ಮಕ್ಕಳಿಗೆ ಕೊರೊನಾ-ಆತಂಕ


Team Udayavani, Mar 31, 2021, 8:43 PM IST

sd

 

ವೇಗವಾಗಿ ಹರಡುತ್ತಿದೆ ಕೋವಿಡ್‌-19 ಎರಡನೇ ಅಲೆ ಸೋಂಕು

ಅಂಕೋಲಾ: ಕೊರೊನಾ ಎರಡನೇ ಅಲೆ ರಾಜ್ಯದಲ್ಲಿ ತೀವ್ರ ಸ್ವರೂಪಲ್ಲಿ ಹರಡುತ್ತಿರುವ ಸಂದರ್ಭದಲ್ಲಿಯೇ ತಾಲೂಕಿನ ಕೆಲವು ಶಾಲೆಗಳಲ್ಲಿ ವಿದ್ಯಾರ್ಥಿಗಳಿಗೆ ಹಾಗೂ ಶಿಕ್ಷಕರಿಗೆ ಕೊರೊನಾ ಪಾಸಿಟಿವ್‌ ಕಂಡುಬಂದ ಹಿನ್ನೆಲೆಯಲ್ಲಿ ಪಾಲಕರಲ್ಲಿ ಆತಂಕ ಮನೆಮಾಡಿದೆ.

ಮಂಗಳವಾರ ತಾಲೂಕಿನ ಅಗಸೂರು (ಕೆಪಿಎಸ್‌) ಕರ್ನಾಟಕ ಪಬ್ಲಿಕ್‌ ಸ್ಕೂಲ್‌ನ 7 ವಿದ್ಯಾರ್ಥಿಗಳು, 3 ಶಿಕ್ಷಕರು ಬಾವಿಕೇರಿ 1, ಕೃಷ್ಣಾಪುರ -1 ಶಾಲೆ ಶಿಕ್ಷಕರಿಗೆ ಕೊರೊನಾ ಪಾಸಿಟಿವ್‌ ವರದಿಯಾಗಿದೆ. ಅಗಸೂರಿನ ಶಿಕ್ಷಕಿ ಮೂಲಕ 7 ವಿದ್ಯಾರ್ಥಿಗಳಿಗೆ ಹಾಗೂ ಒಟ್ಟು 5 ಶಿಕ್ಷಕರಿಗೆ ಕೊರೊನಾ ಸೋಂಕು ತಗಲಿದೆ. ಈ ಹಿನ್ನೆಲೆಯಲ್ಲಿ ಏ.1 ರ ವರೆಗೆ ಅಗಸೂರು ಪ್ರೌಢಶಾಲೆ ಬಂದ್‌ ಮಾಡಲು ಜಿಲ್ಲಾಧಿಕಾರಿ ಮುಲೈ ಮುಗಿಲನ್‌ ಆದೇಶ ಮಾಡಿದ್ದಾರೆ.

247 ವಿದ್ಯಾರ್ಥಿಗಳು, 16 ಶಿಕ್ಷಕರ ಗಂಟಲು ದ್ರವ ಪರೀಕ್ಷೆಗೆ ರವಾನೆ ಮಾಡಲಾಗಿದ್ದು ಫಲಿತಾಂಶ ಬರಬೇಕಿದೆ. ಶಿರೂರಿನ ಒಬ್ಬ ವಿದ್ಯಾರ್ಥಿಗೆ ಪಾಸಿಟಿವ್‌ ಸೋಂಕು ಪತ್ತೆಯಾಗಿದ್ದು ಸೋಂಕಿನ ಮೂಲ ಪತ್ತೆಯಾಗಬೇಕಿದೆ. ತಾಲೂಕಿನಾದ್ಯಂತ ಕಟ್ಟೆಚ್ಚರ ವಹಿಸಲಾಗಿದೆ ಎಂದು ಬಿಇಒ ಶ್ಯಾಮಲಾ ನಾಯಕ ಮಾಹಿತಿ ನೀಡಿದರು.

ಸೋಂಕು ಪತ್ತೆಯಾದ ಶಾಲೆಗಳಿಗೆ ಶಿಕ್ಷಣ ಇಲಾಖೆ ಸ್ಯಾನಿಟೈಜ್‌ ವ್ಯವಸ್ಥೆ ಮಾಡಿದೆ. ಇದರ ಜೊತೆಗೆ ಜಿಲ್ಲೆಯ ಬಹುತೇಕ ಶಾಲೆಗಳಲ್ಲಿ ಕಟ್ಟೆಚ್ಚರ ವಹಿಸಲು ಶಿಕ್ಷಣಾಧಿಕಾರಿ ಹರೀಶ್‌ ಗಾಂವ್ಕರ್‌ ಸೂಚಿಸಿದ್ದಾರೆ.

 ಮಾಸ್ಕ್ ಇಲ್ಲದೆ ಬಿಂದಾಸ್‌ ಒಡಾಟ

ಅಂಕೋಲಾ ತಾಲೂಕಿನಲ್ಲಿ ವೇಗವಾಗಿ ಕೊರೊನಾ ಪ್ರಕರಣ ಏರುತ್ತಿದ್ದರು ಪಟ್ಟಣದಲ್ಲಿ ಪ್ರತಿನಿತ್ಯ ಸಾರ್ವಜನಿಕರು ಮಾತ್ರ ಮಾಸ್ಕ್ ಧರಿಸದೆ, ಸಾಮಾಜಿಕ ಅಂತರವಿಲ್ಲದೆ ಬಿಂದಾಸ್‌ ಆಗಿರುವುದು ಕಂಡು ಬಂದಿದೆ. ಕೊರೊನಾ ಪಾಸಿಟಿವ್‌ ಪ್ರಕರಣ ಏರುತ್ತಿದ್ದರು ಯಾವುದಕ್ಕೂ ಲೆಕ್ಕಿಸದೆ ಸರಕಾರದ ಆದೇಶಕ್ಕು ಕಿವಿಗೊಡದೆ ತಮ್ಮ ಆರೋಗ್ಯದ ಹಿತದೃಷ್ಠಿಯಿಂದಲು ಉಳಿಯದೆ ಇರುವುದು ಕಂಡು ಬಂದಿದೆ. ಕೊರೊನಾ ಪ್ರಕರಣ ದಿನೇದಿನೇ ಹೆಚ್ಚಾಗುತ್ತಿದ್ದರು ತಾಲೂಕಾಡಳಿತ ಯಾವುದೇ ಕಠಿಣ ನಿರ್ದಾರ ಕೈಗೊಳ್ಳುತ್ತಿಲ್ಲ ಎನ್ನುವುದು ಪ್ರಜ್ಞಾವಂತ ನಾಗರಿಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.  ತಕ್ಷಣ ಜಿಲ್ಲಾಡಳಿತ ಮುಂದೆ ಬಂದು ಅಂಕೋಲಾ ತಾಲೂಕಿನಲ್ಲಿ ಕೊರೊನಾ ತಡೆಗೆ ಕ್ರಮ ವಹಿಸಬೇಕಿದೆ ಎಂದು ಸಾರ್ವಜನಿಕ ವಲಯದಲ್ಲಿ ಕೇಳಿ ಬರುತ್ತಿದೆ.

ಕೋವಿಡ್‌ ಕಂಡು ಬಂದ ಶಾಲೆಗೆ ರಜೆ

ಕಾರವಾರ: ಅಂಕೋಲಾ ತಾಲೂಕಿನ ಅಗಸೂರ ಗ್ರಾಮದ ಕರ್ನಾಟಕ ಪಬ್ಲಿಕ್‌ ಸ್ಕೂಲ್‌ನಲ್ಲಿ ಮಾ.28 ರಂದು 5 ಜನರಿಗೆ ಕೋವಿಡ್‌ ಸೋಂಕು ಪತ್ತೆಯಾದ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಮುಲ್ಲೆ$ç ಮುಗಿಲನ್‌ ಮಾ.30 ರಿಂದ ಏ.1 ರವರೆಗ ಶಾಲೆಗೆ ರಜೆ ಘೋಷಿಸಿ ಆದೇಶ ಹೊರಡಿಸಿದ್ದಾರೆ. ಶಾಲಾ ಮಕ್ಕಳ ಹಿತದೃಷ್ಟಿಯಿಂದ ಹಾಗೂ ಕೋವಿಡ್‌-19 ಸೋಂಕಿನ ಹರಡುವಿಕೆ ತಡೆಗಟ್ಟುವ ನಿಟ್ಟಿನಲ್ಲಿ ವಿಪತ್ತು ನಿರ್ವಹಣಾ ಕಾಯ್ದೆ 2005ರ ಕಲಂ 34 ರಡಿ ಪ್ರದತ್ತವಾದ ಅಧಿಕಾರದ ಮೇರೆಗೆ ಈ ಶಾಲೆಗೆ ಮಾತ್ರ ರಜೆ ಘೋಷಿಸಿ, ರಜಾ ಅವಧಿಯನ್ನು ಮುಂದಿನ ದಿನಗಳಲ್ಲಿ ಹೊಂದಾಣಿಕೆ ಮಾಡಿಕೊಳ್ಳಬೇಕೆಂದು ಆದೇಶದಲ್ಲಿ ತಿಳಿಸಿದ್ದಾರೆ. ಕೋವಿಡ್‌-19 ಸೋಂಕಿನ ಹರಡುವಿಕೆ ತಡೆಗಟ್ಟುಲು ಅಗತ್ಯ ಕ್ರಮ ಕೈಗೊಳ್ಳುವಂತೆ ಡಿಎಚ್‌ಒಗೂ ಸೂಚಿಸಿದ್ದಾರೆ.

ಐವರಿಗೆ ಕೊರೊನಾ ದೃಢ

ದಾಂಡೇಲಿ: ನಗರದಲ್ಲಿ ಮಂಗಳವಾರ ಐವರಿಗೆ ಕೊರೊನಾ ಸೋಂಕು ದೃಢವಾಗಿವೆ. ಟೌನ್‌ಶಿಪ್‌ನಲ್ಲಿ 10 ವರ್ಷದ ಬಾಲಕನಲ್ಲಿ ಮತ್ತು 74 ವರ್ಷದ ಮಹಿಳೆಯಲ್ಲಿ ಸೋಂಕು ಕಾಣಿಸಿಕೊಂಡಿದೆ. ಅಂಬೇವಾಡಿಯಲ್ಲಿ 37 ವರ್ಷದ ಪುರುಷನಲ್ಲಿ ಮತ್ತು ಹಳಿಯಾಳ ರಸ್ತೆಯ 45 ವರ್ಷದ ಪುರುಷನಲ್ಲಿ ಸೋಂಕು ಕಾಣಿಸಿಕೊಂಡಿದೆ.

ನಗರದ ಇನ್ನೋರ್ವ 45 ವರ್ಷದ ಪುರುಷನಲ್ಲಿಯೂ ಸೋಂಕು ದೃಢಪಟ್ಟಿದೆ. ನಗರದಲ್ಲಿ ಈವರೆಗೆ ಒಟ್ಟು 1189 ಸೋಂಕಿತ ಪ್ರಕರಣಗಳು ದಾಖಲಾಗಿದೆ ಎಂದು ತಹಶೀಲ್ದಾರ್‌ ಕಚೇರಿ ಅಧಿ ಕಾರಿಗಳು ತಿಳಿಸಿದ್ದಾರೆ. ಕೋವಿಡ್‌ ಮುನ್ನೆಚ್ಚರಿಕೆಯೊಂದಿಗೆ ಆರೋಗ್ಯ ನಿಯಾಮವಳಿ ಪಾಲಿಸುವುದನ್ನು ಕಡ್ಡಾಯಗೊಳಿಸಿದಾಗ ಸೋಂಕಿನಿಂದ ದೂರವಿರಲು ಸಾಧ್ಯವಾಗಲಿದ್ದು, ಈ ನಿಟ್ಟಿನಲ್ಲಿ ನಗರದ ಜನತೆ ಜಾಗೃತರಾಗಬೇಕಾಗಿದೆ

ಮತ್ತೆ ನಾಲ್ವರಿಗೆ ಪಾಸಿಟಿವ್‌

ಯಲ್ಲಾಪುರ: ತಾಲೂಕಿನಲ್ಲಿ ಮಂಗಳವಾರ ಒಟ್ಟು ನಾಲ್ಕು ಕೋವಿಡ್‌ ಪಾಸಿಟಿವ್‌ ವರದಿಯಾಗಿದೆ. ಪಟ್ಟಣದ ನೂತನನಗರ ಒಂದು, ಕಾಳಮ್ಮನಗರ ಪ್ರೌಢಶಾಲೆಯಲ್ಲಿ ಮೂರು ಪಾಸಿಟಿವ್‌ ಕಾಣಿಸಿಕೊಂಡಿದೆ. ಸೋಮವಾರ ಅತಿಯಾಗಿ ಕಾಣಿಸಿಕೊಂಡ ವೈಟಿಎಸ್ಸೆಸ್‌ ಪ್ರೌಢಶಾಲೆ ಕನ್ನಡ ಮಾಧ್ಯಮದ ಎಲ್ಲಾ ವಿದ್ಯಾರ್ಥಿಗಳನ್ನು ಕೋವಿಡ್‌ ತಪಾಸಣೆಗೆ ಒಳಪಡಿಸಲಾಗಿದೆ.

ಟಾಪ್ ನ್ಯೂಸ್

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

1-qwwqeqw

Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Karwar; ಬಿಜೆಪಿ ಅಭ್ಯರ್ಥಿ ಕಾಗೇರಿ ಜಿಲ್ಲಾ ವಿಭಜನೆಗೆ ಯತ್ನಿಸಿಲ್ಲ: ಸದಾನಂದ ಭಟ್

Karwar; ಬಿಜೆಪಿ ಅಭ್ಯರ್ಥಿ ಕಾಗೇರಿ ಜಿಲ್ಲಾ ವಿಭಜನೆಗೆ ಯತ್ನಿಸಿಲ್ಲ: ಸದಾನಂದ ಭಟ್

6-

Bhatkal Theft: ನಗರ, ಗ್ರಾಮೀಣ ಪ್ರದೇಶದ ಹಲವೆಡೆ ಮುಂಜಾನೆ ಸರಣಿ ಕಳ್ಳತನ

18-

Road Mishap: ಹೈಕಾಡಿಯಲ್ಲಿ ಕಾರು ಅಪಘಾತ: ನಾಲ್ವರಿಗೆ ಗಾಯ

Bhatkal ನೀರು ಪೋಲು; ಜಾಲಿ ಪಟ್ಟಣ ಪಂಚಾಯತ್ ನಿರ್ಲಕ್ಷ್ಯ; ಜನರ ಆಕ್ರೋಶ

Bhatkal ನೀರು ಪೋಲು; ಜಾಲಿ ಪಟ್ಟಣ ಪಂಚಾಯತ್ ನಿರ್ಲಕ್ಷ್ಯ; ಜನರ ಆಕ್ರೋಶ

1-weqewqe

Yallapur: ಸಾತೊಡ್ಡಿ ಜಲಪಾತದಲ್ಲಿ ಪ್ರವಾಸಿಗರ ಮೇಲೆ ಜೇನು ನೊಣಗಳ ದಾಳಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

1-weqwewq

Belur: ದೈತ್ಯ ‘ಕರಡಿ’ ಆನೆ ಕೊನೆಗೂ ಸೆರೆ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ

1aaa

Austria Marathon: ಭಾರತವನ್ನು ಪ್ರತಿನಿಧಿಸಲಿರುವ ಕೊಡಗಿನ ಅಪ್ಪಚಂಗಡ ಬೆಳ್ಯಪ್ಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.