31ದಿನದಲ್ಲಿ ಮುಂದುವರಿದ ಮೊಗೇರರ ಧರಣಿ

ಬೇಡಿಕೆ ಈಡೇರುವವರೆಗೂ ಪ್ರತಿಭಟನೆ ಮುಂದುವರಿಕೆ

Team Udayavani, Apr 22, 2022, 10:40 AM IST

6

ಭಟ್ಕಳ: ತಮಗೆ ನ್ಯಾಯಯುತವಾಗಿ ದೊರೆಯಬೇಕಾಗಿದ್ದ ಪರಿಶಿಷ್ಟ ಜಾತಿ ಪ್ರಮಾಣ ಪತ್ರಕ್ಕಾಗಿ ಇಲ್ಲಿನ ತಾಲೂಕು ಆಡಳಿತ ಸೌಧದ ಪಕ್ಕದಲ್ಲಿ ಧರಣಿ ಸತ್ಯಾಗ್ರಹ ನಡೆಸುತ್ತಿದ್ದ ಮೊಗೇರ ಸಮಾಜದ ಧರಣಿ ಸತ್ಯಾಗ್ರಹ 30ನೇ ದಿನ ಪೂರೈಸಿದ್ದು 31ನೇ ದಿನಕ್ಕೆ ಕಾಲಿಟ್ಟಿದೆ.

ಈಗಾಗಲೇ ರಾಜ್ಯದ ವಿಧಾನ ಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ, ಸಂಸದ ಅನಂತಕುಮಾರ್‌ ಹೆಗಡೆ, ಸಮಾಜ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಶಾಸಕ ಸುನೀಲ್‌ ನಾಯ್ಕ, ಶಾಸಕ ದಿನಕರ ಶೆಟ್ಟಿ ಸೇರಿದಂತೆ ಅನೇಕರು ಧರಣಿ ನಿರತರನ್ನು ಮಾತನಾಡಿಸಿದ್ದು, ಅವರ ಸಂಕಷ್ಟವನ್ನು ಕೇಳಿದ್ದಾರೆ.

ಸರಕಾರದ ಉನ್ನತ ಮಟ್ಟದ ಸಭೆಯೊಂದನ್ನು ವಿಧಾನ ಸೌಧದಲ್ಲಿ ಕರೆಯುವುದಾಗಿ ಭರವಸೆ ನೀಡಿದ್ದ ಸಮಾಜ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರ ನಿಲುವಿಗೆ ಬೆಂಬಲ ವ್ಯಕ್ತಪಡಿಸಿದ್ದ ಸಂಸದ ಅನಂತಕುಮಾರ್‌ ಹೆಗಡೆ ತಾನೂ ಕೂಡಾ ಮುಖ್ಯ ಮಂತ್ರಿಗಳೊಂದಿಗೆ ಭಾಗವಹಿಸುವ ಭರವಸೆ ನೀಡಿದ್ದಾರೆ.

ಮೂವತ್ತು ದಿನ ಪೂರೈಸಿದ ಹಿನ್ನೆಲೆಯಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಮೊಗೇರ ಸಮಾಜದ ಅಧ್ಯಕ್ಷ ಅಣ್ಣಪ್ಪ ಮೊಗೇರ, ನಾವು ಕಳೆದ 30 ದಿನಗಳಿಂದಲೂ ಧರಣಿ ನಡೆಸುತ್ತಿದ್ದೇವೆ. ನಮ್ಮಲ್ಲಿ ಎಲ್ಲರೂ ಬಡವರಿದ್ದು ಅವರ ಉದ್ಯೋಗ ಬಿಟ್ಟು ಧರಣಿಯಲ್ಲಿ ಪಾಲ್ಗೊಂಡಿದ್ದಾರೆ. ಅನೇಕ ವಿದ್ಯಾರ್ಥಿಗಳು ಇಂದು ಭಾಗವಹಿಸುತ್ತಿದ್ದಾರೆ ಎಂದರೆ ಅವರಿಗೆ ಯಾವುದೇ ಶೈಕ್ಷಣಿಕ ಸೌಲಭ್ಯ ದೊರೆಯದೇ ತೊಂದರೆಯಾಗಿದೆ. ಸರಕಾರ ಇನ್ನಾದರೂ ನಮ್ಮ ಮನವಿ ಮನ್ನಿಸಿ ನಮಗೆ ಪರಿಶಿಷ್ಟ ಜಾತಿ ಪ್ರಮಾಣ ಪತ್ರ ಮುಂದುವರಿಸಬೇಕು ಎಂದು ಆಗ್ರಹಿಸಿದರು.

ಬಿಗಿ ನಿಲುವು: ಕಳೆದ 13-14 ವರ್ಷಗಳಿಂದ ಜಾತಿ ಪ್ರಮಾಣ ಪತ್ರ ಪಡೆಯಲು, ಸಿಂಧುತ್ವ ಪಡೆಯಲು ತೀವ್ರ ತೊಂದರೆ ಅನುಭವಿಸುತ್ತಿದ್ದ ಮೊಗೇರ ಸಮಾಜದ ಯುವ ಜನತೆ ಬಿಗಿ ನಿಲುವು ತಾಳಿದ್ದಾರೆ. ಯಾವುದೇ ಕಾರಣಕ್ಕೂ ಪ್ರಮಾಣ ಪತ್ರ ನೀಡುವ ತನಕ ಧರಣಿ ಹಿಂಪಡೆಯಲಾರೆವು ಎನ್ನುವ ದೃಢ ಸಂಕಲ್ಪ ಮಾಡಲಾಗಿದೆ. ಸಚಿವರು, ಸಂಸದರು, ಶಾಸಕರುಗಳು ಕೋರಿದರೂ ತಮ್ಮ ಅಚಲವಾದ ನಿಲುವನ್ನು ಸ್ಪಷ್ಟ ಪಡಿಸಿದ ಸಮಾಜದ ಪ್ರಮುಖರು ಮೊದಲಿನಂತೆಯೇ ಪ್ರಮಾಣ ಪತ್ರ ವಿತರಣೆ ಆರಂಭಿಸಿದ ನಂತರವಷ್ಟೇ ಧರಣಿ ಹಿಂಪಡೆಯುತ್ತೇವೆ. ಇನ್ನೂ ತಮ್ಮ ತಾಳ್ಮೆ ಪರೀಕ್ಷಿಸಿದರೆ ಮುಂದೆ ಉಗ್ರ ಹೋರಾಟಕ್ಕೂ ಸಿದ್ಧರಾಗಿದ್ದೇವೆ ಎನ್ನುತ್ತಿದ್ದಾರೆ ಯುವಕರು.

ಮಾಜಿ ಶಾಸಕ ಮಂಕಾಳ ವೈದ್ಯ, ಹೊರಾಟ ಸಮತಿ ಪ್ರಮುಖ ಎಫ್‌.ಕೆ. ಮೊಗೇರ, ಪುಂಡಲೀಕ ಹೆಬಳೆ, ಜಟ್ಗಾ ಮೊಗೇರ, ವೆಂಕಟರಮಣ ಮೊಗೇರ, ಸುಕ್ರಪ್ಪ ಮೊಗೇರ ಮುಂತಾದವರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

17-voting

Vote: ಮತದಾನದ ಮಹತ್ವ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’‌

ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’‌

Modi 3

PM Modi ಏ.28ರಂದು ಉತ್ತರಕನ್ನಡಕ್ಕೆ?; ಯಲ್ಲಾಪುರದಲ್ಲಿ ಬಹಿರಂಗ ಸಮಾವೇಶ?

Bhatkal: ಇಬ್ಬರು ಸಮುದ್ರಪಾಲು

Bhatkal: ಇಬ್ಬರು ಸಮುದ್ರಪಾಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

17-voting

Vote: ಮತದಾನದ ಮಹತ್ವ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.