ಬರೂರು ಕಿರಿಯ ಪ್ರಾಥಮಿಕ ಶಾಲೆ ರಜತ ಮಹೋತ್ಸವ


Team Udayavani, May 3, 2019, 4:22 PM IST

uttar-kannada-4-tdy..

ಶಿರಸಿ: ಬರೂರು ಶಾಲೆಯ ಹೊರ ನೋಟ

ಶಿರಸಿ: ಹಿಂದುಳಿದ ಮಕ್ಕಳ ಶೈಕ್ಷಣಿಕ ಏಳ್ಗೆಗೆ ಆರಂಭಗೊಂಡ ಗ್ರಾಮೀಣ ಭಾಗದ ಶಾಲೆಯೊಂದು ಇದೀಗ ಬೆಳ್ಳಿ ಹಬ್ಬದ ಬೆಡಗಿನಲ್ಲಿದ್ದು, ಮೇ 6ರಂದು ಇದಕ್ಕೊಂದು ಸಂಭ್ರಮಾಚರಣೆ ನಡೆಯಲಿದೆ.

ಕಾರ್ಯಕ್ರಮದ ಮಾಹಿತಿ ನೀಡಿದ ರಜತ ಮಹೋತ್ಸವ ಸಮಿತಿ ಗೌರವಾಧ್ಯಕ್ಷ ಉಪೇಂದ್ರ ಪೈ, 1994 ರಲ್ಲಿ ಪ್ರಾರಂಭಗೊಂಡು ಅನೇಕ ಮಕ್ಕಳು ವಿದ್ಯಾಭ್ಯಾಸ ಮಾಡುತ್ತಿರುವ ತಾಲೂಕಿನ ಬರೂರ ಗ್ರಾಮದ ಕಿಪ್ರಾ ಶಾಲೆ ವಿದ್ಯಾರ್ಥಿಗಳ ನೆಚ್ಚಿನ ತಾಣವಾಗಿದೆ. ಇಲ್ಲಿ ಅನೇಕ ರಚನಾತ್ಮಕ ಕಾರ್ಯಕ್ರಮಗಳ ಮೂಲಕ ಮಹೋತ್ಸವ ಏರ್ಪಡಿಸಲಾಗಿದೆ ಎಂದು ವಿವರಿಸಿದರು.

ಕಳೆದ 25 ವರ್ಷದಿಂದ ಉತ್ತಮ ಶಿಕ್ಷಣ ನೀಡುತ್ತಾ ಬಂದಿದೆ. ಗ್ರಾಮೀಣ ಭಾಗದ ಶಾಲೆಗಳು ಮುಚ್ಚುತ್ತಿರುವ ಸಂದರ್ಭಗಳಲ್ಲಿ ಬರೂರು ಕಿಪ್ರಾ ಶಾಲೆ 22 ಮಕ್ಕಳಿಗೆ ವಿದ್ಯಾಭ್ಯಾಸ ನೀಡುತ್ತಾ ತನ್ನ ಗುಣಮಟ್ಟವನ್ನು ಕಾಪಾಡಿಕೊಂಡು ಬಂದಿದೆ. ಅದರ ರಜತ ಮಹೋತ್ಸವ ಆಚರಿಸಲು ತಿರ್ಮಾನಿಸಲಾಗಿದ್ದು, ಸಾಂಸ್ಕೃತಿಕ -ಸಮ್ಮಾನ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಎಂದರು.

ಮೇ 6 ರಂದು ಬೆಳಗ್ಗೆ 10ಕ್ಕೆ ಶಾಸಕ, ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಅಧ್ಯಕ್ಷ ಶಿವರಾಮ ಹೆಬ್ಟಾರ್‌ ಉದ್ಘಾಟಿಸಲಿದ್ದು, ಕುಳವೆ ಗ್ರಾಪಂ ಅಧ್ಯಕ್ಷೆ ಚಂದ್ರಮತಿ ನಾಯ್ಕ ಅಧ್ಯಕ್ಷತೆ ವಹಿಸಲಿದ್ದಾರೆ. ಜಿಪಂ ಸದಸ್ಯೆ ಉಷಾ ಹೆಗಡೆ, ತಾಪಂ ಸದಸ್ಯ ನಾಗರಾಜ ಶೆಟ್ಟಿ, ಗ್ರಾಪಂ ಸದಸ್ಯ ರಮೇಶ ನಾಯ್ಕ, ಉದ್ಯಮಿ ಉಪೇಂದ್ರ ಪೈ, ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಉಮೇಶ ನಾಯ್ಕ ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದು, ಅಧಿಕಾರಿಗಳು ಭಾಗವಹಿಸಲಿದ್ದಾರೆ ಎಂದರು.

ರಜತ ಮಹೋತ್ಸವದ ಸಾಂಸ್ಕೃತಿಕ ವೇದಿಕೆ ಹಾಗೂ ಸ್ಮರಣ ಸಂಚಿಕೆ ಉದ್ಘಾಟನೆ ಮಧ್ಯಾಹ್ನ 4:30ಕ್ಕೆ ನಡೆಯಲಿದ್ದು, ಸ್ವರ್ಣವಲ್ಲೀ ಗಂಗಾಧರೇಂದ್ರ ಸರಸ್ವತೀ ಮಹಾಸ್ವಾಮೀಜಿ ಸಾನ್ನಿಧ್ಯ ವಹಿಸಲಿದ್ದಾರೆ. ಶಾಸಕ ವಿಶ್ವೇಶ್ವರ ಹೆಗಡೆ ಕಾಗೇರಿ ಅಧ್ಯಕ್ಷತೆ ವಹಿಸಲಿದ್ದು, ಮುಖ್ಯ ಅತಿಥಿಗಳಾಗಿ ಕೆಡಿಸಿಸಿ ಉಪಾಧ್ಯಕ್ಷ ಭಾಸ್ಕರ ಹೆಗಡೆ ಕಾಗೇರಿ ಹಾಗೂ ಉದ್ಯಮಿ ಲೋಕೇಶ ಹೆಗಡೆ ಪಾಲ್ಗೊಳ್ಳುವರು. ಶಾಲೆಯಲ್ಲಿ ಕಾರ್ಯನಿರ್ವಹಿಸಿದ 7 ಶಿಕ್ಷಕರು, 25 ವರ್ಷಗಳಲ್ಲಿ ಶಾಲೆ ಅಭಿವೃದ್ಧಿಗೆ ಸಹಕರಿಸಿದ ಎಸ್ಡಿಎಂಸಿ ಅಧ್ಯಕ್ಷರಿಗೆ, ಪ್ರತಿಭಾವಂತ ಹಳೆ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಗುವುದು ಎಂದರು.

ಬರೂರು ಲಕ್ಷ್ಮೀ ನರಸಿಂಹ ದೇವಸ್ಥಾನ ಅಧ್ಯಕ್ಷ ಮಂಜುನಾಥ ಭಟ್ ಬೆಳಖಂಡ, ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಉಮೇಶ ನಾಯ್ಕ, ಸದಸ್ಯರಾದ ಮಂಜುನಾಥ ಶೆಟ್ಟಿ, ಸಂತೋಷ ನಾಯ್ಕ ಹಾಗೂ ಶಾಲೆಯ ಮುಖ್ಯ ಶಿಕ್ಷಕ ಸತೀಶ ಹೆಗಡೆ ಇದ್ದರು.

ಸಾಂಸ್ಕೃತಿಕ ಸಂಜೆ: ರಜತ ಮಹೋತ್ಸವ ಅಂಗವಾಗಿ ಸಂಜೆ 6:30ಕ್ಕೆ ಶಾಲಾ ಮಕ್ಕಳ ಮನರಂಜನಾ ಕಾರ್ಯಕ್ರಮ, ರಾತ್ರಿ 9:30ಕ್ಕೆ ತುಳಸಿ ಹೆಗಡೆ ಯಕ್ಷನೃತ್ಯ ರೂಪಕ, ಸ್ನೇಹಶ್ರೀ ಹೆಗಡೆ ರಿಂಗ್‌ ಡಾನ್ಸ್‌, ನಿನಾಸಂ ನೇತೃತ್ವದಲ್ಲಿ ಕುರುಕ್ಷೇತ್ರ ನಾಟಕ ಹಾಗೂ ಮಹಿಳಾ ಯಕ್ಷಗಾನ ತಂಡದಿಂದ ಭೀಷ್ಮ ವಿಜಯ ಯಕ್ಷಗಾನ ಪ್ರದರ್ಶನ ನಡೆಯಲಿದೆ. ರಜತ ಮಹೋತ್ಸವಕ್ಕೆ ಒಟ್ಟೂ 3 ಲಕ್ಷ ರೂ. ಖರ್ಚಾಗಬಹುದೆಂದು ಅಂದಾಜಿಸಲಾಗಿದ್ದು, ದಾನಿಗಳ ಮುಖಾಂತರ ಒಟ್ಟು ಮಾಡಲಾಗುತ್ತಿದೆ ಎಂದು ಪ್ರಮುಖರು ಮಾಹಿತಿ ನೀಡಿದರು

ಟಾಪ್ ನ್ಯೂಸ್

1-assam

UNESCO ವಿಶ್ವ ಪಾರಂಪರಿಕ ತಾಣ ಪಟ್ಟಿಗೆ ‘ದಿಬ್ಬ ಸಮಾಧಿಗಳು’: ಏನಿದು ಮೊಯಿಡಮ್ಸ್‌?

New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್‌ ಗ್ಯಾಂಗ್‌’

New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್‌ ಗ್ಯಾಂಗ್‌’

1-kanwar-msid

Uttara Khand; ಕನ್ವರ್‌ ಯಾತ್ರೆ: ಮಸೀದಿಗೇ ಪರದೆ ಹಾಕಿದ ಹರಿದ್ವಾರ ಆಡಳಿತ!

court

Court; ದೇಶಾದ್ಯಂತ 5 ಕೋಟಿ ಕೇಸು ಇತ್ಯರ್ಥಕ್ಕೆ ಬಾಕಿ: ಉ.ಪ್ರ.ದಲ್ಲೇ ಹೆಚ್ಚು!

robbers

Note!;ಕಳ್ಳತನಕ್ಕೆಂದು ಬಂದವ ತಾನೇ 20 ರೂಪಾಯಿ ನೋಟು ಇಟ್ಟು ಹೋದ!

1-tatoo

Mumbai: 22 ಶತ್ರುಗಳ ಹೆಸರು ಟ್ಯಾಟೂ ಹಾಕಿಸಿಕೊಂಡಾತನ ಕೊಲೆ!

1-wewqewq

Mumbai; 2005ರ ಭೀಕರ ಪ್ರವಾಹ ನೆನಪಿಸಿದ ಮಳೆ!:19 ವರ್ಷ ಹಿಂದಿನ ಸ್ಥಿತಿ ಮರುಕಳಿಸಲಿದೆಯೇ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Shirur landslide; Green signal for National highway traffic in three or four days?

Shirur landslide; ರಾ.ಹೆದ್ದಾರಿ ಸಂಚಾರಕ್ಕೆ ಮೂರ್ನಾಲ್ಕು ದಿನಗಳಲ್ಲಿ ಗ್ರೀನ್ ಸಿಗ್ನಲ್ ?

Shirur Landslide; ನದಿಯಾಳದ ಕಾರ್ಯಾಚರಣೆಗೆ ನದಿ ನೀರಿನ ವೇಗ ಅಡ್ಡಿ

Shirur Landslide; ನದಿಯಾಳದ ಕಾರ್ಯಾಚರಣೆಗೆ ನದಿ ನೀರಿನ ವೇಗ ಅಡ್ಡಿ

1-ccc-aa

Shiruru hill collapse; 10 ದಿನದಿಂದ ಇಲ್ಲೇ ಇದ್ದೇನೆ : ಟೀಕೆಗಳಿಗೆ ಶಾಸಕ ಸೈಲ್‌ ಬೇಸರ

1–eewr-aa-aa

Shiruru hill collapse; ಮಣ್ಣು ತೆಗೆಯುವ ಕಾರ್ಯಾಚರಣೆ ವೇಳೆ ಸಿಕ್ಕ ಹೋಟೆಲ್ ಅವಶೇಷಗಳು

1–eewr-aa

Shiruru hill collapse; ನದಿಯ ನಾಲ್ಕು ಕಡೆ ಅವಶೇಷಗಳು ಬೆಳಕಿಗೆ:ಇಂದ್ರಬಾಲನ್‌ ನಂಬಿಯಾರ್

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

1-assam

UNESCO ವಿಶ್ವ ಪಾರಂಪರಿಕ ತಾಣ ಪಟ್ಟಿಗೆ ‘ದಿಬ್ಬ ಸಮಾಧಿಗಳು’: ಏನಿದು ಮೊಯಿಡಮ್ಸ್‌?

New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್‌ ಗ್ಯಾಂಗ್‌’

New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್‌ ಗ್ಯಾಂಗ್‌’

1-kanwar-msid

Uttara Khand; ಕನ್ವರ್‌ ಯಾತ್ರೆ: ಮಸೀದಿಗೇ ಪರದೆ ಹಾಕಿದ ಹರಿದ್ವಾರ ಆಡಳಿತ!

court

Court; ದೇಶಾದ್ಯಂತ 5 ಕೋಟಿ ಕೇಸು ಇತ್ಯರ್ಥಕ್ಕೆ ಬಾಕಿ: ಉ.ಪ್ರ.ದಲ್ಲೇ ಹೆಚ್ಚು!

robbers

Note!;ಕಳ್ಳತನಕ್ಕೆಂದು ಬಂದವ ತಾನೇ 20 ರೂಪಾಯಿ ನೋಟು ಇಟ್ಟು ಹೋದ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.