ಬಿಜೆಪಿ ಅಭ್ಯರ್ಥಿ ಕಾಗೇರಿ ಜಿಲ್ಲಾ ವಿಭಜನೆಗೆ ಯತ್ನಿಸಿಲ್ಲ: ಸದಾನಂದ ಭಟ್

Karwar; ಬಿಜೆಪಿ ಅಭ್ಯರ್ಥಿ ಕಾಗೇರಿ ಜಿಲ್ಲಾ ವಿಭಜನೆಗೆ ಯತ್ನಿಸಿಲ್ಲ: ಸದಾನಂದ ಭಟ್

6-

Bhatkal Theft: ನಗರ, ಗ್ರಾಮೀಣ ಪ್ರದೇಶದ ಹಲವೆಡೆ ಮುಂಜಾನೆ ಸರಣಿ ಕಳ್ಳತನ

18-

Road Mishap: ಹೈಕಾಡಿಯಲ್ಲಿ ಕಾರು ಅಪಘಾತ: ನಾಲ್ವರಿಗೆ ಗಾಯ

Bhatkal ನೀರು ಪೋಲು; ಜಾಲಿ ಪಟ್ಟಣ ಪಂಚಾಯತ್ ನಿರ್ಲಕ್ಷ್ಯ; ಜನರ ಆಕ್ರೋಶ

Bhatkal ನೀರು ಪೋಲು; ಜಾಲಿ ಪಟ್ಟಣ ಪಂಚಾಯತ್ ನಿರ್ಲಕ್ಷ್ಯ; ಜನರ ಆಕ್ರೋಶ

1-weqewqe

Yallapur: ಸಾತೊಡ್ಡಿ ಜಲಪಾತದಲ್ಲಿ ಪ್ರವಾಸಿಗರ ಮೇಲೆ ಜೇನು ನೊಣಗಳ ದಾಳಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

13-

Woman: ಸದಾಕಾಲ ಸಾಧಕಿ ಹೆಣ್ಣು

12-

Sirsi Festival: ನಾವು ಬಂದೇವ ಶಿರಸಿ ಜಾತ್ರೆ ನೋಡಲಿಕ್ಕೆ !

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.