Bhatkal; ಡಿವೈಡರ್ ದಾಟಿ ಗುದ್ದಿದ ಗೂಡ್ಸ್ ವಾಹನ; ಆಟೋದಲ್ಲಿದ್ದ ಇಬ್ಬರ ಸ್ಥಿತಿ ಗಂಭೀರ
Team Udayavani, Feb 15, 2024, 7:14 PM IST
ಭಟ್ಕಳ: ತಾಲೂಕಿನ ಬೆಣಂದೂರು ಕ್ರಾಸ್ ಸಮೀಪದ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಗೂಡ್ಸ್ ರಿಕ್ಷಾ ಮತ್ತು ಅಟೋ ರಿಕ್ಷಾ ನಡುವೆ ಸಂಭವಿಸಿದ ಅಪಘಾತದಲ್ಲಿ ಆಟೋದಲ್ಲಿದ್ದ ಇಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ವರದಿಯಾಗಿದೆ.
ಗಂಭೀರವಾಗಿ ಗಾಯಗೊಂಡವರನ್ನು ಬೆಳಕೆ ಜನತಾ ಕಾಲೋನಿ ನಿವಾಸಿ ಮಂಜಮ್ಮ ಮಾಸ್ತಿ ಮೊಗೇರ (40) ಹಾಗೂ ಬೆಳಕೆ ಗರಡಿಹಿತ್ಲು ನಿವಾಸಿ ವೆಂಕಟ್ರಮಣ ಸುಬ್ಬಯ್ಯ ನಾಯ್ಕ (52) ಎಂದು ಗುರುತಿಸಲಾಗಿದ್ದು ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಅಟೋದಲ್ಲಿದ್ದ ಇನ್ನೋರ್ವ ಪ್ರಯಾಣಿಕ ಮಂಜುನಾಥ ವೆಂಕಟೇಶ ಭಂಡಾರಿ ಹಾಗೂ ಅಟೋ ಚಾಲಕ ಪಾಂಡು ನಾಯ್ಕ ಇವರಿಗೆ ಗಾಯಗಳಾಗಿದ್ದು ಕುಂದಾಪುರ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಚೇತರಿಸಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ.
ಆರೋಪಿ ಗೂಡ್ಸ್ ರಿಕ್ಷಾ ಚಾಲಕ ಭಟ್ಕಳ ಕಡೆಯಿಂದ ಕುಂದಾಪುರ ಕಡೆಗೆ ಹೋಗುತ್ತಿದ್ದು, ತನ್ನ ವಾಹನವನ್ನು ಅತೀ ವೇಗ ಹಾಗೂ ಅಜಾಗುರುಕತೆಯಿಂದ ಚಲಾಯಿಸಿಕೊಂಡು ಬಂದಿದ್ದು ಗೋಳಿಮರ ಕ್ರಾಸ್ ಕಡೆಯಿಂದ ಭಟ್ಕಳಕ್ಕೆ ಕಡೆಗೆ ಬರುತ್ತಿದ್ದ ಆಟೋ ರಿಕ್ಷಾ ಕ್ಕೆ ಹೆದ್ದಾರಿ ನಡುವೆ ಇರುವ ಡಿವೈಡರ್ ದಾಟಿ ಬಂದು ಢಿಕ್ಕಿ ಹೊಡೆದಿದ್ದು, ರಿಕ್ಷಾ ಸ್ಥಳದ್ದಲ್ಲೇ ಪಲ್ಟಿಯಾಗಿ ಮೂವರು ಪ್ರಯಾಣಿಕರು ಹಾಗೂ ಚಾಲಕ ಗಾಯಗೊಂಡಿದ್ದಾರೆ. ಗೂಡ್ಸ್ ರಿಕ್ಷಾ ಚಾಲಕನ ವಿರುದ್ಧ ಭಟ್ಕಳ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ
Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ
State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ
Shahapura: ಎರಡು ಕೆಟ್ಟ ಕಾನೂನು ಜಾರಿಗೆ ಕಾಂಗ್ರೆಸ್ ಸಿದ್ಧತೆ: ಯತ್ನಾಳ ಆರೋಪ
ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್
MUST WATCH
ಹೊಸ ಸೇರ್ಪಡೆ
ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ
Ranveer Singh : ʼಹನುಮಾನ್ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್ ಸಿಂಗ್ ನಟನೆ?
Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ
ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ
Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ