ಹಳ್ಳಿ ಹಳ್ಳಿಗೆ ಸ್ಪರ್ಧಾತ್ಮಕ ಪರೀಕ್ಷೆ ತರಬೇತಿ

ವಿದ್ಯಾರ್ಥಿಗಳಿಗೆ ಅಂತರ್ಜಾಲದ ಮೂಲಕ ಸಂಪೂರ್ಣ ಮಾಹಿತಿ ಲಭ್ಯ: ಸಹಾಯಕ ಆಯುಕ್ತೆ ಮಮತಾದೇವಿ

Team Udayavani, May 23, 2022, 12:38 PM IST

9

ಭಟ್ಕಳ: ನಗರದ ನ್ಯೂ ಇಂಗ್ಲೀಷ್‌ ಶಾಲೆಯ ಕಮಲಾವತಿ ರಾಮನಾಥ ಶಾನಭಾಗ ಸಭಾಂಗಣದಲ್ಲಿ ಸ್ಪಂದನಾ ಚ್ಯಾರಿಟೇಬಲ್‌ ಟ್ರಸ್ಟ್‌ ವತಿಯಿಂದ ನಡೆದ ಸ್ಪರ್ಧಾತ್ಮಕ ಪರೀಕ್ಷೆಯ ಉಚಿತ ತರಬೇತಿಯನ್ನು ಸಹಾಯಕ ಆಯುಕ್ತೆ ಮಮತಾ ದೇವಿ ಉದ್ಘಾಟಿಸಿದರು.

ನಂತರ ಮಾತನಾಡಿದ ಅವರು, ವಿದ್ಯಾರ್ಥಿಗಳು ನಿಖರವಾದ ಗುರಿ ಹೊಂದುವುದರ ಮೂಲಕ ಕಠಿಣ ಪರಿಶ್ರಮದಿಂದ ಯಾವುದೇ ಸ್ಪರ್ಧಾತ್ಮಕ ಪರೀಕ್ಷೆ ಎದುರಿಸಿ ಉತ್ತಿರ್ಣರಾಗಬಹುದು. ಐಎಎಸ್‌, ಐಪಿಎಸ್‌ ಪರೀಕ್ಷೆಯ ತರಬೇತಿ ಪಡೆಯಲು ದೊಡ್ಡ ನಗರಗಳಿಗೆ ಹೋಗಬೇಕೆಂದೇನೂ ಇಲ್ಲ. ಸ್ಥಳೀಯವಾಗಿಯೇ ಅಂತಹ ತರಬೇತಿ ಪಡೆದು ಉತ್ತೀರ್ಣರಾಗಬಹುದು, ಅಂತರ್ಜಾಲದ ಮೂಲಕ ನಮ್ಮ ಕೈಯಲ್ಲೆ ಎಲ್ಲ ಮಾಹಿತಿಗಳೂ ದೊರಕುತ್ತಿದ್ದು ಅದನ್ನು ಸದುಪಯೋಗ ಪಡೆದುಕೊಳ್ಳಬೇಕು ಎಂದರು.

ಬೆಂಗಳೂರಿನಂತಹ ದೊಡ್ಡ ದೊಡ್ಡ ನಗರದಲ್ಲಿರುವ ವಿದ್ಯಾರ್ಥಿಗಳೇ ತರಬೇತಿ ಪಡೆಯುತ್ತಿದ್ದು ಈಗ ಅದನ್ನು ಗ್ರಾಮಾಂತರ ಭಾಗದ ವಿದ್ಯಾರ್ಥಿಗಳಿಗೆ ತಿಳಿಸಿ ತರಬೇತಿ ನೀಡುತ್ತಿರುವ ಭಟ್ಕಳ ಸ್ಪಂದನ ಸಂಸ್ಥೆ ಕಾರ್ಯ ಶ್ಲಾಘಿಸಿದ ಅವರು, ಮುಂದಿನ ದಿನಗಳಲ್ಲಿ ಈ ಭಾಗದ ವಿದ್ಯಾರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆ ತಯಾರಿ ಕುರಿತು ತರಬೇತಿ ನೀಡಲು ನಾನೂ ಕೂಡಾ ಸಿದ್ಧಳಿದ್ದೇನೆ ಎಂದರು.

ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಮೊದಲ ಪ್ರಯತ್ನದಲ್ಲಿಯೇ ಉತ್ತೀರ್ಣರಾಗಬೇಕು ಎನ್ನುವ ಭಾವನೆ ಬಿಟ್ಟು ಸತತ ಪ್ರಯತ್ನ ಮಾಡಿ ಪರೀಕ್ಷೆಯನ್ನು ಧೈರ್ಯದಿಂದ ಎದುರಿಸಿ ಎಂದು ಕಿವಿ ಮಾತು ಹೇಳಿದರು.

ಅಧ್ಯಕ್ಷತೆ ವಹಿಸಿದ್ದ ಸ್ಪಂದನ ಸಂಸ್ಥೆ ಅಧ್ಯಕ್ಷ ರಾಘವೇಂದ್ರ ನಾಯ್ಕ ಸ್ವಾಗತಿಸಿ, ಪ್ರಾಸ್ತಾವಿಕ ಮಾತನಾಡಿದರು. ಬೆಂಗಳೂರಿನ ಇಂಡಿಯಾ ಫಾರ್‌ ಐಎಎಸ್‌ ಸಂಸ್ಥೆಯ ಸೈಯದ್‌ ಸದತ್‌ ಮತ್ತು ಅಮನ್‌ ಜೈನ್‌ ಸ್ಪರ್ಧಾತ್ಮಕ ಪರೀಕ್ಷೆಗಳ ಕುರಿತು ತರಬೇತಿ ನೀಡಿದರು.

ಸ್ಪಂದನೆ ಸಂಸ್ಥೆ ಉಪಾಧ್ಯಕ್ಷ ಭವಾನಿಶಂಕರ ನಾಯ್ಕ ವಂದಿಸಿದರು. ಶಿಕ್ಷಕ ಪರಮೇಶ್ವರ ನಾಯ್ಕ ನಿರೂಪಿಸಿದರು. ಸ್ಪಂದನ ಸಂಸ್ಥೆಯ ಪಾಂಡುರಂಗ ನಾಯ್ಕ, ಭಾಸ್ಕರ ನಾಯ್ಕ, ಶಿವಾನಂದ ನಾಯ್ಕ, ರಾಜೇಶ ನಾಯ್ಕ, ಮಹೇಶ ನಾಯ್ಕ ಮತ್ತಿತರರು ಸಹಕರಿಸಿದರು. ತರಬೇತಿಯಲ್ಲಿ ತಾಲೂಕಿನ ವಿವಿಧ ಪ್ರದೇಶದಿಂದ 300ಕ್ಕೂ ಅಧಿಕ ಶಿಬಿರಾರ್ಥಿಗಳು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

LS polls: ನಾಳೆ ಸಿಎಂ, ಡಿಸಿಎಂ ಭೇಟಿಯಾಗಿ ಕಾಂಗ್ರೆಸ್ ಸೇರ್ಪಡೆ ಬಗ್ಗೆ ತೀರ್ಮಾನ; ಸಂಗಣ್ಣ

LS polls: ನಾಳೆ ಸಿಎಂ, ಡಿಸಿಎಂ ಭೇಟಿಯಾಗಿ ಕಾಂಗ್ರೆಸ್ ಸೇರ್ಪಡೆ ಬಗ್ಗೆ ತೀರ್ಮಾನ; ಸಂಗಣ್ಣ

Davanagare: ಚುನಾವಣಾ ತರಬೇತಿಗೆ ಚಕ್ಕರ್; ಅನುಚಿತ ವರ್ತನೆಗೆ ಶಿಕ್ಷಕ ಅಮಾನತು

Davanagare: ಚುನಾವಣಾ ತರಬೇತಿಗೆ ಚಕ್ಕರ್; ಅನುಚಿತ ವರ್ತನೆಗೆ ಶಿಕ್ಷಕ ಅಮಾನತು

10

ದ.ಕ: ಬಿಜೆಪಿ ಜತೆಗಿನ ಮೈತ್ರಿಗೆ ವಿರೋಧ: 42 ಮಂದಿ ಜೆಡಿಎಸ್ ಪದಾಧಿಕಾರಿಗಳು ‘ಕೈʼ ಸೇರ್ಪಡೆ

Chikkamagaluru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 13.10 ಲಕ್ಷ ರೂ. ವಶಕ್ಕೆ

Chikkamagaluru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 13.10 ಲಕ್ಷ ರೂ. ವಶಕ್ಕೆ

ಸಮೀಕ್ಷೆಗಳಲ್ಲಿ ಹಿನ್ನಡೆ; ಹೀಗಾಗಿ ಕಾಂಗ್ರೆಸ್ ಕೀಳು‌ಮಟ್ಟದ ರಾಜಕಾರಣ ಮಾಡುತ್ತಿದೆ: ಜೋಶಿ

ಸಮೀಕ್ಷೆಗಳಲ್ಲಿ ಹಿನ್ನಡೆ; ಹೀಗಾಗಿ ಕಾಂಗ್ರೆಸ್ ಕೀಳು‌ಮಟ್ಟದ ರಾಜಕಾರಣ ಮಾಡುತ್ತಿದೆ: ಜೋಶಿ

Road mishap: ಖಾಸಗಿ ಬಸ್‌ – ಕಾರು ಅಪಘಾತ; ಆಂಧ್ರ ಮೂಲದ ಮೂವರು ಮೃತ್ಯು

Road mishap: ಖಾಸಗಿ ಬಸ್‌ – ಕಾರು ಅಪಘಾತ; ಆಂಧ್ರ ಮೂಲದ ಮೂವರು ಮೃತ್ಯು

Dwarakish: ಕನ್ನಡದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್‌ ವಿಧಿವಶ

Dwarakish: ಕನ್ನಡದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್‌ ವಿಧಿವಶ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weqewqe

Yallapur: ಸಾತೊಡ್ಡಿ ಜಲಪಾತದಲ್ಲಿ ಪ್ರವಾಸಿಗರ ಮೇಲೆ ಜೇನು ನೊಣಗಳ ದಾಳಿ

ನಾನು ಸಿಎಂ ಆದರೆ ರಾಜ್ಯದಲ್ಲಿ ಯುಪಿ ಮಾದರಿ ಆಡಳಿತ: ಯತ್ನಾಳ್

ನಾನು ಸಿಎಂ ಆದರೆ ರಾಜ್ಯದಲ್ಲಿ ಯುಪಿ ಮಾದರಿ ಆಡಳಿತ: ಯತ್ನಾಳ್

D. K. Shivakumar ಆಸ್ತಿ ಮಾರಿ ಜನರಿಗೆ 15 ಲಕ್ಷ ಕೊಡಲಿ: ಯತ್ನಾಳ್‌

D. K. Shivakumar ಆಸ್ತಿ ಮಾರಿ ಜನರಿಗೆ 15 ಲಕ್ಷ ಕೊಡಲಿ: ಯತ್ನಾಳ್‌

1-asdadad

Government ನೀತಿಗಳಿಂದಾಗಿ ಯಕ್ಷಗಾನ ಕ್ಷೇತ್ರ ಇಂದು ಕಷ್ಟಕ್ಕೆ ಸಿಲುಕಿದೆ:ಡಾ.ಜಿ.ಎಲ್.ಹೆಗಡೆ

Sirsi: ಶಾಸಕ ಶಿವರಾಮ ಹೆಬ್ಬಾರ್ ಪುತ್ರ ಕಾಂಗ್ರೆಸ್ ಸೇರ್ಪಡೆ…

Sirsi: ಶಾಸಕ ಶಿವರಾಮ ಹೆಬ್ಬಾರ್ ಪುತ್ರ ಕಾಂಗ್ರೆಸ್ ಸೇರ್ಪಡೆ…

MUST WATCH

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

udayavani youtube

ಕೇಕ್ ಪ್ರಿಯರಿಗೆ ಹೇಳಿ ಮಾಡಿಸಿದ ಜಾಗ ಔರಾ .

udayavani youtube

ಶ್ರೀ ವೈಷ್ಣವಿ ದುರ್ಗಾ ದೇವಾಲಯ

udayavani youtube

ಟೈಟನ್ ಕಂಪೆನಿಯ Xylys ವಾಚ್ ವಿಶೇಷತೆಗಳೇನು ?

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

ಹೊಸ ಸೇರ್ಪಡೆ

LS polls: ನಾಳೆ ಸಿಎಂ, ಡಿಸಿಎಂ ಭೇಟಿಯಾಗಿ ಕಾಂಗ್ರೆಸ್ ಸೇರ್ಪಡೆ ಬಗ್ಗೆ ತೀರ್ಮಾನ; ಸಂಗಣ್ಣ

LS polls: ನಾಳೆ ಸಿಎಂ, ಡಿಸಿಎಂ ಭೇಟಿಯಾಗಿ ಕಾಂಗ್ರೆಸ್ ಸೇರ್ಪಡೆ ಬಗ್ಗೆ ತೀರ್ಮಾನ; ಸಂಗಣ್ಣ

Davanagare: ಚುನಾವಣಾ ತರಬೇತಿಗೆ ಚಕ್ಕರ್; ಅನುಚಿತ ವರ್ತನೆಗೆ ಶಿಕ್ಷಕ ಅಮಾನತು

Davanagare: ಚುನಾವಣಾ ತರಬೇತಿಗೆ ಚಕ್ಕರ್; ಅನುಚಿತ ವರ್ತನೆಗೆ ಶಿಕ್ಷಕ ಅಮಾನತು

10

ದ.ಕ: ಬಿಜೆಪಿ ಜತೆಗಿನ ಮೈತ್ರಿಗೆ ವಿರೋಧ: 42 ಮಂದಿ ಜೆಡಿಎಸ್ ಪದಾಧಿಕಾರಿಗಳು ‘ಕೈʼ ಸೇರ್ಪಡೆ

Chikkamagaluru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 13.10 ಲಕ್ಷ ರೂ. ವಶಕ್ಕೆ

Chikkamagaluru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 13.10 ಲಕ್ಷ ರೂ. ವಶಕ್ಕೆ

ಸಮೀಕ್ಷೆಗಳಲ್ಲಿ ಹಿನ್ನಡೆ; ಹೀಗಾಗಿ ಕಾಂಗ್ರೆಸ್ ಕೀಳು‌ಮಟ್ಟದ ರಾಜಕಾರಣ ಮಾಡುತ್ತಿದೆ: ಜೋಶಿ

ಸಮೀಕ್ಷೆಗಳಲ್ಲಿ ಹಿನ್ನಡೆ; ಹೀಗಾಗಿ ಕಾಂಗ್ರೆಸ್ ಕೀಳು‌ಮಟ್ಟದ ರಾಜಕಾರಣ ಮಾಡುತ್ತಿದೆ: ಜೋಶಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.