Dandeli: ಅಪರಿಚಿತ ವಾಹನ ಡಿಕ್ಕಿ ಹೊಡೆದು ಕರಡಿ ಸಾವು
Team Udayavani, Mar 11, 2024, 8:21 AM IST
ದಾಂಡೇಲಿ : ತಾಲೂಕಿನ ದಾಂಡೇಲಿ – ಹಳಿಯಾಳ ರಾಜ್ಯ ಹೆದ್ದಾರಿಯಲ್ಲಿ ಬರುವ ಕರ್ಕಾ ಕ್ರಾಸ್ ಹತ್ತಿರ ಅಪರಿಚಿತ ವಾಹನವೊಂದು ಡಿಕ್ಕಿಯಾಗಿ ಕರಡಿ ಸಾವನ್ನಪ್ಪಿದ ಘಟನೆ ಇಂದು ಸೋಮವಾರ ಬೆಳಗ್ಗೆ ನಡೆದಿದೆ.
ಈ ರಸ್ತೆಯಲ್ಲಿ ಕರಡಿಯೊಂದು ರಸ್ತೆ ದಾಟುತ್ತಿದ್ದ ಸಂದರ್ಭದಲ್ಲಿ ಅಪರಿಚಿತ ವಾಹನ ಡಿಕ್ಕಿಯಾಗಿದೆ. ಡಿಕ್ಕಿಯ ರಭಸಕ್ಕೆ ಕರಡಿ ಸ್ಥಳದಲ್ಲೇ ಸಾವನ್ನಪ್ಪಿದೆ. ವಿಷಯ ತಿಳಿದು ಘಟನಾ ಸ್ಥಳಕ್ಕೆ ಅರಣ್ಯ ಇಲಾಖೆಯ ಅಧಿಕಾರಿಗಳು, ಸಿಬ್ಬಂದಿಗಳು ಭೇಟಿ ನೀಡಿ ಪರಿಶೀಲನೆಯನ್ನು ನಡೆಸಿ ಮುಂದಿನ ಕ್ರಮವನ್ನು ಕೈಗೊಂಡಿದ್ದಾರೆ.
ಇದನ್ನೂ ಓದಿ: ಕರಾವಳಿಗೆ 3 ಬಹೂಪಯೋಗಿ ಬಂದರು: ಮಂಗಳೂರು, ಮಲ್ಪೆ, ಬೈಂದೂರಿನಲ್ಲಿ ಅಭಿವೃದ್ಧಿ ಯೋಜನೆ