ಕರಾವಳಿ-ಮಲೆನಾಡ ಸಂಪರ್ಕ ಕಟ್

•ಮುಂದುವರಿದ ವರುಣನ ಆರ್ಭಟ•ಮೈದುಂಬಿದ ಜಲಾಶಯಗಳು•ತುಂಬಿ ಹರಿಯುತ್ತಿವೆ ನದಿಗಳು

Team Udayavani, Aug 6, 2019, 1:29 PM IST

uk-tdy-2

ಕಾರವಾರ: ದೇವಸ್ಥಾನ ಮಳೆ ನೀರಿನಲ್ಲಿ ಮುಳುಗಡೆಯಾಗಿದೆ.

ಕಾರವಾರ: ರವಿವಾರ ಬೆಳಗಿನ ಜಾವದಿಂದ ಸೋಮವಾರ ಸಂಜೆ ತನಕ ಸತತವಾಗಿ ಮಳೆ ಸುರಿಯುತ್ತಿದ್ದು, ಕಾಳಿ ನದಿ ದಡದ ಹಲವು ಗ್ರಾಮಗಳು ಜಲಭೀತಿ ಎದುರಿಸುತ್ತಿವೆ. ಇನ್ನೊಂದೆಡೆ ಕದ್ರಾ, ಕೊಡಸಳ್ಳಿ ಜಲಾಶಯಗಳು ಭರ್ತಿಯಾಗಿದ್ದು, ಜಲಾಶಯಗಳ ಎಲ್ಲ ಕ್ರಸ್ಟಗೇಟ್ ತೆರೆದು ನದಿಗೆ ನೀರು ಹೊರಬಿಡಲಾಗಿದೆ. ಸೋಮವಾರ ಇಡೀ ದಿನ ಕದ್ರಾ, ಕೊಡಸಳ್ಳಿ ಜಲಾಶಯಗಳಿಂದ 65 ಸಾವಿರ ಕ್ಯೂಸೆಕ್‌ ನೀರು ನದಿಗೆ ಸೇರಿದೆ. 24 ತಾಸು ಸತತವಾಗಿ ಕ್ರಸ್ಟ್‌ಗೇಟ್ ತೆರೆಯುವಷ್ಟರ ಮಟ್ಟಿಗೆ ಮಳೆ ಸುರಿಯುತ್ತಿದೆ. ಕದ್ರಾದ ಮಹಾಮಾಯಿ ದೇವಸ್ಥಾನ ನೀರಿನಿಂದ ಜಲಾವೃತವಾಗಿದೆ. ಕದ್ರಾದ 7 ಕುಟುಂಬಗಳನ್ನು ಗಂಜಿ ಕೇಂದ್ರಕ್ಕೆ ಸ್ಥಳಾಂತರಿಸಲಾಗಿದೆ. 7 ಕುಟುಂಬದ 23 ಜನರು ಕದ್ರಾ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಗಂಜಿ ಕೇಂದ್ರ ತೆರೆದು ರಕ್ಷಣೆ ನೀಡಲಾಗಿದೆ. ಕಣಜಗೇರಿ ಗ್ರಾಮದ ರಸ್ತೆ ಗದ್ದೆಗಳು ಜಲಮಯವಾಗಿದ್ದು, 7 ಮನೆಗಳಿಗೆ ನೀರು ನುಗ್ಗಿದೆ. ಮಲ್ಲಾಪುರ ಗ್ರಾಮದ ಹತ್ತು ಮನೆಗಳಿಗೆ ಭಾಗಶಃ ಕಾಳಿ ನದಿ ನೀರು ನುಗ್ಗಿದ್ದು, ಅವರ ರಕ್ಷಣೆಗೆ ಕಂದಾಯ ಇಲಾಖೆ ಸಕಲ ಸಿದ್ಧತೆ ಮಾಡಿಕೊಂಡಿದೆ. ಕಾರವಾರ, ಶಿರಸಿ, ಜೋಯಿಡಾ ಮತ್ತು ಯಲ್ಲಾಪುರ ತಾಲೂಕಿನಲ್ಲಿ 100 ಮಿಲಿ ಮೀಟರ್‌ ಮಳೆ ಬಿದ್ದಿದ್ದು, ಮಳೆ ತನ್ನ ಆರ್ಭಟವನ್ನು ಮುಂದುವರಿಸಿದೆ. ಜಿಲ್ಲಾಧಿಕಾರಿ ಡಾ| ಹರೀಶ್‌ ಕುಮಾರ್‌ ಭಟ್ಕಳ, ಹೊನ್ನಾವರ, ಕುಮಟಾ, ಅಂಕೋಲಾ ತಾಲೂಕಿನಲ್ಲಿ ಪ್ರವಾಸ ಮಾಡಿ ಮಳೆಯಿಂದ ಆದ ಹಾನಿ ಪರಿಶೀಲಿಸಿ, ಪರಿಹಾರ ನೀಡಲು ಕಂದಾಯ ಅಧಿಕಾರಿಗಳಿಗೆ ಸೂಚನೆ ನೀಡುತ್ತಿದ್ದಾರೆ. ಕಾರವಾರ ಕದ್ರಾ ಜೋಯಿಡಾದಲ್ಲಿ ನೋಡೆಲ್ ಅಧಿಕಾರಿಗಳು ಸತತ 24 ತಾಸು ಪರಿಸ್ಥಿತಿಯ ಮೇಲೆ ನಿಗಾ ಇಟ್ಟಿದ್ದಾರೆ.

ಕಾರವಾರದಲ್ಲಿ ಭಾರೀ ಮಳೆ: ಕಾರವಾರ ನಗರದಲ್ಲಿ ಸೋಮವಾರ ಬೆಳಗಿನ ಜಾವದಿಂದ ಭಾರೀ ಮಳೆ ಸುರಿಯುತ್ತಿದೆ. ಆಗಾಗ ಗಾಳಿ ಸಹ ಬೀಸುತ್ತಿದೆ. ಮಳೆ ಮಧ್ಯಾಹ್ನ 30 ನಿಮಿಷ ಬಿಡುವು ನೀಡಿದ್ದು ಬಿಟ್ಟರೆ, ನಂತರ ನಿರಂತರವಾಗಿ ಮಳೆ ಬೀಳುತ್ತಿದೆ. 2009ರಲ್ಲಿ ಬಿದ್ದ ಭಾರೀ ಮಳೆಯನ್ನು ಜನರು ನೆನಪಿಸಿಕೊಳ್ಳುತ್ತಿದ್ದು, ಮೋಘಸ್ಫೊಧೀಟದ ಕಾರಣ ಇಷ್ಟೊಂದು ಮಳೆ ಬೀಳುತ್ತಿರಬೇಕು ಎಂದು ಸಾರ್ವಜನಿಕರು ಮಾತಾಡಿಕೊಳ್ಳುತ್ತಿದ್ದಾರೆ. ಕಡಲಲ್ಲಿ ಭಾರೀ ಅಲೆಗಳು ಏಳುತ್ತಿವೆ. ಮೀನುಗಾರಿಕೆ ಸ್ತಬ್ಧವಾಗಿದೆ.

ಅ. 7 ಮತ್ತು 8ರಂದು ಸಹ ಕರಾವಳಿಯಲ್ಲಿ ಹಾಗೂ ಘಟ್ಟ ಪ್ರದೇಶದಲ್ಲಿ ಭಾರೀ ಮಳೆ ಸುರಿಯುವ ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಜನರು ಕಟ್ಟೆಚ್ಚರದಿಂದ ಇರಬೇಕೆಂದು ಸೂಚಿಸಲಾಗಿದೆ.

ಕಾರವಾರ ತಾಲೂಕಿನಲ್ಲಿ ಮಳೆಯಿಂದ ಹಾನಿಗೆ ತುತ್ತಾದ 11 ಮನೆಗಳ ಮಾಲೀಕರಿಗೆ 2,35,000 ರೂ. ಪರಿಹಾರ ವಿತರಿಸಲಾಗಿದೆ. 4 ಪ್ರಕರಣಗಳು ಪರಿಹಾರ ವಿತರಣೆಯ ಪರಿಶೀಲನೆಯಲ್ಲಿವೆ. ಮಾಜಾಳಿಯಲ್ಲಿ ರವಿವಾರ ಸಂಜೆ ಮನೆಯೊಂದರ ಮೇಲೆ ಮರ ಬಿದ್ದು 2 ಲಕ್ಷ ರೂ. ಹಾನಿಯಾಗಿದೆ ಎಂದು ಹೇಳಲಾಗಿದ್ದು, ಕಂದಾಯ ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ. ತಾಲೂಕಿನಲ್ಲಿ ಮಳೆಯಿಂದ ಓರ್ವರು ಮೃತಪಟ್ಟಿದ್ದು, ಅವರ ಕುಟುಂಬಕ್ಕೆ 5 ಲಕ್ಷ ರೂ .ಪರಿಹಾರ ವಿತರಿಸಲಾಗಿದೆ. 18 ಗ್ರಾಮ ಪಂಚಾಯತ್‌ ಮತ್ತು 1 ನಗರಸಭೆಯ ವ್ಯಾಪ್ತಿಯಲ್ಲಿ ಮಳೆಯ ಹಾನಿಯ ಬಗ್ಗೆ ನಿಗಾ ಇಡಲು 14 ನೋಡಲ್ ಅಧಿಕಾರಿಗಳನ್ನು ನೇಮಿಸಲಾಗಿದೆ. ಪ್ರಕೃತಿ ವಿಕೋಪ ಪರಿಹಾರಕ್ಕೆ ಜಿಲ್ಲಾಧಿಕಾರಿಗಳ ಖಾತೆಯಲ್ಲಿ 18 ಲಕ್ಷ ರೂ. ಹಾಗೂ ಕುಡಿಯುವ ನೀರಿನ ಸಮಸ್ಯೆ ನಿರ್ವಹಣೆಗೆ 25 ಲಕ್ಷ ರೂ. ಹಣವಿದ್ದು, ಮಳೆ ಹಾನಿ ನಿರ್ವಹಿಸಲು ಹಣದ ಕೊರತೆಯಿಲ್ಲ ಎಂದು ಜಿಲ್ಲಾಡಳಿತ ಹೇಳಿದೆ.

ಟಾಪ್ ನ್ಯೂಸ್

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

1-qeweqwe

Love Jihad ಹೆಸರಲ್ಲಿ ಒಂದು ಗುಂಪಿಗೆ ತರಬೇತಿ: ಜಗದೀಶ್ ಶೆಟ್ಟರ್ ಗಂಭೀರ ಆರೋಪ

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

1-eweqwe

Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ

ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

Doordarshan; ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

12

ʼಭಜರಂಗಿ ಭಾಯಿಜಾನ್‌ʼ, ʼರೌಡಿ ರಾಥೋರ್ʼ ಸೀಕ್ವೆಲ್‌ ಬಗ್ಗೆ ಬಿಗ್‌ ಅಪ್ಡೇಟ್‌ ಕೊಟ್ಟ ನಿರ್ಮಾಪಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qeqwqwe

Kumta: ಮಾಜಿ ಶಾಸಕಿ ಶಾರದಾ ಮೋಹನ್ ಶೆಟ್ಟಿ ಮರಳಿ ಕಾಂಗ್ರೆಸ್ ಸೇರ್ಪಡೆ

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

Karwar; ಬಿಜೆಪಿ ಅಭ್ಯರ್ಥಿ ಕಾಗೇರಿ ಜಿಲ್ಲಾ ವಿಭಜನೆಗೆ ಯತ್ನಿಸಿಲ್ಲ: ಸದಾನಂದ ಭಟ್

Karwar; ಬಿಜೆಪಿ ಅಭ್ಯರ್ಥಿ ಕಾಗೇರಿ ಜಿಲ್ಲಾ ವಿಭಜನೆಗೆ ಯತ್ನಿಸಿಲ್ಲ: ಸದಾನಂದ ಭಟ್

6-

Bhatkal Theft: ನಗರ, ಗ್ರಾಮೀಣ ಪ್ರದೇಶದ ಹಲವೆಡೆ ಮುಂಜಾನೆ ಸರಣಿ ಕಳ್ಳತನ

18-

Road Mishap: ಹೈಕಾಡಿಯಲ್ಲಿ ಕಾರು ಅಪಘಾತ: ನಾಲ್ವರಿಗೆ ಗಾಯ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

1-qeweqwe

Love Jihad ಹೆಸರಲ್ಲಿ ಒಂದು ಗುಂಪಿಗೆ ತರಬೇತಿ: ಜಗದೀಶ್ ಶೆಟ್ಟರ್ ಗಂಭೀರ ಆರೋಪ

15

Ramnagar: ಜಿಲ್ಲೆಯಲ್ಲಿ 25 ಕೋಟಿ ರೂ. ಅಕ್ರಮ ವಸ್ತು ಪತ್ತೆ

Department of Health: ಜನರಿಗೆ ಅರಿವಿನ ಟಾನಿಕ್‌ ನೀಡುತ್ತಿರುವ ಆರೋಗ್ಯ ಇಲಾಖೆ

Department of Health: ಜನರಿಗೆ ಅರಿವಿನ ಟಾನಿಕ್‌ ನೀಡುತ್ತಿರುವ ಆರೋಗ್ಯ ಇಲಾಖೆ

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.